Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್​ಸ್ಟಾಗ್ರಾಮ್​ನಲ್ಲಿ ಹೆಚ್ಚು ಹಿಂಬಾಲಕರನ್ನು ಹೊಂದಿದ ದಕ್ಷಿಣದ ಹೀರೋಗಳಲ್ಲಿ ಅಲ್ಲು ಅರ್ಜುನ್​​ ಫಸ್ಟ್​; ಯಶ್​ಗೆ ಎಷ್ಟನೇ ಸ್ಥಾನ?

ದಕ್ಷಿಣದ ಹೀರೋಗಳ ಪೈಕಿ ಅತಿ ಹೆಚ್ಚು ಹಿಂಬಾಲಕರನ್ನು ಹೊಂದಿದವರಲ್ಲಿ ಅಲ್ಲು ಅರ್ಜುನ್ ಮೊದಲಿದ್ದಾರೆ. ಈ ಪಟ್ಟಿಯಲ್ಲಿ ಯಶ್​​ಗೂ ಸ್ಥಾನ ಇದೆ. ಟಾಪ್​ 5ರಲ್ಲಿ ಇರುವ ಕನ್ನಡದ ಏಕೈಕ ನಟ ಯಶ್ ಅನ್ನೋದು ವಿಶೇಷ.  

ಇನ್​ಸ್ಟಾಗ್ರಾಮ್​ನಲ್ಲಿ ಹೆಚ್ಚು ಹಿಂಬಾಲಕರನ್ನು ಹೊಂದಿದ ದಕ್ಷಿಣದ ಹೀರೋಗಳಲ್ಲಿ ಅಲ್ಲು ಅರ್ಜುನ್​​ ಫಸ್ಟ್​; ಯಶ್​ಗೆ ಎಷ್ಟನೇ ಸ್ಥಾನ?
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on:Mar 03, 2023 | 8:03 AM

ಸೆಲೆಬ್ರಿಟಿಗಳ ಜನಪ್ರಿಯತೆ ಅಳೆಯಲು ಸೋಶಿಯಲ್ ಮೀಡಿಯಾದಲ್ಲಿ ಹಿಂಬಾಲಕರ ಸಂಖ್ಯೆ ಕೂಡ ಒಂದು ಮಾನದಂಡ. ಇನ್​ಸ್ಟಾಗ್ರಾಮ್​, ಫೇಸ್​ಬುಕ್​, ಟ್ವಿಟರ್​ನಲ್ಲಿ ಹಿಂಬಾಲಕರ ಸಂಖ್ಯೆ ಹೆಚ್ಚಿಸಿಕೊಳ್ಳಲು ಸೆಲೆಬ್ರಿಟಿಗಳು ಸಾಕಷ್ಟು ಕಸರತ್ತು ಮಾಡುತ್ತಾರೆ. ನಾನಾ ರೀತಿಯ ಪೋಸ್ಟ್ ಹಾಕುತ್ತಾ ಇರುತ್ತಾರೆ. ದಕ್ಷಿಣದ ಹೀರೋಗಳ ಪೈಕಿ ಅತಿ ಹೆಚ್ಚು ಹಿಂಬಾಲಕರನ್ನು ಹೊಂದಿದವರಲ್ಲಿ ಅಲ್ಲು ಅರ್ಜುನ್ (Allu Arjun) ಮೊದಲಿದ್ದಾರೆ. ಈ ಪಟ್ಟಿಯಲ್ಲಿ ಯಶ್​​ಗೂ (Yash) ಸ್ಥಾನ ಇದೆ. ಟಾಪ್​ 5ರಲ್ಲಿ ಇರುವ ಕನ್ನಡದ ಏಕೈಕ ನಟ ಯಶ್ ಅನ್ನೋದು ವಿಶೇಷ.

ಅಲ್ಲು ಅರ್ಜುನ್

ಅಲ್ಲು ಅರ್ಜುನ್ ಅವರು ಜನಪ್ರಿಯ ನಟ. ‘ಪುಷ್ಪ’ ಚಿತ್ರದಿಂದ ಅವರ ಜನಪ್ರಿಯತೆ ಹೆಚ್ಚಿದೆ. ಅವರು ಇನ್​ಸ್ಟಾಗ್ರಾಮ್​ನಲ್ಲಿ 2 ಕೋಟಿ (20 ಮಿಲಿಯನ್) ಹಿಂಬಾಲಕರನ್ನು ಹೊಂದಿದ್ದಾರೆ. ಇನ್​ಸ್ಟಾಗ್ರಾಮ್​ನಲ್ಲಿ ಅತಿ ಹೆಚ್ಚು ಹಿಂಬಾಲಕರನ್ನು ಹೊಂದಿದವರ ಪಟ್ಟಿಯಲ್ಲಿ ಅಲ್ಲು ಅರ್ಜುನ್ ಮೊದಲಿದ್ದಾರೆ.

ವಿಜಯ್ ದೇವರಕೊಂಡ

ವಿಜಯ್ ದೇವರಕೊಂಡ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಇನ್​ಸ್ಟಾಗ್ರಾಮ್​ನಲ್ಲಿ 17.8 ಮಿಲಿಯನ್ ಫಾಲೋವರ್ಸ್ ಇದ್ದಾರೆ. ಅಂದರೆ 1.78 ಕೋಟಿ ಜನರು ಅವರನ್ನು ಫಾಲೋ ಮಾಡುತ್ತಿದ್ದಾರೆ. ‘ಲೈಗರ್’ ಚಿತ್ರದಿಂದ ಬಾಲಿವುಡ್​ಗೆ ಅವರ ಪರಿಚಯ ಆಗಿದೆ.

ಇದನ್ನೂ ಓದಿ
Image
RRR ಕಲೆಕ್ಷನ್​ ರಿಪೋರ್ಟ್​ ಸುಳ್ಳು ಎಂದ ಕಮಾಲ್​ ಆರ್​ ಖಾನ್​; ಸಾಬೀತು ಮಾಡುವುದಾಗಿ ಘೋಷಣೆ
Image
‘ಭಕ್ತರ ಭಕ್ತ ಮಹಾಭಕ್ತ’, ‘ಕಾಶ್ಮೀರದ ಶರ್ಮಾ’: ಖಾನ್​ ಚಿತ್ರಕ್ಕೆ ಹೊಸ ಹೆಸರು ಸೂಚಿಸಿದ ಇನ್ನೊಬ್ಬ ಖಾನ್​
Image
‘ಈ ನಟರಿಗೆ ಅಹಂಕಾರ ಜಾಸ್ತಿ’; ವಿಡಿಯೋ ಮೂಲಕ ಎಳೆ ಎಳೆಯಾಗಿ ವಿವರಿಸಿದ ಕಮಾಲ್​ ಆರ್.​ ಖಾನ್​
Image
ಸಲ್ಮಾನ್​ ಖಾನ್​ ವಿರುದ್ಧ ಯಾವುದೇ ಹೇಳಿಕೆ ನೀಡಬೇಡಿ; ಕಮಾಲ್​ ಆರ್​ ಖಾನ್​ಗೆ ಕೋರ್ಟ್​ ಆದೇಶ

ಯಶ್

‘ಕೆಜಿಎಫ್ 2’ ಚಿತ್ರದಿಂದ ಯಶ್ ಅವರು ಸಖತ್ ಜನಪ್ರಿಯತೆ ಪಡೆದಿದ್ದಾರೆ. ಅವರನ್ನು ಇನ್​ಸ್ಟಾಗ್ರಾಮ್​ನಲ್ಲಿ ಫಾಲೋ ಮಾಡುವವರ ಸಂಖ್ಯೆ ಹೆಚ್ಚಿದೆ. ಅವರಿಗೆ 13.4 ಮಿಲಿಯನ್ (1.34 ಕೋಟಿ) ಹಿಂಬಾಲಕರಿದ್ದಾರೆ. ಈ ಮೂಲಕ ಅವರು ಮೂರನೇ ಸ್ಥಾನದಲ್ಲಿದ್ದಾರೆ. ಯಶ್ ಮುಂದಿನ ಚಿತ್ರಕ್ಕಾಗಿ ಫ್ಯಾನ್ಸ್ ಕಾದಿದ್ದಾರೆ.

ರಾಮ್ ಚರಣ್

ರಾಮ್ ಚರಣ್ ಅವರು ‘ಆರ್​ಆರ್​ಆರ್​’ ಚಿತ್ರದಿಂದ ದೊಡ್ಡ ಮಟ್ಟದ ಜನಪ್ರಿಯತೆ ಪಡೆದರು. ಅವರನ್ನು 1.25 ಕೋಟಿ ಜನರು ಇನ್​ಸ್ಟಾಗ್ರಾಮ್​ನಲ್ಲಿ ಹಿಂಬಾಲಿಸುತ್ತಿದ್ದಾರೆ. ಯಶ್ ಹಾಗೂ ರಾಮ್ ಚರಣ್ ಮಧ್ಯೆ ಸುಮಾರು 9 ಸಾವಿರ ಫಾಲೋವರ್ಸ್ ಅಂತರ ಇದೆ.

ಇದನ್ನೂ ಓದಿ: Allu Arjun: ‘ಪುಷ್ಪ 2’ ಚಿತ್ರದ ಎಲ್ಲ ಹಕ್ಕುಗಳಿಗೆ 1050 ಕೋಟಿ ರೂ. ಕೇಳ್ತಿದ್ದಾರಾ ಅಲ್ಲು ಅರ್ಜುನ್​?

ದುಲ್ಖರ್ ಸಲ್ಮಾನ್

ದುಲ್ಖರ್ ಸಲ್ಮಾನ್ ಅವರು ಮಲಯಾಳಂ ಹೀರೋ. ಅವರನ್ನು ಹಿಂಬಾಲಿಸುವವರ ಸಂಖ್ಯೆ ದೊಡ್ಡದಿದೆ. ಅವರನ್ನು 12.1 ಮಿಲಿಯನ್ ಮಂದಿ ಹಿಂಬಾಲಿಸುತ್ತಿದ್ದಾರೆ. ಅವರು ಐದನೇ ಸ್ಥಾನದಲ್ಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 8:01 am, Fri, 3 March 23

Daily Devotional: ದೇವಸ್ಥಾನದಲ್ಲಿ ಮಹಿಳೆಯರು ಹೂವು ಧರಿಸುವುದು ಶುಭವೇ?
Daily Devotional: ದೇವಸ್ಥಾನದಲ್ಲಿ ಮಹಿಳೆಯರು ಹೂವು ಧರಿಸುವುದು ಶುಭವೇ?
Daily horoscope: ಹುಣ್ಣಿಮೆಯ ದಿನದ ರಾಶಿ ಫಲಗಳನ್ನು ತಿಳಿಯಿರಿ
Daily horoscope: ಹುಣ್ಣಿಮೆಯ ದಿನದ ರಾಶಿ ಫಲಗಳನ್ನು ತಿಳಿಯಿರಿ
ಮಂಗಳೂರಿನಲ್ಲೊಂದು ಎದೆ ಝಲ್ ಎನಿಸುವ ಭೀಕರ ಅಪಘಾತ
ಮಂಗಳೂರಿನಲ್ಲೊಂದು ಎದೆ ಝಲ್ ಎನಿಸುವ ಭೀಕರ ಅಪಘಾತ
ಮಾತಿಗೆ ಮಾತು ಬೆಳೆದು ಕಂಡಕ್ಟರ್​-ಪ್ರಯಾಣಿಕರ ನಡುವೆ ಹೊಡೆದಾಟ!
ಮಾತಿಗೆ ಮಾತು ಬೆಳೆದು ಕಂಡಕ್ಟರ್​-ಪ್ರಯಾಣಿಕರ ನಡುವೆ ಹೊಡೆದಾಟ!
ಕುಡಿದ ಯುವಕರಿಂದ ಆಂಧ್ರದ ಮಹಿಳಾ ಪೊಲೀಸ್ ಅಧಿಕಾರಿಯ ಕೂದಲೆಳೆದು ಹಲ್ಲೆ
ಕುಡಿದ ಯುವಕರಿಂದ ಆಂಧ್ರದ ಮಹಿಳಾ ಪೊಲೀಸ್ ಅಧಿಕಾರಿಯ ಕೂದಲೆಳೆದು ಹಲ್ಲೆ
ಪುನೀತ್ ಕೆನ್ನೆಗೆ ಹೊಡೆಯುವ ದೃಶ್ಯ ಹೇಗಿತ್ತು? ಆ ದಿನದ ಅನುಭವ ತಿಳಿಸಿದ ನಟ
ಪುನೀತ್ ಕೆನ್ನೆಗೆ ಹೊಡೆಯುವ ದೃಶ್ಯ ಹೇಗಿತ್ತು? ಆ ದಿನದ ಅನುಭವ ತಿಳಿಸಿದ ನಟ
‘ಅಪ್ಪು’ ಸಿನಿಮಾದ ಅವಕಾಶ ನನಗೆ ಸಿಕ್ಕಾಗ ನಂಬೋಕೆ ಆಗಲಿಲ್ಲ: ಗುರುಕಿರಣ್
‘ಅಪ್ಪು’ ಸಿನಿಮಾದ ಅವಕಾಶ ನನಗೆ ಸಿಕ್ಕಾಗ ನಂಬೋಕೆ ಆಗಲಿಲ್ಲ: ಗುರುಕಿರಣ್
ಕರಾವಳಿ ಜಿಲ್ಲೆಗಳ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ಸುನೀಲ ಕುಮಾರ
ಕರಾವಳಿ ಜಿಲ್ಲೆಗಳ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ಸುನೀಲ ಕುಮಾರ
ಪಾರ್ಕಿಂಗ್ ವಿಚಾರಕ್ಕೆ ಜಗಳ; ಡಯಾಲಿಸಿಸ್‌ನಲ್ಲಿದ್ದ ವಿಜ್ಞಾನಿ ಸಾವು
ಪಾರ್ಕಿಂಗ್ ವಿಚಾರಕ್ಕೆ ಜಗಳ; ಡಯಾಲಿಸಿಸ್‌ನಲ್ಲಿದ್ದ ವಿಜ್ಞಾನಿ ಸಾವು
ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ
ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ