ಜುಲೈ 19ಕ್ಕೆ ಬಿಡುಗಡೆ ಆಗಲಿದೆ ‘ಹಿರಣ್ಯ’: ವಿಶೇಷ ಪಾತ್ರದಲ್ಲಿ ದಿವ್ಯಾ ಸುರೇಶ್

ಹಿರಣ್ಯ ಕನ್ನಡ ಸಿನಿಮಾ ಜುಲೈ 19ಕ್ಕೆ ಬಿಡುಗಡೆ ಆಗಲಿದೆ. ಸಿನಿಮಾದಲ್ಲಿ ರಾಜವರ್ಧನ್ ನಾಯಕನಾಗಿ ನಟಿಸಿದ್ದು, ರಿಹಾನಾ ನಾಯಕಿಯಾಗಿ ನಟಿಸಿದ್ದಾರೆ. ಸಿನಿಮಾದಲ್ಲಿ ಬಿಗ್​ಬಾಸ್ ಚೆಲುವೆ ದಿವ್ಯಾ ಸುರೇಶ್ ವಿಶೇಷ ಪಾತ್ರದಲ್ಲಿ ನಟಿಸಿದ್ದಾರೆ.

ಜುಲೈ 19ಕ್ಕೆ ಬಿಡುಗಡೆ ಆಗಲಿದೆ 'ಹಿರಣ್ಯ': ವಿಶೇಷ ಪಾತ್ರದಲ್ಲಿ ದಿವ್ಯಾ ಸುರೇಶ್
Follow us
ಮಂಜುನಾಥ ಸಿ.
|

Updated on: Jul 17, 2024 | 10:50 PM

ರಾಜವರ್ಧನ್‌ ನಾಯಕರಾಗಿರುವ ‘ಹಿರಣ್ಯ’ ಸಿನಿಮಾ ಹಲವು ಕಾರಣಗಳಿಗೆ ಗಮನ ಸೆಳೆದಿದೆ. ಈ ಸಿನಿಮಾ ಜುಲೈ 19ಕ್ಕೆ ಬಿಡುಗಡೆ ಆಗುತ್ತಿದ್ದು, ಇದೀಗ ಸಿನಿಮಾದ ಹಾಡೊಂದನ್ನು ಚಿತ್ರತಂಡ ಬಿಡುಗಡೆ ಮಾಡಿದೆ. ‘ಬೈಲಾ ಬೈಲಾ ’ ಎಂಬ ಈ ಹಾಡಿಗೆ ಮಾಜಿ ಬಿಗ್​ಬಾಸ್ ಚೆಲುವೆ ದಿವ್ಯಾ ಸುರೇಶ್ ಸಖತ್ ಆಗಿ ಹೆಜ್ಜೆ ಹಾಕಿದ್ದಾರೆ. ನಿರ್ದೇಶಕ ಪ್ರವೀಣ್ ಅವ್ಯುಕ್ತ್ ಬರೆದ ಸಾಹಿತ್ಯಕ್ಕೆ ಶಮಿತಾ ಮಲ್ನಾಡ್ ಧ್ವನಿಯಾಗಿದ್ದು, ಜೂಡಾ ಸ್ಯಾಂಡಿ ಹಾಡಿಗೆ ಸಂಗೀತ ನೀಡಿದ್ದಾರೆ.

ಈಗಾಗಲೇ ಹಲವು ಕಿರು ಚಿತ್ರಗಳನ್ನು ನಿರ್ದೇಶನ ಮಾಡಿದ ಅನುಭವ ಇರುವ ಪ್ರವೀಣ್‌ ಅವ್ಯುಕ್ತ್ ‘ಹಿರಣ್ಯ’ ಸಿನಿಮಾದ ಮೂಲಕ ಪೂರ್ಣ ಪ್ರಮಾಣದ ನಿರ್ದೇಶಕನಾಗಿ ಕನ್ನಡ ಚಿತ್ರರಂಗಕ್ಕೆ ಪರಿಚಯವಾಗುತ್ತಿದ್ದಾರೆ. ‘ಹಿರಣ್ಯ’ ಸಿನಿಮಾದಲ್ಲಿ ರಾಜವರ್ಧನ್‌ ನಾಯಕನಾಗಿ ನಟಿಸಿದ್ದು ಅವರಿಗೆ ನಾಯಕಿಯಾಗಿ ರಿಹಾನಾ ನಟಿಸಿದ್ದಾರೆ. ಈ ಸಿನಿಮಾದ ಮೂಲಕ ರಿಹಾನಾ ಚಂದನವನಕ್ಕೆ ಪರಿಚಯವಾಗುತ್ತಿದ್ದಾರೆ.

ಇದನ್ನೂ ಓದಿ:‘ಪುಷ್ಪ 2’ ಸಿನಿಮಾ ಫ್ಲಾಪ್ ಆದರೂ ‘ಕೆಜಿಎಫ್ 2’ ದಾಖಲೆ ಮುರಿಯುತ್ತೆ: ನಿರ್ಮಾಪಕ

ಆ್ಯಕ್ಷನ್‌-ಥ್ರಿಲ್ಲರ್‌ ಜೊತೆಗೆ ತಾಯಿ ಸೆಂಟಿಮೆಂಟ್‌ ಕತೆಯನ್ನು ‘ಹಿರಣ್ಯ’ ಸಿನಿಮಾ ಒಳಗೊಂಡಿದೆ. “ಹಿರಣ್ಯ’ ಸಿನಿಮಾದಲ್ಲಿ ಬಿಗ್‌ ಬಾಸ್‌ ಖ್ಯಾತಿಯ ದಿವ್ಯಾ ಸುರೇಶ್‌ ವಿಶೇಷ ಪಾತ್ರದಲ್ಲಿ ನಟಿಸಿದ್ದಾರೆ. ಉಳಿದಂತೆ ಹುಲಿ ಕಾರ್ತಿಕ್‌, ಅರವಿಂದ ರಾವ್‌, ದಿಲೀಪ್‌ ಶೆಟ್ಟಿ ಮುಂತಾದವರು ಸಿನಿಮಾದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.

“ವೇದಾಸ್‌ ಇನ್ಫಿನಿಟಿ ಪಿಕ್ಚರ್’ ಬ್ಯಾನರ್‌ನಲ್ಲಿ ವಿಘ್ನೇಶ್ವರ ಯು. ಹಾಗೂ ವಿಜಯ್‌ ಕುಮಾರ್‌ ಬಿ. ವಿ ಜಂಟಿಯಾಗಿ ಬಂಡವಾಳ ಹೂಡಿ ನಿರ್ಮಿಸುತ್ತಿರುವ “ಹಿರಣ್ಯ’ ಸಿನಿಮಾಕ್ಕೆ ಯೋಗೇಶ್ವರನ್‌ ಆರ್‌. ಛಾಯಾಗ್ರಹಣವಿದೆ. ಚಿತ್ರದ ಹಾಡುಗಳಿಗೆ ಜ್ಯೂಡಾ ಸ್ಯಾಂಡಿ ಸಂಗೀತ ಸಂಯೋಜನೆಯಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ