AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಲಿವುಡ್ ನಿರ್ದೇಶಕರಿಂದ ಕನ್ನಡ ಚಿತ್ರ ಜೂನ್ 23ಕ್ಕೆ ಬಿಡುಗಡೆ

Road King: ಹಾಲಿವುಡ್ ತಂತ್ರಜ್ಞರೊಬ್ಬರು ಕನ್ನಡ ಸಿನಿಮಾ ರೋಡ್ ಕಿಂಗ್ ಅನ್ನು ನಿರ್ದೇಶಿಸಿದ್ದು ಈ ಸಿನಿಮಾದ ಬಿಡುಗಡೆ ಇನ್ನು ಕೆಲವೇ ದಿನಗಳಲ್ಲಿ ಆಗಲಿದೆ.

ಹಾಲಿವುಡ್ ನಿರ್ದೇಶಕರಿಂದ ಕನ್ನಡ ಚಿತ್ರ ಜೂನ್ 23ಕ್ಕೆ ಬಿಡುಗಡೆ
ರೋಡ್ ಕಿಂಗ್
ಮಂಜುನಾಥ ಸಿ.
|

Updated on: Jun 03, 2023 | 4:10 PM

Share

ಕೋವಿಡ್ (Covid) ಬಳಿಕ ಭಾರತೀಯ ಸಿನಿಮಾಗಳಿಗೆ (Indian Cinema) ದೊಡ್ಡ ಬೇಡಿಕೆ ವಿಶ್ವದೆಲ್ಲೆಡೆ ಸೃಷ್ಟಿಯಾಗಿದೆ. ಭಾರತದ ಸಿನಿಮಾಗಳು ವಿದೇಶಗಳಲ್ಲಿ ಅದ್ಭುತ ಪ್ರದರ್ಶನ ತೋರುತ್ತಿವೆ. ವಿದೇಶಿ ನಟರು, ತಂತ್ರಜ್ಞರು ಸಹ ಭಾರತೀಯ ಸಿನಿಮಾದಲ್ಲಿ ನಟಿಸಲು ತುದಿಗಾಲಲ್ಲಿದ್ದಾರೆ. ಈ ಹಿಂದೆಯೂ ಕೆಲವು ಹಾಲಿವುಡ್ ತಂತ್ರಜ್ಞರು ಭಾರತೀಯ ಸಿನಿಮಾಗಳಿಗೆ ಕೆಲಸ ಮಾಡಿದ್ದರು. ಇದೀಗ ವಿದೇಶಿ ನಿರ್ದೇಶಕರೊಬ್ಬರು ಕನ್ನಡ ಸಿನಿಮಾ ನಿರ್ದೇಶಿಸಿದ್ದು, ಸಿನಿಮಾವು ಇನ್ನು ಕೆಲವೇ ದಿನಗಳಲ್ಲಿ ತೆರೆಗೆ ಬರಲಿದೆ.

ಮತೀನ್ ಹುಸೇನ್ ಅಭಿನಯದ ‘ರೋಡ್ ಕಿಂಗ್’ ಸಿನಿಮಾವನ್ನು ರ್ಯಾಂಡಿ ಕೆಂಟ್ ಹೆಸರಿನ ಹಾಲಿವುಡ್ ನಿರ್ದೇಕರು ನಿರ್ದೇಶಿಸಿದ್ದಾರೆ. ‘ರೋಡ್ ಕಿಂಗ್’ ಚಿತ್ರದ ನಾಯಕ ಮತ್ತು ನಿರ್ಮಾಪಕರೂ ಆಗಿರುವ ಮತೀನ್ ಹುಸೇನ್, ಮೂಲತಃ ಬೆಂಗಳೂರಿನವರಾದರೂ ಬೆಳೆದಿದ್ದೆಲ್ಲಾ ಅಮೇರಿಕಾದಲ್ಲಿ. ಕೋಲಾರದಲ್ಲಿ ನಡೆದ ನೈಜ ಘಟನೆ ಆಧರಿಸಿ ಒಂದು ಸಣ್ಣ ಬಜೆಟ್​ನ ಚಿತ್ರ ಮಾಡುವುದಕ್ಕೆ ಹೊರಟಾಗ, ಸೂಕ್ತ ನಿರ್ದೇಶಕರು ಸಿಗಲಿಲ್ಲವಂತೆ. ಆಗ ಅವರಿಗೆ ನೆನಪಾಗಿದ್ದೇ ರಾಂಡಿ ಕೆಂಟ್. ಮತೀನ್ ಮತ್ತು ರಾಂಡಿ ಹಳೆಯ ಸ್ನೇಹಿತರು. ಸ್ನೇಹದಲ್ಲಿ ಚಿತ್ರ ಮಾಡಿಕೊಡುವುದಕ್ಕೆ ಕೇಳಿಕೊಂಡಾಗ, ಮೊದಲು ರಾಂಡಿ ಹಿಂದೇಟು ಹಾಕಿದರಂತೆ. ಕಾರಣ, ಅವರಿಗೆ ಕನ್ನಡ ಭಾಷೆ ಗೊತ್ತಿಲ್ಲದಿರುವುದು. ಕೊನೆಗೆ ಒಪ್ಪಿ ಅವರು ಚಿತ್ರ ನಿರ್ದೇಶನಕ್ಕೆ ಕೈಹಾಕಿದ್ದಾರೆ.

ಅಂದಹಾಗೆ, ಈ ಚಿತ್ರದ ನಿರ್ದೇಶನವನ್ನು ದೂರದ ಅಮೇರಿಕಾದಲ್ಲಿದ್ದುಕೊಂಡು ಸ್ಕೈಪ್ ಮೂಲಕವೇ ಮಾಡಿದ್ದಾರೆ. ಅದಕ್ಕೆ ಕಾರಣವೂ ಇದೆ. ಈ ಬಗ್ಗೆ ಮಾತನಾಡುವ ಮತೀನ್, ‘ಚಿತ್ರೀಕರಣಕ್ಕೆ ಎಲ್ಲ ತಯಾರಿಯೂ ಆಗಿತ್ತು. ಆದರೆ, ರಾಂಡಿಗೆ ವೀಸಾ ಸಿಗಲಿಲ್ಲ. ಎರಡನೆಯ ಬಾರಿಗೂ ಅದೇ ರೀತಿ ಆಯಿತು. ಕೊನೆಗೆ ಅವರು ಸ್ಕೈಪ್ ಮೂಲಕವೇ ಚಿತ್ರ ನಿರ್ದೇಶನ ಮಾಡಿದ್ದಾರೆ’ ಎನ್ನುತ್ತಾರೆ ಮತೀನ್.

ಮತೀನ್ ಇದಕ್ಕೂ ಮುನ್ನ ‘ಬಿಂದಾಸ್ ದಾದಾಗಿರಿ’ ಎಂಬ ರಿಯಾಲಿಟಿ ಕಾರ್ಯಕ್ರಮದಲ್ಲಿ ವಿಜೇತರಾಗಿದ್ದು, ಇದೇ ಮೊದಲ ಬಾರಿಗೆ ನಾಯಕನಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಅವರಿಗೆ ನಾಯಕಿಯಾಗಿ ‘ರನ್ ಆಂಟೋನಿ’ ಖ್ಯಾತಿಯ ರುಕ್ಸರ್ ನಟಿಸಿದ್ದು, ಲೀಲಾ ಮೋಹನ್, ಹರೀಶ್ ಸೆಜೆಕೆನ್, ನಯನಾ ಶೆಟ್ಟಿ ಮುಂತಾದವರು ನಟಿಸಿದ್ದಾರೆ. ಚಿತ್ರಕ್ಕೆ ಆರಿಫ್ ಲಲಾನಿ ಛಾಯಾಗ್ರಹಣ ಮಾಡಿದ್ದು, ಹಾಲಿವುಡ್ನ ಜನಪ್ರಿಯ ಸೌಂಡ್ ಡಿಸೈನರ್ ಸ್ಕಾಟ್ ವುಲ್ಫ್ ಈ ಚಿತ್ರಕ್ಕೆ ಕೆಲಸ ಮಾಡಿದ್ದಾರೆ. ಈಗಾಗಲೇ ಜಗತ್ತಿನಾದ್ಯಂತ ಹಲವು ಅಂತಾರಾಷ್ಟ್ರೀಯ ಚಿತ್ರೋತ್ಸವಗಳಲ್ಲಿ ಪ್ರದರ್ಶನವಾಗುವುದರ ಜೊತೆಗೆ ಪ್ರಶಸ್ತಿಗಳನ್ನು ಬಾಚಿಕೊಂಡಿರುವ ‘ರೋಡ್ ಕಿಂಗ್’ ಚಿತ್ರಕ್ಕೆ ಚಂದನ್ ಶೆಟ್ಟಿ ಸಂಗೀತ ಮತ್ತು ಶ್ರೀ ಕ್ರೇಜಿ ಮೈಂಡ್ಸ್ ಅವರ ಸಂಕಲನ ಈ ಚಿತ್ರಕ್ಕಿದೆ.

ರುಕ್ಷರ್ ದಿಲ್ಹಾನ್ (ರನ್ ಆಂತೋನಿ ಖ್ಯಾತಿ) ನಾಯಕಿಯಾಗಿ ನಟಿಸಿದ್ದಾರೆ. ಲವ್ ಬ್ರೇಕಪ್ ನಿಂದ ಎಕ್ಸ್ ಸಿಂಡ್ರೋಮ್ ಗೆ ತುತ್ತಾದ ಯುವಪ್ರೇಮಿಗಳ ಸುತ್ತ ಹೆಣೆದಿರುವ ಕಥೆಯಿದು. ರೊಮ್ಯಾಂಟಿಕ್, ಥ್ರಿಲ್ಲರ್ ಎಲ್ಲಾ ಅಂಶಗಳು ಈ ಚಿತ್ರದಲ್ಲಿದೆ. ಈಗಾಗಲೇ ಹಲವು ಚಲನಚಿತ್ರೋತ್ಸವಗಳಲ್ಲಿ ಪ್ರದರ್ಶನ ಕಂಡಿರುವ ಈ ಚಿತ್ರ ಜೂನ್ 23ಕ್ಕೆ ತೆರೆಗೆ ಬರಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!