ಒಂದೇ ಟ್ವೀಟ್ ಮೂಲಕ ಎಲ್ಲಾ ಅನುಮಾನಗಳಿಗೆ ತೆರೆ ಎಳೆದ ‘ಹೊಂಬಾಳೆ ಫಿಲ್ಮ್ಸ್’; ಮಹತ್ವದ ಘೋಷಣೆ

Dhoomam Movie: ‘ಧೂಮಂ’ ಸಿನಿಮಾಗೆ ಪವನ್ ಕುಮಾರ್ ನಿರ್ದೇಶನ ಇದೆ. ಫಹಾದ್ ಫಾಸಿಲ್ ಅವರು ಈ ಚಿತ್ರದಲ್ಲಿ ಮುಖ್ಯಭೂಮಿಕೆ ನಿರ್ವಹಿಸಿದ್ದಾರೆ. ಈ ಸಿನಿಮಾ ಕನ್ನಡದಲ್ಲಿ ರಿಲೀಸ್ ಆಗೋದು ವಿಳಂಬ ಆಗಲಿದೆ ಎನ್ನಲಾಗಿತ್ತು.

ಒಂದೇ ಟ್ವೀಟ್ ಮೂಲಕ ಎಲ್ಲಾ ಅನುಮಾನಗಳಿಗೆ ತೆರೆ ಎಳೆದ ‘ಹೊಂಬಾಳೆ ಫಿಲ್ಮ್ಸ್’; ಮಹತ್ವದ ಘೋಷಣೆ
ಧೂಮಂ

Updated on: Jun 20, 2023 | 10:31 AM

ವಿಜಯ್ ಕಿರಗಂದೂರು ಒಡೆತನದ ‘ಹೊಂಬಾಳೆ ಫಿಲ್ಮ್ಸ್’ (Hombale Films) ನಿರ್ಮಾಣ ಸಂಸ್ಥೆಯ ಜನಪ್ರಿಯತೆ ಹೆಚ್ಚಿದೆ. ‘ಕೆಜಿಎಫ್ 2’ ಬಳಿಕ ಹಲವು ಭಾಷೆಗಳಲ್ಲಿ ಈ ನಿರ್ಮಾಣ ಸಂಸ್ಥೆ ಸಿನಿಮಾ ಘೋಷಿಸುತ್ತಿದೆ. ಈಗ ಹೊಂಬಾಳೆ ಫಿಲ್ಮ್ಸ್ ನಿರ್ಮಾಣದ ‘ಧೂಮಂ’ ಸಿನಿಮಾ (Dhoomam Movie) ರಿಲೀಸ್​ಗೆ ರೆಡಿ ಇದೆ. ಈ ಸಿನಿಮಾದ ಮೂಲ ಭಾಷೆ ಮಲಯಾಳಂ. ಈ ಚಿತ್ರ ಕನ್ನಡದಲ್ಲೂ ರಿಲೀಸ್ ಆಗುತ್ತಿದೆ. ಆದರೆ, ಈ ಬಗ್ಗೆ ಒಂದಷ್ಟು ಗೊಂದಲ ಇತ್ತು. ಅದಕ್ಕೆಲ್ಲ ತೆರೆ ಬಿದ್ದಿದೆ. ಹೊಂಬಾಳೆ ಫಿಲ್ಮ್ಸ್ ಮಾಡಿದ ಒಂದು ಟ್ವೀಟ್​ನಿಂದ ಎಲ್ಲದಕ್ಕೂ ಸ್ಪಷ್ಟನೆ ಸಿಕ್ಕಿದೆ.

‘ಧೂಮಂ’ ಸಿನಿಮಾಗೆ ಪವನ್ ಕುಮಾರ್ ನಿರ್ದೇಶನ ಇದೆ. ಫಹಾದ್ ಫಾಸಿಲ್ ಅವರು ಈ ಚಿತ್ರದಲ್ಲಿ ಮುಖ್ಯಭೂಮಿಕೆ ನಿರ್ವಹಿಸಿದ್ದಾರೆ. ಮಲಯಾಳಂ ಹಾಗೂ ಕನ್ನಡ ಭಾಷೆಯಲ್ಲಿ ರಿಲೀಸ್ ಆದ ಟ್ರೇಲರ್ ಎಲ್ಲರ ಗಮನ ಸೆಳೆದಿದೆ. ಸಸ್ಪೆನ್ಸ್ ಥ್ರಿಲ್ಲರ್ ಶೈಲಿಯಲ್ಲಿ ಟ್ರೇಲರ್ ಮೂಡಿ ಬಂದಿದೆ. ಈ ಸಿನಿಮಾ ಕನ್ನಡದಲ್ಲಿ ರಿಲೀಸ್ ಆಗೋದು ವಿಳಂಬ ಆಗಲಿದೆ ಎನ್ನಲಾಗಿತ್ತು. ಆದರೆ, ಇದು ಸುಳ್ಳಾಗಿದೆ. ಜೂನ್ 23ರಂದು ಮಲಯಾಳಂ ಹಾಗೂ ಕನ್ನಡದಲ್ಲಿ ಈ ಸಿನಿಮಾ ಒಟ್ಟೊಟ್ಟಿಗೆ ರಿಲೀಸ್ ಆಗುತ್ತಿದೆ.

‘ನಿಲ್ಲಲೇ ಬೇಕು ಎಲ್ಲ ದಿಮಾಕು. ಕಾಲಪುರುಷನ ಕಾಲಿನ ಕೆಳಗೆ. ಧೂಮಂ ಕನ್ನಡದಲ್ಲಿ ಜೂನ್ 23ರಂದು ರಾಜ್ಯದಾದ್ಯಂತ ಬಿಡುಗಡೆ’ ಎಂದು ಹೊಂಬಾಳೆ ಫಿಲ್ಮ್ಸ್ ಟ್ವೀಟ್ ಮಾಡಿದೆ. ಈ ಮೂಲಕ ಎಲ್ಲಾ ಕುತೂಹಲಗಳಿಗೆ ತೆರೆ ಎಳೆಯಲಾಗಿದೆ. ಇದರಿಂದ ಅಭಿಮಾನಿಗಳು ಖುಷಿಯಾಗಿದ್ದಾರೆ. ಸಿನಿಮಾ ಯಾವ ರೀತಿಯಲ್ಲಿ ಮೂಡಿಬರಲಿದೆ ಎಂಬ ಕುತೂಹಲ ಅಭಿಮಾನಿಗಳಲ್ಲಿ ಇದೆ.

ಸಖತ್ ಸ್ಪೀಡ್​ನಲ್ಲಿ ‘ಧೂಮಂ’ ಕೆಲಸ ಪೂರ್ಣಗೊಂಡಿದೆ. ಅಕ್ಟೋಬರ್ 9ರಂದು ‘ಧೂಮಂ’ ಚಿತ್ರಕ್ಕೆ ಮುಹೂರ್ತ ಮಾಡಲಾಗಿತ್ತು. ‘ಧೂಮಂ’ ಚಿತ್ರದ ಮೊದಲ ಸನ್ನಿವೇಶಕ್ಕೆ ಮಂಜುನಾಥ್ ಕಿರಗಂದೂರು ಆರಂಭ ಫಲಕ ತೋರಿಸಿದ್ದರು. ಶೈಲಜಾ ವಿಜಯ್ ಕಿರಗಂದೂರು ಕ್ಯಾಮೆರಾ ಚಾಲನೆ ನೀಡಿದ್ದರು. ಮೂರೇ ತಿಂಗಳಲ್ಲಿ ‘ಧೂಮಂ’ ಸಿನಿಮಾದ ಕೆಲಸ ಪೂರ್ಣಗೊಂಡಿತ್ತು. ಈಗ ಸಿನಿಮಾ ರಿಲೀಸ್​ಗೆ ರೆಡಿ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us