AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hombale Films: ಹೊಂಬಾಳೆ ಫಿಲ್ಮ್ಸ್​ನ 11ನೇ ಚಿತ್ರ ಕಾಂತಾರ; ನಿರ್ದೇಶಕ ಮತ್ತು ನಾಯಕನಾಗಿ ರಿಷಬ್ ಶೆಟ್ಟಿ

Kantara | Rishab Shetty: ರಿಷಬ್ ಶೆಟ್ಟಿ ನಿರ್ದೇಶನ ಮತ್ತು ನಾಯಕತ್ವದಲ್ಲಿ ಕಾಂತಾರ ಚಿತ್ರವನ್ನು ಹೊಂಬಾಳೆ ನಿರ್ಮಾಣ ಸಂಸ್ಥೆ ಘೋಷಿಸಿದೆ.

Hombale Films: ಹೊಂಬಾಳೆ ಫಿಲ್ಮ್ಸ್​ನ 11ನೇ ಚಿತ್ರ ಕಾಂತಾರ; ನಿರ್ದೇಶಕ ಮತ್ತು ನಾಯಕನಾಗಿ ರಿಷಬ್ ಶೆಟ್ಟಿ
ಚಿತ್ರತಂಡ ಬಿಡುಗಡೆಗೊಳಿಸಿರುವ ಪೋಸ್ಟರ್ (ಕೃಪೆ: ಹೊಂಬಾಳೆ ಫಿಲ್ಮ್ಸ್)
TV9 Web
| Edited By: |

Updated on:Aug 06, 2021 | 12:21 PM

Share

ಕನ್ನಡದಲ್ಲಿ ಹಿಟ್ ಚಿತ್ರಗಳನ್ನು ನಿರ್ಮಿಸುತ್ತಾ  ಬಂದಿರುವ ಹೊಂಬಾಳೆ ಫಿಲ್ಮ್ಸ್ ಈಗ ಸಾಲುಸಾಲಾಗಿ ತನ್ನ ನೂತನ ಚಿತ್ರಗಳನ್ನು ಘೋಷಿಸುತ್ತಿದೆ. ಇಂದು ಹೊಸ ಚಿತ್ರವನ್ನು ಘೋಷಿಸುವುದಾಗಿ ತಿಳಿಸಿದ್ದ ಸಂಸ್ಥೆ, ಚಿತ್ರದ ಹೆಸರು ಹಾಗೂ ತಂಡವನ್ನು ಘೋಷಿಸಿದ್ದು, ಅಭಿಮಾನಿಗಳಿಗೆ ಭರ್ಜರಿ ಸುದ್ದಿ ನೀಡಿದೆ. ಕಾರಣ, ತನ್ನ ಹನ್ನೊಂದನೇ ಚಿತ್ರದ ಮೊದಲ ಪೋಸ್ಟರ್​ಅನ್ನು ಬಿಡುಗಡೆಗೊಳಿಸಿರುವ ಹೊಂಬಾಳೆಯ ನೂತನ ಚಿತ್ರಕ್ಕೆ ನಾಯಕನಾಗಿ ರಿಷಬ್ ಶೆಟ್ಟಿ ಕಾಣಿಸಿಕೊಳ್ಳುತ್ತಿದ್ದಾರೆ. ನಿರ್ದೇಶನದ ಜವಾಬ್ದಾರಿಯನ್ನೂ ರಿಷಬ್ ಶೆಟ್ಟಿ ಹೊತ್ತಿದ್ದು, ಚಿತ್ರಕ್ಕೆ ‘ಕಾಂತಾರ’ ಎಂದು ನಾಮಕರಣ ಮಾಡಲಾಗಿದೆ.

‘ಕಾಂತಾರ’ ಚಿತ್ರವು ತುಳುನಾಡಿನ ಹೆಮ್ಮೆಯ ಕ್ರೀಡೆ ಕಂಬಳದ ಕುರಿತ ಚಿತ್ರವಾಗಿರಬಹುದು ಎಂಬ ಸೂಚನೆಯನ್ನು ಪೋಸ್ಟರ್ ನೀಡುತ್ತಿದೆ. ಚಿತ್ರದ ಟೈಟಲ್​ಗೆ ‘ಒಂದು ದಂತಕಥೆ’ ಎಂಬ ಅಡಿಬರಹವನ್ನೂ ನೀಡಲಾಗಿದ್ದು, ಚಿತ್ರದ ಚಿತ್ರೀಕರಣವು ಆಗಸ್ಟ್ 27ರಿಂದ ಪ್ರಾರಂಭವಾಗಲಿದೆ ಎಂದು ಹೊಂಬಾಳೆ ಫಿಲ್ಮ್ಸ್ ತಿಳಿಸಿದೆ. ಚಿತ್ರವನ್ನು ವಿಜಯ್ ಕಿರಗಂದೂರು ನಿರ್ಮಾಣ ಮಾಡುತ್ತಿದ್ದಾರೆ.

ಹೊಂಬಾಳೆ ಫಿಲ್ಮ್ಸ್ ಬಿಡುಗಡೆ ಮಾಡಿರುವ ಪೋಸ್ಟರ್:

ನಟ, ನಿರ್ದೇಶಕ ರಿಷಬ್ ಶೆಟ್ಟಿ ‘ಕಾಂತಾರ’ ಚಿತ್ರದ ಕುರಿತು ತಮ್ಮ ಅನಿಸಿಕೆಯನ್ನು ಹಂಚಿಕೊಂಡಿದ್ದು, ಬಹಳ ಸಮಯದ ಬಳಿಕ ಹೊಸ ‘ಕಿಚ್ಚಿ’ನೊಂದಿಗೆ ನಿರ್ದೇಶಕನಾಗಿ ಬರುತ್ತಿದ್ದೇನೆ ಎಂದು ಬರೆದುಕೊಂಡಿದ್ದಾರೆ. ಹಾಗೆಯೇ ಸುತ್ತ ಕವಿದಿರುವ ಕರಾಳತೆಯನ್ನು ಈ ಕಿಚ್ಚು ದಹಿಸಲಿದೆ ಎಂಬ ನಂಬಿಕೆಯೂ ಅವರಲ್ಲಿದೆ. ಈ ಕುರಿತು ಅವರು ಹಂಚಿಕೊಂಡ ಟ್ವೀಟ್ ಇಲ್ಲಿದೆ.

ಪ್ರಸ್ತುತ ಹೊಂಬಾಳೆ ಫಿಲ್ಮ್ಸ್ ಸಂಸ್ಥೆಯ ಅಡಿಯಲ್ಲಿ ಬಹುನಿರೀಕ್ಷಿತ ಸಿನಿಮಾಗಳು ಮೂಡಿಬರುತ್ತಿವೆ. ಪ್ರಶಾಂತ್ ನೀಲ್ ನಿರ್ದೇಶನದ, ಯಶ್​ ನಟನೆಯ ‘ಕೆಜಿಎಫ್​: ಚಾಪ್ಟರ್​ 2’ ಹಾಗೂ ಪ್ರಭಾಸ್​ ನಟನೆಯ ‘ಸಲಾರ್​’ ಸಿನಿಮಾ ಕೆಲಸಗಳು ಬಿರುಸಿನಿಂದ ಸಾಗಿವೆ. ಶ್ರೀಮುರಳಿ ನಟನೆಯ ‘ಭಗೀರ’ ಚಿತ್ರವನ್ನೂ ಅನೌನ್ಸ್ ಮಾಡಲಾಗಿದ್ದು, ಅದು ಇನ್ನು ಸೆಟ್ಟೇರಬೇಕಿದೆ. ಜೂನ್​ನಲ್ಲಿ ಪುನೀತ್ ರಾಜ್​ಕುಮಾರ್​ ಮತ್ತು ಪವನ್​ ಕುಮಾರ್​ ಕಾಂಬಿನೇಷನ್​ನ ‘ದ್ವಿತ್ವ’ ಚಿತ್ರದ ಶೀರ್ಷಿಕೆ ಮತ್ತು ಫಸ್ಟ್​ಲುಕ್​ ಲಾಂಚ್​ ಮಾಡಲಾಗಿತ್ತು. ಈಗ ದ್ವಿತ್ವಕ್ಕೆ ನಾಯಕಿಯನ್ನೂ ಘೋಷಿಸಲಾಗಿದ್ದು, ದಕ್ಷಿಣ ಭಾರತದ ಖ್ಯಾತ ನಟಿ ತ್ರಿಷಾ ನಟಿಸಲಿದ್ದಾರೆ. ಹೊಂಬಾಳೆಯ 10ನೇ ಚಿತ್ರವಾಗಿ ರಕ್ಷಿತ್​ ಶೆಟ್ಟಿ ಕತೆ, ನಿರ್ದೇಶನದಲ್ಲಿ ‘ರಿಚರ್ಡ್​ ಆ್ಯಂಟೊನಿ’ ಘೋಷಣೆ ಆಗಿತ್ತು. ಈಗ 11ನೇ ಸಿನಿಮಾವನ್ನೂ ಘೋಷಿಸಿರುವ ನಿರ್ಮಾಣ ಸಂಸ್ಥೆ, ಅದ್ದೂರಿ ಬಜೆಟ್​ಗಳ, ಬೃಹತ್ ತಾರಾಗಣದ ಚಿತ್ರಗಳನ್ನು ಏಕಕಾಲಕ್ಕೆ ನಿರ್ಮಿಸುತ್ತಿದೆ.

ಇದನ್ನೂ ಓದಿ:

ಪವರ್​ ಸ್ಟಾರ್​ ಪುನೀತ್​ ರಾಜ್​ಕುಮಾರ್ ‘ದ್ವಿತ್ವ’ ಚಿತ್ರಕ್ಕೆ ನಾಯಕಿಯಾದ ತ್ರಿಷಾ ಕೃಷ್ಣನ್

Hombale Films and Rakshith Shetty: ಅಭಿಮಾನಿಗಳ ಕಾಯುವಿಕೆಗೆ ಕೊನೆ ಹಾಡೇ ಬಿಟ್ರು ರಕ್ಷಿತ್​ ಶೆಟ್ಟಿ, ಡೈರೆಕ್ಟರ್ ಕ್ಯಾಪ್​ ಹಾಕ್ಕೊಳ್ಳೋ ಟೈಮ್ ಬಂದೇ ಬಿಡ್ತು!

(Hombale Films announces its 11th production directed and starring Rishab Shetty)

Published On - 11:52 am, Fri, 6 August 21

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್