‘ಕಾಂತಾರ: ಚಾಪ್ಟರ್ 1’ ಚಿತ್ರದ ಜೊತೆ ಪಾರ್ಟ್ನರ್ ಆದ ಮೈಸೂರು ಸ್ಯಾಂಡಲ್ ಸೋಪ್

‘ಕಾಂತಾರ: ಚಾಪ್ಟರ್ 1’ ಸಿನಿಮಾ ಅಕ್ಟೋಬರ್ 2ರಂದು ರಿಲೀಸ್ ಆಗುತ್ತಿದೆ. ಈ ಚಿತ್ರವನ್ನು ಹೊಂಬಾಳೆ ಫಿಲ್ಮ್ಸ್ ಅದ್ದೂರಿಯಾಗಿ ನಿರ್ಮಾಣ ಮಾಡಿದೆ. ‘ಕಾಂತಾರ’ ಚಿತ್ರದ ಪ್ರೀಕ್ವೆಲ್ ಆಗಿ ಈ ಸಿನಿಮಾ ಮೂಡಿ ಬಂದಿದೆ. ಈ ತಂಡದ ಜೊತೆಗೆ ಸರ್ಕಾರಿ ಸ್ವಾಮ್ಯದ ಮೈಸೂರು ಸ್ಯಾಂಡಲ್ ಸೋಪ್ ಸುಗಂಧ ಭಾಗಿದಾರಾಗಿ ಒಪ್ಪಂದ ಮಾಡಿಕೊಂಡಿದೆ.

‘ಕಾಂತಾರ: ಚಾಪ್ಟರ್ 1’ ಚಿತ್ರದ ಜೊತೆ ಪಾರ್ಟ್ನರ್ ಆದ ಮೈಸೂರು ಸ್ಯಾಂಡಲ್ ಸೋಪ್
ಕಾಂತಾರ

Updated on: Sep 26, 2025 | 11:55 AM

ವಿಶ್ವ ಮಟ್ಟದಲ್ಲಿ ‘ಕಾಂತಾರ: ಚಾಪ್ಟರ್ 1’ ಸಿನಿಮಾ (Kantara: Chapter 1) ರಿಲೀಸ್ ಆಗುತ್ತಿದೆ. ರಿಷಬ್ ಶೆಟ್ಟಿ ನಟಿಸಿ ನಿರ್ದೇಶಿಸಿರುವ ಈ ಚಿತ್ರಕ್ಕೆ ರುಕ್ಮಿಣಿ ವಸಂತ್ ನಾಯಕಿ. ಹೊಂಬಾಳೆ ಫಿಲ್ಮ್ಸ್ ಈ ಚಿತ್ರವನ್ನು ಅದ್ದೂರಿಯಾಗಿ ನಿರ್ಮಾಣ ಮಾಡುತ್ತಿದೆ. ಈ ತಂಡದ ಜೊತೆಗೆ ಸರ್ಕಾರಿ ಸ್ವಾಮ್ಯದ ಮೈಸೂರು ಸ್ಯಾಂಡಲ್ ಸೋಪ್ ಸುಗಂಧ ಭಾಗಿದಾರಾಗಿ ಒಪ್ಪಂದ ಮಾಡಿಕೊಂಡಿದೆ.

‘ಕಾಂತಾರ’ ಸಿನಿಮಾ ಮೊದಲು ಕನ್ನಡದಲ್ಲಿ ಮಾತ್ರ ರಿಲೀಸ್ ಆಯಿತು. ಆ ಬಳಿಕ ಸಿನಿಮಾ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಬಿಡುಗಡೆ ಕಂಡಿತು. ಈಗ ‘ಕಾಂತಾರ: ಚಾಪ್ಟರ್ 1’ ಚಿತ್ರದ ಮೇಲೆ ನಿರೀಕ್ಷೆ ಇರುವುದರಿಂದ ಈ ಚಿತ್ರವನ್ನು ಕನ್ನಡ, ತೆಲುಗು, ಇಂಗ್ಲಿಷ್ ಸೇರಿದಂತೆ ಆರು ಭಾಷೆಗಳಲ್ಲಿ ರಿಲೀಸ್ ಆಗುತ್ತಿದೆ. ಸ್ಪ್ಯಾನಿಶ್ ಮೊದಲಾದ ಭಾಷೆಗಳಲ್ಲಿ ಸಿನಿಮಾ ಡಬ್ಬಿಂಗ್ ಕೆಲಸ ನಡೆಯುತ್ತಿದ್ದು, ಮುಂದಿನ ದಿನಗಳಲ್ಲಿ ಬಿಡುಗಡೆ ಕಾಣಲಿದೆ. ಈ ಸಿನಿಮಾ ವಿಶ್ವ ಮಟ್ಟದಲ್ಲಿ ರಿಲೀಸ್ ಆಗುತ್ತಿದ್ದು, ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ನಿಯಮಿತ (ಕೆಎಸ್​ಡಿಎಲ್) ಈಗ ಪಾರ್ಟ್ನರ್ ಆಗಿ ಒಪ್ಪಂದ ಮಾಡಿಕೊಂಡಿದೆ.

ಕೆಎಸ್​ಡಿಎಲ್ ಸಂಸ್ಥೆಯು ಸ್ಯಾಂಡಲ್ ಸೋಪ್ ಮತ್ತು ಗಂಧದ ಎಣ್ಣೆಗೆ ಹೆಸರಾಗಿದೆ. ಈಗ ಸಂಸ್ಥೆ ಕಾಂತಾರ ಚಿತ್ರತಂಡದ ನಡುವೆ ಒಪ್ಪಂದ ಮಾಡಿಕೊಂಡಿದೆ. ಪ್ರತಿ ಶೋನಲ್ಲೂ ಮೈಸೂರು ಸ್ಯಾಂಡಲ್ ಸೋಪ್ ಪೋಸ್ಟರ್ ಪ್ರದರ್ಶನ ಆಗಲಿದೆ. ಇದರಿಂದ ಈ ಬ್ರ್ಯಾಂಡ್​ಗೆ ಇನ್ನೂ ಹೆಚ್ಚಿನ ಪ್ರಚಾರ ಸಿಗಲಿದೆ.

ಇದನ್ನೂ ಓದಿ
ರಕ್ಷಿತ್ ಶೆಟ್ಟಿ ಹಾಗೂ ರುಕ್ಮಿಣಿ ವಸಂತ್ ಮಧ್ಯೆ ಎಷ್ಟು ಸಾಮ್ಯತೆ ಇದೆ ನೋಡಿ
‘ನಾನು ಒಂದು ದಿನ ಮಗು ಹೊಂದುತ್ತೇನೆ’; ಮನದ ಆಸೆ ಹೊರಹಾಕಿದ ಸಲ್ಮಾನ್ ಖಾನ್
ಬಿಗ್ ಬಾಸ್​ಗೆ ಶಾಕ್; ಬಿತ್ತು ಎರಡು ಕೋಟಿ ರೂಪಾಯಿ ಕೇಸ್
‘ಓಜಿ’ ಅಬ್ಬರದ ಕಲೆಕ್ಷನ್; ಮೊದಲ ದಿನವೇ 100 ಕೋಟಿ ರೂಪಾಯಿ ಗಳಿಕೆ

ಇದನ್ನೂ ಓದಿ: ‘ಕಾಂತಾರ: ಚಾಪ್ಟರ್ 1’ ಚಿತ್ರಕ್ಕೆ ರಿಷಬ್ ಪಡೆದ ಸಂಭಾವನೆ ಎಷ್ಟು? ಊಹೆಗೂ ಮೀರಿದ್ದು

‘ಕಾಂತಾರ: ಚಾಪ್ಟರ್ 1’ ಸಿನಿಮಾ ಅಕ್ಟೋಬರ್ 2ರಂದು ರಿಲೀಸ್ ಆಗಲಿದೆ.  ಭಾರತದ 6,000ಕ್ಕೂ ಹೆಚ್ಚು ಸ್ಕ್ರೀನ್​ಗಳಲ್ಲಿ ‘ಕಾಂತಾರ: ಚಾಪ್ಟರ್ 1’ ಪ್ರದರ್ಶನ ಕಾಣಲಿದೆ. ಇನ್ನು, 30 ರಾಷ್ಟ್ರಗಳಲ್ಲಿ ಸಿನಿಮಾ ಬಿಡುಗಡೆ ಆಗಲಿದೆ. ಸದ್ಯ ಮೈಸೂರು ಸ್ಯಾಂಡಲ್​ ಸೋಪ್ ತಯಾರಿಕಾ ಸಂಸ್ಥೆ ಜಾಗತಿಕ ಮಟ್ಟದಲ್ಲಿ ಮಾರುಕಟ್ಟೆ ವಿಸ್ತರಣೆಗೆ ಒಲವು ಹೊಂದಿದೆ. ಅದಕ್ಕೆ ಈ ಸಹಭಾಗಿತ್ವ ತುಂಬಾನೇ ಸಹಕಾರಿ ಆಗಲಿದೆ. ಬಿ. ಅಜನೀಶ್ ಲೋಕನಾಥ್ ಸಂಗೀತ ಸಂಯೋಜನೆ ಚಿತ್ರಕ್ಕೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.