AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hombale Films: ಮುಂದಿನ 5 ವರ್ಷಗಳಲ್ಲಿ ಚಿತ್ರರಂಗಕ್ಕೆ 3 ಸಾವಿರ ಕೋಟಿ ರೂ. ಹೂಡಿಕೆ; ವಿಜಯ್ ಕಿರಗಂದೂರು ಮಹತ್ವದ ಘೋಷಣೆ

ಸಿನಿಮಾ ರಂಗಕ್ಕೆ ಮುಂದಿನ ಐದು ವರ್ಷಗಳಲ್ಲಿ 3 ಸಾವಿರ ಕೋಟಿ ರೂಪಾಯಿ ಹೂಡಿಕೆ ಮಾಡುವ ಬಗ್ಗೆ ಅವರು ಮಾಹಿತಿ ಹಂಚಿಕೊಂಡಿದ್ದಾರೆ. ಈ ಮೂಲಕ ಹಲವು ಬಿಗ್ ಬಜೆಟ್ ಚಿತ್ರಗಳು ಈ ನಿರ್ಮಾಣ ಸಂಸ್ಥೆಯಿಂದ ಮೂಡಿ ಬರುವ ಸೂಚನೆ ಸಿಕ್ಕಿದೆ.

Hombale Films: ಮುಂದಿನ 5 ವರ್ಷಗಳಲ್ಲಿ ಚಿತ್ರರಂಗಕ್ಕೆ 3 ಸಾವಿರ ಕೋಟಿ ರೂ. ಹೂಡಿಕೆ; ವಿಜಯ್ ಕಿರಗಂದೂರು ಮಹತ್ವದ ಘೋಷಣೆ
ಹೊಂಬಾಳೆ ಫಿಲ್ಮ್ಸ್​-ವಿಜಯ್ ಕಿರಗಂದೂರು
TV9 Web
| Edited By: |

Updated on:Jan 02, 2023 | 5:44 PM

Share

ವಿಜಯ್ ಕಿರಗಂದೂರು (Vijay Kirgandur ) ಅವರ ‘ಹೊಂಬಾಳೆ ಫಿಲ್ಮ್ಸ್​​’ ಕಡೆಯಿಂದ ಹೊಸ ಹೊಸ ಸಿನಿಮಾಗಳು ಘೋಷಣೆ ಆಗುತ್ತಲೇ ಇವೆ. ‘ಕೆಜಿಎಫ್​’ (KGF Movie) ಸರಣಿ ಹಿಟ್ ಆದ ನಂತರದಲ್ಲಿ ಪರಭಾಷೆಯಲ್ಲೂ ವಿಜಯ್ ಕಿರಗಂದೂರು ಅವರು ಸಿನಿಮಾ ನಿರ್ಮಾಣಕ್ಕೆ ಕೈ ಹಾಕಿದ್ದಾರೆ. ಹೊಸ ವರ್ಷಕ್ಕೆ ಅವರ ಕಡೆಯಿಂದ ಮಹತ್ವದ ಘೋಷಣೆ ಆಗಿದೆ. ಸಿನಿಮಾ ರಂಗಕ್ಕೆ ಮುಂದಿನ ಐದು ವರ್ಷಗಳಲ್ಲಿ 3 ಸಾವಿರ ಕೋಟಿ ರೂಪಾಯಿ ಹೂಡಿಕೆ ಮಾಡುವ ಬಗ್ಗೆ ಅವರು ಮಾಹಿತಿ ಹಂಚಿಕೊಂಡಿದ್ದಾರೆ. ಈ ಮೂಲಕ ಹಲವು ಬಿಗ್ ಬಜೆಟ್ ಚಿತ್ರಗಳು ಈ ನಿರ್ಮಾಣ ಸಂಸ್ಥೆಯಿಂದ ಮೂಡಿ ಬರುವ ಸೂಚನೆ ಸಿಕ್ಕಿದೆ.

‘ಹೊಂಬಾಳೆ ಫಿಲ್ಮ್ಸ್​​’ ಕನ್ನಡ ಚಿತ್ರರಂಗಕ್ಕೆ ನೀಡಿದ ಕೊಡುಗೆ ತುಂಬಾನೇ ದೊಡ್ಡದು. ಹಲವು ಸೂಪರ್ ಹಿಟ್ ಚಿತ್ರಗಳನ್ನು ಈ ನಿರ್ಮಾಣ ಸಂಸ್ಥೆ ನೀಡಿದೆ. ‘ಕೆಜಿಎಫ್​’ ಹಾಗೂ ‘ಕೆಜಿಎಫ್​ 2’ ಚಿತ್ರಗಳಿಂದ ಈ ಸಂಸ್ಥೆಗೆ ದೊಡ್ಡ ಮಟ್ಟದ ಲಾಭ ಆಗಿದೆ. ‘ಕೆಜಿಎಫ್ 2’ ವಿಶ್ವ ಮಟ್ಟದಲ್ಲಿ 1300+ ಕೋಟಿ ರೂಪಾಯಿ ಕಮಾಯಿ ಮಾಡಿದೆ. ಇದರಿಂದ ವಿಜಯ್ ಅವರ ಜೇಬು ತುಂಬಿದೆ. ಇತ್ತೀಚೆಗೆ ತೆರೆಗೆ ಬಂದ ‘ಕಾಂತಾರ’ ಸಿನಿಮಾ ಕೂಡ ಸೂಪರ್ ಹಿಟ್ ಆಯಿತು. ಈ ಸಿನಿಮಾ ಕೂಡ ದೊಡ್ಡ ಮಟ್ಟದ ಲಾಭ ನೀಡಿದೆ. 15 ಕೋಟಿ ಬಜೆಟ್​ನಲ್ಲಿ ರೆಡಿ ಆದ ಈ ಚಿತ್ರದ ಒಟ್ಟಾರೆ ಕಲೆಕ್ಷನ್​ 400 ಕೋಟಿ ರೂಪಾಯಿ ದಾಟಿದೆ. ಈ ಎಲ್ಲಾ ಸಿನಿಮಾಗಳಿಂದ ಆದ ಲಾಭವನ್ನು ಚಿತ್ರರಂಗಕ್ಕೆ ಮರಳಿ ಹೂಡಿಕೆ ಮಾಡಲು ವಿಜಯ್ ನಿರ್ಧರಿಸಿದಂತಿದೆ.

ಹೊಂಬಾಳೆ ಫಿಲ್ಮ್ಸ್​​ ನಿರ್ಮಾಣದ ಮೊದಲ ಸಿನಿಮಾ ‘ನಿನ್ನಿಂದಲೇ’ (2014) ಹೆಚ್ಚು ಸದ್ದು ಮಾಡಲಿಲ್ಲ. 2015ರಲ್ಲಿ ಬಂದ ‘ಮಾಸ್ಟರ್​ಪೀಸ್​’ ಚಿತ್ರ ಸೂಪರ್ ಹಿಟ್ ಆಯಿತು. ‘ರಾಜಕುಮಾರ’ ಸೇರಿ ಹಲವು ಸೂಪರ್ ಹಿಟ್ ಚಿತ್ರಗಳು ನಿರ್ಮಾಣ ಸಂಸ್ಥೆಯಿಂದ ಮೂಡಿ ಬಂದಿವೆ.

ಇದನ್ನೂ ಓದಿ: KGF Chapter 1: ‘ಕೆಜಿಎಫ್’ ಚಿತ್ರಕ್ಕೆ 4 ವರ್ಷ; ಇತಿಹಾಸ ಸೃಷ್ಟಿಸಿದ ದಿನ ನೆನೆದ ಹೊಂಬಾಳೆ ಫಿಲ್ಮ್ಸ್​

ಹೊಂಬಾಳೆ ತೆಲುಗಿನಲ್ಲಿ ‘ಸಲಾರ್​’ ಚಿತ್ರವನ್ನು ನಿರ್ಮಾಣ ಮಾಡುತ್ತಿದೆ. ಈ ಚಿತ್ರಕ್ಕೆ ಪ್ರಶಾಂತ್ ನೀಲ್ ನಿರ್ದೇಶನ ಇದೆ. ಪ್ರಭಾಸ್ ಈ ಚಿತ್ರದ ಹೀರೋ. ಪೃಥ್ವಿರಾಜ್​ ನಿರ್ದೇಶಿಸಿ ನಟಿಸುತ್ತಿರುವ ಮಲಯಾಳಂನ ‘ಟೈಸನ್​’ ಕೂಡ ನಿರೀಕ್ಷೆ ಮೂಡಿಸಿದೆ. ಕನ್ನಡದ ‘ಬಘೀರ’ ಚಿತ್ರದ ಬಗ್ಗೆ ಕುತೂಹಲ ಮೂಡಿದೆ. ಮಲಯಾಳಂನ ‘ಧೂಮಂ’, ರಕ್ಷಿತ್ ಶೆಟ್ಟಿ ನಿರ್ದೇಶನ ಮಾಡಲಿರುವ ‘ರಿಚರ್ಡ್​ ಆಂಟನಿ’ ಸಿನಿಮಾಗಳು ಘೋಷಣೆ ಆಗಿವೆ. ತಮಿಳಿನಲ್ಲಿ ಕೀರ್ತಿ ಸುರೇಶ್ ನಟನೆಯ ಸಿನಿಮಾಗೆ ಹೊಂಬಾಳೆ ಹಣ ಹೂಡಿಕೆ ಮಾಡುತ್ತಿದೆ. ಇದರ ಜತೆಗೆ ಬಾಲಿವುಡ್​ನತ್ತ ವಿಜಯ್ ಅವರು ಗಮನಹರಿಸಲಿದ್ದಾರೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಸಿನಿಮಾ ಘೋಷಣೆ ಆಗುವ ನಿರೀಕ್ಷೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 5:27 pm, Mon, 2 January 23

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ