AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೈವದ ಹರಕೆ ತೀರಿಸಿದ ‘ಕಾಂತಾರ’ ತಂಡ; ರೋಮಾಂಚನಕಾರಿಯಾಗಿದೆ ವಿಡಿಯೋ ​

ಈ ಸಿನಿಮಾ ಯಶಸ್ಸು ಕಂಡಿರುವುದರಿಂದ ಚಿತ್ರತಂಡ ಖುಷಿಯಲ್ಲಿದೆ. ರಿಷಬ್ ಶೆಟ್ಟಿ ಅವರು ಸ್ಟಾರ್ ಹೀರೋ ಆಗಿದ್ದಾರೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ಅವರ ಖ್ಯಾತಿ ಹಬ್ಬಿದೆ.

ದೈವದ ಹರಕೆ ತೀರಿಸಿದ ‘ಕಾಂತಾರ’ ತಂಡ; ರೋಮಾಂಚನಕಾರಿಯಾಗಿದೆ ವಿಡಿಯೋ ​
ದೈವದ ವಿಡಿಯೋ ಹಂಚಿಕೊಂಡ ಹೊಂಬಾಳೆ ಫಿಲ್ಮ್ಸ್​
TV9 Web
| Edited By: |

Updated on: Jan 20, 2023 | 2:43 PM

Share

ರಿಷಬ್ ಶೆಟ್ಟಿ (Rishab Shetty) ನಟಿಸಿ ನಿರ್ದೇಶಿಸಿರುವ ‘ಕಾಂತಾರ’ ಸಿನಿಮಾ ಸೂಪರ್ ಹಿಟ್ ಆಯಿತು. ಈ ಚಿತ್ರದಿಂದ ಹೊಂಬಾಳೆ ಫಿಲ್ಮ್ಸ್​ ಅಭೂತಪೂರ್ವ ಯಶಸ್ಸು ಕಂಡಿತು. ನಿರ್ಮಾಪಕ ವಿಜಯ್ ಕಿರಗಂದೂರು (Vijay Kiraganduru) ಅವರು ಈ ಚಿತ್ರದಿಂದ ಸಾಕಷ್ಟು ಲಾಭ ಕಂಡರು. ಇತ್ತೀಚೆಗೆ ಚಿತ್ರತಂಡ ಪಂಜುರ್ಲಿ ದೈವಕ್ಕೆ ಹರಕೆ ತೀರಿಸಿತ್ತು. ಈ ವಿಡಿಯೋ ಅನ್ನು ಚಿತ್ರತಂಡ ಹಂಚಿಕೊಂಡಿದೆ. ಆ ಕ್ಷಣಗಳನ್ನು ಅದ್ಭುತವಾಗಿ ಸೆರೆ ಹಿಡಿದು ಹೊಂಬಾಳೆ ಫಿಲ್ಮ್ಸ್ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದೆ. ಈ ವಿಡಿಯೋ ನೋಡಿದ ಅನೇಕರು ಮೆಚ್ಚುಗೆ ಸೂಚಿಸಿದ್ದಾರೆ. ಇನ್ನೂ ಕೆಲವರು ಈ ವಿಡಿಯೋ ರೋಮಾಂಚನಕಾರಿ ಆಗಿದೆ ಎಂದಿದ್ದಾರೆ.

‘ಕಾಂತಾರ’ ಸಿನಿಮಾದ ಜೀವಾಳ ದೈವ. ರಿಷಬ್ ಶೆಟ್ಟಿ ಅವರು ಕರಾವಳಿಯವರು. ಅಲ್ಲಿಯ ಸಂಸ್ಕೃತಿಯನ್ನೇ ಇಟ್ಟುಕೊಂಡು ಸಿನಿಮಾ ಮಾಡಿದ್ದರು. ‘ಕಾಂತಾರ’ ಚಿತ್ರದಲ್ಲಿ ಪಂಜುರ್ಲಿ ದೈವ ಬಹಳ ಮಹತ್ವದ ಪಾತ್ರವಹಿಸಿತ್ತು. ಈ ಸಿನಿಮಾ ಯಶಸ್ಸು ಕಂಡಿರುವುದರಿಂದ ಚಿತ್ರತಂಡ ಖುಷಿಯಲ್ಲಿದೆ. ರಿಷಬ್ ಶೆಟ್ಟಿ ಅವರು ಸ್ಟಾರ್ ಹೀರೋ ಆಗಿದ್ದಾರೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ಅವರ ಖ್ಯಾತಿ ಹಬ್ಬಿದೆ.

ಇದನ್ನೂ ಓದಿ
Image
ಬಾಲ್ಯ ಸ್ನೇಹಿತನ ಮದುವೆಗೆ ಪತ್ನಿ ಸಮೇತ ಬಂದು ಹರಸಿದ ಯಶ್​; ಸಲಾಂ ರಾಕಿ ಭಾಯ್​ ಎಂದ ಫ್ಯಾನ್ಸ್​
Image
ಗೋವಾ ಸಿಎಂ ಪ್ರಮೋದ್​ ಸಾವಂತ್​ ಭೇಟಿ ಮಾಡಿದ ಯಶ್​-ರಾಧಿಕಾ ಪಂಡಿತ್​; ಮುಂದಿನ ಸಿನಿಮಾ ಬಗ್ಗೆ​ ಕುತೂಹಲ
Image
‘ಕೆಜಿಎಫ್​ 2’ ಹಿಟ್​ ಆಗಿದ್ದಕ್ಕೆ ಕಬ್ಬಿನ ಹಾಲು ಟ್ರೀಟ್​ ಕೇಳಿದ ‘ಗೂಗ್ಲಿ’ ನಟಿ ಕೃತಿ ಕರಬಂಧ: ಯಶ್​ ಏನಂದ್ರು?
Image
‘ಕೆಜಿಎಫ್​ 2’ಗೆ ಕೆಟ್ಟ ವಿಮರ್ಶೆ ಮಾಡಿ, ಯಶ್​ ಬಗ್ಗೆ ವ್ಯಂಗ್ಯದ ಮಾತಾಡಿದ ‘ದೇಶದ್ರೋಹಿ’ ನಟ:​ ಸಿಡಿದೆದ್ದ ಫ್ಯಾನ್ಸ್​

ಇತ್ತೀಚೆಗೆ ರಿಷಬ್ ಶೆಟ್ಟಿ, ಪ್ರಗತಿ ಶೆಟ್ಟಿ, ವಿಜಯ್ ಕಿರಗಂದೂರು, ಸಪ್ತಮಿ ಗೌಡ, ಪ್ರಮೋದ್ ಶೆಟ್ಟಿ ಮೊದಲಾದವರು ಮಂಗಳೂರಿನ ಅಣ್ಣಪ್ಪ ಪಂಜುರ್ಲಿಗೆ ತೆರಳಿ ಹರಕೆ ತೀರಿಸಿದ್ದರು. ಆ ಫೋಟೋಗಳು ವೈರಲ್ ಆಗಿದ್ದವು. ಈಗ ವಿಡಿಯೋ ಮಾಡಿ ಹೊಂಬಾಳೆ ಫಿಲ್ಮ್ಸ್ ಹಂಚಿಕೊಂಡಿದೆ. ಇದನ್ನು ನೋಡಿ ಅನೇಕರು ಮೆಚ್ಚುಗೆ ಸೂಚಿಸಿದ್ದಾರೆ.

‘ಕಾಂತಾರ’ ಚಿತ್ರದಿಂದ ಕರಾವಳಿಯ ಆಚರಣೆಗಳು ಜಗತ್ತಿನ ಮುಂದೆ ಪರಿಚಯಗೊಂಡಿವೆ. ಹೀಗೊಂದು ಆಚರಣೆ ಇದೆಯೇ ಎಂದು ಹೊರ ರಾಜ್ಯದವರಿಗೆ ಪ್ರಶ್ನೆ ಮೂಡಿತ್ತು. ಈಗ ಹಂಚಿಕೊಂಡಿರುವ ವಿಡಿಯೋ ಅವರ ಪ್ರಶ್ನೆಗಳಿಗೆ ಉತ್ತರ ಕೊಟ್ಟಂತಿದೆ. ‘ಕಾಂತಾರ’ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ 400 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡಿ ಬೀಗಿದೆ. 2022ರಲ್ಲಿ ರಿಲೀಸ್ ಆದ ಸಿನಿಮಾಗಳ ಪೈಕಿ ಅಪರೂಪದ ಸಾಧನೆ ಮಾಡಿದ ಸಾಲಿನಲ್ಲಿ ‘ಕಾಂತಾರ’ ಮುಂಚೂಣಿಯಲ್ಲಿ ನಿಲ್ಲುತ್ತದೆ.

ಇದನ್ನೂ ಓದಿ: Kantara 2: ‘ಕಾಂತಾರ 2 ಅಂತ ನೀವೇ ಎಲ್ಲ ಹೇಳ್ತಿದ್ದೀರಿ..’; ಸೀಕ್ವೆಲ್​ ಬಗ್ಗೆ ಕೇಳಿದ್ದಕ್ಕೆ ರಿಷಬ್​ ಶೆಟ್ಟಿ ಉತ್ತರ

ರಿಷಬ್ ಶೆಟ್ಟಿ ಅವರು ‘ಕಾಂತಾರ’ ಚಿತ್ರಕ್ಕೆ ಸೀಕ್ವೆಲ್ ಅಥವಾ ಪ್ರೀಕ್ವೆಲ್ ಮಾಡುತ್ತಾರೆ ಎಂದು ವರದಿ ಆಗಿದೆ. ಇದನ್ನು ಚಿತ್ರತಂಡ ಖಚಿತಪಡಿಸಿದೆ. ಆದರೆ, ರಿಷಬ್ ಅವರು ಈ ವಿಚಾರದಲ್ಲಿ ನಿರ್ಧಾರ ತೆಗೆದುಕೊಂಡಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಜುಲೈ 13 ರಿಂದ 19 ರವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿದೆ
ಜುಲೈ 13 ರಿಂದ 19 ರವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿದೆ
ಎಸ್​​. ಜಾನಕಿ ಅಂತಿಮ ದರ್ಶನದ ನೇರಪ್ರಸಾರ
ಎಸ್​​. ಜಾನಕಿ ಅಂತಿಮ ದರ್ಶನದ ನೇರಪ್ರಸಾರ