AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kantara: ಇಟಾಲಿಯನ್​, ಸ್ಪ್ಯಾನಿಶ್​ ಭಾಷೆಯಲ್ಲೂ ರಿಲೀಸ್​ ಆಗತ್ತೆ ‘ಕಾಂತಾರ’; ಗುಡ್​ ನ್ಯೂಸ್​ ನೀಡಿದ ‘ಹೊಂಬಾಳೆ’

Hombale Films | Rishab Shetty: ‘ಕಾಂತಾರ’ ಸಿನಿಮಾದ ಅಬ್ಬರ ಇನ್ನೂ ನಿಂತಿಲ್ಲ. ಬೇರೆ ಬೇರೆ ದೇಶಗಳಲ್ಲಿ ಈ ಚಿತ್ರ ಸದ್ದು ಮಾಡುತ್ತಿದೆ. ರಿಷಬ್​ ಶೆಟ್ಟಿ ಅವರ ಈ ಸಿನಿಮಾಗೆ ವಿದೇಶಿ ಪ್ರೇಕ್ಷಕರಿಂದ ಬೇಡಿಕೆ ಬಂದಿದೆ.

Kantara: ಇಟಾಲಿಯನ್​, ಸ್ಪ್ಯಾನಿಶ್​ ಭಾಷೆಯಲ್ಲೂ ರಿಲೀಸ್​ ಆಗತ್ತೆ ‘ಕಾಂತಾರ’; ಗುಡ್​ ನ್ಯೂಸ್​ ನೀಡಿದ ‘ಹೊಂಬಾಳೆ’
ಕಾಂತಾರ ಸಿನಿಮಾ
ಮದನ್​ ಕುಮಾರ್​
|

Updated on:Mar 19, 2023 | 10:08 AM

Share

ಕನ್ನಡದ ಸಿನಿಮಾಗಳು ದೇಶ-ಭಾಷೆಯ ಗಡಿ ಮೀರಿ ಬೆಳೆದಿವೆ. ಅದಕ್ಕೆ ‘ಕಾಂತಾರ’ (Kantara Movie) ಸಿನಿಮಾದ ಯಶಸ್ಸೇ ಸಾಕ್ಷಿ. ಈ ಚಿತ್ರದಿಂದ ನಿರ್ಮಾಣ ಆಗಿರುವ ದಾಖಲೆಗಳು ಒಂದೆರಡಲ್ಲ. ಸಾಧಾರಣ ಬಜೆಟ್​ನಲ್ಲಿ ಸಿದ್ಧವಾದ ಈ ಸಿನಿಮಾ ಬಾಕ್ಸ್​ ಆಫೀಸ್​ನಲ್ಲಿ 400 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್​ ಮಾಡಿದ್ದು ಈಗ ಇತಿಹಾಸ. ಇದರ ನಾಗಾಲೋಟ ಇನ್ನೂ ನಿಂತಿಲ್ಲ. ಈಗ ಕೆಲವು ವಿದೇಶಿ ಭಾಷೆಗಳಲ್ಲೂ ‘ಕಾಂತಾರ’ ರಿಲೀಸ್​ ಆಗಲಿದೆ. ರಿಷಬ್​ ಶೆಟ್ಟಿ (Rishab Shetty) ನಿರ್ದೇಶನದ ಈ ಚಿತ್ರಕ್ಕೆ ಬೇರೆ ಬೇರೆ ದೇಶಗಳ ಪ್ರೇಕ್ಷಕರಿಂದ ಬೇಡಿಕೆ ಬಂದಿದೆ. ಹಾಗಾಗಿ ಇಟಾಲಿಯನ್​ ಮತ್ತು ಸ್ಪ್ಯಾನಿಶ್​​ ಭಾಷೆಗಳಿಗೆ ಡಬ್​ ಮಾಡಿ ತೆರೆಕಾಣಿಸಲು ಸಿದ್ಧತೆ ನಡೆದಿದೆ. ಈ ಖುಷಿ ಸುದ್ದಿಯನ್ನು ‘ಹೊಂಬಾಳೆ ಫಿಲ್ಮ್ಸ್​’ (Hombale Films) ಹಂಚಿಕೊಂಡಿದೆ. ಶೀಘ್ರದಲ್ಲೇ ರಿಲೀಸ್​ ದಿನಾಂಕ ಪ್ರಕಟ ಆಗಲಿದೆ.

ಮೊದಲು ‘ಕಾಂತಾರ’ ಬಿಡುಗಡೆ ಆಗಿದ್ದು ಕನ್ನಡದಲ್ಲಿ ಮಾತ್ರ. ಮೊದಲ ದಿನವೇ ಈ ಚಿತ್ರಕ್ಕೆ ಭರ್ಜರಿ ಪ್ರತಿಕ್ರಿಯೆ ಸಿಕ್ಕಿತು. ಪರಭಾಷೆ ಪ್ರೇಕ್ಷಕರು ಕೂಡ ಆಸಕ್ತಿ ತೋರಿಸಿದ್ದರಿಂದ ತಮಿಳು, ತೆಲುಗು, ಮಲಯಾಳಂ ಹಾಗೂ ಹಿಂದಿ ಭಾಷೆಗೆ ಡಬ್​ ಮಾಡಿ ರಿಲೀಸ್​ ಮಾಡಲಾಯಿತು. ಎಲ್ಲ ಭಾಷೆಗಳಿಂದಲೂ ಉತ್ತಮ ಕಲೆಕ್ಷನ್​ ಆಯಿತು. ಒಟಿಟಿ ಪ್ರೇಕ್ಷಕರಿಗಾಗಿ ಇಂಗ್ಲಿಷ್​ ವರ್ಷನ್​ ಕೂಡ ರಿಲೀಸ್​ ಆಯಿತು. ಈಗ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಇಟಾಲಿಯನ್​ ಮತ್ತು ಸ್ಪ್ಯಾನಿಶ್​​ ಭಾಷೆಗಳಿಗೆ ಡಬ್​ ಮಾಡಲಾಗುತ್ತಿರುವುದು ವಿಶೇಷ.

ಇದನ್ನೂ ಓದಿ
Image
Rishab Shetty: ಪಂಚೆ ಧರಿಸಿದ ರಿಷಬ್​ ಶೆಟ್ಟಿ ಗತ್ತು ಹೇಗಿದೆ ನೋಡಿ; ಇಲ್ಲಿದೆ ‘ಕಾಂತಾರ’ ಹೀರೋ ಫೋಟೋ ಗ್ಯಾಲರಿ
Image
Kantara: ಕರ್ನಾಟಕದಲ್ಲಿ ‘ಕಾಂತಾರ’ ಚಿತ್ರದ 1 ಕೋಟಿ ಟಿಕೆಟ್ಸ್​ ಮಾರಾಟ; ದಾಖಲೆಗೆ ಹಿಗ್ಗಿದ ‘ಹೊಂಬಾಳೆ ಫಿಲ್ಮ್ಸ್​’
Image
Kantara: ಬೆಂಗಳೂರಿಗೆ ಕಾಲಿಡುತ್ತಲೇ ‘ಕಾಂತಾರ’ ಬಗ್ಗೆ ಮಾತಾಡಿದ ಎಬಿ ಡಿವಿಲಿಯರ್ಸ್; ರಿಷಬ್​ ಶೆಟ್ಟಿ ಹೇಳಿದ್ದೇನು?
Image
Kantara: ‘ಕಾಂತಾರ’ ಸೂಪರ್​ ಹಿಟ್​ ಆದ್ಮೇಲೆ ರಿಷಬ್​ ಶೆಟ್ಟಿ ಏನು ಮಾಡ್ತಿದ್ದಾರೆ? ಪ್ರೈವೇಟ್​ ಜೆಟ್​ ಏರಿದ ಶಿವ

ಇದನ್ನೂ ಓದಿ: Kantara: ಸ್ವಿಟ್ಜರ್​ಲೆಂಡ್​ನ ಜಿನೆವಾನಲ್ಲಿ ಕಾಂತಾರ ಸಿನಿಮಾ ವಿಶೇಷ ಪ್ರದರ್ಶನ

‘ಈ ವಿಷಯ ತಿಳಿಸಲು ನಮಗೆ ಖುಷಿ ಎನಿಸುತ್ತಿದೆ. ಅಂತಾರಾಷ್ಟ್ರೀಯ ಪ್ರೇಕ್ಷಕರಿಂದ ಬೇಡಿಕೆ ಬಂದಿರುವುದಕ್ಕೆ ಧನ್ಯವಾದಗಳು. ಇಟಾಲಿಯನ್​ ಮತ್ತು ಸ್ಪ್ಯಾನಿಶ್​​ ಭಾಷೆಯಲ್ಲಿ ಕಾಂತಾರ ಚಿತ್ರವನ್ನು ಎಡಿಟ್​ ಮಾಡಲಾಗುತ್ತಿದೆ’ ಎಂದು ಇಟಾಲಿಯನ್​ ಭಾಷೆಯಲ್ಲಿ ‘ಹೊಂಬಾಳೆ ಫಿಲ್ಮ್ಸ್​’ ಟ್ವೀಟ್​ ಮಾಡಿದೆ. ಜಪಾನಿ ಭಾಷೆಯಲ್ಲೂ ರಿಲೀಸ್​ ಮಾಡಿ ಎಂದು ನೆಟ್ಟಿಗರು ಕಮೆಂಟ್​ ಮಾಡಿದ್ದಾರೆ.

‘ಕಾಂತಾರ’ ಸಿನಿಮಾದ ಬಳಿಕ ರಿಷಬ್​ ಶೆಟ್ಟಿ ​ಅವರ ಖ್ಯಾತಿ ವಿಶ್ವಮಟ್ಟದಲ್ಲಿ ಹಬ್ಬಿದೆ. ಇತ್ತೀಚೆಗಷ್ಟೇ ಅವರು ವಿಶ್ವಸಂಸ್ಥೆಯಲ್ಲಿ ಭಾಷಣ ಮಾಡುವ ಮೂಲಕ ಗಮನ ಸೆಳೆದರು. ಜೆನಿವಾದಲ್ಲೂ ಈ ಚಿತ್ರದ ವಿಶೇಷ ಪ್ರದರ್ಶನ ಮತ್ತು ಸಂವಾದ ಏರ್ಪಡಿಸಲಾಗಿತ್ತು. ಈ ಚಿತ್ರದಲ್ಲಿ ನಟಿಸಿದ ಸಪ್ತಮಿ ಗೌಡ ಅವರಿಗೂ ಚಿತ್ರರಂಗದಲ್ಲಿ ಭರ್ಜರಿ ಡಿಮ್ಯಾಂಡ್​ ಸೃಷ್ಟಿ ಆಗಿದೆ.

ಇದನ್ನೂ ಓದಿ: Laughing Buddha: ಕಾಂತಾರ 2 ನಿರ್ದೇಶಕ್ಕೆ ಮುನ್ನ ಹೊಸ ಸಿನಿಮಾ ನಿರ್ಮಾಣಕ್ಕೆ ಕೈ ಹಾಕಿದ ರಿಷಬ್ ಶೆಟ್ಟಿ

ರಿಷಬ್​ ಶೆಟ್ಟಿ ಅವರು ‘ಕಾಂತಾರ 2’ ಸಿನಿಮಾ ಅನೌನ್ಸ್​ ಮಾಡಿದ್ದಾರೆ. ಅದಕ್ಕಾಗಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಮಳೆಗಾಲದಲ್ಲಿ ಈ ಚಿತ್ರದ ಶೂಟಿಂಗ್​ ಆರಂಭ ಆಗುವ ಸಾಧ್ಯತೆ ಇದೆ. ಅಭಿಮಾನಿಗಳು ಈ ಸಿನಿಮಾ ಬಗ್ಗೆ ಬೆಟ್ಟದಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 10:08 am, Sun, 19 March 23

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್