ಮುಂಬೈನಲ್ಲಿ ನಡೆಯಲಿದೆ ‘ಕಾಂತಾರ’ ಅದ್ಧೂರಿ ಪ್ರೀ ರಿಲೀಸ್ ಇವೆಂಟ್: ಯಾವಾಗ?
Kantara Chapter 1 movie: ರಿಷಬ್ ಶೆಟ್ಟಿ, ರುಕ್ಮಿಣಿ ವಸಂತ್ ನಟಿಸಿರುವ ‘ಕಾಂತಾರ: ಚಾಪ್ಟರ್ 1’ ಸಿನಿಮಾ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದ್ದು, ಸಿನಿಮಾದ ಪ್ರಚಾರ ಚಾಲ್ತಿಯಲ್ಲಿದೆ. ಉತ್ತರ ಭಾರತದ ಪ್ರೇಕ್ಷಕರ ಸೆಳೆಯಲು ಮುಂಬೈನಲ್ಲಿ ‘ಕಾಂತಾರ: ಚಾಪ್ಟರ್ 1’ ಸಿನಿಮಾದ ಅದ್ಧೂರಿ ಪ್ರೀ ರಿಲೀಸ್ ಅನ್ನು ಆಯೋಜಿಸಲು ಹೊಂಬಾಳೆ ಸಜ್ಜಾಗಿದೆ.

ಹೊಂಬಾಳೆ ಫಿಲಮ್ಸ್ ನಿರ್ಮಿಸಿ, ರಿಷಬ್ ಶೆಟ್ಟಿ (Rishab Shetty) ನಟಿಸಿ, ನಿರ್ದೇಶನ ಮಾಡಿರುವ ‘ಕಾಂತಾರ: ಚಾಪ್ಟರ್ 1’ ಸಿನಿಮಾ ಅಕ್ಟೋಬರ್ 2 ಕ್ಕೆ ಬಿಡುಗಡೆ ಆಗಲಿದೆ. ರಿಷಬ್ ಶೆಟ್ಟಿ, ಸಿನಿಮಾದ ಪ್ರಚಾರದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಸಿನಿಮಾದ ಅಡ್ವಾನ್ಸ್ ಬುಕಿಂಗ್ ಇಂದಿನಿಂದ (ಸೆಪ್ಟೆಂಬರ್ 26) ಆರಂಭವಾಗಿದೆ. ರಿಷಬ್ ಶೆಟ್ಟಿ ದೇಶದ ಪ್ರಮುಖ ನಗರಗಳಿಗೆ ಹೋಗಿ ಪ್ರಚಾರ ಮಾಡುತ್ತಿದ್ದಾರೆ. ಇದರ ಜೊತೆಗೆ ದೊಡ್ಡ ಪ್ರೀ ರಿಲೀಸ್ ಇವೆಂಟ್ ಮಾಡಲು ಹೊಂಬಾಳೆ ಸಜ್ಜಾಗಿದೆ.
‘ಕಾಂತಾರ: ಚಾಪ್ಟರ್ 1’ ಸಿನಿಮಾದ ಪ್ರೀ ರಿಲೀಸ್ ಕಾರ್ಯಕ್ರಮವನ್ನು ಮುಂಬೈನಲ್ಲಿ ಬಲು ಅದ್ಧೂರಿಯಾಗಿ ನಡೆಸಲು ಹೊಂಬಾಳೆ ಸಜ್ಜಾಗಿದೆ ಎನ್ನಲಾಗಿದೆ. ಸಿನಿಮಾ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದ ರಿಷಬ್ ಶೆಟ್ಟಿ ಕಳೆದ ಎರಡು ವರ್ಷಗಳಿಂದಲೂ ಉತ್ತರ ಭಾರತದ ಮೀಡಿಯಾ ಕಾಲಂಗಳಲ್ಲಿ ಕಾಣಿಸಿಕೊಂಡಿರಲಿಲ್ಲ. ಹಾಗಾಗಿ ಮುಂಬೈನಲ್ಲಿ ಭಾರಿ ದೊಡ್ಡ ಇವೆಂಟ್ ಮಾಡುವ ಮೂಲಕ ‘ಕಾಂತಾರ: ಚಾಪ್ಟರ್ 1’ ಸಿನಿಮಾದ ಪ್ರಚಾರ ಮಾಡುವುದು ಚಿತ್ರತಂಡದ ಉದ್ದೇಶ. ಈ ಪ್ರೀ ರಿಲೀಸ್ಗೆ ಬಾಲಿವುಡ್ನ ಸ್ಟಾರ್ ನಟರನ್ನು ಸೇರಿದಂತೆ ನಟ ಯಶ್ ಅವರನ್ನೂ ಅತಿಥಿಯಾಗಿ ಆಹ್ವಾನಿಸುವ ಸಾಧ್ಯತೆ ಇದೆ.
ಇದನ್ನೂ ಓದಿ: ‘ಕಾಂತಾರ: ಚಾಪ್ಟರ್ 1’ ಸಿನಿಮಾದ ಶೂಟಿಂಗ್ ನಡೆದ ರಿಯಲ್ ಲೊಕೇಶನ್ಗಳಿವು
ಇನ್ನು ‘ಕಾಂತಾರ: ಚಾಪ್ಟರ್ 1’ ಸಿನಿಮಾದ ಅಡ್ವಾನ್ಸ್ ಬುಕಿಂಗ್ ಈಗಾಗಲೇ ಆರಂಭ ಆಗಿದೆ. ‘ಕಾಂತಾರ: ಚಾಪ್ಟರ್ 1’ ಒಟ್ಟು ಅವಧಿ 168.53 ನಿಮಿಷಗಳಾಗಿವೆ. ಅಂದರೆ 2 ಗಂಟೆ 49 ನಿಮಿಷಗಳು. ಕೆಲ ಮೂಲಗಳ ಪ್ರಕಾರ, ಈ ಸಿನಿಮಾದ ಜೊತೆಗೆ ಪ್ರಭಾಸ್ ನಟನೆಯ ‘ದಿ ರಾಜಾ ಸಾಬ್’ ಸಿನಿಮಾದ ಟ್ರೈಲರ್ ಅನ್ನು ಸಹ ಅಟ್ಯಾಚ್ ಮಾಡಿ ಪ್ರದರ್ಶನ ಮಾಡಲಾಗುತ್ತಿದೆ.
View this post on Instagram
‘ಕಾಂತಾರ: ಚಾಪ್ಟರ್ 1’ ಸಿನಿಮಾ ಅಕ್ಟೋಬರ್ 2 ರಂದು ದೇಶದಾದ್ಯಂತ ಬಿಡುಗಡೆ ಆಗಲಿದೆ. ದೇಶದಲ್ಲಿ ಮಾತ್ರವಲ್ಲದೆ ದುಬೈ, ಅಮೆರಿಕ, ನ್ಯೂಜಿಲೆಂಡ್, ಆಸ್ಟ್ರೇಲಿಯಾಗಳಲ್ಲಿಯೂ ಸಹ ‘ಕಾಂತಾರ: ಚಾಪ್ಟರ್ 1’ ಸಿನಿಮಾ ಬಿಡುಗಡೆ ಆಗಲಿದೆ. 2022 ರಲ್ಲಿ ಬಿಡುಗಡೆ ಆಗಿದ್ದ ‘ಕಾಂತಾರ: ಚಾಪ್ಟರ್ 1’ ಸಿನಿಮಾ ಪ್ರೀಕ್ವೆಲ್ ಇದಾಗಿರಲಿದೆ.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ




