10 ಕೋಟಿ ಅಭಿಮಾನಿಗಳ ತಲುಪಿದ ಸಲಾರ್ ಟೀಸರ್, ಟ್ರೈಲರ್ ಬಗ್ಗೆ ಮಾಹಿತಿ ಹಂಚಿಕೊಂಡ ಹೊಂಬಾಳೆ

Salaar: ಸಲಾರ್ ಸಿನಿಮಾದ ಟೀಸರ್ ಗೆ ಸಿಕ್ಕಿರುವ ಅಭೂತಪೂರ್ವ ಪ್ರತಿಕ್ರಿಯೆಗೆ ಧನ್ಯವಾದಗಳನ್ನು ಅರ್ಪಿಸಿರುವ ಹೊಂಬಾಳೆ, ಸಲಾರ್ ಟ್ರೈಲರ್ ಬಿಡುಗಡೆ ಬಗ್ಗೆ ಘೋಷಣೆ ಮಾಡಿದೆ.

10 ಕೋಟಿ ಅಭಿಮಾನಿಗಳ ತಲುಪಿದ ಸಲಾರ್ ಟೀಸರ್, ಟ್ರೈಲರ್ ಬಗ್ಗೆ ಮಾಹಿತಿ ಹಂಚಿಕೊಂಡ ಹೊಂಬಾಳೆ
ಹೊಂಬಾಳೆ-ಸಲಾರ್
Follow us
ಮಂಜುನಾಥ ಸಿ.
|

Updated on: Jul 08, 2023 | 2:10 PM

ಎರಡು ದಿನ ಹಿಂದೆಯಷ್ಟೆ (ಜುಲೈ 6) ಪ್ರಭಾಸ್ (Prabhas) ನಟನೆಯ ಸಲಾರ್ (Salaar) ಸಿನಿಮಾದ ಟೀಸರ್ ಬಿಡುಗಡೆ ಆಗಿ ಸಖತ್ ಸದ್ದು ಮಾಡಿದೆ. ಮುಂಜಾನೆ 5 ಗಂಟೆ ಸುಮಾರಿಗೆ ಬಿಡುಗಡೆ ಆಗಿದ್ದರೂ ಸಹ ಹಲವು ದಾಖಲೆಗಳನ್ನು ಮುರಿದು ಯೂಟ್ಯೂಬ್​ನಲ್ಲಿ ದಾಖಲೆಗಳನ್ನು ಸೃಷ್ಟಿಸುತ್ತಿದೆ ಸಲಾರ್ ಟೀಸರ್. ತಮ್ಮ ನಿರ್ಮಾಣದ ಸಲಾರ್ ಟೀಸರ್​ಗೆ ಜನರಿಂದ ಸಿಗುತ್ತಿರುವ ಅಭೂತಪೂರ್ವ ಪ್ರತಿಕ್ರಿಯೆಯ ಬಗ್ಗೆ ಹೊಂಬಾಳೆ ಫಿಲಮ್ಸ್ (Hombale Films) ನಿರ್ಮಾಣ ಸಂಸ್ಥೆ ಸಂತಸ ಹಂಚಿಕೊಂಡಿದ್ದು ಜೊತೆಗೆ ಸಲಾರ್ ಟ್ರೈಲರ್ ಬಗ್ಗೆಯೂ ಮಾಹಿತಿ ನೀಡಿದೆ.

”ಹೊಂಬಾಳೆ ಫಿಲಮ್ಸ್ ಕಡೆಯಿಂದ ಹೃದಯ ತುಂಬಿದ ಧನ್ಯವಾದಗಳು. ತಮ್ಮೆಲ್ಲರ ಪ್ರೀತಿಯ ಅಭಿಮಾನದ ಪ್ರೋತ್ಸಾಹಕ್ಕೆ ನಾವು ಆಭಾರಿ. ಭಾರತೀಯ ಸಿನಿಮಾ ಸಾಮರ್ಥ್ಯದ ಸಂಕೇತವಾಗಿ ಹೊರಹೊಮ್ಮಿರುವ ‘ಸಲಾ‌ರ್’ ಕ್ರಾಂತಿಗೆ ಮುನ್ನುಡಿಯಾಗಿ ಚಿತ್ರಪ್ರೇಮಿಗಳಿಂದ ದೊರಕಿದ ಪ್ರೀತಿಪೂರ್ವಕ ಬೆಂಬಲದಿಂದ ನಮ್ಮ ಮನತುಂಬಿದೆ. ಭಾರತೀಯ ಚಿತ್ರ ‘ಸಲಾ‌ರ್’ ಸಿನಿಮಾ ಟೀಸರ್ 10 ಕೋಟಿ ಚಿತ್ರರಸಿಕರನ್ನು ತಲುಪಿ ಭಾರತೀಯ ಸಿನಿಮಾರಂಗದಲ್ಲಿ ಹೊಸ ದಾಖಲೆ ಬರೆದಿದೆ. ನಿಮ್ಮ ಅಭಿಮಾನದ ಬೆಂಬಲಕ್ಕೆ ನಾವು ಸದಾ ಋಣಿಗಳು. ನಿಮ್ಮ ಅಚಲ ಬೆಂಬಲವು ನಮ್ಮ ಆಸಕ್ತಿಗೆ ಚೈತನ್ಯ ತುಂಬಿ ಅಸಾಧಾರಣವಾದುದನ್ನು ಪ್ರೇಕ್ಷಕರ ಮುಂದಿಡಲು ಪ್ರೇರೇಪಿಸುತ್ತಿದೆ” ಎಂದಿದೆ ಹೊಂಬಾಳೆ.

ಇದನ್ನೂ ಓದಿ:Salaar Teaser: ‘ಕೆಜಿಎಫ್ 2’ ದಾಖಲೆಯನ್ನೂ ಉಡೀಸ್ ಮಾಡಿದ ‘ಸಲಾರ್​’; ಟೀಕೆ ಮಧ್ಯೆಯೂ ಕಮಾಲ್

ಮುಂದುವರೆದು, ”ಭಾರತೀಯ ಸಿನಿಮಾದ ಭವ್ಯತೆಯನ್ನು ಸಾರಲಿರುವ ಅತ್ಯಂತ ನಿರೀಕ್ಷಿತ ಚಿತ್ರದ ಟ್ರೈಲರ್ ಅನ್ನು ಬಿಡುಗಡೆಗೊಳಿಸಲು ನಾವು ಸಿದ್ಧರಾಗುತ್ತಿದ್ದೇವೆ, ಆಗಸ್ಟ್‌ ಕೊನೆಯಲ್ಲಿ ಬಿಡುವು ಮಾಡಿಕೊಳ್ಳಲು ಮರೆಯದಿರಿ. ಅವಿಸ್ಮರಣೀಯ ಅನುಭವ ನೀಡಿ ಪುಪಂಚದಾದ್ಯಂತ ಸದ್ದು ಮಾಡಲಿರುವ ಟ್ರೈಲರ್ ಗಾಗಿ ನಿರೀಕ್ಷಿಸಿ..! ಕ್ಷಣ ಕ್ಷಣದ ಅಪ್​ಡೇಟ್​ಗಾಗಿ ಸದಾ ನಮ್ಮೊಂದಿಗೆ ಜೊತೆಯಾಗಿ ಸಂಪರ್ಕದಲ್ಲಿರಿ. ಮರೆಯಲಾಗದ ಅನುಭವ ನಿಮ್ಮದಾಗಿಸಿಕೊಳ್ಳಲು ತಯಾರಾಗಿ. ಕುತೂಹಲಭರಿತ ರೋಮಾಂಚನಕಾರಿ ಪಯಣವನ್ನು ನಾವು ಮುಂದುವರಿಸೋಣ, ಚರಿತ್ರ ನಿರ್ಮಿಸೋಣ ಹಾಗೂ ಭಾರತೀಯ ಸಿನಿಮಾದ ಸಾಮರ್ಥ್ಯವನ್ನು ಸಂಭ್ರಮಿಸೋಣ” ಎಂದು ಹೊಂಬಾಳೆ ಫಿಲಮ್ಸ್​ ಹೇಳಿಕೆಯನ್ನು ಬಿಡುಗಡೆ ಮಾಡಿದೆ.

ಸಲಾರ್ ಸಿನಿಮಾದ ಟ್ರೈಲರ್ ಆಗಸ್ಟ್​ ತಿಂಗಳಲ್ಲಿ ಬಿಡುಗಡೆ ಆಗಲಿರುವುದನ್ನು ಹೊಂಬಾಳೆ ಖಾತ್ರಿಪಡಿಸಿದೆ. ಟ್ರೈಲರ್ ಬಿಡುಗಡೆ ಆದ ಕೆಲವು ದಿನಗಳಲ್ಲಿ ಅಂದರೆ ಸೆಪ್ಟೆಂಬರ್ 28 ಕ್ಕೆ ಸಲಾರ್ ಸಿನಿಮಾ ವಿಶ್ವದಾದ್ಯಂತ ಅದ್ಧೂರಿಯಾಗಿ ಬಿಡುಗಡೆ ಆಗಲಿದೆ. ಸಲಾರ್​ನ ಮೊದಲ ಭಾಗವಷ್ಟೆ ಸೆಪ್ಟೆಂಬರ್ 28ಕ್ಕೆ ಬಿಡುಗಡೆ ಆಗಲಿದ್ದು, ಸಲಾರ್​ನ ಎರಡನೇ ಭಾಗದ ಬಿಡುಗಡೆ ಯಾವಾಗ ಎಂಬ ಬಗ್ಗೆ ಚಿತ್ರತಂಡ ಮಾಹಿತಿ ನೀಡಿಲ್ಲ.

ಸಲಾರ್ ಸಿನಿಮಾವನ್ನು ಕನ್ನಡದ ಪ್ರಶಾಂತ್ ನೀಲ್ ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾದಲ್ಲಿ ಪ್ರಭಾಸ್ ಜೊತೆಗೆ ಹಲವು ಸ್ಟಾರ್ ನಟರು ನಟಿಸಿದ್ದಾರೆ. ಮಲಯಾಳಂನ ಸ್ಟಾರ್ ನಟ ಪೃಥ್ವಿರಾಜ್ ಸುಕುಮಾರನ್, ನಾಯಕಿಯಾಗಿ ಶ್ರುತಿ ಹಾಸನ್, ಕನ್ನಡದ ನಟರಾದ ಮಧು ಗುರುಸ್ವಾಮಿ, ಪ್ರಮೋದ್ ಸೇರಿದಂತೆ ತೆಲುಗು ತಮಿಳು ನಟರಾದ ಜಗಪತಿ ಬಾಬು, ವಿಜಯ್ ಸೇತುಪತಿ ಸಹ ಇದ್ದಾರೆ ಎನ್ನಲಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು