ಆ್ಯಂಕರ್ ಅನುಶ್ರೀ ಡ್ರಗ್ಸ್ ಕೇಸ್ ವಿಚಾರ; ಪ್ರಕರಣದಲ್ಲಿ ಯಾರನ್ನೂ ಬಿಡುವ ಪ್ರಶ್ನೆಯೇ ಇಲ್ಲ ಎಂದ ಗೃಹ ಸಚಿವ

ಆಂಕರ್ ಅನುಶ್ರೀ ಅವರ ವಿರುದ್ಧ ಡ್ರಗ್ಸ್ ಪ್ರಕರಣದ ಎ2 ಕಿಶೋರ್ ಶೆಟ್ಟಿ ಹೇಳಿಕೆಯನ್ನು ಸಿಸಿಬಿ ಪೊಲೀಸರು ಚಾರ್ಜ್​ಶೀಟ್​ನಲ್ಲಿ ಉಲ್ಲೇಖಿಸಿದ್ದಾರೆ. ಇದಕ್ಕೆ ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ.

ಆ್ಯಂಕರ್ ಅನುಶ್ರೀ ಡ್ರಗ್ಸ್ ಕೇಸ್ ವಿಚಾರ; ಪ್ರಕರಣದಲ್ಲಿ ಯಾರನ್ನೂ ಬಿಡುವ ಪ್ರಶ್ನೆಯೇ ಇಲ್ಲ ಎಂದ ಗೃಹ ಸಚಿವ
ಗೃಹ ಸಚಿವ ಆರಗ ಜ್ಞಾನೇಂದ್ರ
Follow us
TV9 Web
| Updated By: shivaprasad.hs

Updated on:Sep 08, 2021 | 11:05 AM

ನಟಿ, ಸ್ಟಾರ್ ಆ್ಯಂಕರ್​ ಅನುಶ್ರೀ ಡ್ರಗ್ಸ್​ ಕೇಸ್​ ವಿಚಾರಕ್ಕೆ ಸಂಬಂಧಪಟ್ಟಂತೆ ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ಪ್ರಕರಣದಲ್ಲಿ ಯಾರನ್ನೂ ಬಿಡುವ ಪ್ರಶ್ನೆಯೇ ಇಲ್ಲ. ಯಾರ ಮೇಲೂ ಸಾಫ್ಟ್ ಕಾರ್ನರ್ ತೋರಿಸುವುದಿಲ್ಲ ಎಂದು ಅವರು ಬೆಳಗಾವಿಯಲ್ಲಿ ಹೇಳಿಕೆ ನೀಡಿದ್ದಾರೆ. ಎಫ್‌ಎಸ್‌ಎಲ್ ವರದಿ ಬಂದಿರುವುದು ಗೊತ್ತಿದೆ. ಕಾನೂನು ಪ್ರಕಾರವೇ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಚಾರ್ಜ್‌ಶೀಟ್‌ನಲ್ಲಿ ಅನುಶ್ರೀ ಅವರ ಹೆಸರನ್ನು ಕೈಬಿಟ್ಟ ವಿಚಾರಕ್ಕೆ ಸಂಬಂಧಪಟ್ಟಂತೆ ಪ್ರತಿಕ್ರಿಯಿಸಿರುವ ಗೃಹಸಚಿವರು, ಈ ಬಗ್ಗೆ ಮಾಹಿತಿ ಪಡೆದು ನಂತರ ಪ್ರತಿಕ್ರಿಯಿಸುತ್ತೇನೆ ಎಂದಿದ್ದಾರೆ. ‘‘ಈ ಪ್ರಕರಣದಲ್ಲಿ ಯಾವ ರಾಜಕೀಯ ಒತ್ತಡವೂ ಇಲ್ಲ. ಡ್ರಗ್ಸ್ ಕೇಸ್ ಪ್ರಕರಣಗಳಲ್ಲಿ ಯಾರೂ ಒತ್ತಡ ಹಾಕಲ್ಲ. ಡ್ರಗ್ಸ್ ಕೇಸ್‌ನಲ್ಲಿ ಯಾರನ್ನೂ ಬಿಡುವ ಪ್ರಶ್ನೆಯೇ ಇಲ್ಲ. ಅಪರಾಧಿಗಳು ಯಾರೇ ಆಗಿದ್ದರೂ, ಎಷ್ಟೇ ಪ್ರಭಾವಿಗಳಾಗಿದ್ದರೂ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ. ಪೊಲೀಸರ ಮೇಲೆ ಒತ್ತಡ ಇರುವುದು ಊಹಾಪೋಹ. ಯಾರ ಒತ್ತಡಕ್ಕೂ ನಮ್ಮ ಪೊಲೀಸರು ಬಗ್ಗುವುದಿಲ್ಲ’’ ಎಂದು ಜ್ಞಾನೇಂದ್ರ ಸ್ಪಷ್ಟಪಡಿಸಿದ್ದಾರೆ.

ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರತಿಕ್ರಿಯೆ ಇಲ್ಲಿದೆ:

ಆ್ಯಂಕರ್ ಅನುಶ್ರೀ ಕುರಿತು ಚಾರ್ಜ್ ಶೀಟಿನಲ್ಲಿ ಆರೋಪಿಯ ಹೇಳಿಕೆ ದಾಖಲು:​

ಡ್ರಗ್ಸ್ ಕೇಸ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಚಾರ್ಜ್​ಶೀಟ್​ನಲ್ಲಿ ಎ2 ಕಿಶೋರ್ ಶೆಟ್ಟಿಯ ಹೇಳಿಕೆಯನ್ನು ಉಲ್ಲೇಖಿಸಲಾಗಿದೆ. ‘ರಿಯಾಲಿಟಿ ಶೋನ ಕೊರಿಯೋಗ್ರಾಫರ್​ ಆಗಿದ್ದ ತರುಣ್​ ಮುಖಾಂತರ ತನಗೆ ಅನುಶ್ರೀ ಪರಿಚಯವಾಗಿತ್ತು. ತರುಣ್​ ರೂಮ್​ನಲ್ಲಿ ತಡರಾತ್ರಿವರೆಗೂ ಅನುಶ್ರೀಗೆ ಡ್ಯಾನ್ಸ್ ಪ್ರಾಕ್ಟೀಸ್ ಮಾಡಿಸುತ್ತಿದ್ದೆವು. ಡ್ಯಾನ್ಸ್ ಪ್ರಾಕ್ಟೀಸ್​ಗೆ ಬರುವಾಗ ಅನುಶ್ರೀ ಎಕ್ಸ್‌ಟಸಿ ಡ್ರಗ್ಸ್​ ಖರೀದಿಸಿ  ತರುತ್ತಿದ್ದರು. ನಮಗೆ ಎಕ್ಸ್‌ಟಸಿ ಡ್ರಗ್ಸ್ ನೀಡಿ ಅನುಶ್ರೀ ಕೂಡ ಸೇವಿಸುತ್ತಿದ್ದರು. ಅನುಶ್ರೀಗೆ ಡ್ರಗ್ಸ್ ಪೆಡ್ಲರ್​ಗಳ ಪರಿಚಯವಿದೆ. ಡ್ರಗ್ಸ್ ಎಲ್ಲಿ ಸಿಗುತ್ತೆ, ಯಾರು ಪೂರೈಸುತ್ತಾರೆಂದು ಆಕೆಗೆ ಗೊತ್ತಿತ್ತು. ಡ್ರಗ್ಸ್​ ಅಷ್ಟು ಸುಲಭವಾಗಿ ಅನುಶ್ರೀಗೆ ಹೇಗೆ ಸಿಗುತ್ತಿತ್ತೋ ಗೊತ್ತಿಲ್ಲ.’ ಎಂದು ಚಾರ್ಜ್​ಶೀಟ್​​ನಲ್ಲಿ ಎ2 ಕಿಶೋರ್​ ಶೆಟ್ಟಿ ಹೇಳಿಕೆಯನ್ನು ದಾಖಲಿಸಲಾಗಿದೆ.

ಇದನ್ನೂ ಓದಿ:

Drug Case: ಸಿಸಿಬಿ ಚಾರ್ಜ್​ಶೀಟ್​ನಲ್ಲಿ ಆಂಕರ್ ಅನುಶ್ರೀ ಹೆಸರು ಉಲ್ಲೇಖ; ಅವರು ಡ್ರಗ್ಸ್ ಸೇವಿಸುತ್ತಿದ್ದರು ಎಂದು ಆರೋಪಿ ಹೇಳಿಕೆ

ಹೆಬ್ಬಾಳ: ಬುಲೆಟ್ ಪ್ರಕಾಶ್ ಮಗ ರಕ್ಷಕ್ ಮೇಲೆ ಮಂಗಳಮುಖಿಯರಿಂದ ದಾಳಿ; ಪ್ರಕರಣ ದಾಖಲು

(Home minister Araga Jnanendra reaction on Anchor Anushree drug case)

Published On - 10:51 am, Wed, 8 September 21

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ