ಸ್ಯಾಂಡಲ್​ವುಡ್​ಗೆ ಹೊಸ ಚೈತನ್ಯ ಕೊಟ್ಟ ಸಿನಿಮಾಗಳು; ಮತ್ತೆ ಚಿತ್ರಮಂದಿರಕ್ಕೆ ಬಂದ ಪ್ರೇಕ್ಷಕರು

ವೀಕೆಂಡ್​​ನಲ್ಲಿ ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’, ‘ಆಚಾರ್ ಆ್ಯಂಡ್ ಕೋ..’ ಹಾಗೂ ‘ಕೌಸಲ್ಯ ಸುಪ್ರಜಾ ರಾಮ’ ಚಿತ್ರದ ಕೆಲ ಶೋಗಳು ಹೌಸ್​ಫುಲ್ ಪ್ರದರ್ಶನ ಕಂಡಿವೆ. ಇದು ಕನ್ನಡ ಚಿತ್ರರಂಗದ ಪಾಲಿಗೆ ಮಹತ್ವದ ಬೆಳವಣಿಗೆ.

ಸ್ಯಾಂಡಲ್​ವುಡ್​ಗೆ ಹೊಸ ಚೈತನ್ಯ ಕೊಟ್ಟ ಸಿನಿಮಾಗಳು; ಮತ್ತೆ ಚಿತ್ರಮಂದಿರಕ್ಕೆ ಬಂದ ಪ್ರೇಕ್ಷಕರು
ಕನ್ನಡದಲ್ಲಿ ರಿಲೀಸ್ ಆಗಇ ಮೆಚ್ಚುಗೆ ಪಡೆದ ಸಿನಿಮಾಗಳು
Follow us
ರಾಜೇಶ್ ದುಗ್ಗುಮನೆ
|

Updated on: Jul 31, 2023 | 12:25 PM

2023ರಲ್ಲಿ ಈಗಾಗಲೇ ಏಳು ತಿಂಗಳು ಕಳೆದಿವೆ. ಈ ವರ್ಷದ ಆರಂಭದಿಂದ ಇಲ್ಲಿಯವರೆಗೆ ಸ್ಯಾಂಡಲ್​ವುಡ್​ನಲ್ಲಿ ಗೆದ್ದ ಸಿನಿಮಾಗಳ ಸಂಖ್ಯೆ ತುಂಬಾನೇ ಕಡಿಮೆ. ಈಗ ಕನ್ನಡದಲ್ಲಿ ಬ್ಯಾಕ್​ ಟು ಬ್ಯಾಕ್ ಸಿನಿಮಾಗಳು ರಿಲೀಸ್ ಆಗಿದ್ದು ಜನ ಮೆಚ್ಚುಗೆ ಪಡೆಯುತ್ತಿವೆ. ವೀಕೆಂಡ್​​ನಲ್ಲಿ ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ (Hostel Hudugaru Bekagiddare Movie), ‘ಆಚಾರ್ ಆ್ಯಂಡ್ ಕೋ..’ ಹಾಗೂ ‘ಕೌಸಲ್ಯ ಸುಪ್ರಜಾ ರಾಮ’ ಚಿತ್ರದ ಕೆಲ ಶೋಗಳು ಹೌಸ್​ಫುಲ್ ಪ್ರದರ್ಶನ ಕಂಡಿವೆ. ಇದು ಕನ್ನಡ ಚಿತ್ರರಂಗದ ಪಾಲಿಗೆ ಮಹತ್ವದ ಬೆಳವಣಿಗೆ ಎನ್ನಬಹುದು.

ಕೌಸಲ್ಯ ಸುಪ್ರಜಾ ರಾಮ

ಡಾರ್ಲಿಂಗ್ ಕೃಷ್ಣ ಅಭಿಮಾನಿ ಬಳಗ ದೊಡ್ಡದಿದೆ. ಅವರ ನಟನೆಯ ‘ಕೌಸಲ್ಯ ಸುಪ್ರಜಾ ರಾಮ’ ಚಿತ್ರ ಮೆಚ್ಚುಗೆ ಪಡೆದಿದೆ. ಬೃಂದಾ ಆಚಾರ್ಯ ಹಾಗೂ ಮಿಲನಾ ನಾಗರಾಜ್ ಕೂಡ ಸಿನಿಮಾದಲ್ಲಿ ನಟಿಸಿದ್ದಾರೆ. ಮಿಲನಾ ನಾಗರಾಜ್ ಹಾಗೂ ಡಾರ್ಲಿಂಗ್ ಕೃಷ್ಣ ಅವರ ಕಾಂಬಿನೇಷನ್​ಗೆ ದೊಡ್ಡ ಅಭಿಮಾನಿ ಬಳಗ ಇದೆ. ಸಿನಿಮಾ ಮೆಚ್ಚುಗೆ ಪಡೆಯಲು ಇದೂ ಒಂದು ಕಾರಣ. ಎಲ್ಲಕ್ಕಿಂತ ಮುಖ್ಯವಾಗಿ ಸಮಾಜಕ್ಕೆ ಈ ಚಿತ್ರದ ಮೂಲಕ ಒಂದು ಸಂದೇಶ ಸಾರಲಾಗಿದೆ.

ಆಚಾರ್ ಆ್ಯಂಡ್ ಕೋ

ಅಶ್ವಿನಿ ಪುನೀತ್ ರಾಜ್​ಕುಮಾರ್ ಮುನ್ನಡೆಸಿಕೊಂಡು ಹೋಗುತ್ತಿರುವ ‘ಪಿಆರ್​ಕೆ ಪ್ರೊಡಕ್ಷನ್ಸ್’ ಮೂಲಕ ‘ಆಚಾರ್​ ಆ್ಯಂಡ್ ಕೋ’ ಸಿನಿಮಾ ರಿಲೀಸ್ ಆಗಿದೆ. ಸಿಂಧು ಶ್ರೀನಿವಾಸಮೂರ್ತಿ ಅವರು ಈ ಚಿತ್ರದಲ್ಲಿ ನಟಿಸುವುದರ ಜೊತೆ ನಿರ್ದೇಶನ ಕೂಡ ಮಾಡಿದ್ದಾರೆ. 60ರ ದಶಕದ ಕಥೆಯನ್ನು ಈ ಸಿನಿಮಾ ಹೊಂದಿದೆ. ಈ ಚಿತ್ರದಲ್ಲೂ ಸಮಾಜಕ್ಕೆ ಒಂದೊಳ್ಳೆಯ ಸಂದೇಶ ಸಾರುವ ಕೆಲಸ ಆಗಿದೆ. ಹೊಸಬರ ತಂಡಕ್ಕೆ ಪಿಆರ್​ಕೆ ಬೆಂಬಲವಾಗಿ ನಿಂತಿದೆ.

ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ

ಹೊಸ ತಂಡ ಸೇರಿಕೊಂಡು ಮಾಡಿರುವ ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಸಿನಿಮಾ ಕೂಡ ಜನ ಮೆಚ್ಚುಗೆ ಪಡೆದಿದೆ. ಕಾಲೇಜು ಹುಡುಗರು, ಹಾಸ್ಟೆಲ್​ನಲ್ಲಿ ದಿನಗಳನ್ನು ಕಳೆದವರಿಗೆ ಈ ಸಿನಿಮಾ ಇಷ್ಟವಾಗಿದೆ. ನಿತಿನ್ ಕೃಷ್ಣಮೂರ್ತಿ ಅವರು ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ವಿವಾದದ ಮಧ್ಯೆಯೂ ಚಿತ್ರ ಗೆದ್ದಿದೆ.

ಇದನ್ನೂ ಓದಿ: ವಿದೇಶಕ್ಕೆ ಹೊರಟ ‘ಹಾಸ್ಟೆಲ್ ಹುಡುಗರು’: ಹೊಸಬರ ಸಿನಿಮಾಗೆ ಸಿಕ್ಕಿದೆ ಭರ್ಜರಿ ಸಕ್ಸಸ್​

ಸ್ಯಾಂಡಲ್​ವುಡ್​ಗೆ ಹೊಸ ಚೈತನ್ಯ

‘ಡೇರ್​ ಡೆವಿಲ್ ಮುಸ್ತಫಾ’ ಸೇರಿ ಕೆಲವೇ ಕೆಲವು ಕನ್ನಡದ ಸಿನಿಮಾಗಳು ಜನರನ್ನು ಚಿತ್ರಮಂದಿರಕ್ಕೆ ಕರೆಸಿವೆ. ಈಗ ಮೂರು ಸಿನಿಮಾಗಳು ಬ್ಯಾಕ್ ಟು ಬ್ಯಾಕ್ ರಿಲೀಸ್ ಆಗಿ ಕನ್ನಡ ಚಿತ್ರರಂಗಕ್ಕೆ ಹೊಸ ಚೈತನ್ಯ ತುಂಬಿವೆ. ಆಗಸ್ಟ್​ ಹಾಗೂ ಸೆಪ್ಟೆಂಬರ್​ ತಿಂಗಳಲ್ಲಿ ಅನುಕ್ರಮವಾಗಿ ರಾಜ್ ಬಿ. ಶೆಟ್ಟಿ ನಟನೆಯ ‘ಟೋಬಿ’ ಹಾಗೂ ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾ ರಿಲೀಸ್ ಆಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಜನವರಿ 13 ರಿಂದ 19ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 13 ರಿಂದ 19ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ದೃಷ್ಟಿ ಗಣಪತಿ ಕುರಿತಾಗಿ ಶಾಸ್ತ್ರಗಳಲ್ಲಿ ಉಲ್ಲೇಖವಿದೆಯೇ? ಇಲ್ಲಿದೆ ಉತ್ತರ
ದೃಷ್ಟಿ ಗಣಪತಿ ಕುರಿತಾಗಿ ಶಾಸ್ತ್ರಗಳಲ್ಲಿ ಉಲ್ಲೇಖವಿದೆಯೇ? ಇಲ್ಲಿದೆ ಉತ್ತರ
Daily Horoscope: ರವಿವಾರದಂದು ಗ್ರಹಗಳ ಸಂಚಾರ, ರಾಶಿ ಭವಿಷ್ಯ ತಿಳಿಯಿರಿ
Daily Horoscope: ರವಿವಾರದಂದು ಗ್ರಹಗಳ ಸಂಚಾರ, ರಾಶಿ ಭವಿಷ್ಯ ತಿಳಿಯಿರಿ
ಕರ್ನಾಟಕದ ಬಳಿಕ ಅಹಮದಾಬಾದ್​ ಶಾಲೆಯಲ್ಲೂ 3ನೇ ಕ್ಲಾಸ್​ ಬಾಲಕಿಗೆ ಹೃದಯಾಘಾತ
ಕರ್ನಾಟಕದ ಬಳಿಕ ಅಹಮದಾಬಾದ್​ ಶಾಲೆಯಲ್ಲೂ 3ನೇ ಕ್ಲಾಸ್​ ಬಾಲಕಿಗೆ ಹೃದಯಾಘಾತ
ಕನ್ನೌಜ್​ನಲ್ಲಿ ರೈಲ್ವೆ ನಿಲ್ದಾಣದ ಕಟ್ಟಡ ಕುಸಿದು 20 ಜನರಿಗೆ ಗಾಯ
ಕನ್ನೌಜ್​ನಲ್ಲಿ ರೈಲ್ವೆ ನಿಲ್ದಾಣದ ಕಟ್ಟಡ ಕುಸಿದು 20 ಜನರಿಗೆ ಗಾಯ
ಸಿಎಂ ಯಾರೇ ಆದರೂ ಅನುದಾನಕ್ಕಾಗಿ ಹೋರಾಟ ನಿಲ್ಲಲ್ಲ: ಸುನೀಲ ಕುಮಾರ್
ಸಿಎಂ ಯಾರೇ ಆದರೂ ಅನುದಾನಕ್ಕಾಗಿ ಹೋರಾಟ ನಿಲ್ಲಲ್ಲ: ಸುನೀಲ ಕುಮಾರ್
ರಜತ್​ಗೆ ಕಿಚ್ಚನ ಮಾತಿನ ಗುದ್ದು, ಕಣ್ಣೀರು ಹಾಕಿದ ಭವ್ಯಾ
ರಜತ್​ಗೆ ಕಿಚ್ಚನ ಮಾತಿನ ಗುದ್ದು, ಕಣ್ಣೀರು ಹಾಕಿದ ಭವ್ಯಾ
ಶಾಲಾ ಬ್ಯಾಂಡ್​ನೊಂದಿಗೆ ಮಕ್ಕಳಿಂದಲೂ ರವಿಚಂದ್ರ ತಳವಾರಗೆ ಶ್ರದ್ಧಾಂಜಲಿ
ಶಾಲಾ ಬ್ಯಾಂಡ್​ನೊಂದಿಗೆ ಮಕ್ಕಳಿಂದಲೂ ರವಿಚಂದ್ರ ತಳವಾರಗೆ ಶ್ರದ್ಧಾಂಜಲಿ
ಕಲಬುರಗಿ: ರಾಷ್ಟ್ರ ಧ್ವಜ ಸ್ತಂಭದಲ್ಲಿ ಮುಸ್ಲಿಂ ಧ್ವಜಾರೋಹಣ, ಅಪಮಾನ ಆರೋಪ‌
ಕಲಬುರಗಿ: ರಾಷ್ಟ್ರ ಧ್ವಜ ಸ್ತಂಭದಲ್ಲಿ ಮುಸ್ಲಿಂ ಧ್ವಜಾರೋಹಣ, ಅಪಮಾನ ಆರೋಪ‌
ಬಂತು ಶನಿವಾರ, ಕಳ್ಳಾಟ ಆಡಿದ ರಜತ್, ಭವ್ಯಾಗೆ ಕಾದಿದೆ ಗಂಡಾಂತರ?
ಬಂತು ಶನಿವಾರ, ಕಳ್ಳಾಟ ಆಡಿದ ರಜತ್, ಭವ್ಯಾಗೆ ಕಾದಿದೆ ಗಂಡಾಂತರ?