AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಲುಗಿಗೆ ಡಬ್ ಆದ ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಸಿನಿಮಾ; ಶೀರ್ಷಿಕೆ ಬದಲಿಸಿದ ತಂಡ

ತೆಲುಗಿನಲ್ಲಿ ಈ ಚಿತ್ರ ಆಗಸ್ಟ್ 26ರಂದು ರಿಲೀಸ್ ಆಗಲಿದೆ. ‘ಬಾಯ್ಸ್ ಹಾಸ್ಟೆಲ್’ ಎನ್ನುವ ಶೀರ್ಷಿಕೆ ಫೈನಲ್ ಆಗಿದ್ದು, ಪೋಸ್ಟರ್ ರಿಲೀಸ್ ಮಾಡಲಾಗಿದೆ. ಚಾಯ್ ಬಿಸ್ಕೆಟ್ ಫಿಲ್ಮ್ಸ್ ಹಾಗೂ ಅಕ್ಕಿನೇನಿ ನಾಗಾರ್ಜುನ ಅವರ ಅನುಪಮಾ ಸ್ಟುಡಿಯೋ ಈ ಚಿತ್ರವನ್ನು ಆಂಧ್ರ ಪ್ರದೇಶ ಹಾಗೂ ತೆಲಂಗಾಣದಲ್ಲಿ ಹಂಚಿಕೆ ಮಾಡುತ್ತಿದೆ.

ತೆಲುಗಿಗೆ ಡಬ್ ಆದ ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಸಿನಿಮಾ; ಶೀರ್ಷಿಕೆ ಬದಲಿಸಿದ ತಂಡ
ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ
ರಾಜೇಶ್ ದುಗ್ಗುಮನೆ
|

Updated on:Aug 12, 2023 | 1:16 PM

Share

ಒಂದು ಸಿನಿಮಾ ಸೂಪರ್ ಹಿಟ್ ಆಯಿತು ಎಂದಾಗ ಅದನ್ನು ಪರಭಾಷೆಗೆ ಡಬ್ ಮಾಡುವ ಕೆಲಸ ಆಗುತ್ತದೆ. ‘ಕಾಂತಾರ’ ಸಿನಿಮಾ ಮೊದಲು ಕನ್ನಡದಲ್ಲಿ ರಿಲೀಸ್ ಆಗಿ ಯಶಸ್ಸು ಕಂಡಿತು. ಬಳಿಕ ತೆಲುಗು, ತಮಿಳು ಹಾಗೂ ಹಿಂದಿಗೆ ರಿಲೀಸ್ ಆಗಿ ಭರ್ಜರಿ ಕಮಾಯಿ ಮಾಡಿತು. ಈಗ ಹಾಸ್ಟೆಲ್ ಹುಡುಗರ ಸರದಿ. ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ Hostel Hudugaru Bekagiddare Movie)ಸಿನಿಮಾ ತೆಲುಗಿಗೆ ಡಬ್ ಆಗಿದೆ. ಈ ಚಿತ್ರಕ್ಕೆ ತೆಲುಗಿನಲ್ಲಿ ‘ಬಾಯ್ಸ್ ಹಾಸ್ಟೆಲ್’ ಎಂದು ಶೀರ್ಷಿಕೆ ಇಡಲಾಗಿದೆ.

‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಸಿನಿಮಾ ಕನ್ನಡದಲ್ಲಿ ಜುಲೈ 21ರಂದು ರಿಲೀಸ್ ಆಯಿತು. ಈ ಚಿತ್ರ ಕನ್ನಡ ಪ್ರೇಕ್ಷಕರಿಂದ ಭರ್ಜರಿ ಮೆಚ್ಚುಗೆ ಪಡೆಯಿತು. ಹಾಸ್ಟೆಲ್ ಹುಡುಗರ ತಮಾಷೆ ಅನೇಕರಿಗೆ ಇಷ್ಟವಾಯಿತು. ರಕ್ಷಿತ್ ಶೆಟ್ಟಿ ಒಡೆತನದ ‘ಪರಂವ ಸ್ಟುಡಿಯೋಸ್’ ಈ ಚಿತ್ರವನ್ನು ಪ್ರೆಸೆಂಟ್ ಮಾಡಿದೆ. ಈ ಚಿತ್ರಕ್ಕೆ ನಿತಿನ್ ಕೃಷ್ಣಮೂರ್ತಿ ಅವರು ನಿರ್ದೇಶನ ಮಾಡಿದ್ದಾರೆ.

ತೆಲುಗಿನಲ್ಲಿ ಈ ಚಿತ್ರ ಆಗಸ್ಟ್ 26ರಂದು ರಿಲೀಸ್ ಆಗಲಿದೆ. ‘ಬಾಯ್ಸ್ ಹಾಸ್ಟೆಲ್’ ಎನ್ನುವ ಶೀರ್ಷಿಕೆ ಫೈನಲ್ ಆಗಿದ್ದು, ಪೋಸ್ಟರ್ ರಿಲೀಸ್ ಮಾಡಲಾಗಿದೆ. ಚಾಯ್ ಬಿಸ್ಕೆಟ್ ಫಿಲ್ಮ್ಸ್ ಹಾಗೂ ಅಕ್ಕಿನೇನಿ ನಾಗಾರ್ಜುನ ಅವರ ಅನುಪಮಾ ಸ್ಟುಡಿಯೋ ಈ ಚಿತ್ರವನ್ನು ಆಂಧ್ರ ಪ್ರದೇಶ ಹಾಗೂ ತೆಲಂಗಾಣದಲ್ಲಿ ಹಂಚಿಕೆ ಮಾಡುತ್ತಿದೆ. ಅಲ್ಲಿ ಈ ಚಿತ್ರಕ್ಕೆ ಯಾವ ರೀತಿಯ ಪ್ರತಿಕ್ರಿಯೆ ಸಿಗಲಿದೆ ಎಂಬುದನ್ನು ಕಾದು ನೋಡಬೇಕಿದೆ.

ಇದನ್ನೂ ಓದಿ: ವಿದೇಶಕ್ಕೆ ಹೊರಟ ‘ಹಾಸ್ಟೆಲ್ ಹುಡುಗರು’: ಹೊಸಬರ ಸಿನಿಮಾಗೆ ಸಿಕ್ಕಿದೆ ಭರ್ಜರಿ ಸಕ್ಸಸ್​

ಈ ಚಿತ್ರದಲ್ಲಿ ನಟಿಸಿದ ಬಹುತೇಕ ಎಲ್ಲರೂ ಹೊಸ ಪ್ರತಿಭೆಗಳೇ. ಹಲವರಿಗೆ ರಂಗಭೂಮಿ ಹಿನ್ನೆಲೆ ಇದೆ. ಅರವಿಂದ್ ಕಶ್ಯಪ್ ಅವರ ಛಾಯಾಗ್ರಹಣಕ್ಕೆ ಮೆಚ್ಚುಗೆ ಸಿಕ್ಕಿದೆ. ವರುಣ್ ಗೌಡ, ಪ್ರಜ್ವಲ್ ಬಿ.ಪಿ, ನಿತಿನ್ ಕೃಷ್ಣಮೂರ್ತಿ, ಅರವಿಂದ್ ಎಸ್. ಕಶ್ಯಪ್ ಅವರು ಈ ಸಿನಿಮಾಗೆ ಬಂಡವಾಳ ಹೂಡಿದ್ದಾರೆ. ಅಜನೀಶ್ ಲೋಕನಾಥ್ ಅವರು ಈ ಚಿತ್ರಕ್ಕೆ ಸಂಗೀತ ನಿರ್ದೇಶನ ಮಾಡಿದ್ದಾರೆ. ರಿಷಬ್ ಶೆಟ್ಟಿ, ಪವನ್ ಕುಮಾರ್, ಶೈನ್ ಶೆಟ್ಟಿ, ದಿಗಂತ್ ಹಾಗೂ ರಮ್ಯಾ ಅತಿಥಿ ಪಾತ್ರ ಮಾಡಿ ಗಮನ ಸೆಳೆದರು. ಸದ್ಯ ಹೈದರಾಬಾದ್​ನಲ್ಲಿ ಕನ್ನಡ ವರ್ಷನ್ ಪ್ರದರ್ಶನ ಕಾಣುತ್ತಿತ್ತು ಎನ್ನಲಾಗಿದೆ. ಈಗ ತೆಲುಗು ವರ್ಷನ್ ರಿಲೀಸ್ ಆಗುತ್ತಿರುವುದರಿಂದ ಕನ್ನಡ ಅವತರಣಿಕೆಯನ್ನು ತೆಗೆಯಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 1:15 pm, Sat, 12 August 23

ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ