Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊನೆಗೂ ಬಿಡುಗಡೆ ದಿನಾಂಕ ಘೋಷಿಸಿದ ಹಾಸ್ಟೆಲ್ ಹುಡುಗರು: ಏಳು ವರ್ಷದ ಬಳಿಕ ರಮ್ಯಾ ಮರು ಎಂಟ್ರಿ

Hostel Hudugru Bekagiddare: ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ ಆಗಿದೆ. ಏಳು ವರ್ಷಗಳ ಬಳಿಕ ರಮ್ಯಾ ಸಿನಿಮಾದಲ್ಲಿ ನಟಿಸಿದ್ದಾರೆ.

ಕೊನೆಗೂ ಬಿಡುಗಡೆ ದಿನಾಂಕ ಘೋಷಿಸಿದ ಹಾಸ್ಟೆಲ್ ಹುಡುಗರು: ಏಳು ವರ್ಷದ ಬಳಿಕ ರಮ್ಯಾ ಮರು ಎಂಟ್ರಿ
ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ
Follow us
ಮಂಜುನಾಥ ಸಿ.
|

Updated on: Jul 01, 2023 | 6:46 PM

ಹೊಸ ಹುಡುಗರ ಸಿನಿಮಾಗಳು ಬಿಡುಗಡೆ ಆದ ಬಳಿಕ ಗಮನ ಸೆಳೆಯುವುದು ಸಾಮಾನ್ಯ. ಆದರೆ ಬಿಡುಗಡೆಗೆ ಮುಂಚೆಯೇ ಗಮನ ಸೆಳೆದಿರುವ ಹೊಸ ಹುಡುಗರ ಸಿನಿಮಾ ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ‘ (Hostel Hudugru Bekagiddare) ಹೊಸ ಹೊಸ ಐಡಿಯಾಗಳ ಮೂಲಕ, ಕ್ರಿಯಾಶೀಲ ವಿಡಿಯೋ ತುಣುಕುಗಳ ಮೂಲಕ ಸಿನಿಮಾ ಪ್ರಚಾರವನ್ನು (Promotions) ಮಾಡಿರುವ ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ತಂಡ ಸಿನಿಮಾದ ಬಗ್ಗೆ ಕುತೂಹಲ ಮೂಡಿಸಲು ಸಫಲರಾಗಿದ್ದಾರೆ. ಇದೀಗ ಸಿನಿಮಾ ಬಿಡುಗಡೆಯನ್ನು ಚಿತ್ರತಂಡ ಘೋಷಣೆ ಮಾಡಿದೆ. ವಿಶೇಷವೆಂದರೆ ಏಳು ವರ್ಷಗಳ ಬಳಿಕ ಈ ಸಿನಿಮಾದ ಮೂಲಕ ನಟಿ ರಮ್ಯಾ (Ramya) ಬೆಳ್ಳಿ ತೆರೆಗೆ ಮರಳಿ ಬಂದಿದ್ದಾರೆ.

ಈಗಾಗಲೇ ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಸಿನಿಮಾದ ಟೀಸರ್, ಸಾಂಗ್ ಬಿಡುಗಡೆ ಆಗಿ ಗಮನ ಸೆಳೆದಿದೆ. ಸಿನಿಮಾ ಜುಲೈ 21ಕ್ಕೆ ರಾಜ್ಯಾದ್ಯಂತ ಬಿಡುಗಡೆ ಆಗಲಿದೆ. ಸೆಟ್ಟೇರಿದ ದಿನದಿಂದಲೂ ವಿಭಿನ್ನ ಬಗೆಯಲ್ಲಿ ಪ್ರಚಾರ ನಡೆಸುತ್ತಿರುವ ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಸಿನಿಮಾಗೆ ಪುನೀತ್ ರಾಜ್ ಕುಮಾರ್, ರಮ್ಯಾ, ರಕ್ಷಿತ್ ಶೆಟ್ಟಿ, ರಿಷಬ್ ಶೆಟ್ಟಿ, ಶೈನಿ ಶೆಟ್ಟಿ, ಪವನ್ ಕುಮಾರ್ ಸೇರಿದಂತೆ ಚಂದನವನದ ಹಲವು ತಾರೆಯರು ಸಾಥ್ ಕೊಟ್ಟಿದ್ದಾರೆ. ಇತ್ತೀಚೆಗಷ್ಟೇ ದೂದ್ ಪೇಡಾ ದಿಗಂತ್ ಹಾಸ್ಟೆಲ್ ಹುಡುಗರ ಬಳಗ ಸೇರಿದ್ದಾರೆ.

ಇದನ್ನೂ ಓದಿ:Ramya: ರಮ್ಯಾ ಬೇಕು ಅಂತ ಪ್ರತಿಭಟನೆ, ಗುಡಿ ಕಟ್ಟಿಸಿ ಪೂಜೆ; ‘ಹಾಸ್ಟೆಲ್​ ಹುಡುಗರು’ ಮಾಡಿದ್ದು ಒಂದೆರಡಲ್ಲ

ಚಿತ್ರರಂಗದಿಂದ ದೂರವಾಗಿದ್ದ ನಟಿ ರಮ್ಯಾ, ಹಾಸ್ಟೆಲ್ ಹುಡುಗರು ಸಿನಿಮಾದ ಮೂಲಕ ಮತ್ತೆ ಬೆಳ್ಳಿ ತೆರೆಗೆ ಮರಳಿದ್ದಾರೆ. ರಮ್ಯಾ ಈ ಸಿನಿಮಾದಲ್ಲಿ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಮಾತ್ರವಲ್ಲ ಚಿತ್ರತಂಡಕ್ಕಾಗಿ ವಿಶೇಷ ಪ್ರಮೋಷನಲ್ ವಿಡಿಯೋನಲ್ಲಿಯೂ ಕಾಣಿಸಿಕೊಂಡಿದ್ದಾರೆ. ಏಳು ವರ್ಷದ ಬಳಿಕ ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಸಿನಿಮಾ ಮೂಲಕ ರಮ್ಯಾರನ್ನು ಮತ್ತೆ ಬೆಳ್ಳಿ ತೆರೆಯ ಮೇಲೆ ಕಣ್ಣು ತುಂಬಿಕೊಳ್ಳಬಹುದಾಗಿದೆ.

ಯೂತ್ ಸಬ್ಜೆಕ್ಟ್ ಕಥೆಯನ್ನೊಳಗೊಂಡ ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಸಿನಿಮಾವನ್ನು ನಿತಿನ್ ಕೃಷ್ಣಮೂರ್ತಿ ಕಥೆ ಬರೆದು ನಿರ್ದೇಶಿಸಿದ್ದಾರೆ. ಬಹುತೇಕ ರಂಗಭೂಮಿ ಪ್ರತಿಭೆಗಳು ನಟಿಸಿರುವ ಈ ಚಿತ್ರವನ್ನು ವರುಣ್ ಸ್ಟುಡಿಯೋಸ್ ಹಾಗೂ ಗುಲ್ ಮೋಹರ್ ಫಿಲ್ಮಂಸ್ ಬ್ಯಾನರ್ ನಡಿ ಪ್ರಜ್ವಲ್ ಬಿ.ಪಿ, ವರುಣ್ ಕುಮಾರ್ ಗೌಡ, ನಿತಿನ್ ಕೃಷ್ಣಮೂರ್ತಿ, ಅರವಿಂದ್ ಕೆ ಕಶ್ಯಪ್ ಬಂಡವಾಳ ಹೂಡಿದ್ದಾರೆ. ಪ್ರತಿ ಬಾರಿ ಭಿನ್ನ ಮಾದರಿಯ ಮೂಲಕ ಪ್ರಚಾರ ಮಾಡುತ್ತಿರುವ ಹಾಸ್ಟೆಲ್ ಹುಡುಗರನು ಸಿನಿಮಾವನ್ನು ರಕ್ಷಿತ್ ಶೆಟ್ಟಿ ತಮ್ಮದೇ ಪರಂವಃ ಪಿಕ್ಚರ್ಸ್ ಮೂಲಕ ಪ್ರಸ್ತುತಪಡಿಸುತ್ತಿದ್ದಾರೆ. ಅಜನೀಶ್ ಲೋಕನಾಥ್ ಸಂಗೀತ ಅರವಿಂದ್ ಛಾಯಾಗ್ರಹಣ, ಸುರೇಶ್ ಸಂಕಲನವಿರುವ ಚಿತ್ರದ ಶ್ರೀಮಂತಿಕೆ ಹೆಚ್ಚಿಸಿದೆ. ಬಿಡುಗಡೆ ದಿನಾಂಕ ಘೋಷಿಸಿರುವ ಚಿತ್ರತಂಡ ಶೀಘ್ರದಲ್ಲಿಯೇ ಟ್ರೇಲರ್ ಬಿಡುಗಡೆ ಮಾಡಲು ಯೋಜನೆ ಹಾಕಿಕೊಂಡಿದೆ.

ಕನ್ನಡದಲ್ಲಿ ಇತ್ತೀಚೆಗೆ ಕೆಲ ಹೊಸ ಹುಡುಗರ ಸಿನಿಮಾಗಳು ಗೆಲುವು ಸಾಧಿಸಿವೆ. ‘ಕಂಬ್ಳಿಹುಳ’, ಇತ್ತೀಚೆಗೆ ಬಿಡಗುಡೆ ಆದ ‘ಡೇರ್​ಡೆವಿಲ್ ಮುಸ್ತಫಾ’ ಸಿನಿಮಾಗಳು ಗೆದ್ದಿವೆ. ಅದೇ ಸಾಲಿಗೆ ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಸಿನಿಮಾ ಸೇರುವ ವಿಶ್ವಾಸ ಸಿನಿಪ್ರೇಮಿಗಳಿಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ