AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೋಟೆಲ್​ನಲ್ಲಿ ಕೆಲಸ ಮಾಡುವ ಹುಡುಗನಿಗೆ ಹೀರೋ ಪಟ್ಟ ನೀಡಿದ ‘ಅನಂತರ ಇ ಕಿಸಾನ್ ಟಿವಿ 2’

‘ಅನಂತರ ಇ ಕಿಸಾನ್ ಟಿವಿ 2’ ಸಿನಿಮಾದಲ್ಲಿ ಯೋಗೇಶ್ ಗೌಡ, ಯಶಸ್ವಿನಿ, ರಮ್ಯಾ, ವಿಜಯಾ, ಸುಧಾ, ವಾತ್ಸಲ್ಯ, ಪವನ್ ಚಾರಿ ಮುಂತಾದವರು ಅಭಿನಯಿಸಿದ್ದಾರೆ. ತ್ರಿಲೋಕ್ ಚಂದರ್ ಅವರು ನಿರ್ದೇಶನ ಮಾಡಿದ್ದಾರೆ. ಯೋಗೇಶ್ ಗೌಡ ಅವರು ಈ ಚಿತ್ರದಲ್ಲಿ ನಾಯಕ ನಟನಾಗಿ ಬಣ್ಣ ಹಚ್ಚಿದ್ದಾರೆ.

ಹೋಟೆಲ್​ನಲ್ಲಿ ಕೆಲಸ ಮಾಡುವ ಹುಡುಗನಿಗೆ ಹೀರೋ ಪಟ್ಟ ನೀಡಿದ ‘ಅನಂತರ ಇ ಕಿಸಾನ್ ಟಿವಿ 2’
Ananthara E Kisan Tv 2 Movie Team
ಮದನ್​ ಕುಮಾರ್​
|

Updated on: Sep 23, 2026 | 3:54 PM

Share

ಪೀಣ್ಯದಲ್ಲಿ ಇಂಡಸ್ಟ್ರಿ ನಡೆಸುತ್ತಿರುವ ಡಿ. ತ್ರಿಲೋಕ್ ಚಂದರ್ ಅವರು ಹೊಸ ಸಿನಿಮಾವೊಂದಕ್ಕೆ ನಿರ್ದೇಶನ ಮಾಡಿದ್ದಾರೆ‌. ‘ತರು ಫಿಲ್ಮ್ ಅಕಾಡೆಮಿ’ ಸಂಸ್ಥೆಯ ಮೂಲಕ ‘ಅನಂತರ ಇ ಕಿಸಾನ್ ಟಿವಿ2’ ಎಂಬ ಈ ಸಿನಿಮಾವನ್ನು ತಾವೇ ನಿರ್ಮಾಣ ಕೂಡ ಮಾಡಿದ್ದಾರೆ. ಈಗಾಗಲೇ ಈ ಸಿನಿಮಾದ ಚಿತ್ರೀಕರಣ ಹಾಗೂ ಪೋಸ್ಟ್ ಪ್ರೊಡಕ್ಷನ್ ಕೆಲಸಗಳನ್ನು ಮುಗಿಸಲಾಗಿದೆ. ಇತ್ತೀಚೆಗೆ ಈ ಸಿನಿಮಾದ ಸುದ್ದಿಗೋಷ್ಠಿ ನಡೆಯಿತು. ನಾಯಕ ನಟ ಯೋಗೇಶ್ ಗೌಡ ಮಾತನಾಡಿ ‘ಹೋಟೆಲ್​ನಲ್ಲಿ ಕೆಲಸ ಮಾಡಿಕೊಂಡಿದ್ದ ನನಗೆ ನಿರ್ದೇಶಕರು ಹೀರೋ ಆಗುವ ಅವಕಾಶ ನೀಡಿದ್ದಾರೆ. ಚಿತ್ರದಲ್ಲಿ ನಾನು ಹಳ್ಳಿಯ ಯುವಕನ ಪಾತ್ರ ಮಾಡಿದ್ದೇನೆ’ ಎಂದರು.

ಯೋಗೇಶ್ ಗೌಡ, ನಾಯಕಿ ಯಶಸ್ವಿನಿ, ರಮ್ಯಾ, ವಿಜಯಾ, ಸುಧಾ, ಪವನ್ ಚಾರಿ, ವಾತ್ಸಲ್ಯ ಮುಂತಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಸೃಜನ್, ಸುಹಾಸ್ ಅವರ ಛಾಯಾಗ್ರಹಣ, ಜೆವಿನ್ಸನ್ ಲೆವಿಸ್ ಅವರ ಸಂಗೀತ ಸಂಯೋಜನೆ ಹಾಗೂ ಸಂಕಲನ ಈ ಸಿನಿಮಾಗಿದೆ.

ಚಿತ್ರದ ಕಥೆ ಏನು ಎಂಬುದನ್ನು ಚಿತ್ರತಂಡದವರು ವಿವರಿಸಿದರು. ‘ಗ್ರಾಮೀಣ ಪರಿಸರದಲ್ಲಿ ಮುಗ್ಧ ಯುವಕನ ಸುತ್ತ ನಡೆಯುವ ಕಥೆಯಿದು. ಸ್ನೇಹಿತರ ಸಹವಾಸದಿಂದ ಕೊಲೆ ಪ್ರಕರಣದಲ್ಲಿ ಸಿಲುಕಿ, ಜೈಲಿಗೆ ಹೋಗಿ ಹೊರಬಂದ ಮೇಲೆ ಆ ಯುವಕನ ಮುಂದಿನ ಜೀವನ ಹೇಗಿರುತ್ತದೆ? ಸಂಬಂಧಕ್ಕಿಂತ ಹಣಕ್ಕೇ ಹೆಚ್ಚು ಬೆಲೆ ಕೊಡುವ ಜನರು ಹಾಗೂ ಸಂಬಂಧಿಕರ ಮಧ್ಯೆ ಆತನೊಬ್ಬನೇ ಏಕಾಂಗಿಯಾಗಿ ಹೇಗೆ ಹೋರಾಡುತ್ತಾನೆ ಎಂಬುದು ಚಿತ್ರದ ಕಥೆ’ ಎಂದು ಚಿತ್ರತಂಡ ಹೇಳಿದೆ.

ನಿರ್ದೇಶಕ ತ್ರಿಲೋಕ್ ಚಂದರ್ ಮಾತನಾಡಿ, ‘ನಾನು ಕೂಲಿಂಗ್ ಸೊಲ್ಯುಶನ್ಸ್ ಇಂಡಸ್ಟ್ರಿ ಮಾಡುತ್ತಿದ್ದೇನೆ. ಜತೆಗೆ ಕನ್ನಡ ಬ್ಯುಸಿನೆಸ್ ಟಿವಿ ಚಾನಲ್ ಕೂಡ ಆರಂಭಿಸುತ್ತಿದ್ದೇನೆ. ಈ ಹಿಂದೆ ಒಂದು ಸಿನಿಮಾ ನಿರ್ಮಾಣ ಮಾಡಿ ಸಾಕಷ್ಟು ಕಳೆದುಕೊಂಡಿದ್ದೆ. ಆದರೂ ಸ್ಟಾರ್ಟಪ್ ಬ್ಯುಸಿನೆಸ್ ಮಾಡುವವರಿಗೆ ನಮ್ಮ ಚಿತ್ರದ ಮೂಲಕ ಒಂದು ಮೆಸೇಜ್ ಕೊಡಬೇಕೆಂಬ ಉದ್ದೇಶದಿಂದ ಈ ಸಿನಿಮಾವನ್ನು ನಿರ್ಮಾಣ ಮಾಡಿದ್ದೇನೆ. ಜತೆಗೆ ನಮ್ಮ ರೈತರು ಎದುರಿಸುತ್ತಿರುವ ಹಲವಾರು ಸಮಸ್ಯೆಗಳ ಬಗ್ಗೆಯೂ ಈ ಚಿತ್ರದಲ್ಲಿ ಹೇಳಲು ಪ್ರಯತ್ನಿಸಿದ್ದೇವೆ’ ಎಂದು ವಿವರಿಸಿದರು.

ಇದನ್ನೂ ಓದಿ: ಕನ್ನಡ ರಾಜ್ಯೋತ್ಸವಕ್ಕೆ ಕಲರ್‌ನಲ್ಲಿ ಬಿಡುಗಡೆ ಆಗಲಿದೆ ‘ಜಗ ಮೆಚ್ಚಿದ ಮಗ’ ಸಿನಿಮಾ

ಈ ಸಿನಿಮಾದಲ್ಲಿ ನಟ ಮುರಳಿ ಕೃಷ್ಣ ಅವರು ನಿರ್ದೇಶಕನ ಪಾತ್ರ ಮಾಡಿದ್ದಾರೆ. ಎಟಿ ರವೀಶ್, ಶ್ರೀಶಾಸ್ತ ಅವರ ಬಳಿ ಕೆಲಸ ಮಾಡಿದ್ದ ಸಂಗೀತ ನಿರ್ದೇಶಕ ಜೆವಿನ್ಸನ್ ಲೆವಿಸ್ ಅವರು ಈ ಚಿತ್ರಕ್ಕೆ ಸಂಗೀತ ನೀಡಿದ್ದಾರೆ. ಚಿತ್ರದಲ್ಲಿ ಒಟ್ಟು 4 ಹಾಡುಗಳಿವೆ. ಸಂಕಲನವನ್ನು ಕೂಡ ಜೆವಿನ್ಸನ್ ಲೆವಿಸ್ ಅವರೇ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Live: ಮೈಸೂರು ದಸರಾ ಉದ್ಘಾಟನೆ ನೇರಪ್ರಸಾರ
Live: ಮೈಸೂರು ದಸರಾ ಉದ್ಘಾಟನೆ ನೇರಪ್ರಸಾರ
ಮೈಸೂರು ದಸರಾಗೆ ಕ್ಷಣಗಣನೆ: ಗವಿಸಿದ್ದೇಶ್ವರ ಶ್ರೀಗಳಿಂದ ನಾಡಹಬ್ಬಕ್ಕೆ ಚಾಲನೆ
ಮೈಸೂರು ದಸರಾಗೆ ಕ್ಷಣಗಣನೆ: ಗವಿಸಿದ್ದೇಶ್ವರ ಶ್ರೀಗಳಿಂದ ನಾಡಹಬ್ಬಕ್ಕೆ ಚಾಲನೆ
ಎವರೆಸ್ಟ್ ಶಿಖರದ ಮೇಲೆ ಕನ್ನಡ ಧ್ವಜ ಹಾರಿಸಿ ಇತಿಹಾಸ ನಿರ್ಮಿಸಿದ ಕನ್ನಡಿಗರು!
ಎವರೆಸ್ಟ್ ಶಿಖರದ ಮೇಲೆ ಕನ್ನಡ ಧ್ವಜ ಹಾರಿಸಿ ಇತಿಹಾಸ ನಿರ್ಮಿಸಿದ ಕನ್ನಡಿಗರು!
ಉಕ್ರೇನ್‌ಗೆ ಕೈಕೊಟ್ಟ ಅಮೆರಿಕ: ಝೆಲೆನ್‌ಸ್ಕಿ ವಿರುದ್ಧ ಟ್ರಂಪ್ ಆಕ್ರೋಶ
ಉಕ್ರೇನ್‌ಗೆ ಕೈಕೊಟ್ಟ ಅಮೆರಿಕ: ಝೆಲೆನ್‌ಸ್ಕಿ ವಿರುದ್ಧ ಟ್ರಂಪ್ ಆಕ್ರೋಶ
ಮೈಸೂರು ದಸರಾ: ಗಜಪಡೆಗೆ ಮಜ್ಜನದೊಂದಿಗೆ ಸಂಭ್ರಮದ ಸಿದ್ಧತೆಗಳಿಗೆ ಚಾಲನೆ
ಮೈಸೂರು ದಸರಾ: ಗಜಪಡೆಗೆ ಮಜ್ಜನದೊಂದಿಗೆ ಸಂಭ್ರಮದ ಸಿದ್ಧತೆಗಳಿಗೆ ಚಾಲನೆ
ಮೈಸೂರು ದಸರಾ: ಅರಮನೆ ಆವರಣದಲ್ಲಿ ದಸರಾ ಗಜಪಡೆಗೆ ಮಜ್ಜನ
ಮೈಸೂರು ದಸರಾ: ಅರಮನೆ ಆವರಣದಲ್ಲಿ ದಸರಾ ಗಜಪಡೆಗೆ ಮಜ್ಜನ
ಮೈಸೂರಿನಲ್ಲಿ ಈ ಬಾರಿ ದಸರಾ ಸಡಗರ ಹೇಗಿದೆ ನೋಡಿ!
ಮೈಸೂರಿನಲ್ಲಿ ಈ ಬಾರಿ ದಸರಾ ಸಡಗರ ಹೇಗಿದೆ ನೋಡಿ!
ಪ್ರತಿಭಟನೆಗೆ ಸುಪ್ರೀಂ ಆದೇಶ ಪಾಲಿಸದ ಆರೋಪದ ಮೇಲೆ ನ್ಯಾಯಾಂಗ ನಿಂದನೆ ಅರ್ಜಿ
ಪ್ರತಿಭಟನೆಗೆ ಸುಪ್ರೀಂ ಆದೇಶ ಪಾಲಿಸದ ಆರೋಪದ ಮೇಲೆ ನ್ಯಾಯಾಂಗ ನಿಂದನೆ ಅರ್ಜಿ
ಬೆಳಗಾವಿಯ ಪ್ರಭಾವಿ ರಾಜಕಾರಣಿಗಳ ಒಡೆತನದ ಕ್ಲಬ್, ಹೋಟೆಲ್​ಗಳ ಮೇಲೆ ದಾಳಿ
ಬೆಳಗಾವಿಯ ಪ್ರಭಾವಿ ರಾಜಕಾರಣಿಗಳ ಒಡೆತನದ ಕ್ಲಬ್, ಹೋಟೆಲ್​ಗಳ ಮೇಲೆ ದಾಳಿ
ಇಂದಿನಿಂದ ನವರಾತ್ರಿ ಆರಂಭ; ಹೊಸ ಕೆಲಸ ಆರಂಭಿಸಲು ಒಳ್ಳೆಯ ದಿನ
ಇಂದಿನಿಂದ ನವರಾತ್ರಿ ಆರಂಭ; ಹೊಸ ಕೆಲಸ ಆರಂಭಿಸಲು ಒಳ್ಳೆಯ ದಿನ