AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಹುಬ್ಬಳ್ಳಿ ಹಂಟರ್ಸ್’ ಚಿತ್ರದ ಆಡಿಯೋ ಹಕ್ಕು ಖರೀದಿಸಿದ ರಿಷಬ್ ಶೆಟ್ಟಿ

ಸಂತೋಷ್ ಕುಮಾರ್ ನಿರ್ಮಾಣದ ಬಹುನಿರೀಕ್ಷಿತ ಹುಬ್ಬಳ್ಳಿ ಹಂಟರ್ಸ್ ಸಿನಿಮಾ ಡಿಸೆಂಬರ್ 11 ರಂದು ರಾಜ್ಯಾದ್ಯಂತ ಅದ್ಧೂರಿಯಾಗಿ ತೆರೆಕಾಣಲಿದೆ. ಈ ಚಿತ್ರದ ಆಡಿಯೋ ಹಕ್ಕುಗಳನ್ನು ರಿಷಬ್ ಶೆಟ್ಟಿ ಮ್ಯೂಸಿಕ್ ಸಂಸ್ಥೆಯು ಪಡೆದುಕೊಂಡಿದ್ದು, ಚಿತ್ರದ ಸಂಗೀತದ ಮೇಲಿನ ನಿರೀಕ್ಷೆಯನ್ನು ಮತ್ತಷ್ಟು ಹೆಚ್ಚಿಸಿದೆ. ರಿಷಬ್ ಅವರು ಸಂಗೀತ ಕ್ಷೇತ್ರದಲ್ಲೂ ನಿಧಾನಕ್ಕೆ ಹೆಜ್ಜೆ ಇಡುತ್ತಿದ್ದಾರೆ.

‘ಹುಬ್ಬಳ್ಳಿ ಹಂಟರ್ಸ್’ ಚಿತ್ರದ ಆಡಿಯೋ ಹಕ್ಕು ಖರೀದಿಸಿದ ರಿಷಬ್ ಶೆಟ್ಟಿ
‘ಹುಬ್ಬಳ್ಳಿ ಹಂಟರ್ಸ್’ ಚಿತ್ರದ ಆಡಿಯೋ ಹಕ್ಕು ಖರೀದಿಸಿದ ರಿಷಬ್ ಶೆಟ್ಟಿ
ರಾಜೇಶ್ ದುಗ್ಗುಮನೆ
|

Updated on: Oct 23, 2026 | 11:54 AM

Share

ಮುಖ್ಯಾಂಶಗಳು

  • ಹುಬ್ಬಳ್ಳಿ ಹಂಟರ್ಸ್ ಆಡಿಯೋ ಹಕ್ಕುಗಳು ಮಾರಾಟ
  • ರಿಷಬ್ ಶೆಟ್ಟಿ ಮ್ಯೂಸಿಕ್ ಪಾಲು
  • ಡಿಸೆಂಬರ್ 11ಕ್ಕೆ ಸಿನಿಮಾ ರಿಲೀಸ್

ಸ್ಯಾಂಡಲ್‌ವುಡ್‌ನಲ್ಲಿ ಸದ್ದು ಮಾಡಲು ಹೊಸ ಚಿತ್ರವೊಂದು ಸಜ್ಜಾಗಿದೆ. ‘ಬೆಲ್ ಬಾಟಂ’ ಖ್ಯಾತಿಯ ನಿರ್ಮಾಪಕ ಸಂತೋಷ್ ಕುಮಾರ್ ಕೆ.ಸಿ. ಅವರ ನಿರ್ಮಾಣದಲ್ಲಿ ತಯಾರಾಗಿರುವ ಬಹುನಿರೀಕ್ಷಿತ ‘ಹುಬ್ಬಳ್ಳಿ ಹಂಟರ್ಸ್’ ಚಿತ್ರದ ಬಿಡುಗಡೆ ದಿನಾಂಕ ಅಧಿಕೃತವಾಗಿ ಘೋಷಣೆಯಾಗಿದೆ. ದಿಗಂತ್ ಅಭಿನಯದ ‘ಎಡಗೈಯೇ ಅಪಘಾತಕ್ಕೆ ಕಾರಣ’ ಚಿತ್ರದ ಮೂಲಕ ಗಮನ ಸೆಳೆದಿದ್ದ ನಿರ್ದೇಶಕ ಸಮರ್ಥ್ ಬಿ. ಕಡಕೊಳ್ ಈ ಆಕ್ಷನ್ ಸಿನಿಮಾಗೆ ಆ್ಯಕ್ಷನ್ ಕಟ್ ಹೇಳಿದ್ದಾರೆ. ಇದೇ ವರ್ಷ ಡಿಸೆಂಬರ್ 11ರಂದು ರಾಜ್ಯಾದ್ಯಂತ ಈ ಸಿನಿಮಾ ಅದ್ಧೂರಿಯಾಗಿ ತೆರೆಕಾಣಲಿದೆ. ಇದರ ಮಧ್ಯೆ ಚಿತ್ರತಂಡ ಮತ್ತೊಂದು ಬಿಗ್ ಅಪ್ಡೇಟ್ ನೀಡಿದ್ದು, ಡಿವೈನ್‌ ಸ್ಟಾರ್‌ ರಿಷಬ್ ಶೆಟ್ಟಿ ಅವರ ‘ರಿಷಬ್ ಶೆಟ್ಟಿ ಮ್ಯೂಸಿಕ್‌’ ಸಂಸ್ಥೆಯು ಈ ಸಿನಿಮಾದ ಆಡಿಯೋ ಹಕ್ಕುಗಳನ್ನು ಭರ್ಜರಿ ಮೊತ್ತಕ್ಕೆ ಖರೀದಿಸಿದೆ.

ಹಿಂದೆ ‘ಬೆಲ್ ಬಾಟಂ’ ಚಿತ್ರದಲ್ಲಿ ರಿಷಬ್ ಶೆಟ್ಟಿ ನಾಯಕನಾಗಿ ನಟಿಸಿ ಭರ್ಜರಿ ಯಶಸ್ಸು ಕಂಡಿದ್ದರು. ಈಗ ಅದೇ ನಿರ್ಮಾಪಕರ ಹೊಸ ಮತ್ತು ವಿಭಿನ್ನ ಚಿತ್ರವಾದ ‘ಹುಬ್ಬಳ್ಳಿ ಹಂಟರ್ಸ್’ಗೆ ರಿಷಬ್ ಬೆಂಬಲವಾಗಿ ನಿಂತಿದ್ದಾರೆ. ತಮ್ಮದೇ ಸ್ವಂತ ಮ್ಯೂಸಿಕ್ ಕಂಪನಿ ಮೂಲಕ ಚಿತ್ರದ ಆಡಿಯೋವನ್ನು ಹೊರತರುತ್ತಿರುವುದು ಚಿತ್ರತಂಡಕ್ಕೆ ಮತ್ತಷ್ಟು ಬಲ ತಂದುಕೊಟ್ಟಿದೆ. ಈ ಮಹತ್ವದ ಒಪ್ಪಂದದಿಂದಾಗಿ ಸಿನಿಮಾದ ಹಾಡುಗಳು ಹಾಗೂ ಸಂಗೀತದ ಮೇಲಿನ ನಿರೀಕ್ಷೆಗಳು ಪ್ರೇಕ್ಷಕರಲ್ಲಿ ಗಣನೀಯವಾಗಿ ಹೆಚ್ಚಾಗಿವೆ.

ಚಿತ್ರದ ತಾಂತ್ರಿಕ ಬಳಗವು ಸಾಕಷ್ಟು ಬಲವಾಗಿದೆ. ಪ್ರಸನ್ನ ಕೇಶವ ಅವರ ಸಂಗೀತ ಸಂಯೋಜನೆ ಹಾಗೂ ಸುಜಿತ್ ನಾಯರ್‌ ಅವರ ಹಿನ್ನೆಲೆ ಸಂಗೀತ ಚಿತ್ರಕ್ಕಿದೆ. ಖ್ಯಾತ ಗಾಯಕರಾದ ವಿಜಯಪ್ರಕಾಶ್ ಮತ್ತು ವ್ಯಾಸರಾಜ್ ಸೊಸಲೆ ಹಾಡುಗಳನ್ನು ಹಾಡಿದ್ದಾರೆ. ಪ್ರತಿಭಾವಂತ ಸಾಹಿತ್ಯಕಾರರಾದ ವಿ. ನಾಗೇಂದ್ರ ಪ್ರಸಾದ್ ಹಾಗೂ ತ್ರಿಲೋಕ್ ತ್ರಿವಿಕ್ರಮ್ ಗೀತೆಗಳನ್ನು ರಚಿಸಿದ್ದಾರೆ.

ಇದನ್ನೂ ಓದಿ: ರಿಷಬ್ ಶೆಟ್ಟಿ ಮನೆಯಲ್ಲಿ ದಸರಾ ಹಬ್ಬದ ಸಂಭ್ರಮ; ಪೂಜೆಯ ವಿಡಿಯೋ ನೋಡಿ

ಅಭಿಮನ್ಯು ಸದಾನಂದನ್ ಅವರ ಛಾಯಾಗ್ರಹಣ ಮತ್ತು ಧರಣಿ ಗಂಗೆಪುತ್ರ ಅವರ ಕಲಾ ನಿರ್ದೇಶನ ಸಿನಿಮಾಗೆ ಇದೆ. ಸದ್ಯ ಬಿಡುಗಡೆಯ ಸಿದ್ಧತೆಯಲ್ಲಿರುವ ಚಿತ್ರತಂಡವು, ಶೀಘ್ರದಲ್ಲೇ ‘ರಿಷಬ್ ಶೆಟ್ಟಿ ಮ್ಯೂಸಿಕ್’ ಯೂಟ್ಯೂಬ್ ಚಾನೆಲ್ ಮೂಲಕ ಟೀಸರ್ ಹಾಗೂ ಮೊದಲ ಹಾಡನ್ನು ಬಿಡುಗಡೆ ಮಾಡಲು ಭರ್ಜರಿ ಸಿದ್ಧತೆ ನಡೆಸುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ಸ್ಟಿಂಗ್ ಆಪರೇಷನ್ ಪ್ರಕರಣ ಸಂಬಂಧ  ಹಿರಿಯ ಪತ್ರಕರ್ತನಿಗೆ ಸಿಸಿಬಿ ಗ್ರಿಲ್​​
ಸ್ಟಿಂಗ್ ಆಪರೇಷನ್ ಪ್ರಕರಣ ಸಂಬಂಧ  ಹಿರಿಯ ಪತ್ರಕರ್ತನಿಗೆ ಸಿಸಿಬಿ ಗ್ರಿಲ್​​
ಕೆಎಸ್ಒಯು ಪರೀಕ್ಷೆಯಲ್ಲಿ ವಿದ್ಯಾರ್ಥಿಗಳಿಂದ ಹಣ ಪಡೆದು ಮಾಸ್ ಕಾಪಿ!
ಕೆಎಸ್ಒಯು ಪರೀಕ್ಷೆಯಲ್ಲಿ ವಿದ್ಯಾರ್ಥಿಗಳಿಂದ ಹಣ ಪಡೆದು ಮಾಸ್ ಕಾಪಿ!
ಕರ್ನಾಟಕ ಸ್ಟಿಂಗ್ ಸಮರ ಹೈಕಮಾಂಡ್ ಅಂಗಳಕ್ಕೆ
ಕರ್ನಾಟಕ ಸ್ಟಿಂಗ್ ಸಮರ ಹೈಕಮಾಂಡ್ ಅಂಗಳಕ್ಕೆ
ಗಾಳಿಯಲ್ಲಿ ಗುಂಡು ಹಾರಿಸಿದ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಜೀವನ್!
ಗಾಳಿಯಲ್ಲಿ ಗುಂಡು ಹಾರಿಸಿದ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಜೀವನ್!
ಅಂಗಡಿಗಳ ಮೇಲೆ ಪೊಲೀಸರ ಹಠಾತ್ ದಾಳಿ: 500ಕ್ಕೂ ಹೆಚ್ಚು ರೋಲ್‌ ಮಾಂಜಾ ದಾರ ವಶ
ಅಂಗಡಿಗಳ ಮೇಲೆ ಪೊಲೀಸರ ಹಠಾತ್ ದಾಳಿ: 500ಕ್ಕೂ ಹೆಚ್ಚು ರೋಲ್‌ ಮಾಂಜಾ ದಾರ ವಶ
4 ಎಮ್​ಎಲ್ಸಿ ಸ್ಥಾನಗಳಿಗೆ ಇಂದು ಮತದಾನ ಆರಂಭ
4 ಎಮ್​ಎಲ್ಸಿ ಸ್ಥಾನಗಳಿಗೆ ಇಂದು ಮತದಾನ ಆರಂಭ
ಅಬ್ಬಾ, ಗೊತ್ತೇ ಇಲ್ಲದೆ ತಲೆದಿಂಬಿನಡಿ ಸೇರಿತ್ತು ಭಾರಿ ಗಾತ್ರದ ನಾಗರ ಹಾವು!
ಅಬ್ಬಾ, ಗೊತ್ತೇ ಇಲ್ಲದೆ ತಲೆದಿಂಬಿನಡಿ ಸೇರಿತ್ತು ಭಾರಿ ಗಾತ್ರದ ನಾಗರ ಹಾವು!
ಮೋದಿ ಭೇಟಿ ಬಳಿಕ ಬೆಂಗಳೂರಿಗೆ ಆಗಮಿಸಿದ ಪೋಲೆಂಡ್ ಪ್ರಧಾನಿ ಡೊನಾಲ್ಡ್ ಟಸ್ಕ್
ಮೋದಿ ಭೇಟಿ ಬಳಿಕ ಬೆಂಗಳೂರಿಗೆ ಆಗಮಿಸಿದ ಪೋಲೆಂಡ್ ಪ್ರಧಾನಿ ಡೊನಾಲ್ಡ್ ಟಸ್ಕ್
ಇಂದು ಈ ರಾಶಿಯವರು ವಿರೋಧಿಗಳೊಂದಿಗೆ ವಿವಾದಕ್ಕಿಳಿಯಬೇಡಿ
ಇಂದು ಈ ರಾಶಿಯವರು ವಿರೋಧಿಗಳೊಂದಿಗೆ ವಿವಾದಕ್ಕಿಳಿಯಬೇಡಿ
ಸರಸ್ವತಿ ದೇವಾಲಯದಲ್ಲಿ ಮಕ್ಕಳ ಕೈಹಿಡಿದು ವಿದ್ಯಾರಂಭ ಮಾಡಿಸಿದ ಶಶಿ ತರೂರ್
ಸರಸ್ವತಿ ದೇವಾಲಯದಲ್ಲಿ ಮಕ್ಕಳ ಕೈಹಿಡಿದು ವಿದ್ಯಾರಂಭ ಮಾಡಿಸಿದ ಶಶಿ ತರೂರ್