‘ನಾನು ಆರೋಗ್ಯವಾಗಿದ್ದೀನಿ, ಅಭಿಮಾನ ಆವೇಶವಾಗಬಾರದು; ಆವೇಶ ಅವಘಡಗಳಿಗೆ ಕಾರಣವಾಗಬಾರದು’: ಹಂಸಲೇಖ

| Updated By: ರಾಜೇಶ್ ದುಗ್ಗುಮನೆ

Updated on: Nov 23, 2021 | 10:25 PM

ನಮಸ್ಕಾರ, ನಾನು ಆರೋಗ್ಯವಾಗಿದ್ದೀನಿ. ನನಗೆ ಆರೋಗ್ಯ ತಪ್ಪಿದೇ ಅಂತ ಇಡೀ ಕರ್ನಾಟಕದಿಂದ ಕರೆಗಳು ಬಂದಿದೆ. ಎಲ್ಲರೂ ನನ್ನ ಆರೋಗ್ಯ ವಿಚಾರಿಸುತ್ತಿದ್ದಾರೆ ಎಂದು ಪತ್ರ ಆರಂಭಿಸಿದ್ದಾರೆ ಹಂಸಲೇಖ.

‘ನಾನು ಆರೋಗ್ಯವಾಗಿದ್ದೀನಿ, ಅಭಿಮಾನ ಆವೇಶವಾಗಬಾರದು; ಆವೇಶ ಅವಘಡಗಳಿಗೆ ಕಾರಣವಾಗಬಾರದು’: ಹಂಸಲೇಖ
ಹಂಸಲೇಖ
Follow us on

ದಲಿತರ ಮನೆಯಲ್ಲಿ ಸವರ್ಣೀಯರ ವಾಸ್ತವ್ಯದ ಕುರಿತಂತೆ ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಹುಟ್ಟು ಹಾಕಿದ್ದ ವಿವಾದ ಇನ್ನೂ ತಣ್ಣಗಾಗಿಲ್ಲ. ಅನೇಕರು ಈ ಬಗ್ಗೆ ಇನ್ನೂ ವಿರೋಧ ವ್ಯಕ್ತಪಡಿಸುತ್ತಲೇ ಇದ್ದಾರೆ. ಅವರು ಈಗಾಗಲೇ ಕ್ಷಮೆ ಕೇಳಿದ್ದರೂ ಅನೇಕರಿಗೆ ಈ ವಿಚಾರದಲ್ಲಿ ಬೇಸರ ಹಾಗೆಯೇ ಇದೆ. ಈ ಮಧ್ಯೆ ಹಂಸಲೇಖ ಅವರ ಆರೋಗ್ಯ ತಪ್ಪಿದೆ ಎನ್ನುವ ಬಗ್ಗೆ ಸುದ್ದಿಗಳು ಹಬ್ಬುತ್ತಿವೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಹಂಸಲೇಖ ಅವರು ಪ್ರತಿಕ್ರಿಯೆ ನೀಡಿದ್ದು, ಆರೋಗ್ಯವಾಗಿದ್ದೇನೆ ಎನ್ನುವ ಸಂದೇಶ ರವಾನೆ ಮಾಡಿದ್ದಾರೆ. ಈ ವಿಚಾರ ಕೇಳಿ ಅವರ ಅಭಿಮಾನಿಗಳು ನಿಟ್ಟುಸಿರು ಬಿಟ್ಟಿದ್ದಾರೆ. ಈ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ಪೋಸ್ಟ್​ ಮಾಡುವ ಮೂಲಕ ಈ ವಿಚಾರ ತಿಳಿಸಿದ್ದಾರೆ.

‘ನಮಸ್ಕಾರ, ನಾನು ಆರೋಗ್ಯವಾಗಿದ್ದೀನಿ. ನನಗೆ ಆರೋಗ್ಯ ತಪ್ಪಿದೆ ಅಂತ ಇಡೀ ಕರ್ನಾಟಕದಿಂದ ಕರೆಗಳು ಬಂದಿದೆ. ಎಲ್ಲರೂ ನನ್ನ ಆರೋಗ್ಯ ವಿಚಾರಿಸುತ್ತಿದ್ದಾರೆ. ನನಗೆ ಗೊತ್ತಾಗಿದೆ ನಿಮ್ಮ ಪ್ರೀತಿ ಎಷ್ಟು ವಿಶಾಲವಾಗಿದೆ ಎಂದು. ಈ ಪ್ರೀತಿ ಪಡೆಯೋಕೆ ನಾನು ತುಂಬಾನೆ ಸವೆದಿದ್ದೀನಿ, ಸಹಿಸಿದ್ದೀನಿ. ಅದರ ಸುಖ ಇವತ್ತು ಅನುಭವಿಸುತ್ತಿದ್ದೀನಿ. ನಾನು ಕೇಳದೆ ನನ್ನ ಮನೆಗೆ ಸರ್ಕಾರ ಭದ್ರತೆ ಕೊಟ್ಟಿದೆ’ ಎಂದಿದ್ದಾರೆ ಹಂಸಲೇಖ.

‘ನಾನು ಕೇಳದೆ ಇಡೀ ಕರ್ನಾಟಕದಲ್ಲಿ ಲಕ್ಷಾಂತರ ಜನ ಅಭಿಮಾನಿಗಳು ನನ್ನ ಪರ ಮಾತನಾಡುತ್ತಿದ್ದಾರೆ. ನನ್ನ ಉದ್ಯಮದ ಆತ್ಮೀಯರು ನನಗೆ ಧೈರ್ಯ ತೋರಿದ್ದಾರೆ. ಈಗ ಇಡೀ ಕರ್ನಾಟಕವೇ ನನ್ನನ್ನು ಪ್ರೀತಿಯಲ್ಲಿ ಮುಳುಗಿಸಿ ಅಭಿಮಾನದಲ್ಲಿ ತೇಲಿಸುತ್ತಿದ್ದಾರೆ. ಅಭಿಮಾನ ಆವೇಶವಾಗಬಾರದು. ಆವೇಶ ಅವಘಡಗಳಿಗೆ ಕಾರಣವಾಗಬಾರದು. ಅಭಿಮಾನ ಹಾಡಿನಂತೆ ಇರಬೇಕು, ಹಾಡು ಕೇಳಿಸುತ್ತದೆ. ಮುಟ್ಟಿಸುತ್ತದೆ. ನಿಮ್ಮ ಪ್ರೀತಿ ನನಗೆ ತಲುಪಿದೆ. ನಿಮ್ಮ ಪ್ರೀತಿಗೆ ನನ್ನ ಹೃದಯ ತುಂಬಿದ ನಮಸ್ಕಾರಗಳು. ನಿಮ್ಮ ಹಂಸಲೇಖ’ ಎಂದು ಅವರು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಹಂಸಲೇಖ ಹೇಳಿಕೆ ಬೆಂಬಲಿಸಿದ ಪ್ರಗತಿಪರ ಸಂಘಟನೆಗಳು; ಅವರಿಗೆ ಭದ್ರತೆ ನೀಡುವಂತೆ ಮನವಿ

ವಿವಾದಾತ್ಮಕ ಹೇಳಿಕೆ; ಹಂಸಲೇಖಗೆ ಎರಡನೇ ಬಾರಿ ನೋಟಿಸ್​ ನೀಡಿದ ಪೊಲೀಸರು

Published On - 10:22 pm, Tue, 23 November 21