‘ನಾನು ತೆಲುಗು ನಟರ ಹಿಂದೆ ಹೋಗಿಲ್ಲ, ಅವರೇ ನನ್ನ ಹುಡುಕಿ ಬಂದರು’; ಪ್ರಶಾಂತ್ ನೀಲ್

ಸದ್ಯ ಬಾಕ್​ ಟು ಬ್ಯಾಕ್​ ತೆಲುಗು ಸಿನಿಮಾಗಳಲ್ಲಿ ನಿರ್ದೇಶಕ ಪ್ರಶಾಂತ್ ನೀಲ್ ಬ್ಯುಸಿ ಆಗಿದ್ದಾರೆ. ಅವರು ತೆಲುಗಿಗೆ ಹಾರಿದ್ದಾದ್ರು ಯಾಕೆ ಎಂಬ ಪ್ರಶ್ನೆಗೆ ಉತ್ತರಿಸಿದ್ದಾರೆ.

‘ನಾನು ತೆಲುಗು ನಟರ ಹಿಂದೆ ಹೋಗಿಲ್ಲ, ಅವರೇ ನನ್ನ ಹುಡುಕಿ ಬಂದರು’; ಪ್ರಶಾಂತ್ ನೀಲ್
ಜೂನಿಯರ್ ಎನ್​ಟಿಆರ್​-ಪ್ರಶಾಂತ್ ನೀಲ್
Follow us
| Updated By: ಗಂಗಾಧರ​ ಬ. ಸಾಬೋಜಿ

Updated on:Nov 17, 2022 | 10:32 PM

ಭಾರತೀಯರು ಕನ್ನಡ ಚಿತ್ರರಂಗದತ್ತ ತಿರುಗಿ ನೋಡುವಂತೆ ಮಾಡಿದ ಚಿತ್ರ ಎಂದರೆ ಅದು ‘ಕೆಜಿಎಫ್’ (KGF) ಹಾಗೂ ‘ಕೆಜಿಎಫ್ 2’ ಚಿತ್ರ​​. ಅದಕ್ಕೆ ಮುಖ್ಯ ಕಾರಣ ನಿರ್ದೇಶಕ ಪ್ರಶಾಂತ್ ನೀಲ್. ‘ಕೆಜಿಎಫ್ ‘ ಸರಣಿಯ ಚಿತ್ರಗಳ ಮೂಲಕ ಭಾರತೀಯ ಚಿತ್ರರಂಗದಲ್ಲಿ  ಪ್ರಶಾಂತ್ ನೀಲ್ (Prashanth Neel) ಮನೆಮಾತಾದರು. ಹಲವು ನಟ, ನಟಿಯರು ಅವರೊಂದಿಗೆ ಕೆಲಸ ಮಾಡಬೇಕು ಎಂದು ಕಾಯುತ್ತಿದ್ದಾರೆ. ಸದ್ಯ ಪ್ರಶಾಂತ್ ನೀಲ್ ನಟ ಪ್ರಭಾಸ ಮುಖ್ಯ ಪಾತ್ರದಲ್ಲಿ ಅಭಿನಯಿಸುತ್ತಿರುವ ಗ್ಯಾಂಗ್​ಸ್ಟಾರ್ ಹಿನ್ನೆಲೆಯುಳ್ಳ ‘ಸಲಾರ್’ ಚಿತ್ರದ ಕೆಲಸದಲ್ಲಿ ಬ್ಯುಸಿ ಆಗಿದ್ದಾರೆ. ಈ ಚಿತ್ರದಲ್ಲಿ ನಟಿ ಶೃತಿ ಹಾಸನ್ ಕೂಡ ನಟಿಸುತ್ತಿದ್ದಾರೆ.

ಎಲ್ಲವೂ ಅಂದುಕೊಂಡಂತೆ ನಡೆದರೆ ‘ಸಲಾರ್’​ ಚಿತ್ರದ ಬಳಿಕ ಜೂನಿಯರ್​ ಎನ್​ಟಿಆರ್​ಗೆ ಪ್ರಶಾಂತ್ ನೀಲ್ ಆ್ಯಕ್ಷನ್​ ಚಿತ್ರ ಮಾಡಲಿದ್ದಾರೆ. ಸದ್ಯ ಆ ಚಿತ್ರಕ್ಕೆ ಇನ್ನು ಹೆಸರಿಟ್ಟಿಲ್ಲ. 2023ರ ಮಧ್ಯದಲ್ಲಿ ಈ ಚಿತ್ರದ ಕೆಲಸ ಆರಂಭಗೊಳ್ಳುವ ಸಾಧ್ಯತೆ ಇದೆ. ಇದಾದ ನಂತರ ನಟ ರಾಮ್​​ ಚರಣ್ ಅವರೊಂದಿಗೂ ಒಂದು ಸಿನಿಮಾ ಮಾಡುವ ಯೋಜನೆ ಕೂಡ ಅವರಿಗೆ ಇದೆ. ಹೀಗೆ ಪ್ರಶಾಂತ್​ ನೀಲ್ ತೆಲುಗಿನ ದೊಡ್ಡ ದೊಡ್ಡ ನಟರೊಂದಿಗೆ ಸಿನಿಮಾ ಮಾಡುವುದರಲ್ಲಿ ಬ್ಯುಸಿ ಆಗಿದ್ದಾರೆ. ಇತ್ತ ಕೆಲ ಕರ್ನಾಟಕದ ಫ್ಯಾನ್ಸ್​ ಮಾತ್ರ ಅವರ ವಿರುದ್ಧ ಕಿಡಿಕಾರುತ್ತಿದ್ದಾರೆ. ಕನ್ನಡದಲ್ಲಿ ಸಿನಿಮಾ ಮಾಡಿ ಗೆದ್ದು, ಸ್ಟಾರ್ ನಿರ್ದೇಶಕರಾದ ಮೇಲೆ ತೆಲುಗಿಗೆ ಹಾರಿದರು ಎಂದೆಲ್ಲಾ ಟ್ರೋಲ್​ ಮಾಡಿದ್ದರು.

ಸದ್ಯ ಅದಕ್ಕೆಲ್ಲ ಪ್ರಶಾಂತ್​ ನೀಲ್​ ಉತ್ತರಿಸಿದ್ದು, ಅವರು ಏಕೆ ತೆಲುಗಿಗೆ ಹೋದೆ ಎಂಬ ಸತ್ಯವನ್ನು ಬಿಚ್ಚಿಟ್ಟಿದ್ದಾರೆ. ಇತ್ತೀಚೆಗೆ ಸಂದರ್ಶನವೊಂದರಲ್ಲಿ ಈ ಬಗ್ಗೆ ಮಾತನಾಡಿದ್ದರು. ಆಗ ಅವರಿಗೆ ಇದೇ ಪ್ರಶ್ನೆ ಕೇಳಲಾಗಿತ್ತು. ಇದಕ್ಕೆ ಉತ್ತರ ನೀಡಿದ ಪ್ರಶಾಂತ್​ ನೀಲ್,  ‘ನಾನು ಯಾವ ತೆಲುಗು ನಟರನ್ನು ಸಂಪರ್ಕ ಮಾಡಿಲ್ಲ. ಕೆಲ ನಿರ್ಮಾಪಕರು ನನಗೆ ಕಾಲ್ ಮಾಡಿ ತೆಲಗು ನಟರೊಂದಿಗೆ ಪ್ಯಾನ್​ ಇಂಡಿಯಾ ಚಿತ್ರ ಮಾಡೋಣ ಬನ್ನಿ ಎಂದು ಅವಕಾಶ ನೀಡಿದ್ದಾರೆ. ಈ ಚಿತ್ರಗಳು ಮುಗಿದ ನಂತರ ನಾನು ಮತ್ತೆ ಕನ್ನಡದಲ್ಲಿ ಚಿತ್ರಗಳನ್ನು ಮಾಡುತ್ತೇನೆ’ ಎಂದು ಸ್ಪಷ್ಟನೆ ನೀಡಿದ್ದಾರೆ.

ಮತ್ತಷ್ಟು ಮನರಂಜನೆ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:29 pm, Thu, 17 November 22

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!