‘ಆ ರೀತಿಯ ಸಿನಿಮಾಗಳಿಗೆ ದಕ್ಷಿಣದಲ್ಲಿ ಬೇಡಿಕೆಯೇ ಇಲ್ಲ’; ಖುಷ್ಬೂ ಸುಂದರ್

‘ಅರನ್​ಮನೈ 4’ ಸಿನಿಮಾವನ್ನು ಖುಷ್ಬೂ ಅವರ ಪತಿ ಸುಂದರ್ ಸಿ. ಅವರು ನಿರ್ದೇಶನ ಮಾಡಿದ್ದಾರೆ. ಅವರು ಕೂಡ ಪತ್ನಿ ಜೊತೆ ಸೇರಿ ಸಿನಿಮಾ ನಿರ್ಮಾಣ ಮಾಡುತ್ತಾರೆ. ‘ಅರನ್​ಮನೈ’ ಸಿನಿಮಾದ ಉಳಿದ ಪಾರ್ಟ್​ಗಳನ್ನು ಅವರೇ ನಿರ್ದೇಶನ ಮಾಡಿದ್ದಾರೆ.

‘ಆ ರೀತಿಯ ಸಿನಿಮಾಗಳಿಗೆ ದಕ್ಷಿಣದಲ್ಲಿ ಬೇಡಿಕೆಯೇ ಇಲ್ಲ’; ಖುಷ್ಬೂ ಸುಂದರ್
ಖುಷ್ಬೂ
Follow us
|

Updated on: Jun 01, 2024 | 7:06 AM

ನಟಿ ಖುಷ್ಬೂ ಸುಂದರ್ (Khushbu Sundar) ಅವರು ಕನ್ನಡ, ತಮಿಳು, ತೆಲುಗು ಸಿನಿಮಾಗಳಲ್ಲಿ ನಟಿಸಿದ್ದಾರೆ. ಒಂದು ಕಾಲದಲ್ಲಿ ಬೇಡಿಕೆಯ ನಟಿ ಆಗಿದ್ದರು. ಅವರು ಈಗ ರಾಜಕೀಯದಲ್ಲಿ ಬ್ಯುಸಿ ಇದ್ದಾರೆ. ಅಪರೂಪಕ್ಕೊಂದು ಸಿನಿಮಾ ಮಾಡುತ್ತಾರೆ. ಆದರೆ, ಅವರು ಚಿತ್ರರಂಗದ ಜೊತೆ ನಂಟು ಕಳೆದುಕೊಂಡಿಲ್ಲ. ಅವರು ಸಿನಿಮಾ ನಿರ್ಮಾಣಕ್ಕೆ ಹೆಚ್ಚು ಆದ್ಯತೆ ನೀಡುತ್ತಾರೆ. ಅವರ ನಿರ್ಮಾಣದ ‘ಅರನ್​ಮನೈ 4’ ಚಿತ್ರ 100 ಕೋಟಿ ರೂಪಾಯಿ ಗಳಿಸಿದೆ. ಅವರಿಗೆ ‘ಡಾರ್ಲಿಂಗ್ಸ್’, ‘ಬಧಾಯಿ ಹೋ’, ‘ಕ್ರ್ಯೂ’ ರೀತಿಯ ಸಿನಿಮಾಗಳನ್ನು ನಿರ್ಮಾಣ ಮಾಡುವ ಆಸೆ ಇದೆ.

‘ನಾನು ಮಹಿಳಾ ಪ್ರಧಾನ ಸಿನಿಮಾಗಳನ್ನು ಮಾತ್ರ ಮಾಡುತ್ತೇನೆ ಎನ್ನುವ ನಿರ್ಮಾಪಕಿ ನಾನಲ್ಲ. ಡಾರ್ಲಿಂಗ್ಸ್, ಕ್ರ್ಯೂ ರೀತಿಯ ಸಿನಿಮಾಗಳನ್ನು ಮಾಡಲು ನನಗೆ ಆಸೆ ಇದೆ. ಆದರೆ, ದಕ್ಷಿಣದಲ್ಲಿ ಈ ರೀತಿಯ ಮಲ್ಟಿಪ್ಲೆಕ್ಸ್ ಆಡಿಯನ್ಸ್​ಗಳು ಹುಟ್ಟಿಕೊಂಡಿಲ್ಲ. ಅದಕ್ಕೆ ಸಮಯ ಬೇಕು. ಬಧಾಯಿ ಹೋ ತಮಿಳಿಗೆ ರಿಮೇಕ್ ಮಾಡಲಾಯಿತು. ಆದರೆ, ಅದು ಗೆದ್ದಿಲ್ಲ’ ಎಂದಿದ್ದಾರೆ ಅವರು.  ಈ ಮೂಲಕ ಈ ರೀತಿಯ ಸಿನಿಮಾಗಳಿಗೆ ಬೇಡಿಕೆ ಇಲ್ಲ ಎಂದಿದ್ದಾರೆ.

‘ಅರನ್​ಮನೈ 4’ ಸಿನಿಮಾವನ್ನು ಖುಷ್ಬೂ ಅವರ ಪತಿ ಸುಂದರ್ ಸಿ. ಅವರು ನಿರ್ದೇಶನ ಮಾಡಿದ್ದಾರೆ. ಅವರು ಕೂಡ ಪತ್ನಿ ಜೊತೆ ಸೇರಿ ಸಿನಿಮಾ ನಿರ್ಮಾಣ ಮಾಡುತ್ತಾರೆ. ‘ಅರನ್​ಮನೈ’ ಸಿನಿಮಾದ ಉಳಿದ ಪಾರ್ಟ್​ಗಳನ್ನು ಅವರೇ ನಿರ್ದೇಶನ ಮಾಡಿದ್ದಾರೆ. ಹಾರರ್​, ಕಾಮಿಡಿ ಶೈಲಿಯಲ್ಲಿ ಈ ಸಿನಿಮಾ ಮೂಡಿ ಬಂದಿದೆ.

ಖುಷ್ಬೂ ಸುಂದರ್ ಅವರು ಬಾಲ ಕಲಾವಿದೆಯಾಗಿ ಚಿತ್ರರಂಗಕ್ಕೆ ಕಾಲಿಟ್ಟರು. ‘ದಿ ಬರ್ನಿಂಗ್ ಟ್ರೇನ್’ ಚಿತ್ರದಲ್ಲಿ ಅವರು ನಟಿಸಿದರು. ಇದು ಹಿಂದಿ ಸಿನಿಮಾ. ಆ ಬಳಿಕ ಅವರು ನಟಿಯಾಗಿ ಚಿತ್ರರಂಗಕ್ಕೆ ಕಾಲಿಟ್ಟರು. ಅವರಿಗೆ ಕನ್ನಡದಲ್ಲೂ ದೊಡ್ಡ ಹೆಸರಿದೆ.

ಇದನ್ನೂ ಓದಿ: ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಕೇಸ್: ಪೊಲೀಸರು ಕಾನೂನಿನಂತೆ ನಡೆದುಕೊಂಡಿದ್ದಾರೆ ಎಂದ ಖುಷ್ಬೂ ಸುಂದರ್

‘ಸಿನಿಮಾಗಳನ್ನು ಮಾಡುವ ವಿಧಾನದಲ್ಲಿ ಸಾಕಷ್ಟು ಬದಲಾವಣೆ ಆಗಿದೆ. ಹೀರೋಗಳಿಂದ ಬಿಸ್ನೆಸ್ ಆಗುತ್ತದೆ ಎನ್ನುವ ಮನಸ್ಥಿತಿ ಇನ್ನೂ ಇದೆ. ಇದರ ಜೊತೆಗೆ ನಟಿಯರು ಕೂಡ ಪ್ರಮುಖ ಪಾತ್ರ ವಹಿಸಿ ಮಿರಾಕಲ್​​ಗಳನ್ನು ಮಾಡಬಹುದು’ ಎಂದಿದ್ದಾರೆ ಅವರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ನೇರ ಪ್ರಸಾರದಲ್ಲಿ ಅಳುತ್ತಾ ಸುದ್ದಿ ಓದಿದ​​ ಆ್ಯಂಕರ್​; ಕಾರಣ ಏನು ಗೊತ್ತಾ?
ನೇರ ಪ್ರಸಾರದಲ್ಲಿ ಅಳುತ್ತಾ ಸುದ್ದಿ ಓದಿದ​​ ಆ್ಯಂಕರ್​; ಕಾರಣ ಏನು ಗೊತ್ತಾ?
ಮಂಗಳೂರಿನ ಕಾಲೇಜಿನಲ್ಲಿ ಓಣಂ ಸಂಭ್ರಮ; ಕುಣಿದು ಕುಪ್ಪಳಿಸಿದ ವಿದ್ಯಾರ್ಥಿಗಳು
ಮಂಗಳೂರಿನ ಕಾಲೇಜಿನಲ್ಲಿ ಓಣಂ ಸಂಭ್ರಮ; ಕುಣಿದು ಕುಪ್ಪಳಿಸಿದ ವಿದ್ಯಾರ್ಥಿಗಳು
ಇಲ್ಲಿ ಪರ್ಸಂಟೇಜ್ ಲೆಕ್ಕ ಹಾಕ್ಬಾರ್ದು; ಶಿವಣ್ಣ ಹೀಗೆ ಹೇಳಿದ್ದೇಕೆ?
ಇಲ್ಲಿ ಪರ್ಸಂಟೇಜ್ ಲೆಕ್ಕ ಹಾಕ್ಬಾರ್ದು; ಶಿವಣ್ಣ ಹೀಗೆ ಹೇಳಿದ್ದೇಕೆ?
ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ
ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ
Nithya Bhavishya: ಈ ರಾಶಿಯವರು ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ