ಬ್ರಾಹ್ಮಣ್ಯದ ಬಗ್ಗೆ ನನ್ನ ಹೇಳಿಕೆಯಿಂದ ಹಿಂದೆ ಸರಿಯುವ ಮಾತೇ ಇಲ್ಲ; ವಿಚಾರಣೆ ಬಳಿಕ ನಟ ಚೇತನ್ ಪ್ರತಿಕ್ರಿಯೆ

ಈ ಹೋರಾಟ ಮುಂದುವರೆಸುತ್ತೆವೆ. ವಿಚಾರಣೆ ವೇಳೆ ಪ್ರತಿಯೊಂದು ಪ್ರಶ್ನೆಗೆ ಉತ್ತರ ಕೊಟ್ಟಿದ್ದೇನೆ. ನ್ಯಾಯಾಂಗ ವ್ಯವಸ್ಥೆಯಲ್ಲಿ ನಂಬಿಕೆ ಇದೆ. ನಮಗೆ ನ್ಯಾಯ ಸಿಗುತ್ತದೆ ಎನ್ನುವ ಭಾವನೆ ಇದೆ ಎಂದಿದ್ದಾರೆ ಚೇತನ್​

ಬ್ರಾಹ್ಮಣ್ಯದ ಬಗ್ಗೆ ನನ್ನ ಹೇಳಿಕೆಯಿಂದ ಹಿಂದೆ ಸರಿಯುವ ಮಾತೇ ಇಲ್ಲ; ವಿಚಾರಣೆ ಬಳಿಕ ನಟ ಚೇತನ್ ಪ್ರತಿಕ್ರಿಯೆ
ನಟ ಚೇತನ್​
Follow us
ರಾಜೇಶ್ ದುಗ್ಗುಮನೆ
|

Updated on:Jun 16, 2021 | 4:55 PM

 ಬ್ರಾಹ್ಮಣ್ಯ ಅನ್ನೊ ಭೇದ-ಭಾವದ ವಿರುದ್ಧ ನನ್ನ ಹೊರಟವೇ ಹೊರತು, ಯಾವ ಜಾತಿ ಅಥವಾ ಜನಾಂಗದ ವಿರುದ್ಧವಲ್ಲ. ನೋಟಿಸ್ ಹಿನ್ನೆಲೆ‌ಯಲ್ಲಿ ಇಂದು ಬಸವನಗುಡಿ ಠಾಣೆಗೆ ಬಂದಿದ್ದೆ. ಕಾನೂನಿನ ಬಗ್ಗೆ ಗೌರವ ಇದೆ ಎಂದು ನಟ ಚೇತನ್​ ಹೇಳಿದ್ದಾರೆ.

ಬ್ರಾಹ್ಮಣ ಸಮುದಾಯಕ್ಕೆ ನೋವುಂಟು ಮಾಡುವ ಹೇಳಿಕೆ ನೀಡಿದ ನಟ ಚೇತನ್​ ಅವರಿಗೆ ನೋಟಿಸ್​ ನೀಡಲಾಗಿತ್ತು. ಹೀಗಾಗಿ, ಇಂದು ಬೆಂಗಳೂರಿನ ಬಸವನಗುಡಿ ಪೊಲೀಸ್​ ಠಾಣೆಗೆ ವಿಚಾರಣೆಗೆ ಹಾಜರಾದರು. ನಂತರ ಮಾಧ್ಯಮಗಳ ಜತೆ ಮಾತನಾಡಿದ ಚೇತನ್​, ನ್ಯಾಯ ಸಿಗತ್ತೆ ಅನ್ನೊ ನಂಬಿಕೆ ಇದೆ. ನಾವು ಅಹಿಂಸಾತ್ಮಕವಾಗಿ ಹೋರಾಟ ಮುಂದುವರೆಸುತ್ತೇವೆ. ಮನುಷ್ಯತ್ವಕ್ಕೆ ವಿರುದ್ಧವಾದವರು ನನ್ನ ಮೇಲೆ ದೂರು ಹಾಕಿದ್ದಾರೆ. ಆದರೆ ನಾನು, ನನ್ನ ಹೇಳಿಕೆಯಿಂದ ಹಿಂದೆ ಸರಿಯಲ್ಲ’ ಎಂದಿದ್ದಾರೆ.

ದೂರು ನೀಡಿದವರ ಹುನ್ನಾರ ಏನು ಎನ್ನುವುದನ್ನು ಕೇಳಿಪಟ್ಟಿದ್ದೇವೆ. ನನ್ನ ಹೋರಾಟ ಯಾವ ಜಾತಿ ಅಥವ ಜನಾಂಗದ ವಿರುದ್ಧವಾಗಿಲ್ಲ. ನನ್ನ ಹೋರಾಟ ಇರುವುದು ಬ್ರಾಹ್ಮಣ್ಯ ಅನ್ನೋ ಭೇದ-ಭಾವದ ವಿರುದ್ಧ. ಜೀವಂತವಾಗಿರುವ ಅಸಮಾನತೆ ವಿರುದ್ಧ ನಮ್ಮ ಹೊರಾಟ’ ಎಂದು ಚೇತನ್​ ಹೇಳಿದರು.

ಮುಂದುವರಿದು ಮಾತನಾಡಿರುವ ಚೇತನ್, ‘ಈ ಹೋರಾಟ ಮುಂದುವರೆಸುತ್ತೆವೆ. ವಿಚಾರಣೆ ವೇಳೆ ಪ್ರತಿಯೊಂದು ಪ್ರಶ್ನೆಗೆ ಉತ್ತರ ಕೊಟ್ಟಿದ್ದೇನೆ. ನ್ಯಾಯಾಂಗ ವ್ಯವಸ್ಥೆಯಲ್ಲಿ ನಂಬಿಕೆ ಇದೆ. ನಮಗೆ ನ್ಯಾಯ ಸಿಗುತ್ತದೆ ಎನ್ನುವ ಭಾವನೆ ಇದೆ’ ಎಂದಿದ್ದಾರೆ .

‘ಬ್ರಾಹ್ಮಣ್ಯವು ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವದ ಮನೋಭಾವವನ್ನು ನಿರಾಕರಿಸುತ್ತದೆ. ನಾವು ಬ್ರಾಹ್ಮಣ್ಯವನ್ನು ಬೇರುಸಹಿತ ಕಿತ್ತುಹಾಕಬೇಕು’ ಎಂದು ಅಂಬೇಡ್ಕರ್​ ಹೇಳಿದ್ದಾರೆ. ‘ಎಲ್ಲರೂ ಸರಿಸಮಾನರಾಗಿ ಜನಿಸಿದರೆ, ಬ್ರಾಹ್ಮಣರು ಮಾತ್ರ ಅತ್ಯುನ್ನತರು ಮತ್ತು ಉಳಿದವರೆಲ್ಲರೂ ಕೆಳಹಂತದವರು ಮತ್ತು ಅಸ್ಪೃಶ್ಯರು ಎಂದು ಹೇಳುವುದು ಸಂಪೂರ್ಣ ಅಸಂಬದ್ಧ. ಇದೊಂದು ದೊಡ್ಡ ವಂಚನೆ ಎಂಬುದಾಗಿ ಪೆರಿಯಾರ್ ಹೇಳಿದ್ದಾರೆ ಎಂದು ಚೇತನ್​ ಟ್ವೀಟ್ ಮಾಡಿದ್ದರು. ಈ ಟ್ವೀಟ್​ ಸಾಕಷ್ಟು ವಿವಾದಕ್ಕೆ ಕಾರಣವಾಗಿತ್ತು.

ಚೇತನ್​ ನೀಡಿದ ಹೇಳಿಕೆಗೆ ಸಂಬಂಧಿಸಿ ವಿಪ್ರ ಯುವ ವೇದಿಕೆಯ ಪವನ್ ಕುಮಾರ್ ಶರ್ಮಾ ಬಸವನಗುಡಿ ಪೊಲೀಸ್​ ಠಾಣೆಯಲ್ಲಿ ದೂರು ನೀಡಿದ್ದರು. ಈ ದೂರು ಆಧರಿಸಿ ಪೊಲೀಸರು ಚೇತನ್​ ವಿರುದ್ಧ ಪ್ರಕರಣ ದಾಖಲು ಮಾಡಿಕೊಂಡು, ನೋಟಿಸ್​ ನೀಡಿದ್ದರು.

ಇದನ್ನೂ ಓದಿ:  Rakshith Shetty on Chethan : ಆ ದಿನಗಳು ನಟ ಚೇತನ್ ವಿರುದ್ಧ ನಟ ರಕ್ಷಿತ್ ಶೆಟ್ಟಿ ಆಕ್ರೋಶ

Published On - 4:54 pm, Wed, 16 June 21

ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು