AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ವಾರ ಸ್ಟಾರ್ ಹೀರೋಗಳ ಜೊತೆ ಹೊಸಬರ ಸಿನಿಮಾ ದರ್ಬಾರ್

ರಕ್ಷಿತ್ ಶೆಟ್ಟಿ ನಿರ್ಮಾಣದ ‘ಇಬ್ಬನಿ ತಬ್ಬಿದ ಇಳೆಯಲಿ’ ಸಿನಿಮಾ ಇಂದು (ಸೆಪ್ಟೆಂಬರ್ 5) ರಿಲೀಸ್ ಆಗಿದೆ. ವಿಹಾನ್ ಗೌಡ, ಅಂಕಿತಾ ಅಮರ್, ಗಿರಿಜಾ ಶೆಟ್ಟರ್, ಶಂಕರ್ ಮೂರ್ತಿ ಎಸ್​ಆರ್​ ಮೊದಲಾದವರು ಸಿನಿಮಾದಲ್ಲಿ ನಟಿಸಿದ್ದಾರೆ. ಚಂದ್ರಜಿತ್ ಬೆಳ್ಳಿಯಪ್ಪ ಅವರು ಈ ಸಿನಿಮಾನ ನಿರ್ದೇಶನ ಮಾಡಿದ್ದಾರೆ.

ಈ ವಾರ ಸ್ಟಾರ್ ಹೀರೋಗಳ ಜೊತೆ ಹೊಸಬರ ಸಿನಿಮಾ ದರ್ಬಾರ್
ಇಬ್ಬನಿ ತಬ್ಬಿದ ಇಳೆಯಲಿ-ಗೋಟ್
ರಾಜೇಶ್ ದುಗ್ಗುಮನೆ
|

Updated on: Sep 05, 2024 | 11:47 AM

Share

ಸದ್ಯ ಎಲ್ಲ ಕಡೆಗಳಲ್ಲಿ ಸಿನಿಮಾ ಸುಗ್ಗಿ ನಡೆಯುತ್ತಿದೆ. ಒಂದಾದ ಬಳಿಕ ಒಂದರಂತೆ ಸ್ಟಾರ್ ಹೀರೋಗಳ ಸಿನಿಮಾಗಳು ಹಾಗೂ ಹೊಸಬರ ಸಿನಿಮಾಗಳು ಬಿಡುಗಡೆ ಕಾಣುತ್ತಿವೆ. ಕಳೆದ ವಾರ ರಿಷಬ್ ಶೆಟ್ಟಿ ನಿರ್ಮಾಣದ ‘ಲಾಫಿಂಗ್ ಬುದ್ಧ’ ಸಿನಿಮಾ ರಿಲೀಸ್ ಆಯಿತು. ಈ ವಾರ ರಕ್ಷಿತ್ ಶೆಟ್ಟಿ ನಿರ್ಮಾಣದ ಸಿನಿಮಾ ಬಿಡುಗಡೆ ಆಗಿದೆ. ಪರಭಾಷೆಗಳನ್ನೂ ದೊಡ್ಡ ದೊಡ್ಡ ಸಿನಿಮಾಗಳು ಬಿಡುಗಡೆ ಕಾಣುತ್ತಿವೆ. ದಳಪತಿ ವಿಜಯ್ ನಟನೆಯ ‘GOAT’ ಬಿಡುಗಡೆ ಕಂಡಿದೆ.

‘ಇಬ್ಬನಿ ತಬ್ಬಿದ ಇಳೆಯಲಿ’

ರಕ್ಷಿತ್ ಶೆಟ್ಟಿ ನಿರ್ಮಾಣದ ‘ಇಬ್ಬನಿ ತಬ್ಬಿದ ಇಳೆಯಲಿ’ ಸಿನಿಮಾ ಇಂದು (ಸೆಪ್ಟೆಂಬರ್ 5) ರಿಲೀಸ್ ಆಗಿದೆ. ವಿಹಾನ್ ಗೌಡ, ಅಂಕಿತಾ ಅಮರ್, ಗಿರಿಜಾ ಶೆಟ್ಟರ್, ಶಂಕರ್ ಮೂರ್ತಿ ಎಸ್​ಆರ್​ ಮೊದಲಾದವರು ಸಿನಿಮಾದಲ್ಲಿ ನಟಿಸಿದ್ದಾರೆ. ಚಂದ್ರಜಿತ್ ಬೆಳ್ಳಿಯಪ್ಪ ಅವರು ಈ ಸಿನಿಮಾನ ನಿರ್ದೇಶನ ಮಾಡಿದ್ದಾರೆ. ರಕ್ಷಿತ್ ಶೆಟ್ಟಿ, ಜಿಎಸ್ ಗುಪ್ತಾ ಈ ಚಿತ್ರ ನಿರ್ಮಾಣ ಮಾಡಿದ್ದಾರೆ. ಹೊಸಬರ ತಂಡಕ್ಕೆ ರಕ್ಷಿತ್ ಬೆಂಬಲ ನೀಡಿದ್ದು ಶ್ಲಾಘನೀಯ.

ಮತ್ಯಾವ ಸಿನಿಮಾ

‘ಎ ಡೇ ಇನ್ ಡಾಲರ್ಸ್​ ಪೇಟೆ’ ಚಿತ್ರ ಸೆಪ್ಟೆಂಬರ್ 6ರಂದು ರಿಲೀಸ್ ಆಗುತ್ತಿದೆ. ಪೃಥ್ವಿ ಅಂಬರ್, ಸೌಮ್ಯಾ ಜಗನ್​ಮೂರ್ತಿ, ಕುಶಾಲ್ ಮೊದಲಾದವರು ನಟಿಸಿದ್ದಾರೆ. ಸೆಪ್ಟೆಂಬರ್ 6ರಂದು ‘ಅನ್ನ’ ಹೆಸರಿನ ಸಿನಿಮಾ ರಿಲೀಸ್ ಆಗುತ್ತಿದೆ. ಮಕ್ಕಳ ಸಿನಿಮಾ ಇದಾಗಿದೆ. ನಂದನ್ ಜಿಎಂ, ಸಂಪತ್ ಮೊದಲಾದವರು ಸಿನಿಮಾದಲ್ಲಿ ನಟಿಸಿದ್ದಾರೆ.

ಇದನ್ನೂ ಓದಿ: ರಿಷಬ್ ಶೆಟ್ಟಿ, ರಕ್ಷಿತ್ ಶೆಟ್ಟಿ ಸಿನಿಮಾಗಳಲ್ಲಿ ಆಸ್ಥಾನ ಕಲಾವಿದರು ಯಾರು? 

ತಮಿಳಿನಲ್ಲಿ

ತಮಿಳಿನ ‘ದಿ ಗ್ರೇಟೆಸ್ಟ್​ ಆಫ್ ಆಲ್ ಟೈಮ್’ ಸಿನಿಮಾ ಸೆಪ್ಟೆಂಬರ್ 5ರಂದು ಬಿಡುಗಡೆ ಕಂಡಿದೆ. ದಳಪತಿ ವಿಜಯ್ ನಟನೆಯ ಈ ಚಿತ್ರಕ್ಕೆ ವೆಂಕಟ್ ಪ್ರಭು ನಿರ್ದೇಶನ ಮಾಡಿದ್ದಾರೆ. ಈ ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ