AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಾಂತಾರ’ ನೋಡಿ ಹುಚ್ಚಾಟ, ದೈವದ ಅನುಕರಣೆ: ರಿಷಬ್​​ಗೆ ತುಳುಕೂಟ ಪತ್ರ

Letter to Rishab Shetty: ಕಾಂತಾರ: ಚಾಪ್ಟರ್ 1 ಸಿನಿಮಾ ನೋಡಿದ ಕೆಲವರು ಹುಚ್ಚರಂತೆ ಆಡಿದ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ವ್ಯಕ್ತಿಯೊಬ್ಬ ದೆವ್ವ ಮೈಮೇಲೆ ಬಂದಂತೆ ಆಡಿದ್ದ ವಿಡಿಯೋ ಸಹ ವೈರಲ್ ಆಗಿತ್ತು. ಇದೀಗ ತುಳುಕೂಟ, ಈ ಬಗ್ಗೆ ರಿಷಬ್ ಶೆಟ್ಟಿ ಅವರಿಗೆ ಖಾರವಾಗಿ ಪತ್ರವೊಂದನ್ನು ಬರೆದಿದೆ.

‘ಕಾಂತಾರ’ ನೋಡಿ ಹುಚ್ಚಾಟ, ದೈವದ ಅನುಕರಣೆ: ರಿಷಬ್​​ಗೆ ತುಳುಕೂಟ ಪತ್ರ
Tulukoota Rishab
ಮಂಜುನಾಥ ಸಿ.
|

Updated on:Oct 07, 2025 | 1:47 PM

Share

ಕಾಂತಾರ: ಚಾಪ್ಟರ್ 1’ (Kantara Chapter 1) ಸಿನಿಮಾ ಬಿಡುಗಡೆ ಆಗಿ ಕೆಲವು ದಿನಗಳಾಗಿದ್ದು ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ಯಶಸ್ವಿಯಾಗುತ್ತಿದೆ. ಸಿನಿಮಾ ನೋಡಿದ ಪ್ರೇಕ್ಷಕರು ಮೆಚ್ಚಿಕೊಳ್ಳುತ್ತಿದ್ದಾರೆ. ಈ ಹಿಂದೆ 2022 ರಲ್ಲಿ ‘ಕಾಂತಾರ’ ಸಿನಿಮಾ ಬಿಡುಗಡೆ ಆದಾಗ ಆರ್ಕೆಸ್ಟ್ರಾಗಳಲ್ಲಿ, ಖಾಸಗಿ ಕಾರ್ಯಕ್ರಮಗಳಲ್ಲಿ, ಟಿವಿ ಶೋಗಳಲ್ಲಿ ದೈವದ ಅನುಕರಣೆ ಮಾಡಲಾಗುತ್ತಿತ್ತು. ಇದೀಗ ‘ಕಾಂತಾರ: ಚಾಪ್ಟರ್ 1’ ಸಿನಿಮಾ ಬಿಡುಗಡೆ ಆದಾಗಲೂ ಮತ್ತೆ ದೈವದ ಅನುಕರಣೆ ಮಾಡುತ್ತಿರುವ ಘಟನೆಗಳು ವರದಿ ಆಗುತ್ತಿವೆ. ಇದನ್ನು ತುಳುಕೂಟ ವಿರೋಧಿಸಿದ್ದು, ರಿಷಬ್ ಶೆಟ್ಟಿಗೆ ಪತ್ರ ಬರೆದು ತಮ್ಮ ಅಸಮಾಧಾನ ವ್ಯಕ್ತಪಡಿಸಿದೆ.

‘ರಿಷಬ್ ಶೆಟ್ಟಿ ಅವರೇ ನೀವು ದೈವಗಳಲ್ಲಿ ಅಪಾರ ನಂಬಿಕೆ ಇರುವವರು ಎಂದು ಹಲವು ಬಾರಿ ಹೇಳಿಕೊಂಡಿದ್ದೀರಿ. ನೀವು ದೈವದ ಬಗ್ಗೆ ಸಿನಿಮಾ ಮಾಡಿದ್ದೀರಿ ಅದಕ್ಕೆ ನಮ್ಮ ಅಭ್ಯಂತರ ಇಲ್ಲ. ಆದರೆ ನಿಮ್ಮ ಸಿನಿಮಾ ನೋಡುವ ಅಭಿಮಾನಿಗಳಿಗೆ ದೈವದ ಬಗ್ಗೆ ಜಾಗೃತಿ ಮೂಡಿಸಿ. ‘ಕಾಂತಾರ’ ಬಂದಾಗಿನಿಂದಲೂ ದೈವದ ಅನುಕರಣೆ ಹೆಚ್ಚಾಗುತ್ತಿದೆ. ಇತ್ತೀಚೆಗೆ ವ್ಯಕ್ತಿಯೊಬ್ಬ ದೈವದ ವೇಷ ಧರಿಸಿ ಚಿತ್ರಮಂದಿರಕ್ಕೆ ಬಂದ ವಿಡಿಯೋ ವೈರಲ್ ಆಗಿತ್ತು. ಸಿನಿಮಾ ನೋಡುವಾಗಲೇ ಕೆಲ ಪ್ರೇಕ್ಷಕರು ದೈವ ಬಂದವರಂತೆ ವರ್ತಿಸಿದ್ದಾರೆ. ಇನ್ನು ಕೆಲವರು ಚಿತ್ರಮಂದಿರದಿಂದ ಹೊರಬಂದಾಗ ಕೂಗಾಡಿದ ವಿಡಿಯೋಗಳು ವೈರಲ್ ಆಗಿವೆ’

ಇದನ್ನೂ ಓದಿ:ರಿಷಬ್ ಶೆಟ್ಟಿಯ ನಂಬಿ ನೂರಾರು ಕೋಟಿ ಹೂಡಿಕೆ ಮಾಡಿದ್ದೇಕೆ ಹೊಂಬಾಳೆ?

‘ದಿನಬೆಳಗಾದರೆ ಇಂಥಹಾ ವಿಡಿಯೋಗಳನ್ನು ನೋಡಿ ನಾವು ರೋಸಿ ಹೋಗಿದ್ದೇವೆ. ಇವೆಲ್ಲವನ್ನೂ ನೋಡಿ ನೀವೇಕೆ ಮೌನವಾಗಿದ್ದೀರಿ ಎಂಬುದು ತಿಳಿಯುತ್ತಿಲ್ಲ. ಸಿನಿಮಾ ಪ್ರದರ್ಶನಕ್ಕೆ ಮುಂಚೆ ಈ ಬಗ್ಗೆ ಒಂದು ಡಿಸ್​​ಕ್ಲೇಮರ್ (ಎಚ್ಚರಿಕೆ) ಹಾಕಿ ಎಂದು ಈ ಹಿಂದೆಯೇ ಮನವಿ ಮಾಡಿದ್ದೆವು. ಆದರೆ ಈ ಬಗ್ಗೆ ನಿಮಗೆ ಯಾಕೆ ಅಷ್ಟೋಂದು ನಿರ್ಲಕ್ಷ್ಯವೋ ತಿಳಿಯುತ್ತಿಲ್ಲ. ದೈವಾರಾದನೆ ನಮ್ಮ ನಂಬಿಕೆ. ಕೂಡಲೇ ಸುದ್ದಿಗೋಷ್ಠಿ ನಡೆಸಿ ಈ ಬಗ್ಗೆ ಜಾಗೃತಿ ಮೂಡಿಸಿ ಜೊತೆಗೆ ಸಿನಿಮಾ ಪ್ರದರ್ಶನಕ್ಕೆ ಮುಂಚೆ ಡಿಸ್​​ಕ್ಲೇಮರ್ ಹಾಕಿ’ ಎಂದು ತುಳುಕೂಟ ಆಗ್ರಹಿಸಿದೆ.

ರಿಷಬ್ ಶೆಟ್ಟಿಗೆ ತುಳುಕೂಟ ಬರೆದ ಪತ್ರ

Tulukoota

ಇತ್ತೀಚೆಗಷ್ಟೆ ತಮಿಳುನಾಡಿನ ದಿಂಡಿಗಲ್​​ನ ಚಿತ್ರಮಂದಿರವೊಂದರಲ್ಲಿ ‘ಕಾಂತಾರ: ಚಾಪ್ಟರ್ 1’ ಸಿನಿಮಾ ಪ್ರದರ್ಶನಕ್ಕೆ ಮುಂಚೆ ವ್ಯಕ್ತಿಯೊಬ್ಬ ದೇವದ ವೇಷ ಧರಿಸಿ ಚಿತ್ರಮಂದಿರ ಪ್ರವೇಶಿಸಿದ್ದ. ಈ ಘಟನೆಯ ವಿಡಿಯೋ ವೈರಲ್ ಆಗಿತ್ತು. ಅದಕ್ಕೂ ಮುನ್ನ  ವ್ಯಕ್ತಿಯೊಬ್ಬ ‘ಕಾಂತಾರ’ ಪ್ರದರ್ಶನವಾಗುತ್ತಿದ್ದ ಚಿತ್ರಮಂದಿರದ ಮುಂದೆ ಚಿತ್ರ-ವಿಚಿತ್ರ ಹಾವಭಾವ ಮಾಡುತ್ತಾ, ‘ಕಾಂತಾರ’ ಸಿನಿಮಾ ನೋಡದಿದ್ದರೆ ದೈವ ಶಾಪ ನೀಡುತ್ತದೆ ಎಂದು, ರಿಷಬ್ ಶೆಟ್ಟಿಯವರಲ್ಲಿ ದೈವವನ್ನು ನೋಡಿದೆ ಎಂದು ಕೂಗಾಡಿದ್ದ ಆ ವಿಡಿಯೋ ಸಹ ವೈರಲ್ ಆಗಿತ್ತು. ಇದೀಗ ಈ ಹುಚ್ಚಾಟಗಳ ಕಂಡು ಬೇಸರಗೊಂಡಿರುವ ತುಳುಕೂಟ ರಿಷಬ್ ಶೆಟ್ಟಿಯವರಿಗೆ ಖಾರವಾಗಿ ಪತ್ರ ಬರೆದಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:29 pm, Tue, 7 October 25