‘ದರ್ಶನ್​ಗೆ ಈ ಪರಿಸ್ಥಿತಿ ಬರಬಾರದಿತ್ತು’; ಮನನೊಂದು ಆತ್ಮಹತ್ಯೆ ಮಾಡಿಕೊಂಡ ಅಭಿಮಾನಿ?

ಭೈರೇಶ್ ಹೆಸರಿನ ದರ್ಶನ್ ಅಭಿಮಾನಿ ಮೋರಿಗೆ ಬಿದ್ದು ಪ್ರಾಣ ಕಳೆದುಕೊಂಡಿದ್ದಾರೆ. ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಮಾಳೆ ದೊಡ್ಡಿಯಲ್ಲಿ ಘಟನೆ ನಡೆದಿದೆ. ತಮ್ಮ ಹೀರೋಗೆ ಈ ಸ್ಥಿತಿ ಬರಬಾರದಿತ್ತೆಂದು ಆತ್ಮಹತ್ಯೆ ಶಂಕೆ ಮಾಡಿಕೊಂಡಿರೋ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

‘ದರ್ಶನ್​ಗೆ ಈ ಪರಿಸ್ಥಿತಿ ಬರಬಾರದಿತ್ತು’;  ಮನನೊಂದು ಆತ್ಮಹತ್ಯೆ ಮಾಡಿಕೊಂಡ ಅಭಿಮಾನಿ?
ಅಭಿಮಾನಿ-ದರ್ಶನ್
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ Edited By:

Updated on: Jun 17, 2024 | 10:59 AM

ನಟ ದರ್ಶನ್ (Darshan) ಅವರು ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ಅರೆಸ್ಟ್ ಆಗಿರೋದು ಅವರ ಅಭಿಮಾನಿಗಳಿಗೆ ಬೇಸರ ಮೂಡಿಸಿದೆ. ಅನೇಕರು ಪೊಲೀಸ್ ಠಾಣೆಯ ಎದುರು ಜಮಾಯಿಸಿ ದರ್ಶನ್ ಪರ ಘೋಷಣೆ ಕೂಗುತ್ತಿದ್ದಾರೆ. ಈಗ ದರ್ಶನ್​ಗಾಗಿ ಅಭಿಮಾನಿ ಆತ್ಮಹತ್ಯೆ ಮಾಡಿಕೊಂಡರೇ ಎನ್ನುವ ಪ್ರಶ್ನೆ ಮೂಡಿದೆ. ಚನ್ನಪಟ್ಟಣದಲ್ಲಿ ಈ ಘಟನೆ ನಡೆದಿದೆ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದು, ಹೆಚ್ಚಿನ ಮಾಹಿತಿ ಬರಬೇಕಿದೆ.

ಭೈರೇಶ್ ಹೆಸರಿನ ದರ್ಶನ್ ಅಭಿಮಾನಿ ಮೋರಿಗೆ ಬಿದ್ದು ಪ್ರಾಣ ಕಳೆದುಕೊಂಡಿದ್ದಾರೆ. ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಮಾಳೆ ದೊಡ್ಡಿಯಲ್ಲಿ ಘಟನೆ ನಡೆದಿದೆ. ತಮ್ಮ ಹೀರೋಗೆ ಈ ಸ್ಥಿತಿ ಬರಬಾರದಿತ್ತೆಂದು ಆತ್ಮಹತ್ಯೆ ಶಂಕೆ ಮಾಡಿಕೊಂಡಿರೋ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

2-3 ದಿನಗಳಿಂದ ಭೈರೇಶ್ ಅನ್ನ ನೀರು ಬಿಟ್ಟಿದ್ದರು. ದರ್ಶನ್​ಗಾದ ಪರಿಸ್ಥಿತಿ ನೆನೆದು ಸಾಕಷ್ಟು ಮರುಗಿದ್ದರು. ನಿತ್ರಾಣಗೊಂಡು ಮೋರಿಗೆ ಬಿದ್ದು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಭರ್ಜರಿ ಚರ್ಚೆ ನಡೆಯುತ್ತಿದೆ. ನಿಜವಾಗಲೂ ನೋವಿನಲ್ಲೇ ಆತ ಮೃತಪಟ್ಟಿದ್ದೇ ಎನ್ನುವ ಪ್ರಶ್ನೆ ಮೂಡಿದೆ.

ಇದನ್ನೂ ಓದಿ: ಅಭಿಮಾನಿಗಳನ್ನು ತಂದೆಯಂತೆ ಕಂಡ ದರ್ಶನ್; ಆದರೆ ಅವರು ತಿದ್ದುವ ಕೆಲಸ ಮಾಡಲೇ ಇಲ್ಲ

ದರ್ಶನ್ ಅವರು ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ಅರೆಸ್ಟ್ ಆಗಿದ್ದಾರೆ. ಅವರ ಜೊತೆಗೆ ಬರೋಬ್ಬರಿ 19 ಮಂದಿ ಬಂಧನಕ್ಕೆ ಒಳಗಾಗಿದ್ದಾರೆ. ಈಗಾಗಲೇ ದರ್ಶನ್ ಅರೆಸ್ಟ್ ಆಗಿ ವಾರ ಕಳೆದಿದೆ. ಸದ್ಯಕ್ಕೆ ಅವರಿಗೆ ಜಾಮೀನು ಸಿಗೋದು ಅನುಮಾನ ಎಂದು ಹೇಳಲಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಸೈಯ್ಯದ್​ ನಿಜಾಮುದ್ದೀನ್​, ರಾಮನಗರ

ಕಳೆದ ನಾಲ್ಕು ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, ಹಲವು ಬಗೆಯ ಡಿಪಾರ್ಟ್ಮೆಂಟ್ ಗಳಲ್ಲಿ ಕೆಲಸ ಮಾಡಲು ಅವಕಾಶ ಸಿಕ್ಕಿದೆ. ಪ್ರಥಮದಲ್ಲಿ ಟಿವಿ9 ಮುಖ್ಯ ಕಚೇರಿಯಲ್ಲಿಯೇ ಕೆಲಸ ಮಾಡಿ,‌ಮೆಟ್ರೋ,ಪೊಲಿಟಿಕಲ್, ಕ್ರೈಂ ಹಾಗೂ ಲೈಫ್ ಸ್ಟೈಲ್ ನ ವಿಭಾಗದಲ್ಲೂ ಕೆಲಸ ಮಾಡುವ ಅವಕಾಶ ದೊರಕಿತ್ತು. ಕೊರೊನಾ ಸಂದರ್ಭದಲ್ಲಿ ಮಾಡಿದ ಕೇಸ್ ಸ್ಟಡಿಸ್, ನಂತರ ಬ್ಲ್ಯಾಕ್ ಫಂಗಸ್ ಗಾಗಿ ಒಂದು ತಿಂಗಳು ವಿಜಯಪುರ ಜಿಲ್ಲೆ, ಬಳಿಕ ಎರಡು ವರ್ಷ ಆನೆಕಲ್‌ ನಲ್ಲಿ ಕೆಲಸ ಮಾಡಿ ಕಳೆದ ಆರು ತಿಂಗಳಿನಿಂದ ರಾಮನಗರ ಜಿಲ್ಲೆಯಲ್ಲಿ ಕೆಲಸ ನಿಭಾಯಿಸುತ್ತಿದ್ದೇನೆ. ಖುಷಿ ಕೊಟ್ಟ ಸಾವಿರಾರು ಸುದ್ದಿಗಳ ಮಧ್ಯೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಚಿಟ್ ಚಾಟ್ ಬಹಳ ತೃಪ್ತಿ ತಂದ ಹೈಲೇಟ್.. ಆನೇಕಲ್‌ ನ ಡ್ರಗ್ಸ್ ಸ್ಟೋರಿ, ಪರಪ್ಪನ ಅಗ್ರಹಾರದ ಆಫಿಸರ್ಸ್ ಸ್ಕ್ಯಾಂಡಲ್, ಎಲೆಕ್ಟ್ರಾನಿಕ್ ಸಿಟಿ ಯ ಟೋಯಿಂಗ್ ಬಂದ್, ಸರ್ಜಾಪುರದ ಪ್ರವಾಹ ಸಂದರ್ಭ,ಹೀಗೆ ಹತ್ತು ಹಲವು ಸುದ್ದಿಗಳು ಖಷಿ ಕೊಟ್ಟಿವೆ. ಕಳೆದ ನಾಲ್ಕು ವರ್ಷಗಳಲ್ಲಿ ಹಲವು ರಾಜ್ಯಗಳಿಗೆ ತೆರಳಿ ಹಿಂದಿ‌ಹಾಗೂ ಕನ್ನಡಕ್ಕೆ ಕೆಲಸ ಮಾಡೋ ಅವಕಾಶ ನನ್ನ ಇನ್ಪುಟ್ ಟೀಂ ಕೊಟ್ಟಿದೆ. ಇನ್ನು ಹವ್ಯಾಸ ಗ್ಗೆ ಹೇಳೋದಾದ್ರೆ, ಸಂಗೀತ,ಕೇಳೊದು,ಹಾಡೋದು ಇಷ್ಟ. ಕ್ರೀಡೆ ವಿಚಾರಕ್ಕೆ ಬಂದ್ರೆ ಕ್ರಿಕೆಟ್ ಅಂಡ್ ಕಬ್ಬಡ್ಡಿ ಸ್ವಿಮಿಂಗ್. ಸ

Loading...
Unable to load recommendations.
Follow Us