AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕಿಸ್ತಾನದಲ್ಲಿ ‘ಮಹಾವತಾರ ನರಸಿಂಹ’ ಸಿನಿಮಾ ಪ್ರದರ್ಶನ: ವಿಡಿಯೋ ವೈರಲ್

ಪಾಕಿಸ್ತಾನದ ಕರಾಚಿಯ ದೇವಸ್ಥಾನದಲ್ಲಿ ‘ಮಹಾವತಾರ ನರಸಿಂಹ’ ಸಿನಿಮಾವನ್ನು ಪ್ರದರ್ಶನ ಮಾಡಲಾಗಿದೆ. ಸೋಶಿಯಲ್ ಮೀಡಿಯಾದಲ್ಲಿ ಈ ವಿಡಿಯೋ ಸಿಕ್ಕಾಪಟ್ಟೆ ವೈರಲ್ ಆಗಿದೆ. ಭಕ್ತರು ಕಮೆಂಟ್ ಮಾಡುತ್ತಿದ್ದಾರೆ. ಸಾವಿರಾರು ಭಕ್ತರು ದೇವಸ್ಥಾನದ ಆವರಣದಲ್ಲಿ ಕುಳಿತು ಈ ಸಿನಿಮಾ ನೋಡಿದ್ದಾರೆ. ಆ ಬಗ್ಗೆ ಇಲ್ಲಿದೆ ಮಾಹಿತಿ..

ಪಾಕಿಸ್ತಾನದಲ್ಲಿ ‘ಮಹಾವತಾರ ನರಸಿಂಹ’ ಸಿನಿಮಾ ಪ್ರದರ್ಶನ: ವಿಡಿಯೋ ವೈರಲ್
Mahavatar Narsimha
ಮದನ್​ ಕುಮಾರ್​
|

Updated on: Dec 03, 2025 | 3:49 PM

Share

‘ಹೊಂಬಾಳೆ ಫಿಲ್ಮ್ಸ್’ ನಿರ್ಮಾಣದ ‘ಮಹಾವತಾರ ನರಸಿಂಹ’ (Mahavatar Narsimha) ಸಿನಿಮಾ 2025ರಲ್ಲಿ ಸೂಪರ್ ಹಿಟ್ ಆಗಿದೆ. 300 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡಿದ ಭಾರತದ ಮೊದಲ ಆನಿಮೇಟೆಡ್ ಸಿನಿಮಾ ಎಂಬ ಖ್ಯಾತಿ ಈ ಚಿತ್ರಕ್ಕಿದೆ. 2026ರ ಆಸ್ಕರ್ ಪ್ರಶಸ್ತಿ ಸ್ಪರ್ಧೆಯಲ್ಲಿ ಪೈಪೋಟಿ ನೀಡಲು ಈ ಸಿನಿಮಾ ಅರ್ಹತೆ ಪಡೆದಿರುವ ಸುದ್ದಿ ಇತ್ತೀಚೆಗಷ್ಟೇ ಕೇಳಿಬಂದಿತ್ತು. ಈಗ ಇನ್ನೊಂದು ಅಚ್ಚರಿಯ ವಿಷಯ ತಿಳಿದುಕೊಂಡಿದೆ. ಪಾಕಿಸ್ತಾನದಲ್ಲಿ ಕೂಡ ‘ಮಹಾವತಾರ ನರಸಿಂಹ’ ಸಿನಿಮಾ ಪ್ರದರ್ಶನ ಕಂಡಿದೆ. ಪಾಕಿಸ್ತಾನದಲ್ಲಿ (Pakistan) ಇರುವ ಹಿಂದೂಗಳು ಈ ಸಿನಿಮಾವನ್ನು ನೋಡಿ ಖುಷಿಪಟ್ಟಿದ್ದಾರೆ.

ಭಕ್ತ ಪ್ರಹ್ಲಾದನ ಕಥೆಯನ್ನು ಇಟ್ಟುಕೊಂಡು ‘ಮಹಾವತಾರ ನರಸಿಂಹ’ ಸಿನಿಮಾ ಮಾಡಲಾಗಿದೆ. ಭಾರತದಲ್ಲಿ ವಿವಿಧ ಭಾಷೆಗಳಲ್ಲಿ ಬಿಡುಗಡೆ ಆದ ಈ ಸಿನಿಮಾವನ್ನು ಪ್ರೇಕ್ಷಕರು ಮೆಚ್ಚಿಕೊಂಡರು. ಬಳಿಕ ಒಟಿಟಿಯಲ್ಲಿ ಕೂಡ ಬಿಡುಗಡೆ ಆಗಿ ಧೂಳೆಬ್ಬಿಸಿತು. ಈಗ ಪಾಕಿಸ್ತಾನದಲ್ಲಿ ಸಹ ಈ ಸಿನಿಮಾವನ್ನು ಪ್ರದರ್ಶನ ಮಾಡಲಾಗಿದೆ. ಅದು ಕೂಡ ದೇವಸ್ಥಾನದಲ್ಲಿ ಎಂಬುದು ವಿಶೇಷ!

ಹೌದು, ಪಾಕಿಸ್ತಾನದಲ್ಲಿ ‘ಮಹಾವತಾರ ನರಸಿಂಹ’ ಸಿನಿಮಾ ಪ್ರದರ್ಶನ ಆಗಿರುವುದು ಚಿತ್ರಮಂದಿರಗಳಲ್ಲಿ ಅಲ್ಲ. ಬದಲಿಗೆ, ಕರಾಚಿಯಲ್ಲಿ ಇರುವ ಸ್ವಾಮಿ ನಾರಾಯಣ ಮಂದಿರದಲ್ಲಿ ಭಕ್ತರಿಗಾಗಿ ಈ ಸಿನಿಮಾದ ಪ್ರದರ್ಶನವನ್ನು ಏರ್ಪಡಿಸಲಾಗಿತ್ತು. ಸಾವಿರಾರು ಭಕ್ತರು ದೇವಸ್ಥಾನದ ಆವರಣದಲ್ಲಿ ಸೇರಿಕೊಂಡು ದೊಡ್ಡ ಎಲ್​ಇಡಿ ಪರದೆಯಲ್ಲಿ ‘ಮಹಾವತಾರ ನರಸಿಂಹ’ ಸಿನಿಮಾವನ್ನು ವೀಕ್ಷಿಸಿದ್ದಾರೆ.

ವೈರಲ್ ವಿಡಿಯೋ:

View this post on Instagram

A post shared by Rameet Raj (@rameet_raj)

ಕರಾಚಿಯ ಸ್ವಾಮಿ ನಾರಾಯಣ ಮಂದಿರದಲ್ಲಿ ‘ಮಹಾವತಾರ ನರಸಿಂಹ’ ಸಿನಿಮಾ ಪ್ರದರ್ಶನ ಆಗುತ್ತಿರುವ ವಿಡಿಯೋವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳಲಾಗಿದೆ. ‘ಪಾಕಿಸ್ತಾನದಲ್ಲಿ ಮೊಟ್ಟ ಮೊದಲ ಬಾರಿಗೆ! ಸ್ವಾಮಿ ನಾರಾಯಣ ಮಂದಿರದಲ್ಲಿ ಮಹಾವತಾರ ನರಸಿಂಹ ಸಿನಿಮಾ ಪ್ರದರ್ಶನ’ ಎಂಬ ಕ್ಯಾಪ್ಷನ್​ನೊಂದಿಗೆ ಈ ವಿಡಿಯೋವನ್ನು ಪೋಸ್ಟ್ ಮಾಡಲಾಗಿದೆ.

ಇದನ್ನೂ ಓದಿ: ಪ್ರತಿಷ್ಠಿತ ಆಸ್ಕರ್ ಪ್ರಶಸ್ತಿ ರೇಸ್​​ನಲ್ಲಿ ‘ಮಹಾವತಾರ ನರಸಿಂಹ’ ಆನಿಮೇಟೆಡ್ ಸಿನಿಮಾ

‘ಮಹಾವತಾರ ನರಸಿಂಹ’ ಸಿನಿಮಾವನ್ನು ‘ಹೊಂಬಾಳೆ ಫಿಲ್ಮ್ಸ್’ ಸಂಸ್ಥೆ ನಿರ್ಮಾಣ ಮಾಡಿದೆ. ಪುರಾಣದ ಕಥೆಯನ್ನು ಹೊಂದಿರುವ ಈ ಚಿತ್ರ ಭಾರತದಲ್ಲಿ ಜುಲೈ 25ರಂದು ಬಿಡುಗಡೆ ಆಯಿತು. ಅಶ್ವಿನ್ ಕುಮಾರ್ ಅವರು ಈ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ವಿಷ್ಣು ಪುರಾಣ, ನರಸಿಂಹ ಪುರಾಣ, ಶ್ರೀಮದ್ ಭಗವತ ಪುರಾಣವನ್ನು ಆಧಾರವಾಗಿ ಇಟ್ಟುಕೊಂಡು ಈ ಸಿನಿಮಾವನ್ನು ಮಾಡಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್