‘ದರ್ಶನ್​ ನನ್ನ ಮೇಲೆ ಹಲ್ಲೆ ಮಾಡಿಲ್ಲ, ನಾನು ಕೋಮಾದಲ್ಲೂ ಇಲ್ಲ, ಇಂದ್ರಜಿತ್​ ಲಂಕೇಶ್​ ಹೇಳಿಕೆ ಸುಳ್ಳು’

ಗೋಪಾಲ್​ ರಾಜ್ ಎಂಬುವವರ ಮೇಲೆ ದರ್ಶನ್​ ಹಲ್ಲೆ ಮಾಡಿದ್ದಾರೆ ಎನ್ನುವ ಗಂಭೀರ ಆರೋಪವನ್ನು ಇಂದ್ರಜಿತ್​ ಮಾಡಿದ್ದರು. ಈಗ ಟಿವಿ9 ಸ್ಟುಡಿಯೋದಲ್ಲಿ ಗೋಪಾಲ್​ ರಾಜ್ ಹೇಳಿಕೆ ನೀಡಿದ್ದಾರೆ.

‘ದರ್ಶನ್​ ನನ್ನ ಮೇಲೆ ಹಲ್ಲೆ ಮಾಡಿಲ್ಲ, ನಾನು ಕೋಮಾದಲ್ಲೂ ಇಲ್ಲ, ಇಂದ್ರಜಿತ್​ ಲಂಕೇಶ್​ ಹೇಳಿಕೆ ಸುಳ್ಳು’
ಇಂದ್ರಜಿತ್​ ಲಂಕೇಶ್​-ದರ್ಶನ್​
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on:Jul 15, 2021 | 5:17 PM

ನಟ ದರ್ಶನ್​ ಅವರು ಗೋಪಾಲ್​ ರಾಜ್ ಎಂಬುವವರ ಮೇಲೆ ಹಲ್ಲೆ ನಡೆಸಿದ್ದಾರೆ. ಹೀಗಾಗಿ ಗೋಪಾಲ್​ ಅವರು ಕೋಮಾ ಸ್ಥಿತಿಗೆ ತೆರಳಿದ್ದಾರೆ ಎಂದು ನಿರ್ದೇಶಕ ಇಂದ್ರಜಿತ್​ ಲಂಕೇಶ್​ ಹೇಳಿದ್ದರು. ಆದರೆ, ಇದು ಸಂಪೂರ್ಣ ಸುಳ್ಳು ಎಂದು ಗೋಪಾಲ್ ರಾಜ್ ಟಿವಿ9 ಕನ್ನಡಕ್ಕೆ ಸ್ಪಷ್ಟನೆ ನೀಡಿದ್ದಾರೆ.

ನಿರ್ಮಾಪಕ ಸಂದೇಶ್​ ಅವರ ‘ಸಂದೇಶ್​ ದಿ ಪ್ರಿನ್ಸ್​’ ಹೋಟೆಲ್​ನಲ್ಲಿರುವ ಸಿಬ್ಬಂದಿ ಮೇಲೆ ದರ್ಶನ್​ ಹಲ್ಲೆ ಮಾಡಿದ್ದಾರೆ ಎಂದು ನಿರ್ದೇಶಕ ಇಂದ್ರಜಿತ್​ ಲಂಕೇಶ್​ ಆರೋಪ ಮಾಡಿದ್ದರು. ಇದಾದ ನಾಲ್ಕು ಗಂಟೆ ನಂತರದಲ್ಲಿ ಮತ್ತೆ ಇಂದ್ರಜಿತ್​ ಸುದ್ದಿಗೋಷ್ಠಿ ಕರೆದು ಮಾತನಾಡಿದ್ದರು. ಈ ವೇಳೆ, ಹೋಟೆಲ್​ ಸಿಬ್ಬಂದಿ ಗಂಗಾಧರ ಮಾತ್ರವಲ್ಲ ಜುಲೈ 3ರಂದು ಗೋಪಾಲ್​ ರಾಜ್ ಎಂಬುವವರ ಮೇಲೆ ದರ್ಶನ್​ ಹಲ್ಲೆ ಮಾಡಿದ್ದಾರೆ. ಅವರು ಕೋಮಾದಲ್ಲಿದ್ದಾರೆ ಎನ್ನುವ ಗಂಭೀರ ಆರೋಪವನ್ನು ಇಂದ್ರಜಿತ್​ ಮಾಡಿದ್ದರು. ಈಗ ಟಿವಿ9 ಸ್ಟುಡಿಯೋದಲ್ಲಿ ಗೋಪಾಲ್​ ರಾಜ್ ಹೇಳಿಕೆ ನೀಡಿದ್ದಾರೆ.

‘ನನ್ನ ಮೇಲೆ ಯಾವುದೇ ರೀತಿಯ ಹಲ್ಲೆ ನಡೆದಿಲ್ಲ. ನನಗೂ ದರ್ಶನ್​ದೂ 30 ವರ್ಷಗಳ ಹಳೆಯ ಸ್ನೇಹವಿದೆ. ನನಗೂ, ದರ್ಶನ್​ಗೂ ಯಾವುದೇ ಗಲಾಟೆ ಆಗಿಲ್ಲ. ಕೋಮಾದಲ್ಲಿ ಇದ್ದೇನೆ ಎನ್ನುವ ಆರೋಪಗಳು ಸುಳ್ಳು. ದರ್ಶನ್ ಇಂಡಸ್ಟ್ರಿಗೆ ಬರುವ ಮೊದಲಿಂದಲೂ ನನಗೆ ಆತ್ಮೀಯ. ಜು.3ರಂದು ಮೈಸುರಿನಲ್ಲೇ ಇದ್ದೆ. ಆದರೆ, ದರ್ಶನ್ ಭೇಟಿ ಆಗಿರಲಿಲ್ಲ. ದರ್ಶನ್, ನನ್ನ ನಡುವೆ ಗಲಾಟೆ ಘಟನೆಗಳು ನಡೆದೇ ಇಲ್ಲ. ಜು.3ರಂದು ನಾನು ಸೋಷಿಯಲ್ಸ್​ ಪಬ್​ಗೆ ಹೋಗೇ ಇರಲಿಲ್ಲ’ ಎಂದಿದ್ದಾರೆ ಗೋಪಾಲ್.

ಎರಡನೇ ಪ್ರೆಸ್​ಮೀಟ್​ನಲ್ಲಿ ಇಂದ್ರಜಿತ್​ ಹೇಳಿದ್ದೇನು?

‘ನನಗೆ ಯಾರ ಮೇಲೂ ದ್ವೇಷ ಇಲ್ಲ. ಸಾರ್ವಜನಿಕರಿಗೆ ಅನ್ಯಾಯ ಆಗಬಾರದು ಎನ್ನುವುದು ನನ್ನ ಉದ್ದೇಶ. ಇತ್ತೀಚೆಗೆ ಹಲವಾರು ಘಟನೆ ನಡೀತಾನೆ ಇದೆ. ಬಡವರಿಗೆ ಅನ್ಯಾಯ ಆಗ್ತಿದೆ. ಈ ದೃಷ್ಟಿಯಿಂದ ನಾನು ಮುಂದೆ ಬಂದಿದೀನಿ. ತಪ್ಪಾದಾಗ ತಪ್ಪು ಎಂದಿದೀನಿ. ನನ್ನನ್ನು ಯಾರೂ ಎತ್ತಿ ಕಟ್ಟಿಲ್ಲ. ತಪ್ಪು ಮಾಡಿದ ಸೆಲೆಬ್ರಿಟಿಗಳು ತಪ್ಪಿಸಿಕೊಳ್ಳಬಾರದು’ ಎಂದಿದ್ದರು ಇಂದ್ರಜಿತ್​.

ಇದನ್ನೂ ಓದಿ: ವಂಚನೆ ಯತ್ನ ಪ್ರಕರಣದ ಸುದ್ದಿಯಿಂದ ಬೇಸತ್ತಿದ್ದ ಅಭಿಮಾನಿಗಳಿಗೆ ದರ್ಶನ್​ ಕಡೆಯಿಂದ ಗುಡ್​ನ್ಯೂಸ್​

‘ತಪ್ಪು ಮಾಡಿದ ಸೆಲೆಬ್ರಿಟಿಗಳು ತಪ್ಪಿಸಿಕೊಳ್ಳಬಾರದು’; ದರ್ಶನ್​ ವಿರುದ್ಧ ಮತ್ತೆ ಹರಿಹಾಯ್ದ ಇಂದ್ರಜಿತ್​ ಲಂಕೇಶ್

Published On - 5:01 pm, Thu, 15 July 21

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್