ಚಿತ್ರರಂಗಕ್ಕೆ ಕಾಲಿಡಲಿರುವ ಲಂಕೇಶ್ ಕುಟುಂಬದ ಮೂರನೇ ತಲೆಮಾರಿನ ಕುಡಿ, ಅಪ್ಪನೇ ನಿರ್ದೇಶಕ

Indrajit Lankesh: ಇಂದ್ರಜಿತ್ ಲಂಕೇಶ್ ಪುತ್ರ ಸಮರ್ಜಿತ್ ಲಂಕೇಶ್ ಚಿತ್ರರಂಗಕ್ಕೆ ಬರಲು ಸಜ್ಜಾಗಿದ್ದಾರೆ. ಮಗನ ಸಿನಿಮಾಕ್ಕೆ ಅಪ್ಪನೇ ಆಕ್ಷನ್ ಕಟ್ ಹೇಳುತ್ತಿದ್ದು, ನಾಯಕಿಯಾಗಿ ಬಿಗ್​ಬಾಸ್ ಚೆಲುವೆ ಆಯ್ಕೆ ಆಗಿದ್ದಾರೆ.

ಚಿತ್ರರಂಗಕ್ಕೆ ಕಾಲಿಡಲಿರುವ ಲಂಕೇಶ್ ಕುಟುಂಬದ ಮೂರನೇ ತಲೆಮಾರಿನ ಕುಡಿ, ಅಪ್ಪನೇ ನಿರ್ದೇಶಕ
ಸಮರ್ಜೀತ್ ಲಂಕೇಶ್
Follow us
ಮಂಜುನಾಥ ಸಿ.
|

Updated on:Aug 16, 2023 | 4:11 PM

ಇಂದ್ರಜಿತ್ ಲಂಕೇಶ್ (Indrajit Lankesh) ಕಳೆದ ಕೆಲ ವರ್ಷಗಳಲ್ಲಿ ಸಿನಿಮಾಕ್ಕಿಂತಲೂ ಬೇರೆ ವಿಷಯಗಳಿಂದಲೇ ಹೆಚ್ಚು ಸುದ್ದಿಯಾಗಿದ್ದರು. ಸ್ಯಾಂಡಲ್​ವುಡ್ (Sandalwood) ಡ್ರಗ್ಸ್ (Drugs) ಪ್ರಕರಣದ ಬಗ್ಗೆ ಜೋರು ದನಿಯಲ್ಲಿ ಮಾತನಾಡಿದ್ದ ಇಂದ್ರಜಿತ್, ಆ ನಂತರ ನಟನೊಬ್ಬ ದಲಿತ ಸಪ್ಲೈಯರ್ ಮೇಲೆ ಹಲ್ಲೆ ಮಾಡಿರುವುದಾಗಿ ಆರೋಪ ಹಾಗೂ ಇನ್ನೂ ಹಲವು ಸಂಗತಿಗಳ ಬಗ್ಗೆ ಮಾಧ್ಯಮಗಳ ಮುಂದೆ ಮಾತನಾಡಿ ಸುದ್ದಿಯಲ್ಲಿದ್ದರು. ಡ್ರಗ್ಸ್ ಪ್ರಕರಣದಲ್ಲಿ ಸಿಸಿಬಿ ಒಟ್ಟಿಗೆ ಕೆಲವು ಮಾಹಿತಿಗಳನ್ನು ಹಂಚಿಕೊಂಡಿದ್ದಾಗಿಯೂ ಹೇಳಿದ್ದರು. ಇದೀಗ ಇಂದ್ರಜಿತ್ ಲಂಕೇಶ್ ಮತ್ತೆ ಸಿನಿಮಾ ನಿರ್ದೇಶಕನ ಟೊಪ್ಪಿಗೆ ತೊಡಲು ಸಜ್ಜಾಗಿದ್ದಾರೆ. ಈ ಬಾರಿ ಬೇರೆ ನಟರಿಗಲ್ಲದೆ, ತಮ್ಮ ಮಗನ ಸಿನಿಮಾಕ್ಕೆ ಆಕ್ಷನ್ ಕಟ್ ಹೇಳಲು ಮುಂದಾಗಿದ್ದಾರೆ.

ಇಂದ್ರಜಿತ್ ಲಂಕೇಶ್ ಪುತ್ರ ಸಮರ್ಜಿತ್ ಲಂಕೇಶ್ ಚಿತ್ರರಂಗಕ್ಕೆ ಎಂಟ್ರಿ ಕೊಡಲು ಸಜ್ಜಾಗಿದ್ದಾರೆ. ನಾಯಕ ನಟನಾಗುವ ಉಮೇದಿನಿಂದಾಗಿ ದೇಹವನ್ನು ಚೆನ್ನಾಗಿ ದಂಡಿಸಿ ಸಿಕ್ಸ್ ಪ್ಯಾಕ್ ಮಾಡಿಕೊಂಡಿರುವ ಜೊತೆಗೆ ಸಮರ ಕಲೆಗಳ ಅಭ್ಯಾಸ, ಕುದುರೆ ಸವಾರಿ, ಡ್ಯಾನ್ಸ್, ನಟನೆ ತರಬೇತಿಗಳನ್ನು ಮಾಡಿಕೊಂಡಿದ್ದಾರೆ. ಈಗಾಗಲೇ ಜಾಹೀರಾತು ಹಾಗೂ ಫ್ಯಾಷನ್ ಪ್ರಪಂಚದಲ್ಲಿ ಸಣ್ಣ ಮಟ್ಟಿಗೆ ಗುರುತಿಸಿಕೊಂಡಿದ್ದು ಇದೀಗ ಬೆಳ್ಳಿ ತೆರೆಯ ಮೂಲಕ ಜನರ ಪ್ರೇಮ ಗಳಿಸುವ ಉಮೇದಿನಲ್ಲಿದ್ದಾರೆ.

ಮಗನನ್ನು ಲಾಂಚ್ ಮಾಡುವ ಉದ್ದೇಶದಿಂದ ಸ್ವತಃ ಇಂದ್ರಜಿತ್ ಲಂಕೇಶ್ ಮಗನಿಗಾಗಿ ಆಕ್ಷನ್ ಕಟ್ ಹೇಳಲು ಮುಂದಾಗಿದ್ದಾರೆ. 2020 ರಲ್ಲಿ ಬಿಡುಗಡೆ ಆದ ‘ಶಕೀಲ’ ಸಿನಿಮಾದ ಬಳಿಕ ಯಾವುದೇ ಸಿನಿಮಾ ನಿರ್ದೇಶಿಸದಿದ್ದ ಇಂದ್ರಜಿತ್ ಇದೀಗ ಮಗನಿಗಾಗಿ ಒಂದೊಳ್ಳೆ ಆಕ್ಷನ್ ತುಂಬಿದ ಲವ್ ಸ್ಟೋರಿ ಹೊತ್ತು ತರುತ್ತಿದ್ದಾರೆ. ‘ತುಂಟಾಟ’, ‘ಮೊನಾಲಿಸಾ’ ಅಂಥಹಾ ಸ್ಟೈಲಿಷ್ ಸಿನಿಮಾಗಳನ್ನು ನಿರ್ದೇಶಿಸಿರುವ ಇಂದ್ರಜಿತ್ ಮಗನಿಗಾಗಿ ಅಂಥಹುದೇ ಸ್ಟೈಲಿಷ್ ಲವ್​ ಸ್ಟೋರಿ ನಿರ್ದೇಶಿಸುವ ಊಹೆ ಇದೆ.

ಇದನ್ನೂ ಓದಿ:ರಾಗಿಣಿ ಹಾಗೂ ಸಂಜನಾ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಪಟ್ಟಂತೆ FSL ವರದಿ ನೋಡಿ ಸಮಾಧಾನವಾಗಿದೆ: ಇಂದ್ರಜಿತ್ ಲಂಕೇಶ್

ಮಗನಿಗಾಗಿ ಇಂದ್ರಜಿತ್ ನಿರ್ದೇಶಿಸಲಿರುವ ಸಿನಿಮಾ ನಿಜ ಘಟನೆಯನ್ನು ಆಧರಿಸಿದ ಸಿನಿಮಾ ಎನ್ನಲಾಗುತ್ತಿದೆ. ಸಿನಿಮಾದಲ್ಲಿ ಸಾನ್ಯಾ ಐಯ್ಯರ್ ಅನ್ನು ನಾಯಕಿಯನ್ನಾಗಿ ಆಯ್ಕೆ ಮಾಡಲಾಗಿದೆ. ‘ಪುಟ್ಟಗೌರಿ ಮದುವೆ’ ಧಾರಾವಾಹಿ ಮೂಲಕ ಬಾಲನಟಿಯಾಗಿ ಗುರುತಿಸಿಕೊಂಡಿದ್ದ ಸಾನ್ಯಾ ಐಯ್ಯರ್, ಇತ್ತೀಚೆಗೆ ತಮ್ಮ ಹಾಟ್ ಫೋಟೊಗಳಿಂದ ಗಮನ ಸೆಳೆಯುತ್ತಿದ್ದಾರೆ. ಸಿನಿಮಾ ಅವಕಾಶಗಳಿಗಾಗಿ ಎಂದೇ ಬಾಂಬೆಗೆ ತೆರಳಿ ಜನಪ್ರಿಯ ಪ್ರೊಫೈಲ್ ಫೋಟೊಗ್ರಾಫರ್ ದಬು ರತಾನಿ ಅವರಿಂದ ಫೋಟೊಶೂಟ್ ಸಹ ಮಾಡಿಸಿಕೊಂಡಿದ್ದಾರೆ. ಅಂತೆಯೇ ಇದೀಗ ಸಮರ್ಜಿತ್ ಲಂಕೇಶ್ ಸಿನಿಮಾದಲ್ಲಿ ಅವಕಾಶ ಗಿಟ್ಟಿಸಿಕೊಂಡಿದ್ದಾರೆ.

ಸಮರ್ಜಿತ್ ಲಂಕೇಶ್​ರ ಮೊದಲ ಸಿನಿಮಾ ಸೆಪ್ಟೆಂಬರ್ ನಾಲ್ಕರಂದು ಅಧಿಕೃತವಾಗಿ ಘೋಷಣೆ ಆಗಲಿದೆ ಎನ್ನಲಾಗುತ್ತಿದೆ. ಆ ಮೂಲಕ ಲಂಕೇಶ್ ಕುಟುಂಬದ ಮೂರನೇ ತಲೆಮಾರು ಚಿತ್ರರಂಗಕ್ಕೆ ಅಡಿ ಇಟ್ಟಂತಾಗುತ್ತದೆ. ಇಂದ್ರಜಿತ್ ಲಂಕೇಶ್​ರ ತಂದೆ ಕರ್ನಾಟಕದ ಜನಪ್ರಿಯ ಪತ್ರಕರ್ತ ಲಂಕೇಶ್ ‘ಸಂಸ್ಕಾರ’ ಸಿನಿಮಾದಲ್ಲಿ ನಟಿಸುವ ಜೊತೆಗೆ ಕೆಲವು ಸಿನಿಮಾಗಳ ನಿರ್ದೇಶನವನ್ನೂ ಮಾಡಿದ್ದರು. ಇದೀಗ ಅವರ ಮೊಮ್ಮಗ ನಟನೆಗೆ ಕಾಲಿಡುತ್ತಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:10 pm, Wed, 16 August 23

ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಸಿದ್ದರಾಮಯ್ಯ ಬಹಳ ಸಲ ನನ್ನ ಮನೆಗೆ ಬಂದಿದ್ದಾರೆ: ಸತೀಶ್ ಜಾರಕಿಹೊಳಿ
ಸಿದ್ದರಾಮಯ್ಯ ಬಹಳ ಸಲ ನನ್ನ ಮನೆಗೆ ಬಂದಿದ್ದಾರೆ: ಸತೀಶ್ ಜಾರಕಿಹೊಳಿ