ರಾಗಿಣಿ ಹಾಗೂ ಸಂಜನಾ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಪಟ್ಟಂತೆ FSL ವರದಿ ನೋಡಿ ಸಮಾಧಾನವಾಗಿದೆ: ಇಂದ್ರಜಿತ್ ಲಂಕೇಶ್

Indrajit Lankesh: ನಿರ್ದೇಶಕ ಇಂದ್ರಜಿತ್ ಲಂಕೇಶ್ ಸುದ್ದಿಗೋಷ್ಠಿ ನಡೆಸಿ, ರಾಗಿಣಿ ಹಾಗೂ ಸಂಜನಾ ಡ್ರಗ್ಸ್ ಸೇವನೆ ದೃಢಪಟ್ಟಿರುವುದರ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ.

ರಾಗಿಣಿ ಹಾಗೂ ಸಂಜನಾ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಪಟ್ಟಂತೆ FSL ವರದಿ ನೋಡಿ ಸಮಾಧಾನವಾಗಿದೆ: ಇಂದ್ರಜಿತ್ ಲಂಕೇಶ್
ಇಂದ್ರಜಿತ್​ ಲಂಕೇಶ್​ (ಸಂಗ್ರಹ ಚಿತ್ರ)
Follow us
TV9 Web
| Updated By: Digi Tech Desk

Updated on:Aug 24, 2021 | 12:41 PM

ನಟಿಯರಾದ ರಾಗಿಣಿ ದ್ವಿವೇದಿ ಹಾಗೂ ಸಂಜನಾ ಗಲ್ರಾನಿ ಎಫ್​ಎಸ್​ಎಲ್ ಪರೀಕ್ಷೆಯಲ್ಲಿ ಡ್ರಗ್ಸ್ ಸೇವಿಸಿರುವುದು ದೃಢಪಟ್ಟ ಬೆನ್ನಲ್ಲೇ, ನಿರ್ದೇಶಕ ಇಂದ್ರಜಿತ್ ಲಂಕೇಶ್ ಸುದ್ದಿಗೋಷ್ಠಿ ನಡೆಸಿ, ಇದರ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ. ಇವತ್ತಿನ FSL ವರದಿ ನೋಡಿ ಸಮಾಧಾನವಾಗಿದೆ ಎಂದು ಹೇಳಿರುವ ಅವರು, ತನಗೆ ಯಾರ ಮೇಲೂ ವೈಯಕ್ತಿಕ ದ್ವೇಷವಿಲ್ಲ; ಅವರ ಮೇಲೆ ಅನುಕಂಪವಿದೆ ಎಂದಿದ್ದಾರೆ. ‘‘ಅವರಿಗೆಲ್ಲ ಏನಾದ್ರೂ ಚಿಕಿತ್ಸೆ ಕೊಡಿಸಲು ಮನವಿ ಮಾಡುವೆ. ದೊಡ್ಡದೊಡ್ಡವರು ಈ ಡ್ರಗ್ಸ್ ದಂಧೆಯಲ್ಲಿ ಭಾಗಿಯಾಗಿದ್ದಾರೆ. ಅವರನ್ನು ಹಿಡಿಯುವುದು ಇನ್ನೂ ಬಾಕಿ ಇದೆ’’ ಎಂದು ಇಂದ್ರಜಿತ್ ಹೇಳಿದ್ದಾರೆ.

ಡ್ರಗ್ಸ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಗೃಹ ಸಚಿವರಿಗೆ ದೂರು ನೀಡಿದ್ದನ್ನು ಪ್ರಸ್ತಾಪಿಸಿದ ಅವರು, ‘‘ನನಗಿದ್ದ ಮಾಹಿತಿ ಆಧರಿಸಿ ಗೃಹ ಸಚಿವರಿಗೆ ದೂರು ನೀಡಿದ್ದೆ. ಆಗ ಸ್ಯಾಂಡಲ್‌ವುಡ್‌ನ ಕೆಲವರು ನನ್ನನ್ನು ಟೀಕಿಸಿದ್ದರು. ಇಂದ್ರಜಿತ್‌ಗೆ ಕೆಲಸ ಇಲ್ಲ ಎಂದು ಹೇಳಿದ್ದರು. ಕೋಟ್ಯಂತರ ರೂ. ಮೌಲ್ಯದ ಡ್ರಗ್ಸ್ ಬೆಂಗಳೂರಿಗೆ ಬರುತ್ತಿದ್ದು, ಇದರಿಂದ ಬೆಂಗಳೂರಿನಲ್ಲಿ ಡ್ರಗ್ಸ್‌ಗಿರುವ ಬೇಡಿಕೆ ತಿಳಿಯುತ್ತದೆ. ಹೀಗಾಗಿ ಡ್ರಗ್ಸ್‌ ಬಗ್ಗೆ ಇನ್ನೂ ಹೆಚ್ಚಿನ ತನಿಖೆಯಾಗಬೇಕು’’ ಎಂದು ಅವರು ಆಗ್ರಹಿಸಿದ್ದಾರೆ.

ಸ್ಯಾಂಡಲ್​ವುಡ್​ಗೆ ಬರುವ ಯುವಕ ಯುವತಿಯರು ಕನಸುಗಳನ್ನು ಕಟ್ಟಿಕೊಂಡು ಬರುತ್ತಾರೆ. ಅವರು ದಯವಿಟ್ಟು ಡಾ.ರಾಜ್​ಕುಮಾರ್ ಹಾಗೂ ಡಾ.ವಿಷ್ಣುವರ್ಧನ್ ಅವರಂತಹ ಮೇರು ನಟರನ್ನು ಆದರ್ಶವಾಗಿ ಇಟ್ಟುಕೊಳ್ಳಬೇಕು ಎಂದು ಇದೇ ವೇಳೆ ಇಂದ್ರಜಿತ್ ಲಂಕೇಶ್ ಕಿವಿಮಾತು ಹೇಳಿದ್ದಾರೆ.

FSL ವರದಿಯಲ್ಲಿ ದೃಢಪಟ್ಟಿರುವುದೇನು?

ನಟಿಯರಾದ ಸಂಜನಾ ಗಲ್ರಾನಿ, ರಾಗಿಣಿ ದ್ವಿವೇದಿ, ವಿರೇನ್ ಖನ್ನಾ, ರವಿಶಂಕರ್, ಲೂಮ್ ಪೆಪ್ಪರ್, ರಾಹುಲ್ ತೋನ್ಸೆ ಡ್ರಗ್ಸ್ ಸೇವಿಸಿರುವುದು FSL ಪರೀಕ್ಷೆಯಲ್ಲಿ ದೃಡಪಟ್ಟಿದೆ. ಡ್ರಗ್​ ಜಾಲದಲ್ಲಿ ಸಿಲುಕಿ ಸದ್ದು ಮಾಡಿದ್ದ ಚಂದನವನದ ನಟಿಯರಾದ ಸಂಜನಾ, ರಾಗಿಣಿ ಡ್ರಗ್ಸ್​ ಸೇವಿಸಿರುವುದು ಖಚಿತ ಎಂದು ಎಫ್​ಎಸ್​ಎಲ್ ಪರೀಕ್ಷೆಯಲ್ಲಿ ತಿಳಿದುಬಂದಿದೆ. ನಟಿಯರಾದ ಸಂಜನಾ ಗಲ್ರಾನಿ, ರಾಗಿಣಿ ತಲೆ ಕೂದಲನ್ನು 2020ರ ಅಕ್ಟೋಬರ್​​ನಲ್ಲಿ ಹೈದರಾಬಾದ್​ನ FSLಗೆ ಪರೀಕ್ಷೆಗೆ ಕಳುಹಿಸಲಾಗಿದ್ದು, ಅದರ ವರದಿ ಈಗ ಲಭ್ಯವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸದರಿ ರಿಪೋರ್ಟ್​ನಲ್ಲಿ ಇಬ್ಬರೂ ನಟಿಯರು ಡ್ರಗ್ಸ್ ಸೇವಿಸಿದ್ದರು ಎನ್ನುವುದು ದೃಢಪಟ್ಟಿದ್ದು, ಜತೆಗೆ ವಿರೇನ್​ ಖನ್ನಾ, ರವಿಶಂಕರ್, ಲೂಮ್ ಪೆಪ್ಪರ್, ರಾಹುಲ್ ತೋನ್ಸೆ ಕೂಡ ಡ್ರಗ್ಸ್​ ಸೇವಿಸಿರುವುದು ಖಚಿತವಾಗಿದೆ. ಸಂಜನಾ ಗಲ್ರಾನಿ, ರಾಗಿಣಿ ತಲೆ ಕೂದಲನ್ನು 2020ರ ಅಕ್ಟೋಬರ್​​ನಲ್ಲಿ ಪರೀಕ್ಷೆಗೆ ಕಳುಹಿಸಲಾಗಿತ್ತು.ಬರೋಬ್ಬರಿ 10 ತಿಂಗಳ ಬಳಿಕ ಎಫ್ಎಸ್ಎಲ್ ರಿಪೋರ್ಟ್ ಬಂದಿದ್ದು, ಸದ್ಯ ಜೈಲು ಸೇರಿ ಜಾಮೀನಿನ ಮೇಲೆ ಹೊರ ಬಂದಿರುವ ನಟಿಮಣಿಯರಾದ ರಾಗಿಣಿ,ಸಂಜನಾಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಹೀಗಾಗಿ ಮುಂದೆ ಏನೆಲ್ಲಾ ಬೆಳವಣಿಗೆಗಳು ನಡೆಯಲಿವೆ ಎನ್ನುವುದು ಕುತೂಹಲ ಮೂಡಿಸಿದೆ.

ಇದನ್ನೂ ಓದಿ: 

ರಾಗಿಣಿ ಹಾಗೂ ಸಂಜನಾ ಡ್ರಗ್ ಸೇವನೆ ದೃಢ; ಮತ್ತೆ ಜೈಲು ಸೇರಲಿದ್ದಾರಾ ನಟಿಯರು? ಮುಂದಿನ ಆಯ್ಕೆ ಏನು?

ತಲೆಗೂದಲಿನ ಮಾದರಿಯನ್ನು ಪರೀಕ್ಷೆಗೆ ಕಳುಹಿಸಿದ್ದರಿಂದ ಡ್ರಗ್​ ಸೇವನೆ ಪತ್ತೆ ಸುಲಭವಾಯ್ತು: ಸಂದೀಪ್ ಪಾಟೀಲ್

(Indrajith Lankesh on Ragini Dwivedi and Sanjana Galrani drug consume report confirmation)

Published On - 12:11 pm, Tue, 24 August 21

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ