ಅವಹೇಳನಕಾರಿ ಸುದ್ದಿ ಪ್ರಕಟಿಸದಂತೆ ಕೋರ್ಟ್​ನಿಂದ ತಡೆಯಾಜ್ಞೆ ತಂದ ಜಗ್ಗೇಶ್

ಜಗ್ಗೇಶ್ ಅವರು ತಮ್ಮ ಸಿನಿಮಾಗಳ ಬಗ್ಗೆ, ರಾಜಕೀಯ ವಿಚಾರಗಳ ಬಗ್ಗೆ ಅಭಿಪ್ರಾಯ ಹಂಚಿಕೊಳ್ಳುತ್ತಾ ಇರುತ್ತಾರೆ. ಇದೇ ಸೋಶಿಯಲ್ ಮೀಡಿಯಾದಲ್ಲಿ ಜಗ್ಗೇಶ್ ಬಗ್ಗೆ ಕೆಲವರು ಅಪಪ್ರಚಾರ ಮಾಡಿದ್ದಿದೆ. ಕೆಲವು ಸುದ್ದಿ ಮಾಧ್ಯಮಗಳು ಜಗ್ಗೇಶ್​ನ ಟೀಕಿಸಿದ್ದೂ ಇದೆ. ಇದಕ್ಕೆ ಜಗ್ಗೇಶ್ ಅವರು ತಮ್ಮದೇ ರೀತಿಯಲ್ಲಿ ಪ್ರತ್ಯುತ್ತರ ನೀಡಿದ್ದಾರೆ.

ಅವಹೇಳನಕಾರಿ ಸುದ್ದಿ ಪ್ರಕಟಿಸದಂತೆ ಕೋರ್ಟ್​ನಿಂದ ತಡೆಯಾಜ್ಞೆ ತಂದ ಜಗ್ಗೇಶ್
ಜಗ್ಗೇಶ್
Follow us
Mangala RR
| Updated By: ರಾಜೇಶ್ ದುಗ್ಗುಮನೆ

Updated on: Feb 29, 2024 | 9:56 AM

ನಟ, ರಾಜ್ಯಸಭಾ ಸದಸ್ಯ ಜಗ್ಗೇಶ್ (Jaggesh) ಅವರು ಸಿನಿಮಾ ಕೆಲಸ ಹಾಗೂ ರಾಜಕೀಯ ಎರಡನ್ನೂ ಸರಿದೂಗಿಸಿಕೊಂಡು ಹೋಗುತ್ತಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಹಾಗೂ ಕೆಲವು ಸುದ್ದಿ ಮಾಧ್ಯಮಗಳಲ್ಲಿ ಅವರ ಬಗ್ಗೆ ಅಪಪ್ರಚಾರ ಮಾಡುವ ಕೆಲಸ ಆಗುತ್ತಿದೆ. ಇವರಿಗೆ ಜಗ್ಗೇಶ್ ಬಿಸಿ ಮುಟ್ಟಿಸಿದ್ದಾರೆ. ಇಂಥವರ ವಿರುದ್ಧ ಜಗ್ಗೇಶ್ ಕೋರ್ಟ್ ಮೊರೆ ಹೋಗಿದ್ದಾರೆ. ತಮ್ಮ ವಿರುದ್ಧ ಅವಹೇಳನಾಕಾರಿ ಸುದ್ದಿ ಪ್ರಕಟ ಮಾಡದಂತೆ ತಡೆಯಾಜ್ಞೆ ತಂದಿದ್ದಾರೆ.

ನಟ ಜಗ್ಗೇಶ್ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರು ಅಭಿಮಾನಿಗಳ ಪ್ರಶ್ನೆಗೆ ಹಲವು ಬಾರಿ ಉತ್ತರಿಸಿದ್ದಿದೆ. ಇದರ ಜೊತೆಗೆ ಅವರು ತಮ್ಮ ಸಿನಿಮಾಗಳ ಬಗ್ಗೆ, ರಾಜಕೀಯ ವಿಚಾರಗಳ ಬಗ್ಗೆ ಅಭಿಪ್ರಾಯ ಹಂಚಿಕೊಳ್ಳುತ್ತಾ ಇರುತ್ತಾರೆ. ಇದೇ ಸೋಶಿಯಲ್ ಮೀಡಿಯಾದಲ್ಲಿ ಜಗ್ಗೇಶ್ ಬಗ್ಗೆ ಕೆಲವರು ಅಪಪ್ರಚಾರ ಮಾಡಿದ್ದಿದೆ. ಕೆಲವು ಸುದ್ದಿ ಮಾಧ್ಯಮಗಳು ಜಗ್ಗೇಶ್​ನ ಟೀಕಿಸಿದ್ದಿದೆ. ಇದಕ್ಕೆ ಜಗ್ಗೇಶ್ ಅವರು ತಮ್ಮದೇ ರೀತಿಯಲ್ಲಿ ಪ್ರತ್ಯುತ್ತರ ನೀಡಿದ್ದಾರೆ.

ಸಿಟಿ ಸಿವಿಲ್ ಹಾಗೂ ಸೆಷನ್ ನ್ಯಾಯಾಲಯದ ಆದೇಶದ ಪ್ರಕಾರ ಜಗ್ಗೇಶ್ ವಿರುದ್ಧ ಸುದ್ದಿಯನ್ನು ಅಥವಾ ಪ್ರಮಾಣಿಕರಿಸದ ಸುದ್ದಿಯನ್ನು ಮಾನಹಾನಿ ಆಗುವ ರೀತಿಯಲ್ಲಿ, ಅವಹೇಳನಕಾರಿಯಾಗಿ ಬಿತ್ತರಿಸುವಂತಿಲ್ಲ. ಇದು ತಾತ್ಕಾಲಿಕ ಆದೇಶವಾಗಿದೆ. ಏಪ್ರಿಲ್ 25ಕ್ಕೆ ಮುಂದಿನ ವಿಚಾರಣೆ ಇದೆ. ಜಗ್ಗೇಶ್ ಪರ ವಕೀಲರು ಇದನ್ನು ಎಲ್ಲರ ಗಮನಕ್ಕೆ ತಂದಿದ್ದಾರೆ.

ಇದನ್ನೂ ಓದಿ: ಕ್ಷಮೆ ಕೇಳದಿದ್ದರೆ ಪ್ರತಿಭಟನೆ, ಮನೆಗೆ ಮುತ್ತಿಗೆ: ಜಗ್ಗೇಶ್​ಗೆ ಎಚ್ಚರಿಕೆ

ಜಗ್ಗೇಶ್ ಅವರು ಹಲವು ವರ್ಷಗಳಿಂದ ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಹಾಸ್ಯ ಪಾತ್ರಗಳನ್ನು ಮಾಡಿ ಗಮನ ಸೆಳೆದ ಅವರು ನಂತರ ಹೀರೋ ಆಗಿ ಮಿಂಚಿದರು. ನಿರ್ದೇಶಕನಾಗಿ, ಗಾಯಕನಾಗಿಯೂ ಅವರು ಹೆಸರು ಮಾಡಿದ್ದಾರೆ. ಕಳೆದ ವರ್ಷ ಅವರ ನಟನೆಯ ‘ರಾಘವೇಂದ್ರ ಸ್ಟೋರ್ಸ್’, ‘ತೋತಾಪುರಿ 2’ ಸಿನಿಮಾಗಳು ರಿಲೀಸ್ ಆಗಿವೆ. ಈಗ ‘ರಂಗನಾಯಕ’ ಸಿನಿಮಾ ಬರುತ್ತಿದೆ. ಈ ಚಿತ್ರಕ್ಕೆ ‘ಮಠ’ ಖ್ಯಾತಿಯ ಗುರುಪ್ರಸಾದ್ ನಿರ್ದೇಶನ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ