AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು ಅತ್ಯಾಚಾರ ಪ್ರಕರಣದ ಆರೋಪಿಗಳನ್ನು ಬಂಧಿಸಿದ ಪೊಲೀಸರಿಗೆ 1 ಲಕ್ಷ ರೂ. ಬಹುಮಾನ ನೀಡಿದ ಜಗ್ಗೇಶ್​

ಈ ಪ್ರಕರಣದಲ್ಲಿ 5 ಜನರನ್ನು ಬಂಧಿಸಲಾಗಿದೆ. ಎಲ್ಲರೂ ತಿರುಪುರ ಮೂಲದವರು. ಇವರು ಆಗಾಗ ಮೈಸೂರು ನಗರಕ್ಕೆ ಬರುತ್ತಿದ್ದರು. 7ನೇ ತರಗತಿ 8 ತರಗತಿ ಓದಿದ ಇವರೆಲ್ಲರೂ ಕಾರ್ಮಿಕರಾಗಿದ್ದಾರೆ.

ಮೈಸೂರು ಅತ್ಯಾಚಾರ ಪ್ರಕರಣದ ಆರೋಪಿಗಳನ್ನು ಬಂಧಿಸಿದ ಪೊಲೀಸರಿಗೆ 1 ಲಕ್ಷ ರೂ. ಬಹುಮಾನ ನೀಡಿದ ಜಗ್ಗೇಶ್​
ಮೈಸೂರು ಅತ್ಯಾಚಾರ ಪ್ರಕರಣದ ಆರೋಪಿಗಳನ್ನು ಬಂಧಿಸಿದ ಪೊಲೀಸರಿಗೆ 1 ಲಕ್ಷ ರೂ. ಬಹುಮಾನ ನೀಡಿದ ಜಗ್ಗೇಶ್​
TV9 Web
| Updated By: ರಾಜೇಶ್ ದುಗ್ಗುಮನೆ|

Updated on:Aug 28, 2021 | 8:47 PM

Share

ಮೈಸೂರಿನ ವಿದ್ಯಾರ್ಥಿನಿ ಮೇಲೆ ನಡೆದ ಗ್ಯಾಂಗ್‌ರೇಪ್ ಪ್ರಕರಣ ಕರ್ನಾಟಕವನ್ನೇ ಬೆಚ್ಚಿ ಬೀಳಿಸಿದೆ. ಈ ಪ್ರಕರಣದ ಬೆನ್ನಲ್ಲೇ ರಾಜ್ಯದಲ್ಲಿ ಸಾಕಷ್ಟು ಆತಂಕ ಮನೆ ಮಾಡಿದೆ. ಹೆಣ್ಣುಮಕ್ಕಳಿಗೆ ಸರಿಯಾದ ರಕ್ಷಣೆ ಸಿಗುತ್ತಿಲ್ಲ ಎನ್ನುವ ಕೂಗು ಕೂಡ ಕೇಳಿ ಬಂದಿದೆ. ಅತ್ಯಾಚಾರ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ಐವರನ್ನು ಬಂಧಿಸಿದ್ದಾರೆ. ಅತ್ಯಾಚಾರ ಆರೋಪಿಗಳನ್ನು ಬಂಧಿಸಿದ ಪೊಲೀಸರಿಗೆ ನಟ ಜಗ್ಗೇಶ್​ ಅವರು ಒಂದು ಲಕ್ಷ ರೂಪಾಯಿ ಚೆಕ್​ ನೀಡಿದ್ದಾರೆ.

ಈ ಪ್ರಕರಣದಲ್ಲಿ 5 ಜನರನ್ನು ಬಂಧಿಸಲಾಗಿದೆ. ಎಲ್ಲರೂ ತಿರುಪುರ ಮೂಲದವರು. ಇವರು ಆಗಾಗ ಮೈಸೂರು ನಗರಕ್ಕೆ ಬರುತ್ತಿದ್ದರು. 7ನೇ ತರಗತಿ 8 ತರಗತಿ ಓದಿದ ಇವರೆಲ್ಲರೂ ಕಾರ್ಮಿಕರಾಗಿದ್ದಾರೆ. ಡ್ರೈವರ್​, ಕಾರ್ಪೆಂಟರ್​ ಸೇರಿದಂತೆ ಬೇರೆ ಬೇರೆ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ಅದರಲ್ಲಿ ಓರ್ವ 17 ವರ್ಷದವನಿದ್ದಾನೆ ಎನ್ನುವುದು ಪ್ರಾಥಮಿಕ ಮಾಹಿತಿಯಲ್ಲಿ ಲಭ್ಯವಾಗಿದೆ. ಇವರೇ ಅತ್ಯಾಚಾರ ನಡೆಸಿದ್ದರು. ಇವರನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳನ್ನು ಬಂಧಿಸಿದ ಪೊಲೀಸರಿಗೆ 1 ಲಕ್ಷ ರೂಪಾಯಿ ಬಹುಮಾನ ನೀಡಿದ್ದಾರೆ ನಟ ಜಗ್ಗೇಶ್. ಸದ್ಯ, ಗೃಹ ಸಚಿವರಿಗೆ 1 ಲಕ್ಷ ಚೆಕ್​ ಅನ್ನು ಜಗ್ಗೇಶ್ ಹಸ್ತಾಂತರಿಸಿದ್ದಾರೆ.

ಈ ಬಗ್ಗೆ ಟ್ವೀಟ್​ ಮಾಡಿರುವ ಅವರು, ‘ಕಾಲೇಜು ವಿದ್ಯಾರ್ಥಿನಿ ಅತ್ಯಾಚಾರ ಮಾಡಿದ ಕಾಮಪಿಪಾಸುಗಳ ಬಂಧಿಸಿದ ನನ್ನ ಕರುನಾಡಿನ ಹೆಮ್ಮೆಯ ಆರಕ್ಷಕರಿಗೆ ನನ್ನ ವೈಯಕ್ತಿಕ ಅಭಿನಂದನೆಗಳು. ನಮ್ಮ ರಾಜ್ಯದ ಪೊಲೀಸರ ಬಗ್ಗೆ ಹೆಮ್ಮೆ ಎನಿಸುತ್ತದೆ. ಪ್ರಕರಣ ಭೇದಿಸಿದ ನಲ್ಮೆಯ  ಪೊಲೀಸರಿಗೆ ನನ್ನ ಕಡೆಯಿಂದ 1 ಲಕ್ಷ ರೂಪಾಯಿ ಬಹುಮಾನ. ನಿಮ್ಮ ಸಾರ್ಥಕ ಸೇವೆ ಹೀಗೆ ಮುಂದುವರಿಯಲಿ. ರಾಷ್ಟ್ರಕ್ಕೆ ಮಾದರಿ ನಮ್ಮ ಪೊಲೀಸ್’ ಎಂದು ಬರೆದುಕೊಂಡಿದ್ದಾರೆ.

ಪೊಲೀಸರಿಗೆ ಅಭಿನಂದನೆ ಸಲ್ಲಿಸಿದ ಬಸವರಾಜ ಬೊಮ್ಮಾಯಿ

ಪ್ರಕರಣ ಸಂಬಂಧ ಐವರು ಆರೋಪಿಗಳನ್ನ ಬಂಧಿಸಿದ ಹಿನ್ನೆಲೆಯಲ್ಲಿ ಗೃಹ ಸಚಿವ ಅರಗ ಜ್ಞಾನೇಂದ್ರ ಮತ್ತು ಸಿಎಂ ಬಸವರಾಜ ಬೊಮ್ಮಾಯಿ ಅಭಿನಂದನೆ ಸಲ್ಲಿಸಿದ್ದಾರೆ. ಅಲ್ಪ ಸಮಯದಲ್ಲಿ ಐವರು ಆರೋಪಿಗಳನ್ನು ಸೆರೆಹಿಡಿದು, ವಿಚಾರಣೆಗೆ ಒಳಪಡಿಸುವ ಮೂಲಕ ದಕ್ಷತೆಯಿಂದ ಕೆಲಸ ಮಾಡಿದ್ದಾರೆ ಎಂದು ಪೊಲೀಸರನ್ನು ಮುಖ್ಯಮಂತ್ರಿ ಬೊಮ್ಮಾಯಿ ಅಭಿನಂದಿಸಿದ್ದಾರೆ.

ಇದನ್ನೂ ಓದಿ: ಜಗ್ಗೇಶ್​ ಪುತ್ರನ ‘ಕಾಗೆ ಮೊಟ್ಟೆ’ ಸಿನಿಮಾ ರಿಲೀಸ್​ಗೆ ರೆಡಿ; ಗುರುರಾಜ್​ ಚಿತ್ರದಲ್ಲಿ ರಜನಿಕಾಂತ್​ ಸ್ನೇಹಿತ ರಾಜ್ ಬಹದ್ದೂರ್​

Published On - 8:37 pm, Sat, 28 August 21