ಆರು ವಾರ ನಡೆದಾಡುವಂತಿಲ್ಲ, ಜಗ್ಗೇಶ್ ಕಾಲಿಗೆ ಏನಾಯ್ತು?

Jaggesh: ನಟ ಜಗ್ಗೇಶ್ ಕಾಲಿಗೆ ಪೆಟ್ಟು ಮಾಡಿಕೊಂಡಿದ್ದು ಆರು ವಾರಗಳ ವಿಶ್ರಾಂತಿ ತೆಗೆದುಕೊಳ್ಳುವಂತೆ ವೈದ್ಯರು ಸೂಚಿಸಿದ್ದಾರೆ.

ಆರು ವಾರ ನಡೆದಾಡುವಂತಿಲ್ಲ, ಜಗ್ಗೇಶ್ ಕಾಲಿಗೆ ಏನಾಯ್ತು?
ಜಗ್ಗೇಶ್
Follow us
ಮಂಜುನಾಥ ಸಿ.
|

Updated on:Jun 17, 2023 | 5:05 PM

ರಾಘವೇಂದ್ರ ಸ್ಟೋರ್ಸ್ (Raghavendra Stores) ಸಿನಿಮಾ ಬಿಡುಗಡೆ ಹಾಗೂ ರಾಜ್ಯ ವಿಧಾನಸಭೆ ಚುನಾವಣೆ ಮುಗಿಯುತ್ತಿದ್ದಂತೆ ಅಮೆರಿಕಕ್ಕೆ ಹಾರಿ ಆರಾಮವಾಗಿ ಕಾಲ ಕಳೆದಿದ್ದ ನಟ ಜಗ್ಗೇಶ್ (Jaggesh) ಕೆಲ ದಿನಗಳ ಹಿಂದಷ್ಟೆ ಭಾರತಕ್ಕೆ ಮರಳಿದ್ದರು. ಆದರೆ ಇದೀಗ ಜಗ್ಗೇಶ್ ಕಾಲಿನ ಮೂಳೆ ಮುರಿದಿದ್ದು ಆರು ವಾರಗಳ ವಿಶ್ರಾಂತಿಗೆ ವೈದ್ಯರು ಸೂಚಿಸಿದ್ದಾರೆ. ಈ ಬಗ್ಗೆ ಟ್ವಿಟ್ಟರ್​ನಲ್ಲಿ ಚಿತ್ರ ಹಂಚಿಕೊಂಡು ಜಗ್ಗೇಶ್ ಮಾಹಿತಿ ನೀಡಿದ್ದಾರೆ.

ಕಾಲಿಗೆ ಪ್ಲ್ಯಾಸ್ಟರ್ ಮಾದರಿ ಬ್ಯಾಂಡೇಜ್ ಹಾಕಲಾಗಿರುವ ಚಿತ್ರವನ್ನು ಟ್ವಿಟ್ಟರ್​ನಲ್ಲಿ ಜಗ್ಗೇಶ್ ಹಂಚಿಕೊಂಡಿದ್ದು, ”ಸಣ್ಣ ಅಚಾತುರ್ಯ ನಡಿಗೆಯಿಂದ ಪಾದದ ಮೂಳೆ ಮುರಿತ, 6ವಾರದ ದಿಘ್ಭಂಧನ ನಡಿಗೆಗೆ” ಎಂದು ಬರೆದುಕೊಂಡಿದ್ದಾರೆ. ನಡೆಯುವಾಗ ಆದ ಅಚಾತುರ್ಯದಿಂದ ಪಾದದ ಮೂಳೆ ಮುರಿತವಾಗಿದೆ ಎಂದು ಜಗ್ಗೇಶ್ ಹೇಳಿದ್ದಾರೆ. ಜಗ್ಗೇಶ್​ರ ಪೋಸ್ಟ್​ಗೆ ಪ್ರತಿಕ್ರಿಯಿಸಿರುವ ಹಲವರು ಗುರು ರಾಯರ ದಯೆಯಿಂದ ಶೀಘ್ರ ಗುಣಮುಖರಾಗುವಂತೆ ಹಾರೈಸಿದ್ದಾರೆ. ಇನ್ನು ಕೆಲವರು ನಮಗೂ ಇದೇ ರೀತಿ ಆಗಿದ್ದನ್ನು ಸಹ ನೆನಪಿಸಿಕೊಂಡಿದ್ದಾರೆ.

ಆದರೆ ಜಗ್ಗೇಶ್​ ಕಾಲಿಗೆ ಪೆಟ್ಟಾಗಿರುವ ಬಗ್ಗೆ ಮತ್ತೊಂದು ಸುದ್ದಿ ಸಹ ಹರಿದಾಡುತ್ತಿದೆ. ಇತ್ತೀಚೆಗೆ ಅಮೆರಿಕಕ್ಕೆ ಹೋಗಿದ್ದ ಜಗ್ಗೇಶ್ ಅಲ್ಲಿಂದ ವಾಪಸ್ ಬರುವಾಗ ವಿಮಾನದಲ್ಲಿ ಆದ ಘಟನೆಯಿಂದ ಕಾಲಿಗೆ ಪೆಟ್ಟು ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ. ವಿಮಾನ ಬೆಂಗಳೂರಿನಲ್ಲಿ ಭೂ ಸ್ಪರ್ಷ ಮಾಡುವ ಮುನ್ನ ಜರ್ಕ್ ಹೊಡೆದಿದ್ದರಿಂದ ಜಗ್ಗೇಶ್ ಕಾಲಿಗೆ ಪೆಟ್ಟಾಗಿದೆ ಎನ್ನಲಾಗುತ್ತಿದೆ. ಜಗ್ಗೇಶ್ ಮಾತ್ರವೇ ಅಲ್ಲದೆ ಅದೇ ವಿಮಾನದಲ್ಲಿದ್ದ ಇನ್ನೂ ಕೆಲವು ಪ್ರಯಾಣಿಕರಿಗೂ ಪೆಟ್ಟಾಗಿದೆ. ಗಗನ ಸಖಿಯರಿಬ್ಬರಿಗೂ ಪೆಟ್ಟಾಗಿದೆ ಎನ್ನಲಾಗುತ್ತಿದೆ. ಈ ಬಗ್ಗೆ ಸ್ಪಷ್ಟ ಮಾಹಿತಿ ಇನ್ನಷ್ಟೆ ಸಿಗಬೇಕಿದೆ.

ಆದರೆ ಅಮೆರಿಕದಿಂದ ಮರಳಿದ ಮೇಲೆ ಜಗ್ಗೇಶ್ ಅವರು ಪತ್ನಿ ಪರಿಮಳ ಜಗ್ಗೇಶ್ ಅವರೊಟ್ಟಿಗೆ ನೂತನ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿ ಅವರಿಗೆ ಶುಭ ಹಾರೈಸಿದ್ದರು ಆ ವೇಳೆ ಅವರು ಆರಾಮವಾಗಿದ್ದಂತೆ ಕಂಡು ಬಂದಿದ್ದರು. ಆದರೆ ಇಂದು ಟ್ವಿಟ್ಟರ್​ನಲ್ಲಿ ಚಿತ್ರ ಹಂಚಿಕೊಂಡಿದ್ದಾರೆ.

ಜಗ್ಗೇಶ್, ರಾಜಕೀಯ ಹಾಗೂ ಸಿನಿಮಾ ಎರಡನ್ನೂ ನಿಭಾಯಿಸಿಕೊಂಡು ಹೋಗುತ್ತಿದ್ದಾರೆ. ಬಿಜೆಪಿಯ ರಾಜ್ಯ ಮುಖಂಡರಾಗಿರುವ ಜಗ್ಗೇಶ್ ರಾಜ್ಯಸಭಾ ಸದಸ್ಯರೂ ಆಗಿದ್ದಾರೆ. ಸಿನಿಮಾಗಳಲ್ಲಿಯೂ ಬ್ಯುಸಿಯಾಗಿರುವ ಜಗ್ಗೇಶ್​ರ ನಟನೆಯ ರಾಘವೇಂದ್ರ ಸ್ಟೋರ್ಸ್ ಸಿನಿಮಾ ಎರಡು ತಿಂಗಳ ಹಿಂದಷ್ಟೆ ಬಿಡುಗಡೆ ಆಗಿ ಉತ್ತಮ ಪ್ರದರ್ಶನ ಕಂಡಿದೆ. ಇದೀಗ ತೋತಾಪುರಿ 2 ಹಾಗೂ ಇನ್ನೂ ಕೆಲವು ಸಿನಿಮಾಗಳಲ್ಲಿ ಜಗ್ಗೇಶ್ ತೊಡಗಿಸಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:44 pm, Sat, 17 June 23

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ