AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಲಿ ಉಗುರು ಪ್ರಕರಣ: ಅರಣ್ಯಾಧಿಕಾರಿಗಳ ಕ್ರಮ ಪ್ರಶ್ನಿಸಿ ಹೈಕೋರ್ಟ್​​ ಮೊರೆಹೋದ ಜಗ್ಗೇಶ್

‘ಪೂರ್ತಿ ಮನೆಯಲ್ಲಿನ ವಸ್ತುಗಳನ್ನು ಚೆಲ್ಲಾಪಿಲ್ಲಿ ಮಾಡಿದ್ದಾರೆ. ಸಂದರ್ಶನದಲ್ಲಿ ಹೇಳಿದ ಮಾತನ್ನಾಧರಿಸಿ ತೇಜೋವಧೆ ಮಾಡಲಾಗಿದೆ. ಅರಣ್ಯಾಧಿಕಾರಿಗಳ ಕ್ರಮ ಕಾನೂನುಬಾಹಿರವೆಂದು ಘೋಷಿಸಬೇಕು’ ಎಂಬುದಾಗಿ ಜಗ್ಗೇಶ್ ಪರ ವಕೀಲರು ಅರ್ಜಿಯಲ್ಲಿ ತಿಳಿಸಿದ್ದಾರೆ.

ಹುಲಿ ಉಗುರು ಪ್ರಕರಣ: ಅರಣ್ಯಾಧಿಕಾರಿಗಳ ಕ್ರಮ ಪ್ರಶ್ನಿಸಿ ಹೈಕೋರ್ಟ್​​ ಮೊರೆಹೋದ ಜಗ್ಗೇಶ್
ಜಗ್ಗೇಶ್
ರಮೇಶ್​ ಎಮ್​.
| Edited By: |

Updated on:Oct 26, 2023 | 12:33 PM

Share

ನಟ ಜಗ್ಗೇಶ್ (Jaggesh) ಅವರು ಹುಲಿ ಉಗುರು ಹೊಂದಿರುವ ಪ್ರಕರಣದಲ್ಲಿ ಸಂಕಷ್ಟ ಅನುಭವಿಸಿದ್ದಾರೆ. ಅವರ ಮನೆಗೆ ಆಗಮಿಸಿ ಅರಣ್ಯಾಧಿಕಾರಿಗಳು ಶೋಧ ನಡೆಸಿದ್ದಾರೆ. ಈ ವಿಚಾರದಲ್ಲಿ ಜಗ್ಗೇಶ್ ಅವರು ಅಸಮಾಧಾನಗೊಂಡಂತಿದೆ. ಅವರು ಈ ಪ್ರಕರಣದಲ್ಲಿ ಕೋರ್ಟ್ ಮೊರೆ ಹೋಗಿದ್ದಾರೆ. ಅರಣ್ಯಾಧಿಕಾರಿಗಳ ಕ್ರಮವನ್ನು ಅವರು ಪ್ರಶ್ನಿಸಿದ್ದಾರೆ. ಜೊತೆಗೆ, ಅರಣ್ಯಾಧಿಕಾರಿಗಳ ಕ್ರಮವನ್ನು ಕಾನೂನುಬಾಹಿರವೆಂದು ಘೋಷಿಸಲು ಮನವಿ ಮಾಡಿದ್ದಾರೆ.

ಏನಿದು ಪ್ರಕರಣ?

ಜಗ್ಗೇಶ್ ಅವರು 20ನೇ ವಯಸ್ಸಿನಲ್ಲಿದ್ದಾಗ ಅವರ ತಾಯಿ ಹುಲಿಯ ಉಗುರಿನ ಪೆಂಡೆಂಟ್​ನ ಗಿಫ್ಟ್ ಆಗಿ ನೀಡಿದ್ದರು. ಇದು ಜಗ್ಗೇಶ್ ಕೊರಳಲ್ಲೇ ಇತ್ತು. ಈ ಬಗ್ಗೆ ಅವರು ಸಂದರ್ಶನದಲ್ಲಿ ಹೇಳಿಕೊಂಡಿದ್ದರು. ಹುಲಿ ಉಗುರು ಹೊಂದಿರುವ ಪ್ರಕರಣದಲ್ಲಿ ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಅವರನ್ನು ಬಂಧಿಸಿದ ಬಳಿಕ ಜಗ್ಗೇಶ್ ಬಳಿಯೂ ಹುಲಿ ಉಗುರು ಇದೆ ಎನ್ನುವ ವಿಚಾರ ಮುನ್ನೆಲೆಗೆ ಬಂದಿತ್ತು.

ಕೋರ್ಟ್​ಗೆ ಜಗ್ಗೇಶ್ ಮನವಿ

ನಟ ಜಗ್ಗೇಶ್ ಕೋರ್ಟ್​ಗೆ ಮನವಿ ಮಾಡಿದ್ದಾರೆ. ‘ಅರಣ್ಯಾಧಿಕಾರಿಗಳು ನೀಡಿದ ನೋಟಿಸ್ ರದ್ದು ಪಡಿಸಬೇಕು. ನೋಟಿಸ್​​ಗೆ ಉತ್ತರಿಸುವ ಮೊದಲೇ 14 ಅಧಿಕಾರಿಗಳಿಂದ ದಾಳಿ ನಡೆದಿದೆ. ಪೂರ್ತಿ ಮನೆಯಲ್ಲಿನ ವಸ್ತುಗಳನ್ನು ಚೆಲ್ಲಾಪಿಲ್ಲಿ ಮಾಡಿದ್ದಾರೆ. ಸಂದರ್ಶನದಲ್ಲಿ ಹೇಳಿದ ಮಾತನ್ನಾಧರಿಸಿ ತೇಜೋವಧೆ ಮಾಡಲಾಗಿದೆ. ಅರಣ್ಯಾಧಿಕಾರಿಗಳ ಕ್ರಮ ಕಾನೂನುಬಾಹಿರವೆಂದು ಘೋಷಿಸಬೇಕು’ ಎಂಬುದಾಗಿ ಜಗ್ಗೇಶ್ ಪರ ವಕೀಲರು ಅರ್ಜಿಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ‘ಕಾನೂನು ದೊಡ್ಡದು, ಅಧಿಕಾರಿಗಳು ಕೇಳಿದ ವಸ್ತು ಒಪ್ಪಿಸಲಾಗಿದೆ’; ಜಗ್ಗೇಶ್ ಭಾವುಕ ಪೋಸ್ಟ್

ಜಗ್ಗೇಶ್ ಟ್ವೀಟ್​ನಲ್ಲೇನಿದೆ?

‘ಕಾನೂನು ದೊಡ್ಡದು. ಅಧಿಕಾರಿಗಳು ಕೇಳಿದವಸ್ತು ಒಪ್ಪಿಸಲಾಗಿದೆ. ಅಮ್ಮ ನೀಡಿದ ಬಹಳ ಹಳೆಯ ಲಾಕೆಟ್ ಇದು ಎಂದು ತಿಳಿಸಿದ್ದೇನೆ. ಎಷ್ಟೋ ದೋಚುವ ಮನುಷ್ಯರು, ದೇಶದ್ರೋಹಿಗಳು, ಕೊಲೆ ಪಾತಕರು, ಸಮಾಜ ಘಾತುಕರಿಗಿಂತ ನನ್ನತಾಯಿ ಕಾಣಿಕೆ ಬಗ್ಗೆ ತಲೆಕೆಡಿಸಿಕೊಂಡ ದೇವರುಗಳಿಗೆ ಧನ್ಯವಾದ. ತಲೆತಗ್ಗಿಸುವ ಯಾವ ಕೆಲಸ ಮಾಡಿಲ್ಲ, ಮಾಡೋದೂ ಇಲ್ಲ’ ಎಂದು ಜಗ್ಗೇಶ್ ಟ್ವೀಟ್ ಮಾಡಿದ್ದಾರೆ.

‘ಒಂದು ವಿಷಯ ಅದ್ಭುತವಾಗಿ ಅರಿತೆ. ಪ್ರೀತಿಸುವವರು 1000 ಜನ ಇದ್ದರೂ ವಿಷಯವಿಲ್ಲದೆ ದ್ವೇಷ ಮಾಡುವ 100 ಜನರು ಇದ್ದೇ ಇರುತ್ತಾರೆ. ಒಂದು ವಿಷಯ ನೆನಪಿಟ್ಟುಕೊಳ್ಳಿ. ಒಳ್ಳೆಯ ಗುಣ, ನಡತೆ ಇದ್ದಾಗ ಕೊಲ್ಲೋಕೆ ಸಾವಿರಮಂದಿ ಬಂದರೂ ಕಾಯಲು ಒಬ್ಬ ಬರುತ್ತಾನೆ ಅವನೇ ದೇವರು. ಬದುಕಲ್ಲಿ ಸಾಧ್ಯವಾದರೆ ಒಬ್ಬರಿಗೆ ಒಳ್ಳೆಯದನ್ನು ಮಾಡಿ. ಅನ್ಯರಿಗೆ ಕೆಡುಕುಬಯಸಿ ಬಾಳಿದರೆ ನಾಶ’ ಎಂದು ಅವರು ಬರೆದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 12:18 pm, Thu, 26 October 23

Follow Us
ರಮೇಶ್​ ಎಮ್​.
ರಮೇಶ್​ ಎಮ್​.

ರಮೇಶ್​ ಎಂ ವಿಶೇಷ ವರದಿಗಾರರಾಗಿದ್ದಾರೆ, ಮೂಲತಃ ಕಾನೂನು ಪದವೀಧರನಾಗಿದ್ದು ಕಳೆದ 18 ವರ್ಷಗಳಿಂದ ಟಿವಿ9 ಸುದ್ದಿ ವಾಹಿನಿಯಲ್ಲಿ ಕಾನೂನು ಸಂಬಂಧಿತ ವರದಿ ನೀಡುತ್ತಿದ್ದಾರೆ. ಹೈಕೋರ್ಟ್, ಸುಪ್ರೀಂ ಕೋರ್ಟ್ ಹಾಗೂ ವಿಚಾರಣಾ ನ್ಯಾಯಾಲಯಗಳ ಪ್ರಮುಖ ಪ್ರಕರಣಗಳ ವರದಿಗಾರಿಕೆ ಮಾಡುತ್ತಿದ್ದು, ಬೆಂಗಳೂರಿನ ನಿವಾಸಿಯಾಗಿದ್ದಾರೆ.

Read More
17 ವರ್ಷ ಸೇವೆ ಸಲ್ಲಿಸಿ ಹುಟ್ಟೂರಿಗೆ ಮರಳಿದ ಯೋಧನಿಗೆ ಅದ್ಧೂರಿ ಸ್ವಾಗತ!
17 ವರ್ಷ ಸೇವೆ ಸಲ್ಲಿಸಿ ಹುಟ್ಟೂರಿಗೆ ಮರಳಿದ ಯೋಧನಿಗೆ ಅದ್ಧೂರಿ ಸ್ವಾಗತ!
ಕೆಪಿಎಸ್‌ಸಿ ಅಕ್ರಮ: 70 ಆರ್‌ಟಿಓ ಇನ್ಸ್‌ಪೆಕ್ಟರ್‌ ಹೆಚ್ಚುವರಿ ಆಯ್ಕೆಗೆ ತಡೆ
ಕೆಪಿಎಸ್‌ಸಿ ಅಕ್ರಮ: 70 ಆರ್‌ಟಿಓ ಇನ್ಸ್‌ಪೆಕ್ಟರ್‌ ಹೆಚ್ಚುವರಿ ಆಯ್ಕೆಗೆ ತಡೆ
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್