AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jaggesh’s Son Car Accident: ನಟ ಜಗ್ಗೇಶ್​ ಪುತ್ರ ಯತಿರಾಜ್​ ಇದ್ದ ಕಾರು ಅಪಘಾತ; ಹೈದರಾಬಾದ್​ ರಸ್ತೆಯಲ್ಲಿ ಅವಘಡ

ಬೆಂಗಳೂರು ಹೈದರಾಬಾದ್​ ರಸ್ತೆಯಲ್ಲಿ ಚಲಿಸುವಾಗ ಯತಿರಾಜ್​ ಅವರ ಕಾರು ಮರಕ್ಕೆ ಡಿಕ್ಕಿ ಹೊಡೆದಿರುವುದು ತಿಳಿದುಬಂದಿದೆ. ಅದೃಷ್ಟವಶಾತ್​ ಕಾರಿನಲ್ಲಿದ್ದರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಚಿಕ್ಕಬಳ್ಳಾಪುರ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

Jaggesh's Son Car Accident: ನಟ ಜಗ್ಗೇಶ್​ ಪುತ್ರ ಯತಿರಾಜ್​ ಇದ್ದ ಕಾರು ಅಪಘಾತ; ಹೈದರಾಬಾದ್​ ರಸ್ತೆಯಲ್ಲಿ ಅವಘಡ
ಜಗ್ಗೇಶ್​ ಪುತ್ರನಿದ್ದ ಕಾರು ಅಪಘಾತ
TV9 Web
| Edited By: |

Updated on:Jul 01, 2021 | 3:24 PM

Share

ಚಿಕ್ಕಬಳ್ಳಾಪುರ: ಕನ್ನಡ ಚಿತ್ರರಂಗದ ಹಿರಿಯ ನಟ ಜಗ್ಗೇಶ್ ಅವರ ಪುತ್ರ ಯತಿರಾಜ್​ ರಸ್ತೆ ಅಪಘಾತಕ್ಕೆ ತುತ್ತಾಗಿದ್ದಾರೆ. ಯತಿರಾಜ್​ ಅವರ ಕಾರು ಅಪಘಾತಕ್ಕೀಡಾಗಿದ್ದು, ಹೈದರಾಬಾದ್​ ರಸ್ತೆಯಲ್ಲಿ ಘಟನೆ ನಡೆದಿದೆ. ಬೆಂಗಳೂರು ಹೈದರಾಬಾದ್​ ರಸ್ತೆಯಲ್ಲಿ ಚಲಿಸುವಾಗ ಯತಿರಾಜ್​ ಅವರ ಕಾರು ಹೆದ್ದಾರಿಯ ಡಿವೈಡರ್​ಗೆ ಡಿಕ್ಕಿ ಹೊಡೆದಿರುವುದು ತಿಳಿದುಬಂದಿದೆ.

ನಟ ಜಗ್ಗೇಶ್​ ಅವರ ಕಿರಿಯ ಮಗ ಯತಿರಾಜ್​ ಪ್ರಯಾಣಿಸುತ್ತಿದ್ದ ಕಾರು ಚಿಕ್ಕಬಳ್ಳಾಪುರ ತಾಲೂಕಿನ ಅಗಲಗುರ್ಕಿ ಗ್ರಾಮದ ಬಳಿ ಅಪಘಾತಕ್ಕೀಡಾಗಿದೆ. ಹೆದ್ದಾರಿ ಡಿವೈಡರ್​ಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನ ಮುಂಭಾಗ ನುಜ್ಜುಗುಜ್ಜಾಗಿದೆ. ಬೆಂಗಳೂರು ಹೈದರಾಬಾದ್ ರಸ್ತೆಯ ಅಗಲಗುರ್ಕಿ ಬಳಿ ಕಾರು ನಿಯಂತ್ರಣ ತಪ್ಪಿದ ಪರಿಣಾಮ ಅವಘಡ ಸಂಭವಿಸಿದ್ದು, ಅದೃಷ್ಟವಶಾತ್​ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಚಿಕ್ಕಬಳ್ಳಾಪುರ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

JAGGESH'S SON CAR ACCIDENT

ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿದ ಪೊಲೀಸರು

JAGGESH'S SON CAR ACCIDENT

ಜಗ್ಗೇಶ್​ ಪುತ್ರ ಗುರುರಾಜ್​ ಚಲಿಸುತ್ತಿದ್ದ ಕಾರು ಅಪಘಾತ

ಹೈದರಾಬಾದ್​ನಿಂದ ಬೆಂಗಳೂರು ಕಡೆಗೆ ಬರುತ್ತಿದ್ದ KA 51 ME 9339 ಸಂಖ್ಯೆಯ ಬಿಳಿ ಬಣ್ಣದ BMW ಕಾರು ಅಪಘಾತಕ್ಕೆ ತುತ್ತಾಗಿದ್ದು, ಕಾರಿನ ಮುಂಬಾಗ ಸಂಪೂರ್ಣ ನುಜ್ಜುಗುಜ್ಜಾಗಿದೆ. ಜಗ್ಗೇಶ್​ ಪುತ್ರ ಯತಿರಾಜ್ ಪ್ರಾಣಾಪಾಯದಿಂದ ಪಾರಾಗಿದ್ದು, ಕಣ್ಣು ಮತ್ತು ಕಿವಿಯ ಬಳಿ ಸಣ್ಣ, ಪುಟ್ಟ ಗಾಯ ಆಗಿದೆ. ಸದ್ಯ ಗಾಯಕ್ಕೆ ಚಿಕಿತ್ಸೆ ಪಡೆಯಲೆಂದು ಸ್ಥಳಿಯ ಆಸ್ಪತ್ರೆಗೆ ತೆರಳಿದ್ದಾರೆ. ಕಾರಿನ ಟೈರ್ ಏಕಾಏಕಿ ಬ್ಲಾಸ್ಟ್ ಆದ ಕಾರಣ ನಿಯಂತ್ರಣ ತಪ್ಪಿ ಡಿವೈಡರ್​​ಗೆ ಡಿಕ್ಕಿ ಹೊಡೆದಿದೆ ಎಂಬ ಮಾಹಿತಿ ಲಭ್ಯವಾಗಿದೆ. ಅದೃಷ್ಟವಶಾತ್​ ಬೇರೆ ಯಾವುದೇ ವಾಹನಗಳು ಆ ಸಂದರ್ಭದಲ್ಲಿ ವೇಗವಾಗಿ ಬರುತ್ತಿರಲಿಲ್ಲವಾದ್ದರಿಂದ ಯಾವುದೇ ದೊಡ್ಡ ಸಮಸ್ಯೆ ಆಗಿಲ್ಲ.

ಕಾರನ್ನು ಸ್ವತಃ ಯತಿರಾಜ್ ಡ್ರೈವ್ ಮಾಡುತ್ತಿದ್ದರು. ಆದರೆ, ಹೇಗೆ ಅಪಘಾತವಾಯಿತು ಎನ್ನುವ ಬಗ್ಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಸದ್ಯಕ್ಕೆ ಯತಿರಾಜ್ ಅವರ ಆರೋಗ್ಯ ಸ್ಥಿತಿ ಚೆನ್ನಾಗಿದೆ ಎಂದು ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ. ಯತಿರಾಜ್​ ಬಲಗೈಗೆ ಸಣ್ಣ ಗಾಯವಾಗಿದೆ. ತೀರಾ ಗಂಭೀರ ಗಾಯಗಳೇನೂ ಆಗಿಲ್ಲ. ಹೀಗಾಗಿ ಯಾರೂ ಆತಂಕ ಪಡುವ ಅಗತ್ಯವಿಲ್ಲ ಎಂದು ಜಗ್ಗೇಶ್​ ಕುಟುಂಬದಿಂದ ಮಾಹಿತಿ ಲಭ್ಯವಾಗಿದೆ.

ಇದನ್ನೂ ಓದಿ: ಕಣ್ಮುಚ್ಚಿ ಬಿಡುವಷ್ಟರಲ್ಲಿ ಭೀಕರ ಅಪಘಾತ; ಪ್ರಯಾಣಿಕ ಸ್ಥಳದಲ್ಲೇ ಸಾವು

ಸಂಚಾರಿ ವಿಜಯ್​ ಬಳಿಕ ಮತ್ತೋರ್ವ ನಟನಿಗೆ ರಸ್ತೆ ಅಪಘಾತ; ಆಸ್ಪತ್ರೆಗೆ ದಾಖಲು, ಐಸಿಯುನಲ್ಲಿ ಚಿಕಿತ್ಸೆ

Published On - 1:13 pm, Thu, 1 July 21

Follow Us
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಡಿಸಿಎಂ ಡಿಕೆ ಶಿವಕುಮಾರ್ ಮನೆಗೆ ಬಂದವು 3 ಹೊಸ ಎಲೆಕ್ಟ್ರಿಕ್ ಕಾರು!
ಡಿಸಿಎಂ ಡಿಕೆ ಶಿವಕುಮಾರ್ ಮನೆಗೆ ಬಂದವು 3 ಹೊಸ ಎಲೆಕ್ಟ್ರಿಕ್ ಕಾರು!
ಪ್ರಧಾನಿ ಮೋದಿ ಸಹೋದರ ಪ್ರಹ್ಲಾದ್ ದಾಮೋದರ್ ದಾಸ್ ಮೋದಿ ಪುತ್ತೂರಿಗೆ ಭೇಟಿ
ಪ್ರಧಾನಿ ಮೋದಿ ಸಹೋದರ ಪ್ರಹ್ಲಾದ್ ದಾಮೋದರ್ ದಾಸ್ ಮೋದಿ ಪುತ್ತೂರಿಗೆ ಭೇಟಿ
ಗ್ರಹಣ ಕಾಲದ ಬಗ್ಗೆ ಅರ್ಚಕ ಸೋಮಸುಂದರ್ ದೀಕ್ಷಿತ್ ಹೇಳಿದ್ದೇನು?
ಗ್ರಹಣ ಕಾಲದ ಬಗ್ಗೆ ಅರ್ಚಕ ಸೋಮಸುಂದರ್ ದೀಕ್ಷಿತ್ ಹೇಳಿದ್ದೇನು?