ಜಗ್ಗೇಶ್​ ಪುತ್ರನ ‘ಕಾಗೆ ಮೊಟ್ಟೆ’ ಸಿನಿಮಾ ರಿಲೀಸ್​ಗೆ ರೆಡಿ; ಗುರುರಾಜ್​ ಚಿತ್ರದಲ್ಲಿ ರಜನಿಕಾಂತ್​ ಸ್ನೇಹಿತ ರಾಜ್ ಬಹದ್ದೂರ್​

ಲಾಕ್​ಡೌನ್​ಗಿಂತಲೂ ಮುನ್ನವೇ ‘ಕಾಗೆ ಮೊಟ್ಟೆ’ ಸಿನಿಮಾ ರಿಲೀಸ್​ಗೆ ಸಿದ್ಧವಾಗಿತ್ತು. ಈಗ ಕೊರೊನಾ ಎರಡನೇ ಅಲೆ ಕಡಿಮೆ ಆಗುತ್ತಿದ್ದು, ಸೆಪ್ಟೆಂಬರ್​ ಎರಡನೇ ವಾರವೇ ಬಿಡುಗಡೆಗೆ ಸೂಕ್ತ ಎಂದು ನಿರ್ಮಾಪಕರು ನಿರ್ಧರಿಸಿದ್ದಾರೆ.

ಜಗ್ಗೇಶ್​ ಪುತ್ರನ ‘ಕಾಗೆ ಮೊಟ್ಟೆ’ ಸಿನಿಮಾ ರಿಲೀಸ್​ಗೆ ರೆಡಿ; ಗುರುರಾಜ್​ ಚಿತ್ರದಲ್ಲಿ ರಜನಿಕಾಂತ್​ ಸ್ನೇಹಿತ ರಾಜ್ ಬಹದ್ದೂರ್​
ತನುಜಾ, ಗುರುರಾಜ್
Follow us
| Updated By: ಮದನ್​ ಕುಮಾರ್​

Updated on: Aug 27, 2021 | 4:32 PM

ನಟ ಜಗ್ಗೇಶ್​ ಅವರು ಇಬ್ಬರೂ ಪುತ್ರರು ಚಿತ್ರರಂಗದಲ್ಲಿದ್ದಾರೆ. ಆ ಪೈಕಿ ಮೊದಲ ಪುತ್ರ ಗುರುರಾಜ್​ ನಟಿಸಿರುವ ‘ಕಾಗೆ ಮೊಟ್ಟೆ’ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಸೆಪ್ಟೆಂಬರ್ 2ನೇ ವಾರದಲ್ಲಿ ಈ ಸಿನಿಮಾ ಬಿಡುಗಡೆ ಆಗಲಿದೆ. ವಿಶೇಷ ಎಂದರೆ, ಈ ಸಿನಿಮಾದಲ್ಲಿ ರಜನಿಕಾಂತ್​ ಅವರ ಆಪ್ತ ಸ್ನೇಹಿತ ರಾಜ್​ ಬಹದ್ದೂರ್​ ನಟಿಸಿದ್ದಾರೆ. ಮುಸ್ಲಿಂ ವ್ಯಕ್ತಿಯ ಪಾತ್ರದಲ್ಲಿ ಅವರು ಕಾಣಿಸಿಕೊಂಡಿದ್ದಾರೆ. ಆ ಕಾರಣದಿಂದಲೂ ‘ಕಾಗೆ ಮೊಟ್ಟೆ’ ಸಿನಿಮಾ ಮೇಲೆ ಚಿತ್ರಪ್ರೇಮಿಗಳಿಗೆ ಕೌತುಕ ಮೂಡಿದೆ. ‘ಪಿಳ್ಳಾ, ಗೋವಿ, ಕೃಷ್ಣನ ಕಥೆ’ ಎನ್ನುವ ಟ್ಯಾಗ್‌ಲೈನ್ ಈ ಚಿತ್ರಕ್ಕಿದೆ.

ಈ ಸಿನಿಮಾ ಕಥೆ ಏನು?

ಮೂವರು ಲೋಕಲ್ ಹುಡುಗರ ಕಥೆಯನ್ನಿಟ್ಟುಕೊಂಡು ನಿರ್ದೇಶಕ‌ ಚಂದ್ರಹಾಸ ಅವರು ಈ ಚಿತ್ರವನ್ನು ನಿರೂಪಿಸಿದ್ದಾರೆ. ಕಾಗೆ ಶನೀಶ್ವರನ ವಾಹನ. ಶನಿ ಹೆಗಲೇರಿದರೆ ಕೊನೆಯವರೆಗೆ ಬಿಡಲ್ಲ ಎನ್ನುವ ಮಾತಿದೆ. ಹಾಗೆಯೇ, ಈ ಮೂವರು ಹುಡುಗರು ಯಾರ ಹಿಂದೆ ಬಿದ್ದರೂ ಸುಲಭದಲ್ಲಿ ಬಿಡುವವರೇ ಅಲ್ಲ. ಆರಂಭದಲ್ಲಿ ಕೇವಲ ಮೊಟ್ಟೆಯಂತಿರುವ ಇವರು ಬೆಳೆದಮೇಲೆ ಯಾವ ರೀತಿ ಆಗಬಹುದು ಎಂಬ ಪರಿಕಲ್ಪನೆಯೊಂದಿಗೆ ಚಂದ್ರಹಾಸ್ ಅವರು ಈ ಚಿತ್ರವನ್ನು ನಿರ್ದೇಶಿಸಿದ್ದಾರೆ.

ಹಳ್ಳಿಯಲ್ಲಿ ಸಣ್ಣಪುಟ್ಟ ರಾಬರಿ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ಈ ಮೂವರು ಹುಡುಗರು ಒಮ್ಮೆ ಒಂದು ದೊಡ್ಡ ಉದ್ದೇಶ ಇಟ್ಟುಕೊಂಡು ಬೆಂಗಳೂರಿಗೆ ಆಗಮಿಸುತ್ತಾರೆ. ಯಾವುದೇ ಹಿನ್ನೆಲೆ ಇಲ್ಲದೆ ಸಿಟಿಗೆ ಬಂದ ಇವರು ತಾವಂದುಕೊಂಡಿದ್ದನ್ನು ಮಾಡುತ್ತಾರೋ, ಇಲ್ಲವೋ ಎನ್ನುವುದೇ ಕಾಗೆ ಮೊಟ್ಟೆ ಚಿತ್ರದ ಕಥಾಹಂದರ.

ಲಾಕ್‌ಡೌನ್‌ಗೂ ಮುಂಚೆಯೇ ರೆಡಿಯಾಗಿದ್ದ ಚಿತ್ರ:

‘ಕಾಗೆ ಮೊಟ್ಟೆ’ ಸಿನಿಮಾದ ಎಲ್ಲ ಕೆಲಸಗಳೂ ಮುಗಿದಿವೆ. ಲಾಕ್​ಡೌನ್​ಗಿಂತಲೂ ಮುನ್ನವೇ ಈ ಸಿನಿಮಾ ರಿಲೀಸ್​ಗೆ ಸಿದ್ಧವಾಗಿತ್ತು. ಈಗ ಕೊರೊನಾ ಎರಡನೇ ಅಲೆ ಕಡಿಮೆ ಆಗುತ್ತಿದ್ದು, ಸೆಪ್ಟೆಂಬರ್​ ಎರಡನೇ ವಾರವೇ ಬಿಡುಗಡೆಗೆ ಸೂಕ್ತ ಎಂದು ನಿರ್ಮಾಪಕರು ನಿರ್ಧರಿಸಿದ್ದಾರೆ. ಈ ಚಿತ್ರದಲ್ಲಿ ಗುರುರಾಜ್ ಜಗ್ಗೇಶ್ ಜೊತೆ ಕೆ. ಮಾದೇಶ್ ಹಾಗೂ ಹೇಮಂತ್ ಅವರು ಫ್ರೆಂಡ್ಸ್​ ಪಾತ್ರದಲ್ಲಿ ನಟಿಸಿದ್ದಾರೆ. ನಟಿ ತನುಜಾ ಅವರು ಈ ಚಿತ್ರದ ಹೀರೋಯಿನ್​. ಸಹ ನಿರ್ಮಾಪಕರಾಗಿ ಸುಬ್ಬರಾಯುಡು ಹಾಗೂ ಹೆಚ್.ಎನ್. ಶ್ರೀನಿವಾಸಯ್ಯ ಇವರ ಜೊತೆ ಕೈಜೋಡಿಸಿದ್ದಾರೆ.

ಹಾಡು ಬರೆದು ದನಿ ನೀಡಿದ ಜಗ್ಗೇಶ್​:

ಕೊಳ್ಳೇಗಾಲ, ಚಾಮರಾಜನಗರ ಅಲ್ಲದೆ ಬೆಂಗಳೂರಿನ ಹಲವಾರು ಸ್ಲಂಗಳಲ್ಲಿ ಚಿತ್ರದ ಶೂಟಿಂಗ್ ನಡೆಸಲಾಗಿದೆ. ಮೂವರು ಹುಡುಗರಿಗೆ ನಗರದಲ್ಲಿ ಬೆನ್ನೆಲುಬಾಗಿ ನಿಲ್ಲುವ ವೇಶ್ಯೆಯ ಪಾತ್ರವನ್ನು ನಟಿ ಸೌಜನ್ಯ ನಿರ್ವಹಿಸಿದ್ದಾರೆ. ಚಿತ್ರದಲ್ಲಿ 2 ಹಾಡುಗಳಿವೆ. ಶ್ರೀವತ್ಸ ಸಂಗೀತ ನಿರ್ದೇಶನ ಮಾಡಿದ್ದಾರೆ. ನಾಗೇಂದ್ರ ಪ್ರಸಾದ್, ಜಯಂತ್ ಕಾಯ್ಕಿಣಿ, ಕವಿರಾಜ್ ಸಾಹಿತ್ಯ ರಚಿಸಿದ್ದಾರೆ. ನಟ ಜಗ್ಗೇಶ್ ಒಂದು ಹಾಡು ಬರೆದಿರುವುದು ಮಾತ್ರವಲ್ಲದೆ, ಅದಕ್ಕೆ ತಾವೇ ದನಿಯಾಗಿದ್ದಾರೆ. ಪಿ.ಎಲ್. ರವಿ ಛಾಯಾಗ್ರಹಣ ಮಾಡಿದ್ದಾರೆ.

ಇದನ್ನೂ ಓದಿ:

‘ತೋತಾಪುರಿ’ ಹಿಡಿದು ನಗಿಸಲು ಬಂದ ಜಗ್ಗೇಶ್​; ‘ನೀರ್​ ದೋಸೆ’ ಜೋಡಿಯ ನಗೆ ಹಬ್ಬ

ದುಡ್ಡಿಲ್ಲದಾಗ ರವಿಚಂದ್ರನ್​ ಬಳಿ 200 ರೂಪಾಯಿ ಕೇಳಿದ್ದ ಜಗ್ಗೇಶ್​; ಕ್ರೇಜಿಸ್ಟಾರ್​ ಉತ್ತರ ಹೇಗಿತ್ತು?

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ