‘ಕಾರಣಾಂತರಗಳಿಂದ ನಿಮ್ಮಿಷ್ಟದ ರಸದೌತಣ ಸ್ವಲ್ಪ ವಿಳಂಬವಾಗುತ್ತಿದೆ’; ಹೊಂಬಾಳೆ ಫಿಲ್ಮ್ಸ್ ಹೊಸ ಘೋಷಣೆ

‘ರಾಘವೇಂದ್ರ ಸ್ಟೋರ್ಸ್​’ ಸಿನಿಮಾ ಟೀಸರ್ ಮೂಲಕ ಸಾಕಷ್ಟು ಗಮನ ಸೆಳೆದಿದೆ. ಈ ಟೀಸರ್​ನಲ್ಲಿ ಹಾಸ್ಯದ ಹೊಳೆ ಹರಿದಿತ್ತು. ಇದೇ ಮೊದಲ ಬಾರಿಗೆ ಜಗ್ಗೇಶ್ ಹಾಗೂ ಸಂತೋಷ್ ಆನಂದ್​ರಾಮ್ ಒಂದಾಗಿದ್ದಾರೆ. ಈ ಕಾಂಬಿನೇಷನ್​ಮೇಲೆ ಸಾಕಷ್ಟು ನಿರೀಕ್ಷೆ ಇದೆ.

‘ಕಾರಣಾಂತರಗಳಿಂದ ನಿಮ್ಮಿಷ್ಟದ ರಸದೌತಣ ಸ್ವಲ್ಪ ವಿಳಂಬವಾಗುತ್ತಿದೆ’; ಹೊಂಬಾಳೆ ಫಿಲ್ಮ್ಸ್ ಹೊಸ ಘೋಷಣೆ
ವಿಜಯ್
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Jul 18, 2022 | 8:48 PM

ವಿಜಯ್ ಕಿರಗಂದೂರು (Vijay Kirgandur) ಒಡೆತನದ ‘ಹೊಂಬಾಳೆ ಫಿಲ್ಮ್ಸ್​’ (Hombale Films) ಸಾಕಷ್ಟು ಸಿನಿಮಾಗಳನ್ನು ನಿರ್ಮಾಣ ಮಾಡುವ ಕೆಲಸಗಳಲ್ಲಿ ಬ್ಯುಸಿ ಇದೆ. ಕೇವಲ ದೊಡ್ಡ ಬಜೆಟ್ ಚಿತ್ರಗಳನ್ನು ಮಾತ್ರವಲ್ಲದೆ, ಚಿಕ್ಕ ಬಜೆಟ್ ಚಿತ್ರಗಳನ್ನು ಈ ಸಂಸ್ಥೆ ನಿರ್ಮಾಣ ಮಾಡುತ್ತಿದೆ. ‘ಹೊಂಬಾಳೆ ಫಿಲ್ಮ್ಸ್​’ ಅಡಿ ಸಿದ್ಧಗೊಳ್ಳುತ್ತಿರುವ ಪ್ರತಿ ಚಿತ್ರಗಳು ಒಂದಷ್ಟು ಕುತೂಹಲ ಮೂಡಿಸಿವೆ. ಆ ಪೈಕಿ ‘ರಾಘವೇಂದ್ರ ಸ್ಟೋರ್ಸ್​’ ಸಿನಿಮಾ ಕೂಡ ಸಾಕಷ್ಟು ಗಮನ ಸೆಳೆದಿದೆ. ಜಗ್ಗೇಶ್ (Jaggesh) ನಟನೆಯ ಈ ಚಿತ್ರಕ್ಕೆ ಸಂತೋಷ್ ಆನಂದ್​ರಾಮ್ ನಿರ್ದೇಶನ ಮಾಡಿದ್ದಾರೆ. ಈ ಚಿತ್ರದ ರಿಲೀಸ್ ದಿನಾಂಕ ವಿಳಂಬವಾಗುವ ಬಗ್ಗೆ ಚಿತ್ರತಂಡ ಘೋಷಣೆ ಮಾಡಿದೆ.

‘ರಾಘವೇಂದ್ರ ಸ್ಟೋರ್ಸ್​’ ಸಿನಿಮಾ ಟೀಸರ್ ಮೂಲಕ ಸಾಕಷ್ಟು ಗಮನ ಸೆಳೆದಿದೆ. ಈ ಟೀಸರ್​ನಲ್ಲಿ ಹಾಸ್ಯದ ಹೊಳೆ ಹರಿದಿತ್ತು. ಇದೇ ಮೊದಲ ಬಾರಿಗೆ ಜಗ್ಗೇಶ್ ಹಾಗೂ ಸಂತೋಷ್ ಆನಂದ್​ರಾಮ್ ಒಂದಾಗಿದ್ದಾರೆ. ಈ ಕಾಂಬಿನೇಷನ್​ಮೇಲೆ ಸಾಕಷ್ಟು ನಿರೀಕ್ಷೆ ಇದೆ. ಈ ಚಿತ್ರ ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಆಗಸ್ಟ್ 5ರಂದು ರಿಲೀಸ್ ಆಗಬೇಕಿತ್ತು. ಆದರೆ, ಈಗ ಚಿತ್ರದ ರಿಲೀಸ್ ದಿನಾಂಕ ವಿಳಂಬ ಆಗಿದೆ.

ಇದನ್ನೂ ಓದಿ
Image
ರಸ್ತೆಯಲ್ಲಿ ನನ್ನ ತಂದೆ ಬೂಟ್​ನಲ್ಲಿ ಹೊಡೆಯುತ್ತಿದ್ದರು; ನೆನಪಿನ ಬುತ್ತಿ ತೆರೆದಿಟ್ಟ ಜಗ್ಗೇಶ್
Image
Darling Krishna Birthday: ಬರ್ತ್​ಡೇ ಪ್ರಯುಕ್ತ ಮಾಲ್ಡೀವ್ಸ್​ಗೆ ತೆರಳಿದ ಡಾರ್ಲಿಂಗ್​ ಕೃಷ್ಣ-ಮಿಲನಾ; ಇಲ್ಲಿವೆ ಕ್ಯೂಟ್​ ಜೋಡಿಯ ಫೋಟೋ
Image
‘777 ಚಾರ್ಲಿ’ ಎಷ್ಟು ಲಾಭ ಮಾಡಿದೆ? ಮಾಹಿತಿ ಹಂಚಿಕೊಂಡ ರಕ್ಷಿತ್ ಶೆಟ್ಟಿ
Image
ಆರೆಂಜ್ ಸ್ವಿಮ್​ಸೂಟ್​ನಲ್ಲಿ ಮಿಂಚಿದ ಅನುಷ್ಕಾ ಶರ್ಮಾ; ಇಲ್ಲಿವೆ ಫೋಟೋಗಳು

ಸಿನಿಮಾ ರಿಲೀಸ್ ದಿನಾಂಕ ಘೋಷಣೆ ಮಾಡುವ ಸಂದರ್ಭದಲ್ಲಿ ಹೊಂಬಾಳೆ ಫಿಲ್ಮ್ಸ್​ ಟ್ವೀಟ್ ಒಂದನ್ನು ಮಾಡಿತ್ತು. ‘ವರಮಹಾಲಕ್ಷ್ಮಿಗೆ ನವರಸಗಳ ರಸದೌತಣ ಸವಿಯಲು ಸಿದ್ಧರಾಗಿ, ಇದೇ ಆಗಸ್ಟ್ 05, 2022ರಿಂದ’ ಎಂದು ಬರೆಯಲಾಗಿತ್ತು. ಈಗ ಆ ಟ್ವೀಟ್​ಅನ್ನು ರೀಟ್ವೀಟ್ ಮಾಡಿರುವ ಹೊಂಬಾಳೆ ಫಿಲ್ಮ್ಸ್​‘ಕಾರಣಾಂತರಗಳಿಂದ ನಿಮ್ಮಿಷ್ಟದ ರಸದೌತಣ ಸ್ವಲ್ಪ ವಿಳಂಬವಾಗುತ್ತಿದೆ’ ಎಂದು ಬರೆದುಕೊಂಡಿದೆ.

ಜುಲೈ 28ರಂದು ಸುದೀಪ್ ನಟನೆಯ ‘ವಿಕ್ರಾಂತ್ ರೋಣ’ ಸಿನಿಮಾ ರಿಲೀಸ್ ಆಗುತ್ತಿದೆ. ಈ ಚಿತ್ರ ದೊಡ್ಡ ಮಟ್ಟದಲ್ಲಿ ರಿಲೀಸ್ ಆಗುತ್ತಿದೆ. ಇನ್ನು, ಆಗಸ್ಟ್ 13ರಂದು ‘ಗಾಳಿಪಟ 2’ ಸಿನಿಮಾ ಬಿಡುಗಡೆ ಆಗುತ್ತಿದೆ. ಇವೆರಡು ಡೇಟ್​ಗಳ ಮಧ್ಯೆ ‘ರಾಘವೇಂದ್ರ ಸ್ಟೋರ್ಸ್​’ ಸಿನಿಮಾ ರಿಲೀಸ್ ಆದರೆ ಥಿಯೇಟರ್ ಸಮಸ್ಯೆ ಆಗೋದು ಪಕ್ಕಾ. ಈ ಕಾರಣಕ್ಕೆ ಹೊಂಬಾಳೆ ಫಿಲ್ಮ್ಸ್​ ಸಿನಿಮಾ ರಿಲೀಸ್ ದಿನಾಂಕ ವಿಳಂಬವಾಗಿದೆ ಎನ್ನಲಾಗುತ್ತಿದೆ.

ಇದನ್ನೂ ಓದಿ: ರಸ್ತೆಯಲ್ಲಿ ನನ್ನ ತಂದೆ ಬೂಟ್​ನಲ್ಲಿ ಹೊಡೆಯುತ್ತಿದ್ದರು; ನೆನಪಿನ ಬುತ್ತಿ ತೆರೆದಿಟ್ಟ ಜಗ್ಗೇಶ್

ಜಗ್ಗೇಶ್ ಜತೆಗೆ ಶ್ವೇತಾ ಶ್ರೀವಾತ್ಸವ್, ರವಿಶಂಕರ್ ಗೌಡ ಮೊದಲಾದವರು ಈ ಚಿತ್ರದಲ್ಲಿ ನಟಿಸಿದ್ದಾರೆ. ಅಜನೀಶ್ ಲೋಕನಾಥ್ ಸಂಗೀತ ಸಂಯೋಜನೆ ಮಾಡಿದ್ದಾರೆ. ಸಂತೋಷ್ ಆನಂದ್​ರಾಮ್ ಈ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಿದ್ದಾರೆ.

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ