‘ತೋತಾಪುರಿ’ ಹಿಡಿದು ನಗಿಸಲು ಬಂದ ಜಗ್ಗೇಶ್​; ‘ನೀರ್​ ದೋಸೆ’ ಜೋಡಿಯ ನಗೆ ಹಬ್ಬ

Jaggesh: ‘ನೀರ್​ ದೋಸೆ’ ಸಿನಿಮಾ ಮಾಡಿದ್ದ ನಿರ್ದೇಶಕ ವಿಜಯ್​ ಪ್ರಸಾದ್​ ಮತ್ತು ನಟ ಜಗ್ಗೇಶ್​ ಅವರು ಈಗ ‘ತೋತಾಪುರಿ’ ರುಚಿ ತೋರಿಸಲು ಸಜ್ಜಾಗುತ್ತಿದ್ದಾರೆ. ಈ ಸಿನಿಮಾದ ಟೀಸರ್​ ಪ್ರೋಮೋ ಬಿಡುಗಡೆ ಆಗಿದ್ದು, ಅಭಿಮಾನಿಗಳಿಗೆ ಇಷ್ಟ ಆಗುತ್ತಿದೆ.

‘ತೋತಾಪುರಿ’ ಹಿಡಿದು ನಗಿಸಲು ಬಂದ ಜಗ್ಗೇಶ್​; ‘ನೀರ್​ ದೋಸೆ’ ಜೋಡಿಯ ನಗೆ ಹಬ್ಬ
ಜಗ್ಗೇಶ್
Follow us
TV9 Web
| Updated By: ಮದನ್​ ಕುಮಾರ್​

Updated on: Aug 27, 2021 | 9:57 AM

ಇತ್ತೀಚೆಗೆ ನಟ ಜಗ್ಗೇಶ್​ (Jaggesh) ಅವರು ಕೆಲವು ವಿವಾದಗಳ ಕಾರಣದಿಂದ ಅಸಮಾಧಾನಗೊಂಡಿದ್ದರು. ಆದರೆ ಈಗ ಅದನ್ನೆಲ್ಲ ಬದಿಗಿಟ್ಟು ಪ್ರೇಕ್ಷಕರನ್ನು ಮನಸಾರೆ ರಂಜಿಸಲು ಬಂದಿದ್ದಾರೆ. ಅವರು ನಟಿಸಿರುವ ‘ತೋತಾಪುರಿ’ (Thothapuri) ಸಿನಿಮಾದ ಟೀಸರ್​ ಪ್ರೋಮೋ ಬಿಡುಗಡೆ ಆಗಿದ್ದು, ಆ ಮೂಲಕ ಅಭಿಮಾನಿಗಳಿಗೆ ಕಾಮಿಡಿ ಕಚಗುಳಿ ಇಡುತ್ತಿದ್ದಾರೆ. ಈ ಸಿನಿಮಾ ಪ್ರಾರಂಭದಿಂದಲೂ ಸದ್ದು ಮಾಡುತ್ತಿದೆ. ಎರಡು ಭಾಗಗಳಲ್ಲಿ ಬಿಡುಗಡೆಯಾಗಲಿರುವ ಈ ಚಿತ್ರದ ಮೇಲೆ ಅಭಿಮಾನಿಗಳು ಹೆಚ್ಚು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಆ ನಿರೀಕ್ಷೆಯನ್ನು ಹೆಚ್ಚಿಸಲು ಶೀಘ್ರದಲ್ಲೇ ಟೀಸರ್​ ಬಿಡುಗಡೆ ಆಗಲಿದೆ.

ಈ ಪ್ರೋಮೋನಲ್ಲಿ ಜಗ್ಗೇಶ್ ಹಾಗೂ ವಿಜಯ್​ ಪ್ರಸಾದ್ ಮಾತಿನಲ್ಲೇ ಕಚಗುಳಿ ಇಟ್ಟಿದ್ದಾರೆ. ವಿಶೇಷವಾಗಿ ಸಿನಿಮಾದ ಪ್ರಮೋಶನ್ ಮಾಡುವ ಉದ್ದೇಶದಿಂದ ಈ ಟೀಸರ್‌ ಪ್ರೋಮೋವನ್ನು ಶೂಟ್ ಮಾಡಿ ಸುರೇಶ್ ಆರ್ಟ್ಸ್ ಯೂಟ್ಯೂಬ್ ಚಾನಲ್ ಮೂಲಕ ರಿಲೀಸ್ ಮಾಡಿದೆ. ಜಗ್ಗೇಶ್​ ಅಭಿಮಾನಿಗಳಿಗೆ ಈ ಪ್ರಯತ್ನ ಇಷ್ಟ ಆಗುತ್ತಿದೆ. ಇದನ್ನು ಜಗ್ಗೇಶ್​ ಅವರು ತಮ್ಮ ಸೋಶಿಯಲ್​ ಮೀಡಿಯಾ ಖಾತೆಗಳಲ್ಲಿ ಹಂಚಿಕೊಂಡಿದ್ದಾರೆ.

‘ನೀರ್‌ದೋಸೆ’ ಸಿನಿಮಾ ಮೂಲಯ ಯಶಸ್ಸು ಕಂಡ ನಿರ್ದೇಶಕ ವಿಜಯ್​ ಪ್ರಸಾದ್ ಹಾಗೂ ಜಗ್ಗೇಶ್ ‘ತೋತಾಪುರಿ’ ಚಿತ್ರದ ಮೂಲಕ ಮತ್ತೆ ಪ್ರೇಕ್ಷಕರನ್ನು ರಂಜಿಸಲು ಬರುತ್ತಿದ್ದಾರೆ. ಈ ಚಿತ್ರದಲ್ಲಿ ಜಗ್ಗೇಶ್ ಹಾಗೂ ಇತರ ಕಲಾವಿದರ ಗೆಟಪ್ ತುಂಬಾ ವಿಭಿನ್ನವಾಗಿದೆ. 2 ಪಾರ್ಟ್​ಗಳಲ್ಲಿ ಈ ಸಿನಿಮಾ ಬಿಡುಗಡೆ ಆಗಲಿದ್ದು, ಏಕಕಾಲಕ್ಕೆ ಎರಡೂ ಭಾಗದ ಚಿತ್ರೀಕರಣ ಮುಕ್ತಾಯವಾಗಿದೆ.

ಸದ್ಯ ಈ ಚಿತ್ರ ಬಿಡುಗಡೆಯ ಹಂತಕ್ಕೆ ಬಂದು ನಿಂತಿದೆ. ಜಗ್ಗೇಶ್ ಈವರೆಗೂ ನಟಿಸಿರುವ ಚಿತ್ರಗಳಲ್ಲಿ ಇದು ಬಿಗ್ ಬಜೆಟ್ ಸಿನಿಮಾ ಎನ್ನಲಾಗಿದೆ. ಭಾಗ-1 ಭಾಗ-2ರಲ್ಲಿ ಅವರು ಕಾಣಿಸಿಕೊಂಡಿದ್ದು ಕೂಡ ಇದೇ ಮೊದಲು. ಜಗ್ಗೇಶ್ ಸೇರಿದಂತೆ ಚಿತ್ರದಲ್ಲಿ 80ಕ್ಕೂ ಅಧಿಕ ಕಲಾವಿದರು ನಟಿಸಿದ್ದಾರೆ. ಅದಿತಿ ಪ್ರಭುದೇವ, ಡಾಲಿ ಧನಂಜಯ, ಸುಮನ್ ರಂಗನಾಥ್, ದತ್ತಣ್ಣ, ವೀಣಾ ಸುಂದರ್, ಹೇಮಾದತ್ ಸೇರಿದಂತೆ ಅನೇಕರು ಪ್ರಮುಖ ಪಾತ್ರಗಳಲ್ಲಿ ಮಿಂಚಿದ್ದಾರೆ.

ತಾಂತ್ರಿಕತೆಯ ವಿಚಾರದಲ್ಲೂ ಈ ಚಿತ್ರ ಸದ್ದು ಮಾಡುತ್ತಿದೆ. ಹಿಟ್ ಸಿನಿಮಾಗಳನ್ನು ನೀಡಿರುವ ‘ಸುರೇಶ್ ಆರ್ಟ್ಸ್‌’ ಬ್ಯಾನರ್‌ನ ಕೆ.ಎ. ಸುರೇಶ್ ಈ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಜಗ್ಗೇಶ್ ನಟನೆಯ ಎದ್ದೇಳು ಮಂಜುನಾಥ, ನೀರ್‌ ದೋಸೆ ಸಿನಿಮಾಗಳಿಗೆ ಸಂಗೀತ ಸಂಯೋಜಿಸಿದ್ದ ಅನೂಪ್ ಸೀಳಿನ್ ‘ತೋತಾಪುರಿ’ಗೂ ಸಂಗೀತ ನಿರ್ದೇಶನ ಮಾಡಿದ್ದು, ಹಿನ್ನೆಲೆ ಸಂಗೀತದ ಜವಾಬ್ದಾರಿಯನ್ನೂ ನಿಭಾಯಿಸಿದ್ದಾರೆ.

ನಿರಂಜನ್ ಬಾಬು ಛಾಯಾಗ್ರಹಣ, ಸುರೇಶ್ ಅರಸ್ ಸಂಕಲನ ಈ ಚಿತ್ರಕ್ಕಿದೆ. ಮೈಸೂರು, ಶ್ರೀರಂಗಪಟ್ಟಣ, ಮಡಿಕೇರಿ, ಕೇರಳ, ಬೆಂಗಳೂರು ಸುತ್ತಮುತ್ತ ಚಿತ್ರೀಕರಣ ನಡೆಸಲಾಗಿದೆ. ಚಿತ್ರಮಂದಿರಗಳಿಗೆ ಶೇ.100 ಆಸನ ಭರ್ತಿಗೆ ಅವಕಾಶ ಸಿಕ್ಕ ಕೂಡಲೇ ಸಿನಿಮಾ ಬಿಡುಗಡೆ ಮಾಡಲು ತಂಡ ಸಜ್ಜಾಗಿದೆ. ಅದಕ್ಕಾಗಿ ಸರ್ಕಾರದ ಅನುಮತಿಗಾಗಿ ‘ತೋತಾಪುರಿ’ ತಂಡ ಕಾಯುತ್ತಿದೆ.

ಇದನ್ನೂ ಓದಿ:

ದಲಿತ ಸಂಘರ್ಷ ಸಮಿತಿಯ ರಘು ವಿರುದ್ಧ ಬಹಿರಂಗವಾಗಿ ಕಾನೂನು ಸಮರ ಸಾರಿದ ನಟ ಜಗ್ಗೇಶ್​

ಬಾಂಬೆ ಹೀರೋಯಿನ್ ಹೇಗೆ ಮಾತಾಡ್ತಾರೆ? ಮಿಮಿಕ್ರಿ ಮಾಡಿದ ಜಗ್ಗೇಶ್​: ಇಲ್ಲಿದೆ ಮಸ್ತ್​ ಕಾಮಿಡಿ

ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ