Puneeth Rajkumar: ಪುನೀತ್​ ಸಮಾಧಿಗೆ ನಟ ಸೂರ್ಯ ಭೇಟಿ; ಅಪ್ಪು ನೆನೆದು ಕಂಬನಿ ಮಿಡಿದ ಕಾಲಿವುಡ್​ ಸ್ಟಾರ್​ ಹೀರೋ

Suriya: ‘ಪುನೀತ್ ರಾಜ್​ಕುಮಾರ್​​ ಅವರನ್ನು ನಾವು ತುಂಬ ಮಿಸ್​ ಮಾಡಿಕೊಳ್ಳುತ್ತೇವೆ. ಅವರ ಕುಟುಂಬಕ್ಕೆ ನಾನು ಸಾಂತ್ವನ ಹೇಳುತ್ತೇನೆ’ ಎಂದು ಕಾಲಿವುಡ್​ ನಟ ಸೂರ್ಯ ಕಣ್ಣೀರು ಹಾಕಿದ್ದಾರೆ.

Puneeth Rajkumar: ಪುನೀತ್​ ಸಮಾಧಿಗೆ ನಟ ಸೂರ್ಯ ಭೇಟಿ; ಅಪ್ಪು ನೆನೆದು ಕಂಬನಿ ಮಿಡಿದ ಕಾಲಿವುಡ್​ ಸ್ಟಾರ್​ ಹೀರೋ
ಶಿವರಾಜ್​ಕುಮಾರ್​, ಸೂರ್ಯ, ಪುನೀತ್​ ರಾಜ್​ಕುಮಾರ್​
Follow us
TV9 Web
| Updated By: ಮದನ್​ ಕುಮಾರ್​

Updated on:Nov 05, 2021 | 12:17 PM

ಪುನೀತ್​ ರಾಜ್​ಕುಮಾರ್​ ನಿಧನದ ಬಳಿಕ ಸ್ಯಾಂಡಲ್​ವುಡ್​ ಮಂಕಾಗಿದೆ. ಅಷ್ಟೇ ಅಲ್ಲದೇ ಇಡೀ ದಕ್ಷಿಣ ಭಾರತದ ಚಿತ್ರರಂಗಕ್ಕೆ ಸೂತಕದ ಛಾಯೆ ಆವರಿಸಿದೆ. ತಮಿಳು, ತೆಲುಗು ಚಿತ್ರರಂಗದ ಅನೇಕ ಸೆಲೆಬ್ರಿಟಿಗಳು ಬಂದು ಪುನೀತ್​ ರಾಜ್​ಕುಮಾರ್​ ಕುಟುಂಬದವರಿಗೆ ಸಾಂತ್ವನ ಹೇಳುತ್ತಿದ್ದಾರೆ. ಕಾಲಿವುಡ್​ ನಟ ಸೂರ್ಯ ಅವರು ಇಂದು (ನ.5) ಬೆಂಗಳೂರಿಗೆ ಆಗಮಿಸಿದ್ದಾರೆ. ಕಂಠೀರವ ಸ್ಟುಡಿಯೋ ಆವರಣದಲ್ಲಿ ಇರುವ ಅಪ್ಪು ಸಮಾಧಿಗೆ ನಮಿಸಿ ಅವರು ಕಂಬನಿ ಮಿಡಿದಿದ್ದಾರೆ. ಈ ವೇಳೆ ಶಿವರಾಜ್​ಕುಮಾರ್​ ಕೂಡ ಜೊತೆಗಿದ್ದರು.

ಪುನೀತ್​ ರಾಜ್​ಕುಮಾರ್​ ಮತ್ತು ಸೂರ್ಯ ನಡುವೆ ಉತ್ತಮ ಬಾಂಧವ್ಯವಿತ್ತು. ಅಗಲಿದ ಗೆಳೆಯನನ್ನು ನೆನೆದು ಅವರು ಭಾವುಕರಾದರು. ‘ಪುನೀತ್​ ನಿಧನ ನ್ಯಾಯವಲ್ಲ. ಅವರಿಲ್ಲ ಎಂಬ ಸತ್ಯವನ್ನು ಒಪ್ಪಿಕೊಳ್ಳು ಸಾಧ್ಯವಾಗುತ್ತಿಲ್ಲ. ನಮ್ಮ ಮನೆಯಲ್ಲಿ ಎಲ್ಲರಿಗೂ ಈ ಸುದ್ದಿ ನೋವು ನೀಡಿದೆ. ಅಣ್ಣಾವ್ರ ಕುಟುಂಬದ ಜೊತೆ ನಮ್ಮ ಕುಟುಂಬಕ್ಕೆ ಆತ್ಮೀಯತೆ ಇದೆ. ಪುನೀತ್​ ನನಗಿಂತ 3 ತಿಂಗಳು ದೊಡ್ಡವರು. ಪುನೀತ್​ ಸದಾ ಹಸನ್ಮುಖಿ ಆಗಿದ್ದರು. ಅವರ ಎಲ್ಲ ನೆನಪುಗಳನ್ನು ನಗುವಿನೊಂದಿಗೆ ಇಟ್ಟುಕೊಳ್ಳೋಣ. ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ಸಿಗಲಿ ಅಂತ ಪ್ರಾರ್ಥಿಸುತ್ತೇನೆ’ ಎಂದು ಸೂರ್ಯ ಹೇಳಿದ್ದಾರೆ.

‘ಪುನೀತ್​ ಅವರನ್ನು ನಾವು ತುಂಬ ಮಿಸ್​ ಮಾಡಿಕೊಳ್ಳುತ್ತೇವೆ. ಅವರ ಕುಟುಂಬಕ್ಕೆ ನಾನು ಸಾಂತ್ವನ ಹೇಳುತ್ತೇನೆ’ ಎಂದು ಸೂರ್ಯ ಕಣ್ಣೀರು ಹಾಕಿದ್ದಾರೆ. ಅಕ್ಕ-ಪಕ್ಕದ ರಾಜ್ಯದ ಸೆಲೆಬ್ರಿಟಿಗಳ ಜೊತೆ ಪುನೀತ್​ ಸ್ನೇಹ ಸಂಪಾದಿಸಿದ್ದರು. ಅಜಾತಶತ್ರುವಾಗಿ ಬದುಕಿದ್ದ ಅವರಿಗಾಗಿ ಇಂದು ಎಲ್ಲರೂ ಕಂಬನಿ ಮಿಡಿಯುತ್ತಿದ್ದಾರೆ. ಈಗಾಗಲೇ ಶಿವಕಾರ್ತಿಕೇಯನ್​, ವಿಜಯ್​ ಸೇತುಪತಿ, ರಾಮ್​ ಚರಣ್​, ವಿಶಾಲ್​ ಸೇರಿದಂತೆ ಅನೇಕರು ಬಂದು ಪುನೀತ್​ ಕುಟುಂಬದವರಿಗೆ ಸಾಂತ್ವನ ಹೇಳಿದ್ದಾರೆ.

ವಿಕ್ಟರಿ ವೆಂಕಟೇಶ್​, ರಾನಾ ದಗ್ಗುಬಾಟಿ, ನಂದಮೂರಿ ಬಾಲಕೃಷ್ಣ, ಚಿರಂಜೀವಿ, ಜ್ಯೂ. ಎನ್​ಟಿಆರ್, ಪ್ರಭುದೇವ​ ಮುಂತಾದ ಸ್ಟಾರ್​ ಕಲಾವಿದರು ಬಂದು ಪುನೀತ್​ಗೆ ಅಂತಿಮ ನಮನ ಸಲ್ಲಿಸಿದ್ದರು. ಯಾರು ಎಷ್ಟೇ ಸಮಾಧಾನ ಹೇಳಿದರೂ ಅಪ್ಪು ಇಲ್ಲ ಎಂಬ ನೋವನ್ನು ಅಭಿಮಾನಿಗಳಿಂದ ಮರೆಯಲು ಸಾಧ್ಯವಾಗುತ್ತಿಲ್ಲ. ಕೆಲವರು ಆತ್ಮಹತ್ಯೆಯಂತಹ ಕೆಟ್ಟ ನಿರ್ಧಾರ ತೆಗೆದುಕೊಂಡ ಘಟನೆಯೂ ನಡೆದಿದೆ. ಯಾರೂ ಆ ರೀತಿ ದುಡುಕಿನ ತೀರ್ಮಾನಕ್ಕೆ ಮುಂದಾಗಬಾರದು ಎಂದು ಡಾ. ರಾಜ್​ ಕುಟುಂಬದವರು ಪರಿಪರಿಯಾಗಿ ಬೇಡಿಕೊಳ್ಳುತ್ತಿದ್ದಾರೆ.

ಇದನ್ನೂ ಓದಿ:

ರಸ್ತೆ, ಪಾರ್ಕ್​, ಮೈದಾನಕ್ಕೆ ಪುನೀತ್​ ಹೆಸರು; ಬಿಬಿಎಂಪಿ ಆಯುಕ್ತ ಗೌರವ್​ ಗುಪ್ತಾ ಹೇಳೋದೇನು?

ಪುನೀತ್​ ನಿಧನಕ್ಕೂ 15-20 ನಿಮಿಷ ಮುನ್ನ ನಿಜಕ್ಕೂ ಏನು ನಡೆಯಿತು? ಇಲ್ಲಿದೆ ಕಾರು ಚಾಲಕ ತೆರೆದಿಟ್ಟ ವಿವರ

Published On - 12:10 pm, Fri, 5 November 21

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ