AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೈಲಿನ ವಿಡಿಯೋ ಲೀಕ್ ಪ್ರಕರಣ: ವಿಜಯಲಕ್ಷ್ಮೀ ಹೆಸರು ಹೇಳಿದ ಧನ್ವೀರ್

ಜೈಲಿನಲ್ಲಿ ಕೈದಿಗಳ ಮದ್ಯದ ಪಾರ್ಟಿ ವಿಡಿಯೋ ವೈರಲ್ ಪ್ರಕರಣದಲ್ಲಿ ನಟ ಧನ್ವೀರ್ ದರ್ಶನ್ ಪತ್ನಿ ವಿಜಯಲಕ್ಷ್ಮೀ ಹೆಸರನ್ನು ಬಾಯ್ಬಿಟ್ಟಿದ್ದಾರೆ. ಈ ವಿಡಿಯೋವನ್ನು ವಕೀಲರಿಂದ ಪಡೆದು ವಿಜಯಲಕ್ಷ್ಮೀಗೆ ಕಳುಹಿಸಿದ್ದಾಗಿ ಧನ್ವೀರ್ ವಿಚಾರಣೆ ವೇಳೆ ತಿಳಿಸಿದ್ದಾರೆ. ಇದರಿಂದ ವಿಜಯಲಕ್ಷ್ಮೀ ಸಹ ತನಿಖೆ ಎದುರಿಸುವ ಸಾಧ್ಯತೆ ಇದೆ.

ಜೈಲಿನ ವಿಡಿಯೋ ಲೀಕ್ ಪ್ರಕರಣ: ವಿಜಯಲಕ್ಷ್ಮೀ ಹೆಸರು ಹೇಳಿದ ಧನ್ವೀರ್
ದರ್ಶನ್-ವಿಜಯಲಕ್ಷ್ಮೀ-ಧನ್ವೀರ್
ರಾಜೇಶ್ ದುಗ್ಗುಮನೆ
|

Updated on:Nov 19, 2025 | 10:13 AM

Share

ಜೈಲಿನಲ್ಲಿ ಕೈದಿಗಳು ಮದ್ಯದ ಪಾರ್ಟಿ ಮಾಡುತ್ತಿರುವ ವಿಡಿಯೋ ವೈರಲ್ ಆಗಿತ್ತು. ಕೈದಿಗಳಿಗೆ ಜೈಲಿನ ರಾಜಾತಿಥ್ಯ ಮುಂದುವರಿದಿದೆ ಎಂಬುದಕ್ಕೆ ಸಾಕ್ಷಿ ಒದಗಿಸುವ ರೀತಿಯಲ್ಲಿ ಇತ್ತು. ಈ ವಿಡಿಯೋನ ಲೀಕ್ ಮಾಡಿದ ಆರೋಪವನ್ನು ನಟ ಹಾಗೂ ದರ್ಶನ್ ಆಪ್ತ ಧನ್ವೀರ್ ಮೇಲೆ ಹೊರಿಸಲಾಗಿದೆ. ಈ ಪ್ರಕರಣದ ವಿಚಾರಣೆ ಮಾಡುವಾಗ ಧನ್ವೀರ್ ಅವರು ದರ್ಶನ್ ಪತ್ನಿ ವಿಜಯಲಕ್ಷ್ಮೀ ಹೆಸರನ್ನು ಹೇಳಿದ್ದಾರೆ. ಈಗ ಈ ಪ್ರಕರಣದಲ್ಲಿ ವಿಜಯಲಕ್ಷ್ಮೀ ಅವರು ತನಿಖೆ ಎದುರಿಸೋ ಸಾಧ್ಯತೆ ಇದೆ.

ಈ ಮೊದಲು ಧನ್ವೀರ್ ಅವರು ವಿಚಾರಣೆ ಎದುರಿಸಿದ್ದರು. ಈ ವೇಳೆ ಅವರು ಯಾವುದೇ ವಿಷಯ ಬಾಯ್ಬಿಟ್ಟಿರಲಿಲ್ಲ. ಇದಾದ ಬಳಿಕ ಮತ್ತೆ ಅವರಿಗೆ ನೋಟಿಸ್ ನೀಡಲಾಯಿತು. ಎರಡನೇ ಬಾರಿಗೆ ಧನ್ವೀರ್ ಅವರು ಪೊಲೀಸರ ಎದುರು ಹಾಜರಾಗಿ ವಿಚಾರಣೆ ಎದುರಿಸಿದ್ದಾರೆ. ಈ ವೇಳೆ ಹಲವು ವಿಷಯಗಳನ್ನು ರಿವೀಲ್ ಮಾಡಿದ್ದಾರೆ ಎನ್ನಲಾಗಿದೆ. ವಿಡಿಯೋ ಕಳುಹಿಸಿದ್ದು ಯಾರು ಎಂಬುದನ್ನು ಕೂಡ ಅವರು ತಿಳಿಸಿದ್ದಾರೆ.

ಧನ್ವೀರ್ ವಿಚಾರಣೆ

ಧನ್ವೀರ್​ಗೆ ಈ ವಿಡಿಯೋ ಸಿಕ್ಕಿದ್ದು ವಕೀಲರಿಂದ. ನಂತರ ಈ ವಿಡಿಯೋನ ಅವರು ದರ್ಶನ್ ಪತ್ನಿ ವಿಜಯಲಕ್ಷ್ಮೀಗೆ ಕಳುಹಿಸಿದ್ದಾರೆ. ಇದನ್ನು ವಿಚಾರಣೆ ವೇಳೆ ಹೇಳಿದ್ದಾರೆ. ‘ನಾನು ವೀಡಿಯೋ ವೈರಲ್ ಮಾಡಿಲ್ಲ. ಈ ವಿಡಿಯೋ ಹೇಗೆ ವೈರಲ್ ಆಗಿದೆ ಅನ್ನೋದು ಗೊತ್ತಿಲ್ಲ. ನಾನು ವಿಜಯಲಕ್ಷ್ಮೀ ಅವರಿಗೆ ವಿಡಿಯೋನ ಫಾರ್ವರ್ಡ್ ಮಾಡಿದ್ದೆ’ ಎಂದು ಧನ್ವೀರ್ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ದರ್ಶನ್ ಆಪ್ತ ಧನ್ವೀರ್ ಮೇಲೆ ಅನುಮಾನ; ಕರೆದು ವಿಚಾರಣೆ ನಡೆಸಿದ ಸಿಸಿಬಿ ಪೊಲೀಸರು

ವಿಜಯಲಕ್ಷ್ಮೀ ಹೆಸರು ಹೇಳುತ್ತಿದ್ದಂತೆ ಈ ವಿಷಯವನ್ನು ತನಿಖಾಧಿಕಾರಿಗಳು ಹಿರಿಯ ಅಧಿಕಾರಿಗಳ ಗಮನಕ್ಕೆ ತಂದಿದ್ದಾರೆ. ವಿಜಯಲಕ್ಷೀ ಅವರನ್ನು ವಿಚಾರಣೆಗೆ ಕರೆಸೋ ಬಗ್ಗೆ ಚರ್ಚೆ ನಡೆದಿದೆ. ಒಂದೊಮ್ಮೆ ಧನ್ವೀರ್ ಅವರು ವಿಚಾರಣೆಗೆ ಸರಿಯಾಗಿ ಸ್ಪಂದಿಸದೇ ಇದ್ದರೆ ವಿಜಯಲಕ್ಷ್ಮೀ ಅವರನ್ನು ವಿಚಾರಣೆ ಮಾಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಇದರಿಂದ ಅವರಿಗೆ ಸಂಕಷ್ಟ ಹೆಚ್ಚುವ ಸಾಧ್ಯತೆ ಇದೆ.

ಮೆಟಾಗೆ ಪತ್ರ

ವೀಡಿಯೋ ಅಪ್​ಲೋಡ್ ಮಾಡಿದ್ದು ಯಾರು ಎಂಬ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಈ ಸಂಬಂಧ METAಗೆ ಈ‌ಗಾಗಲೇ ಪರಪ್ಪನ ಅಗ್ರಹಾರ ಪೊಲೀಸರು ಇಮೇಲ್ ಮೂಲಕ ಮಾಹಿತಿ ಕೇಳಿದ್ದಾರೆ. ವಿಚಾರಣೆ ವೇಳೆ ಕೈದಿಗಳು ಹೇಳಿದ್ದೇ ಬೇರೆ. ‘2023ರಲ್ಲಿ ಮಾಡಿದ ವಿಡಿಯೋ ಇದು. ಈ ವಿಡಿಯೋ ಮಾಡಿದ ಮೊಬೈಲ್ ಸೀಜ್ ಆಗಿದೆ’ ಎಂದು ವಿಚಾರಣೆ ವೇಳೆ ಕೈದಿ ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 9:00 am, Wed, 19 November 25

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು
ಚಿನ್ನದ ಸಿಂಹಾಸನವೇರಿದ ಯದುವೀರ ಒಡೆಯರ್:ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್
ಚಿನ್ನದ ಸಿಂಹಾಸನವೇರಿದ ಯದುವೀರ ಒಡೆಯರ್:ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್
ಚೆನ್ನೈನ ಜಲಕಂಠೇಶ್ವರ ಸ್ವಾಮಿ ದೇಗುಲದಲ್ಲಿ ಪ್ರಧಾನಿ ಮೋದಿ ವಿಶೇಷ ಪೂಜೆ
ಚೆನ್ನೈನ ಜಲಕಂಠೇಶ್ವರ ಸ್ವಾಮಿ ದೇಗುಲದಲ್ಲಿ ಪ್ರಧಾನಿ ಮೋದಿ ವಿಶೇಷ ಪೂಜೆ