Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೆದ್ದ ‘ಜೈಲರ್’: ಶಿವಣ್ಣನಿಗೆ ಉಡುಗೊರೆ ಕೊಟ್ಟು ಸಂಭ್ರಮಿಸಿದ ವಿತರಕರು

Jailer: ಶಿವರಾಜ್ ಕುಮಾರ್ ಅತಿಥಿ ಪಾತ್ರದಲ್ಲಿ ನಟಿಸಿರುವ ರಜನೀಕಾಂತ್​ರ 'ಜೈಲರ್' ಸಿನಿಮಾ ಕರ್ನಾಟಕದಲ್ಲಿಯೂ ಹಿಟ್ ಎನಿಸಿಕೊಂಡಿದ್ದು, ಸಿನಿಮಾವನ್ನು ಕರ್ನಾಟಕದಲ್ಲಿ ವಿತರಣೆ ಮಾಡಿರುವ ವಿತರಕರು ಶಿವಣ್ಣನ ಸನ್ಮಾನಿಸಿದ್ದಾರೆ.

ಗೆದ್ದ 'ಜೈಲರ್': ಶಿವಣ್ಣನಿಗೆ ಉಡುಗೊರೆ ಕೊಟ್ಟು ಸಂಭ್ರಮಿಸಿದ ವಿತರಕರು
ಶಿವರಾಜ್ ಕುಮಾರ್
Follow us
ಮಂಜುನಾಥ ಸಿ.
|

Updated on: Aug 12, 2023 | 5:44 PM

ಸಿನಿಮಾ ಒಂದು ಗೆದ್ದಾಗ ಸಿನಿಮಾದ ನಾಯಕನಿಗೆ, ನಿರ್ದೇಶಕನಿಗೆ ನಾಯಕಿಗೆ ಅಭಿನಂದನೆಗಳನ್ನು ಹೇಳುವುದು ಸಾಮಾನ್ಯ. ಆದರೆ ಸಿನಿಮಾದಲ್ಲಿ ಅತಿಥಿ ಪಾತ್ರ ಮಾಡಿದ ನಟನಿಗೆ ಜೈಕಾರಗಳನ್ನು ಹಾಕಿ ಉಡುಗೊರೆಗಳ ಕೊಟ್ಟು ಅಭಿನಂದನೆಗಳನ್ನು ತಿಳಿಸುವುದು ಅಪರೂಪ. ಕಮಲ್ ಹಾಸನ್ (Kamal Haasan) ನಟನೆಯ ಇತ್ತೀಚಿನ ‘ವಿಕ್ರಂ’ ಸಿನಿಮಾದಲ್ಲಿ ಸೂರ್ಯ ನಟಸಿದ್ದ ಅತಿಥಿ ಪಾತ್ರಕ್ಕೆ ಭಾರಿ ಪ್ರಶಂಸೆ ಮೆಚ್ಚುಗೆ ವ್ಯಕ್ತವಾಗಿತ್ತು, ಇದೀಗ ರಜನೀಕಾಂತ್ ನಟನೆಯ ‘ಜೈಲರ್‘ (Jailer) ಸಿನಿಮಾದಲ್ಲಿ ಶಿವರಾಜ್ ಕುಮಾರ್  (Shiva Rajkumar) ನಟನೆಯ ಅತಿಥಿ ಪಾತ್ರಕ್ಕೆ ಇಂಥಹುದೇ ಮೆಚ್ಚುಗೆ ವ್ಯಕ್ತವಾಗುತ್ತಿದೆ.

‘ಜೈಲರ್’ ಸಿನಿಮಾದಲ್ಲಿ ನರಸಿಂಹ ಹೆಸರಿನ ಅತಿಥಿ ಪಾತ್ರದಲ್ಲಿ ಶಿವರಾಜ್ ಕುಮಾರ್ ನಟಿಸಿದ್ದಾರೆ. ತೆರೆಯ ಮೇಲೆ ಕೆಲವು ನಿಮಿಷಗಳಷ್ಟೆ ಶಿವರಾಜ್ ಕುಮಾರ್ ಕಾಣಿಸಿಕೊಳ್ಳುತ್ತಾರೆ ಆದರೆ ಅವರ ಪಾತ್ರಕ್ಕೆ ಭಾರಿ ಪ್ರಶಂಸೆ ವ್ಯಕ್ತವಾಗುತ್ತಿದೆ. ತಮಿಳು ಸಿನಿಮಾ ಪ್ರೇಮಿಗಳು ಸಹ ಶಿವರಾಜ್ ಕುಮಾರ್ ಅವರ ಮಾಸ್ ಅಭಿನಯಕ್ಕೆ ಫಿದಾ ಆಗಿದ್ದಾರೆ. ‘ಜೈಲರ್’ ಸಿನಿಮಾದಲ್ಲಿನ ಇತರೆ ಅತಿಥಿ ಪಾತ್ರಗಳನ್ನು ಬಿಟ್ಟು ಶಿವಣ್ಣನ ಪಾತ್ರವನ್ನಷ್ಟೆ ಮೆಚ್ಚಿ ಕೊಂಡಾಡುತ್ತಿದ್ದಾರೆ.

ಬಿಡುಗಡೆ ಆದ ಎರಡೇ ದಿನಕ್ಕೆ ‘ಜೈಲರ್’ ಸಿನಿಮಾ ನೂರು ಕೋಟಿ ಕಲೆಕ್ಷನ್ ದಾಟಿ ಆಗಿದೆ. ಚಿತ್ರತಂಡ ಈ ಖುಷಿಯನ್ನು ಆಚರಿಸುವ ಮುನ್ನವೇ ಕೆಲವು ವಿತರಕರು ಸಂಭ್ರಮಾಚರಣೆಗೆ ಮುಂದಾಗಿದ್ದು, ಸಿನಿಮಾದಲ್ಲಿ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿರುವ ಶಿವರಾಜ್ ಕುಮಾರ್ ಅವರನ್ನು ಭೇಟಿಯಾಗಿ ಸನ್ಮಾನ ಮಾಡಿ ಸಣ್ಣ ಉಡುಗೊರೆ ನೀಡಿ ಸಂತಸ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ:Jailer: ರಜನೀಕಾಂತ್ ಜೊತೆಗಿನ ಆತ್ಮೀಯತೆ ಬಗ್ಗೆ ಶಿವರಾಜ್ ಕುಮಾರ್ ಮಾತು

‘ಜೈಲರ್’ ಸಿನಿಮಾವನ್ನು ಕರ್ನಾಟಕದಲ್ಲಿ ವಿತರಣೆ ಮಾಡಿರುವ ಜಯಣ್ಣ, ವೆಂಕಟೇಶ್ ಅವರುಗಳು ಶಿವರಾಜ್ ಕುಮಾರ್ ಅವರನ್ನು ಇಂದು (ಆಗಸ್ಟ್ 12) ಭೇಟಿ ಆಗಿದ್ದು ಶಿವಣ್ಣನಿಗೆ ಶಾಲು ಹೊದಿಸಿ ಸನ್ಮಾನ ಮಾಡಿರುವ ಜೊತೆಗೆ ವೆಂಕಟೇಶ್ವರ ಸ್ವಾಮಿಯ ಪುಟ್ಟ ವಿಗ್ರಹವೊಂದನ್ನು ಗೌರವಪೂರ್ವಕವಾಗಿ ನೀಡಿದ್ದಾರೆ. ‘ಜೈಲರ್’ ಸಿನಿಮಾ ಕರ್ನಾಟಕದಲ್ಲಿ ಉತ್ತಮ ಪ್ರದರ್ಶನ ಕಾಣುತ್ತಿರುವ ಬಗ್ಗೆ ಖುಷಿ ಹಂಚಿಕೊಂಡಿದ್ದಾರೆ.

‘ಜೈಲರ್’ ಸಿನಿಮಾದಲ್ಲಿ ಶಿವರಾಜ್ ಕುಮಾರ್ ಮಾತ್ರವೇ ಅಲ್ಲದೆ ಮಲಯಾಳಂನ ಸೂಪರ್ ಸ್ಟಾರ್ ಮೋಹನ್​ಲಾಲ್, ಬಾಲಿವುಡ್​ನ ಜಾಕಿ ಶ್ರಾಫ್, ತೆಲುಗಿನ ಹಾಸ್ಯನಟ ಸುನಿಲ್ ಅವರುಗಳು ಸಹ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಆದರೆ ಹೆಚ್ಚು ಗಮನ ಸೆಳೆದಿರುವುದು ಮಾತ್ರ ನಟ ಶಿವಣ್ಣ. ಸಿನಿಮಾದಲ್ಲಿ ಶಿವಣ್ಣನ ಎಂಟ್ರಿ ಸೀನ್ ಹಾಗೂ ಕ್ಲೈಮ್ಯಾಕ್ಸ್​ನಲ್ಲಿ ಶಿವಣ್ಣನ ಖದರ್​ಗೆ ತಮಿಳು ಪ್ರೇಕ್ಷಕರು ಸಹ ಬೆಚ್ಚಿಬಿದ್ದಿದ್ದಾರೆ. ಶಿವರಾಜ್ ಕುಮಾರ್ ಅವರ ಹಳೆಯ ಸಿನಿಮಾಗಳನ್ನು ನೋಡಲು ಹುಡುಕಾಟ ಆರಂಭಿಸಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ