AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Priya Anand: ನಿತ್ಯಾನಂದ ಜತೆ ಮದುವೆ ಆಗ್ತೀನಿ ಅಂತ ‘ಜೇಮ್ಸ್​’ ನಟಿ ಪ್ರಿಯಾ ಆನಂದ್​ ಹೇಳಿದ್ದೇಕೆ?

Priya Anand | Nithyananda: ಪ್ರಿಯಾ ಆನಂದ್​ ಹೇಳಿರುವ ಈ ಮಾತಿನ ಕುರಿತು ಸೋಶಿಯಲ್​ ಮೀಡಿಯಾದಲ್ಲಿ ಹೆಚ್ಚು ಚರ್ಚೆ ಆಗುತ್ತಿದೆ. ನಿತ್ಯಾನಂದ ಬಗ್ಗೆ ಅವರ ಮಾತು ಕೇಳಿ ಫ್ಯಾನ್ಸ್​ ಅಚ್ಚರಿ ವ್ಯಕ್ತಪಡಿಸಿದ್ದಾರೆ.

Priya Anand: ನಿತ್ಯಾನಂದ ಜತೆ ಮದುವೆ ಆಗ್ತೀನಿ ಅಂತ ‘ಜೇಮ್ಸ್​’ ನಟಿ ಪ್ರಿಯಾ ಆನಂದ್​ ಹೇಳಿದ್ದೇಕೆ?
ನಿತ್ಯಾನಂದ, ಪ್ರಿಯಾ ಆನಂದ್
TV9 Web
| Edited By: |

Updated on:Jul 10, 2022 | 1:53 PM

Share

ಬಹುಭಾಷಾ ನಟಿ ಪ್ರಿಯಾ ಆನಂದ್​ (Priya Anand) ಅವರು ಚಿತ್ರರಂಗದಲ್ಲಿ ಸಖತ್​ ಬ್ಯುಸಿ ಆಗಿದ್ದಾರೆ. ಕನ್ನಡ, ತಮಿಳು, ತೆಲುಗು, ಮಲಯಾಳಂ ಹಾಗೂ ಹಿಂದಿ ಭಾಷೆಯ ಸಿನಿಮಾಗಳಲ್ಲಿ ನಟಿಸಿ ಅವರು ಫೇಮಸ್​ ಆಗಿದ್ದಾರೆ. ಪುನೀತ್​ ರಾಜ್​ಕುಮಾರ್​ ಜೊತೆ ‘ರಾಜಕುಮಾರ’ ಮತ್ತು ‘ಜೇಮ್ಸ್​’ ಸಿನಿಮಾದಲ್ಲಿ ತೆರೆ ಹಂಚಿಕೊಳ್ಳುವ ಮೂಲಕ ಪ್ರಿಯಾ ಆನಂದ್​ ಅವರು ಕನ್ನಡದ ಪ್ರೇಕ್ಷಕರನ್ನು ರಂಜಿಸಿದರು. 36ರ ಪ್ರಾಯದ ಈ ಬೆಡಗಿಯ ಮದುವೆ (Marriage) ಬಗ್ಗೆ ಭಾರಿ ಚರ್ಚೆ ಆಗುತ್ತಿದೆ. ಅಚ್ಚರಿ ಎಂದರೆ ಅವರು ನಿತ್ಯಾನಂದ ಜೊತೆ ಮದುವೆ ಆಗಬೇಕು ಎಂಬ ಆಸೆ ವ್ಯಕ್ತಪಡಿಸಿದ್ದಾರೆ. ಯೂಟ್ಯೂಬ್​ ಚಾನೆಲ್​ ಒಂದಕ್ಕೆ ನೀಡಿದ ಸಂದರ್ಶನದಲ್ಲಿ ಅವರು ಈ ರೀತಿ ಹೇಳಿಕೆ ನೀಡಿದ್ದಾರೆ ಎಂದು ವರದಿ ಆಗಿದೆ. ಅಷ್ಟಕ್ಕೂ ಅವರು ನಿತ್ಯಾನಂದ (Nithyananda) ಬಗ್ಗೆ ಆಸಕ್ತಿ ತೋರಿಸಿರುವುದು ಯಾಕೆ? ಇಲ್ಲಿದೆ ವಿವರ..

ನಿತ್ಯಾನಂದ ಬಗ್ಗೆ ಹಲವು ವಾದಗಳಿವೆ. ಅವರ ಮೇಲೆ ಅನೇಕ ಗಂಭೀರ ಆರೋಪಗಳಿವೆ. ಅದೇ ರೀತಿ ಅವರನ್ನು ಆರಾಧಿಸುವವರ ಸಂಖ್ಯೆಯೂ ದೊಡ್ಡದಿದೆ. ಸೋಶಿಯಲ್​ ಮೀಡಿಯಾದಲ್ಲಿ ನಟಿ ಪ್ರಿಯಾ ಆನಂದ್​ ಕೂಡ ಆಗೊಮ್ಮೆ ಈಗೊಮ್ಮೆ ನಿತ್ಯಾನಂದ ಅವರ ಹೇಳಿಕೆಗಳನ್ನು ಶೇ​ರ್​ ಮಾಡಿಕೊಂಡಿದ್ದನ್ನು ಅಭಿಮಾನಿಗಳು ಗಮನಿಸಿದ್ದಾರೆ. ಈ ಕುರಿತು ಸಂದರ್ಶನದಲ್ಲಿ ಪ್ರಶ್ನೆ ಎದುರಾಗಿದೆ. ಅದಕ್ಕೆ ಉತ್ತರಿಸಿರುವ ಅವರು ‘ನಾನು ನಿತ್ಯಾನಂದನನ್ನು ಮದುವೆ ಆಗಲು ಬಯಸಿದ್ದೇನೆ’ ಎಂದು ಹೇಳಿರುವ ಬಗ್ಗೆ ಅನೇಕ ಮಾಧ್ಯಮಗಳಲ್ಲಿ ವರದಿ ಆಗಿದೆ.

‘ನಿತ್ಯಾನಂದ ಅವರ ಮೇಲೆ ಏನೇ ಅರೋಪಗಳು ಇರಬಹುದು. ಆದರೆ ಅವರನ್ನು ಅನೇಕ ಜನರು ಇಷ್ಟಪಡುತ್ತಾರೆ. ಹಾಗೆಂದಮೇಲೆ ಅವರಲ್ಲಿ ಏನೋ ವಿಶೇಷ ಗುಣ ಇರಲೇಬೇಕಲ್ಲವೇ? ನಾನು ಅವರನ್ನು ಮದುವೆ ಆದರೆ ಸರ್​ನೇಮ್​ ಕೂಡ ಬದಲಾಯಿಸಿಕೊಳ್ಳಬೇಕಿಲ್ಲ. ನಮ್ಮಿಬ್ಬರ ಹೆಸರು ಹೆಚ್ಚೂ-ಕಡಿಮೆ ಒಂದೇ ರೀತಿ ಇದೆ’ ಎಂದು ಪ್ರಿಯಾ ಆನಂದ್​ ಹೇಳಿದ್ದಾರೆ.

ಇದನ್ನೂ ಓದಿ
Image
8 ವರ್ಷದ ಹಿಂದೆ ನಿತ್ಯಾನಂದ ಆಶ್ರಮಕ್ಕೆ ಬಂದಿದ್ದ ವಿದೇಶಿ ಪ್ರಜೆ ನಾಪತ್ತೆ
Image
ನಿಮ್ಮಲ್ಲಿ ಕೊರೊನಾ ಸೋಂಕಿದೆ; ಹಾಗಾಗಿ ನನ್ನ ಕೈಲಾಸಕ್ಕೆ ನೀವ್ಯಾರೂ ಬರಬೇಡಿ ಎಂದು ಭಾರತೀಯರಿಗೆ ಹೇಳಿದ ನಿತ್ಯಾನಂದ!
Image
ಎಲ್ಲಿದ್ದಾನೆ Nithyananda Swamiji? ತಲೆಮರೆಸಿಕೊಂಡಿರುವ ನಿತ್ಯಾನಂದ ಸ್ವಾಮಿ ಹುಡುಕುವಲ್ಲಿ ವಿಫಲವಾದ್ರಾ ಅಧಿಕಾರಿಗಳು
Image
ನಿತ್ಯಾನಂದನ ಆಶ್ರಮದಲ್ಲಿದ್ದ ಬೆಂಗಳೂರು ಯುವತಿ ನಿಗೂಢ ನಾಪತ್ತೆ

ಪ್ರಿಯಾ ಆನಂದ್​ ಹೇಳಿರುವ ಈ ಮಾತಿನ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ಹೆಚ್ಚು ಚರ್ಚೆ ಆಗುತ್ತಿದೆ. ನಿಜಕ್ಕೂ ಮದುವೆ ಆಗುವ ಉದ್ದೇಶದಿಂದ ಅವರು ಈ ರೀತಿ ಹೇಳಿದ್ದಾರಾ ಅಥವಾ ಕೇವಲ ತಮಾಷೆಗಾಗಿ ಇಂಥ ಹೇಳಿಕೆ ನೀಡಿದ್ದಾರಾ ಎಂಬ ಬಗ್ಗೆ ಸ್ವತಃ ಪ್ರಿಯಾ ಆನಂದ್​ ಸ್ಪಷ್ಟನೆ ನೀಡಬೇಕಿದೆ.

Published On - 12:00 pm, Sun, 10 July 22

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ