ನಟ ಪುನೀತ್ ರಾಜ್ಕುಮಾರ್ (Puneeth Rajkumar) ಹಾಗೂ ನಿರ್ದೇಶಕ ಚೇತನ್ ಕುಮಾರ್ (Chetan Kumar) ಕಾಂಬಿನೇಷನ್ನಲ್ಲಿ ಮೂಡಿಬಂದ ‘ಜೇಮ್ಸ್’ ಸಿನಿಮಾ (James Movie) ಮೊದಲ ದಿನ ಬಿಗ್ ಓಪನಿಂಗ್ ಪಡೆದುಕೊಂಡಿದೆ. ಮುಂಜಾನೆ ನಾಲ್ಕು ಗಂಟೆಯಿಂದಲೇ ಚಿತ್ರದ ಶೋ ಪ್ರದರ್ಶನ ಕಂಡಿತ್ತು. ಈ ಸಿನಿಮಾವನ್ನು ಅಭಿಮಾನಿಗಳು ಮುಗಿಬಿದ್ದು ನೋಡಿದ್ದಾರೆ. ಬೆಂಗಳೂರು ಒಂದರಲ್ಲೇ 800ಕ್ಕೂ ಅಧಿಕ ಶೋಗಳು ಆರಂಭಗೊಂಡಿತ್ತು. ಈ ಸಿನಿಮಾ ಮೊದಲ ದಿನ ಎಷ್ಟು ಕಲೆಕ್ಷನ್ ಮಾಡಲಿದೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಕಾಡಿತ್ತು. ಇದಕ್ಕೆ ಚಿತ್ರತಂಡದಿಂದಲೇ ಸ್ಪಷ್ಟನೆ ಸಿಕ್ಕಿದೆ. ಈ ಸಿನಿಮಾ ಎಷ್ಟು ಕಲೆಕ್ಷನ್ ಮಾಡಿದೆ ಎಂಬ ಬಗ್ಗೆ ‘ಜೇಮ್ಸ್’ ಚಿತ್ರದ ನಿರ್ಮಾಪಕ ಕಿಶೋರ್ ಪತ್ತಿಕೊಂಡ ಮಾಹಿತಿ ನೀಡಿದ್ದಾರೆ.
ಸಾಮಾನ್ಯವಾಗಿ ಸ್ಟಾರ್ ನಟರ ಚಿತ್ರಗಳು ಮೊದಲ ಮೂರು ದಿನ ದೊಡ್ಡ ಮೊತ್ತದ ಹಣ ಬಾಚಿಕೊಳ್ಳುತ್ತವೆ. ಕನ್ನಡದ ಚಿತ್ರಗಳು ಕೂಡ ಇದಕ್ಕೆ ಹೊರತಾಗಿಲ್ಲ. ದೊಡ್ಡ ಓಪನಿಂಗ್ ಪಡೆದ ಹಲವು ಸಿನಿಮಾಗಳು ಕನ್ನಡದಲ್ಲಿ ಇವೆ. ಅದೇ ರೀತಿ, ‘ಜೇಮ್ಸ್’ ಸಿನಿಮಾ ಈ ದಾಖಲೆಗಳನ್ನು ಪುಡಿ ಮಾಡಿದೆ. ಯಾವ ಕನ್ನಡ ಚಿತ್ರವೂ ಮೊದಲ ದಿನ ಗಳಿಕೆ ಮಾಡದಷ್ಟು ಹಣವನ್ನು ಈ ಚಿತ್ರ ಗಳಿಕೆ ಮಾಡಿದೆ.
ಥಿಯೇಟರ್ ಕಲೆಕ್ಷನ್, ಸಿನಿಮಾ ಹಕ್ಕು ಸೇರಿ ‘ಜೇಮ್ಸ್’ ಚಿತ್ರ 100 ಕೋಟಿ ರೂಪಾಯಿ ಬಾಚಿಕೊಂಡಿದೆ ಎಂದು ಹೇಳಲಾಗಿತ್ತು. ಇದನ್ನು ನಿರ್ಮಾಪಕ ಕಿಶೋರ್ ಪತ್ತಿಕೊಂಡ ಒಪ್ಪಿಕೊಂಡಿದ್ದಾರೆ. ಈ ಮೂಲಕ ‘ಜೇಮ್ಸ್’ ಸಿನಿಮಾ ಹೊಸ ದಾಖಲೆ ಸೃಷ್ಟಿ ಮಾಡಿದೆ. ‘ಜೇಮ್ಸ್’ ಚಿತ್ರಕ್ಕೆ ಒಟಿಟಿ ಹಾಗೂ ಟಿವಿಯಲ್ಲೂ ಬೇಡಿಕೆ ಇದೆ. ಈ ಕಾರಣಕ್ಕೆ ಚಿತ್ರಕ್ಕೆ ದೊಡ್ಡ ಬೇಡಿಕೆ ಬಂದಿದೆ ಎನ್ನಲಾಗಿದೆ. ಎಲ್ಲಾ ಸೇರಿ ಸಿನಿಮಾ ಉತ್ತಮ ಕಲೆಕ್ಷನ್ ಮಾಡಿದ್ದು ಅಭಿಮಾನಿಗಳಿಗೆ ಖುಷಿ ನೀಡಿದೆ. ಚಿತ್ರಮಂದಿರಗಳಿಂದ ಈ ಸಿನಿಮಾ ಮೊದಲ ದಿನ 30 ಕೋಟಿ ಬಾಚಿಕೊಂಡಿದೆ ಎನ್ನಲಾಗಿದೆ. ಈ ಬಗ್ಗೆ ನಿರ್ಮಾಪಕರು ಮಾಹಿತಿ ನೀಡಿಲ್ಲ.
ಇಂದು (ಮಾರ್ಚ್ 18) ಸಿನಿಮಾದ ಕಲೆಕ್ಷನ್ ಕೊಂಚ ತಗ್ಗಬಹುದು. ಇಂದು ಶುಕ್ರವಾರ. ಕಚೇರಿಗಳಿಗೆ ರಜೆ ಇರುವುದಿಲ್ಲ. ಗುರುವಾರದಂತೆ ಯಾವುದೇ ಮುಂಜಾನೇ ಶೋ ಇರುವುದಿಲ್ಲ. ಶನಿವಾರ (ಮಾರ್ಚ್ 19) ಹಾಗೂ ಭಾನುವಾರ (ಮಾರ್ಚ್ 20) ‘ಜೇಮ್ಸ್’ ಸಿನಿಮಾ ಕಲೆಕ್ಷನ್ ಹೆಚ್ಚಬಹುದು. ಈ ಚಿತ್ರದ ಜತೆಗೆ ಫ್ಯಾನ್ಸ್ ಭಾವನಾತ್ಮಕವಾಗಿ ಕನೆಕ್ಟ್ ಆಗುತ್ತಿದ್ದಾರೆ.
ಇದನ್ನೂ ಓದಿ: James Movie Review: ಜೇಮ್ಸ್ ವಿಮರ್ಶೆ: ಗೆಳೆತನದ ಕಥೆ ಹೇಳುವ ಒಂದು ‘ಪವರ್ಫುಲ್’ ಶೋ
James Movie First Day Collection: ಮೊದಲ ದಿನ 30 ಕೋಟಿಗೂ ಅಧಿಕ ಕಲೆಕ್ಷನ್ ಮಾಡಿದ ‘ಜೇಮ್ಸ್’
Published On - 2:06 pm, Fri, 18 March 22