AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಜನ ನಾಯಗನ್’ ಆಡಿಯೋ ಲಾಂಚ್ ಕಾರ್ಯಕ್ರಮ ಒಟಿಟಿಯಲ್ಲಿ: ಎಲ್ಲಿ? ಯಾವಾಗ?

Jana Nayagan audio launch on OTT: ‘ಜನ ನಾಯಗನ್’ ಸಿನಿಮಾದ ಆಡಿಯೋ ಲಾಂಚ್ ಕಾರ್ಯಕ್ರಮವನ್ನು ಬಲು ಅದ್ಧೂರಿಯಾಗಿ ಮಲೇಷಿಯಾನಲ್ಲಿ ಆಯೋಜಿಸಲಾಗಿತ್ತು. ದೂರದ ಮಲೇಷಿಯಾನಲ್ಲಿ ಕಾರ್ಯಕ್ರಮ ನಡೆದಿದ್ದರಿಂದ ಕಾರ್ಯಕ್ರಮವನ್ನು ಯೂಟ್ಯೂಬ್​​ನಲ್ಲಿ ಆದರೂ ನೋಡಲು ಅಭಿಮಾನಿಗಳು ಕಾತರರಾಗಿದ್ದರು, ಆದರೆ ಚಿತ್ರತಂಡ ಅಭಿಮಾನಿಗಳಿಗೆ ಶಾಕ್ ನೀಡಿದೆ.

‘ಜನ ನಾಯಗನ್’ ಆಡಿಯೋ ಲಾಂಚ್ ಕಾರ್ಯಕ್ರಮ ಒಟಿಟಿಯಲ್ಲಿ: ಎಲ್ಲಿ? ಯಾವಾಗ?
Jana Nayagan (1)
ಮಂಜುನಾಥ ಸಿ.
|

Updated on:Dec 31, 2025 | 7:15 PM

Share

ದಳಪತಿ ವಿಜಯ್ (Thalapathy Vijay) ನಟಿಸಿರುವ ‘ಜನ ನಾಯಗನ್’ ಸಿನಿಮಾ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದೆ. ಸಿನಿಮಾದ ಪ್ರಚಾರ ಚಾಲ್ತಿಯಲ್ಲಿದೆ. ವಿಜಯ್ ಸಾಮಾನ್ಯವಾಗಿ ಯಾವುದೇ ಸಂದರ್ಶನ ನೀಡಿ ಸಿನಿಮಾ ಪ್ರಚಾರ ಮಾಡುವುದಿಲ್ಲ ಬದಲಿಗೆ ಸಿನಿಮಾ ಬಿಡುಗಡೆಗೆ ಮುಂಚೆ ಒಂದು ಆಡಿಯೋ ಲಾಂಚ್ ಕಾರ್ಯಕ್ರಮ ಆಯೋಜಿಸುತ್ತಾರೆ, ಅಲ್ಲಿಯೇ ಸಿನಿಮಾ ಬಗ್ಗೆ, ಸಹ ನಟರುಗಳು ಬಗ್ಗೆ ಮಾತನಾಡುತ್ತಾರೆ. ಈ ಬಾರಿಯೂ ಸಹ ‘ಜನ ನಾಯಗನ್’ ಸಿನಿಮಾದ ಆಡಿಯೋ ಲಾಂಚ್ ಕಾರ್ಯಕ್ರಮವನ್ನು ಬಲು ಅದ್ಧೂರಿಯಾಗಿ ಮಲೇಷಿಯಾನಲ್ಲಿ ಆಯೋಜಿಸಲಾಗಿತ್ತು. ದೂರದ ಮಲೇಷಿಯಾನಲ್ಲಿ ಕಾರ್ಯಕ್ರಮ ನಡೆದಿದ್ದರಿಂದ ಕಾರ್ಯಕ್ರಮವನ್ನು ಯೂಟ್ಯೂಬ್​​ನಲ್ಲಿ ಆದರೂ ನೋಡಲು ಅಭಿಮಾನಿಗಳು ಕಾತರರಾಗಿದ್ದರು, ಆದರೆ ಚಿತ್ರತಂಡ ಅಭಿಮಾನಿಗಳಿಗೆ ಶಾಕ್ ನೀಡಿದೆ.

‘ಜನ ನಾಯಗನ್’ ಸಿನಿಮಾ ಆಡಿಯೋ ಲಾಂಚ್ ಕಾರ್ಯಕ್ರಮ ಯೂಟ್ಯೂಬ್​​ನಲ್ಲಿ ಬಿಡುಗಡೆ ಆಗುತ್ತಿಲ್ಲ ಬದಲಿಗೆ ನೇರವಾಗಿ ಒಟಿಟಿಯಲ್ಲಿ ಬಿಡುಗಡೆ ಆಗುತ್ತಿದೆ. ಈ ಹಿಂದೆಲ್ಲ ವಿಜಯ್ ಅವರ ಯಾವುದೇ ಸಿನಿಮಾದ ಆಡಿಯೋ ಲಾಂಚ್ ಅಥವಾ ಪ್ರೀ ರಿಲೀಸ್ ಕಾರ್ಯಕ್ರಮ ಯೂಟ್ಯೂಬ್​​ನಲ್ಲಿ ಲೈವ್ ಮಾಡಲಾಗುತ್ತಿತ್ತು, ಅಥವಾ ಕಾರ್ಯಕ್ರಮ ನಡೆದ ಒಂದೆರಡು ದಿನಗಳ ಬಳಿಕ ಯೂಟ್ಯೂಬ್​​ನಲ್ಲಿ ಬಿಡುಗಡೆ ಮಾಡಲಾಗುತ್ತಿತ್ತು. ಆದರೆ ಈ ಬಾರಿ ಕಾರ್ಯಕ್ರಮವನ್ನು ಒಟಿಟಿಯಲ್ಲಿ ಬಿಡುಗಡೆ ಮಾಡಲಾಗುತ್ತಿದೆ.

‘ಜನ ನಾಯಗನ್’ ಸಿನಿಮಾದ ನಿರ್ಮಾಣ ಸಂಸ್ಥೆಯಾದ ಕೆವಿಎನ್​ನವರು ‘ಜನ ನಾಯಗನ್’ ಸಿನಿಮಾದ ಆಡಿಯೋ ಲಾಂಚ್ ಕಾರ್ಯಕ್ರಮದ ಪ್ರಸಾರ ಹಕ್ಕನ್ನು ಒಟಿಟಿಗೆ ಮಾರಾಟ ಮಾಡಿದ್ದಾರೆ. ಅದೂ ದೊಡ್ಡ ಮೊತ್ತಕ್ಕೆ ಈ ಡೀಲ್ ನಡೆದಿದೆ ಎನ್ನಲಾಗುತ್ತಿದೆ. ಇದೀಗ ‘ಜನ ನಾಯಗನ್’ ಸಿನಿಮಾದ ಆಡಿಯೋ ಲಾಂಚ್ ಕಾರ್ಯಕ್ರಮ ಜೀ5 ಒಟಿಟಿಯಲ್ಲಿ ಸ್ಟ್ರೀಮ್ ಆಗಲಿದೆ. ಜನವರಿ 4 ರಂದು ಜೀ5ನಲ್ಲಿ ಅಭಿಮಾನಿಗಳು ‘ಜನ ನಾಯಗನ್’ ಆಡಿಯೋ ಲಾಂಚ್ ಕಾರ್ಯಕ್ರಮವನ್ನು ವಿವರವಾಗಿ ನೋಡಬಹುದಾಗಿದೆ.

ಇದನ್ನೂ ಓದಿ:‘ಜನ ನಾಯಗನ್ ಬಳಿಕ ಸಿನಿಮಾ ಮಾಡ್ತೀರಾ?’; ಉತ್ತರಿಸಿದ ದಳಪತಿ ವಿಜಯ್

ಮಲೇಷಿಯಾನಲ್ಲಿ ನಡೆದ ಆಡಿಯೋ ಲಾಂಚ್ ಕಾರ್ಯಕ್ರಮದಲ್ಲಿ ಮಾತನಾಡಿದ್ದ ವಿಜಯ್, ‘ಜನ ನಾಯಗನ್’ ಸಿನಿಮಾದ ಜೊತೆಗೆ ಅಭಿಮಾನಿಗಳ ಬಗ್ಗೆಯೂ ಭಾವುಕವಾಗಿ ಮಾತನಾಡಿದ್ದರು. ಮರಳಿನಲ್ಲಿ ಮನೆ ಕಟ್ಟಿಕೊಳ್ಳಲು ಬಂದ ನನಗೆ ದೊಡ್ಡ ಕೋಟೆಯನ್ನೇ ಅಭಿಮಾನಿಗಳು ಕಟ್ಟಿದ್ದಾರೆ, ಆದರೆ ಅವರಿಗಾಗಿ ನಾನು ಏನೂ ಕೊಟ್ಟಿಲ್ಲ, ಹಾಗಾಗಿ ಮುಂದಿನ ಮೂವತ್ತು ವರ್ಷ ನಾನು ನನ್ನ ಅಭಿಮಾನಿಗಳಿಗಾಗಿ ದುಡಿಯಲಿದ್ದೇನೆ, ತಮ್ಮ ಎಲ್ಲವನ್ನೂ ನನಗೆ ಕೊಟ್ಟಿರುವ ಅಭಿಮಾನಿಗಳಿಗಾಗಿ ನಾನು ಸಿನಿಮಾವನ್ನೇ ಬಿಟ್ಟುಕೊಟ್ಟಿದ್ದೇನೆ’ ಎಂದಿದ್ದಾರೆ ವಿಜಯ್. ವೇದಿಕೆ ಮೇಲೆ ಹಾಡು ಹಾಡಿ, ಡ್ಯಾನ್ಸ್ ಸಹ ಮಾಡಿದ್ದಾರೆ ವಿಜಯ್.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:02 pm, Wed, 31 December 25