AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾವೇರಿ ಹೋರಾಟ: ಮಂಡ್ಯದಲ್ಲಿ ರದ್ದಾಯ್ತು ‘ಜನ ನಾಯಗನ್’ ಶೋ

Jana Nayagan movie: ರಾಜ್ಯದ ರೈತರು, ಕನ್ನಡಪರ ಸಂಘಟನೆಗಳು, ಯಾವುದೇ ಕಾರಣಕ್ಕೂ ತಮಿಳುನಾಡಿಗೆ ಕಾವೇರಿ ನೀರು ಹರಿಸಬಾರದು ಎಂದು ಒತ್ತಾಯಿಸಿದ್ದಾರೆ. ಪ್ರತಿಭಟನೆಗಳು ಸಹ ಆರಂಭವಾಗಿವೆ. ಇದರ ಬೆನ್ನಲ್ಲೆ ಇಂದು (ಜುಲೈ 30) ತಮಿಳುನಾಡಿನ ಸಿಎಂ, ನಟ ವಿಜಯ್ ನಟನೆಯ ‘ಜನ ನಾಯಗನ್’ ಸಿನಿಮಾದ ವಿರುದ್ಧ ಸಹ ಕನ್ನಡಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ.

ಕಾವೇರಿ ಹೋರಾಟ: ಮಂಡ್ಯದಲ್ಲಿ ರದ್ದಾಯ್ತು ‘ಜನ ನಾಯಗನ್’ ಶೋ
Jana Nayagan
ಮಂಜುನಾಥ ಸಿ.
|

Updated on:Jul 30, 2026 | 3:57 PM

Share

ಮುಖ್ಯಾಂಶಗಳು

  • ಜನ ನಾಯಗನ್ ಸಿನಿಮಾ ಪ್ರದರ್ಶನ ರದ್ದಾಗಿದೆ.
  • ಮಂಡ್ಯದ ಗುರುಶ್ರೀ ಚಿತ್ರಮಂದಿರದಲ್ಲಿ ಜನ ನಾಯಗನ್ ಶೋ ರದ್ದು ಮಾಡಲಾಗಿದೆ.
  • ಕನ್ನಡ ಪರ ಸಂಘಟನೆ ಕಾರ್ಯಕರ್ತರ ಪ್ರತಿಭಟನೆಯಿಂದ ಈ ನಿರ್ಣಯ ತೆಗೆದುಕೊಳ್ಳಲಾಗಿದೆ.

ಕಾವೇರಿ (Cauvery) ಹೋರಾಟ ಕರ್ನಾಟಕದಲ್ಲಿ ಕಾವೇರುತ್ತಿದೆ. ಕಾವೇರಿ ಪ್ರಾಧಿಕಾರವು ತಮಿಳುನಾಡಿಗೆ ನೀರು ಹರಿಸಬೇಕೆಂದು ರಾಜ್ಯಕ್ಕೆ ಸೂಚನೆ ನೀಡಿದೆ. ಆದರೆ ರಾಜ್ಯದ ರೈತರು, ಕನ್ನಡಪರ ಸಂಘಟನೆಗಳು, ಯಾವುದೇ ಕಾರಣಕ್ಕೂ ತಮಿಳುನಾಡಿಗೆ ಕಾವೇರಿ ನೀರು ಹರಿಸಬಾರದು ಎಂದು ಒತ್ತಾಯಿಸಿದ್ದಾರೆ. ಪ್ರತಿಭಟನೆಗಳು ಸಹ ಆರಂಭವಾಗಿವೆ. ಇದರ ಬೆನ್ನಲ್ಲೆ ಇಂದು (ಜುಲೈ 30) ತಮಿಳುನಾಡಿನ ಸಿಎಂ, ನಟ ವಿಜಯ್ ನಟನೆಯ ‘ಜನ ನಾಯಗನ್’ ಸಿನಿಮಾದ ವಿರುದ್ಧ ಸಹ ಕನ್ನಡಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ.

ವಿಜಯ್ ನಟನೆಯ ‘ಜನ ನಾಯಗನ್’ ಸಿನಿಮಾ ಕಳೆದ ವಾರ ಬಿಡುಗಡೆ ಆಗಿದೆ. ಕರ್ನಾಟಕದಲ್ಲಿಯೂ ಸಹ ದೊಡ್ಡ ಮಟ್ಟದಲ್ಲಿ ಈ ಸಿನಿಮಾ ರಿಲೀಸ್ ಆಗಿದೆ. ಮಂಡ್ಯದ ಗುರುಶ್ರೀ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಸಿನಿಮಾ ಬಿಡುಗಡೆ ಮಾಡಲಾಗಿತ್ತು. ಆದರೆ ಇಂದು (ಜುಳೈ 30) ಕನ್ನಡ ಪರ ಸಂಘಟನೆ ಕಾರ್ಯಕರ್ತರ ಪ್ರತಿಭಟನೆ ಹಿನ್ನೆಲೆಯಲ್ಲಿ ಸಿನಿಮಾದ ಪ್ರದರ್ಶನವನ್ನು ರದ್ದು ಮಾಡಲಾಗಿದೆ.

ಇಂದು ಬೆಳಿಗ್ಗೆ ಕೆಲ ಕನ್ನಡಪರ ಸಂಘಟನೆ ಸದಸ್ಯರು ಮಂಡ್ಯದ ಗುರುಶ್ರೀ ಚಿತ್ರಮಂದಿರಕ್ಕೆ ನುಗ್ಗಿ ವಿಜಯ್ ವಿರುದ್ಧ ಘೋಷಣೆಗಳನ್ನು ಕೂಗಿದರು. ಚಿತ್ರಮಂದಿರದಲ್ಲಿ ಪ್ರದರ್ಶನವಾಗುತ್ತಿರುವ ಶೋಗಳನ್ನು ರದ್ದು ಮಾಡಬೇಕು ಎಂದು ಆಗ್ರಹಿಸಿದರು. ಸಿನಿಮಾದ ಗೇಟಿನ ಬಳಿ ಅಂಟಿಸಲಾಗಿದ್ದು ‘ಜನ ನಾಯಗನ್’ ಸಿನಿಮಾದ ಪೋಸ್ಟರ್ ಅನ್ನು ಹರಿದು, ವಿಜಯ್ ವಿರುದ್ಧ ಘೋಷಣೆಗಳನ್ನು ಸಹ ಕೂಗಿದರು.

ಇದನ್ನೂ ಓದಿ:ಕಾವೇರಿ ಜಲಾನಯನ ಪ್ರದೇಶದ ಪ್ರಮುಖ ಅಣೆಕಟ್ಟುಗಳಲ್ಲಿ ಸದ್ಯ ಇರುವ ನೀರೆಷ್ಟು? ಇಲ್ಲಿದೆ ಮಾಹಿತಿ

ವಿಜಯ್ ನಟನೆಯ ‘ಜನ ನಾಯಗನ್’ ಸಿನಿಮಾ ಕಳೆದ ವಾರ ಬಿಡುಗಡೆ ಆಗಿದೆ. ವಿಜಯ್ ಈಗ ನಟರಷ್ಟೆ ಅಲ್ಲದೆ, ತಮಿಳುನಾಡು ರಾಜ್ಯದ ಸಿಎಂ ಸಹ ಆಗಿದ್ದಾರೆ. ಕಾವೇರಿ ನೀರು ಪಡೆದುಕೊಳ್ಳಲು ಸಿಎಂ ವಿಜಯ್ ಈಗಾಗಲೇ ಪ್ರಯತ್ನಗಳನ್ನು ನಡೆಸುತ್ತಿದ್ದಾರೆ. ಇದೇ ಕಾರಣಕ್ಕೆ ರಾಜ್ಯದಲ್ಲಿ ವಿಜಯ್ ವಿರುದ್ಧ ಅಸಮಾಧನ ಮೂಡಿದ್ದು, ಆ ಅಸಮಾಧಾನ ‘ಜನ ನಾಯಗನ್’ ಸಿನಿಮಾದ ಮೇಲೆ ಋಣಾತ್ಮಕ ಪ್ರಭಾವ ಬೀರುತ್ತಿದೆ.

ಇಂದು (ಜುಲೈ 30) ಕರ್ನಾಟಕ ಫಿಲಂ ಚೇಂಬರ್​​ನಲ್ಲಿ ಈ ವಿಷಯವಾಗಿ ಚರ್ಚೆ ನಡೆಯುತ್ಇದ್ದು, ಕನ್ನಡ ಚಿತ್ರರಂಗದ ಸದಸ್ಯರು ಕಾವೇರಿ ಹೋರಾಟಕ್ಕೆ ಬೆಂಬಲ ನೀಡಬೇಕೆ ಬೇಡವೆ ಎಂಬ ಬಗ್ಗೆ ಚರ್ಚೆ ನಡೆಯುತ್ತಿದೆ. ಜೊತೆಗೆ ‘ಜನ ನಾಯಗನ್’ ಸಿನಿಮಾದ ಬಗ್ಗೆಯೂ ಸಹ ಸಭೆಯಲ್ಲಿ ಚರ್ಚೆ ನಡೆಯಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:53 pm, Thu, 30 July 26

Follow Us
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ಗುಂಡೇಟಿಗೆ ಮೂವರು ಬಲಿ ಕೇಸ್​: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ
ಗುಂಡೇಟಿಗೆ ಮೂವರು ಬಲಿ ಕೇಸ್​: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ
ಏಯ್ ಯಾರಲ್ಲಿ ಟಿಕೆಟ್.. ಬಸ್ ಕಂಡಕ್ಟರ್ ಆದ ವಿದ್ಯಾರ್ಥಿ,ವಿಡಿಯೋ ವೈರಲ್!
ಏಯ್ ಯಾರಲ್ಲಿ ಟಿಕೆಟ್.. ಬಸ್ ಕಂಡಕ್ಟರ್ ಆದ ವಿದ್ಯಾರ್ಥಿ,ವಿಡಿಯೋ ವೈರಲ್!
ಶ್ವಾನದ ವೇಷದಲ್ಲೇ ಜಿಲ್ಲಾಧಿಕಾರಿ ಕಚೇರಿಗೆ ಬಂದ ವ್ಯಕ್ತಿ
ಶ್ವಾನದ ವೇಷದಲ್ಲೇ ಜಿಲ್ಲಾಧಿಕಾರಿ ಕಚೇರಿಗೆ ಬಂದ ವ್ಯಕ್ತಿ
RSS ಬಗ್ಗೆ ಹೇಳಿಕೆ: ಸಚಿವ ಯತೀಂದ್ರ ವಿರುದ್ಧ ಎಸ್​​ಪಿಗೆ ಬಿಜೆಪಿ ದೂರು
RSS ಬಗ್ಗೆ ಹೇಳಿಕೆ: ಸಚಿವ ಯತೀಂದ್ರ ವಿರುದ್ಧ ಎಸ್​​ಪಿಗೆ ಬಿಜೆಪಿ ದೂರು
ನಮ್ ವಿಷ್ಯದಲ್ಲಿ ತಲೆಹಾಕೋದು ಬೇಡ": ಸಚಿವ ಶಿವಲಿಂಗೇಗೌಡ
ನಮ್ ವಿಷ್ಯದಲ್ಲಿ ತಲೆಹಾಕೋದು ಬೇಡ
ವಿಧಾನ ಪರಿಷತ್​​ಗೆ ನಾಗೇಂದ್ರ ಆಗಮನದ ವೇಳೆ ಗೋಬ್ಯಾಕ್​​ ಘೋಷಣೆ
ವಿಧಾನ ಪರಿಷತ್​​ಗೆ ನಾಗೇಂದ್ರ ಆಗಮನದ ವೇಳೆ ಗೋಬ್ಯಾಕ್​​ ಘೋಷಣೆ
ತಮಿಳುನಾಡಿಗೆ ಕೆಆರ್​​ಎಸ್​ನಿಂದ ನೀರು ಹರಿಸಲಾಗ್ತಿದ್ಯಾ?: ಸಚಿವರು ಏನಂದ್ರು?
ತಮಿಳುನಾಡಿಗೆ ಕೆಆರ್​​ಎಸ್​ನಿಂದ ನೀರು ಹರಿಸಲಾಗ್ತಿದ್ಯಾ?: ಸಚಿವರು ಏನಂದ್ರು?