AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜನಾರ್ಧನ ರೆಡ್ಡಿ ಪುತ್ರ ಕಿರೀಟಿಯ ಮೊದಲ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ

Janardhana Reddy son Kireeti Reddy: ಮಾಜಿ ಸಚಿವ, ರಾಜಕಾರಣಿ ಜನಾರ್ಧನ ರೆಡ್ಡಿ ಅವರ ಪುತ್ರ ಕಿರೀಟಿ ರೆಡ್ಡಿ ಅವರ ಮೊದಲ ಸಿನಿಮಾ ‘ಜೂನಿಯರ್’ ಸೆಟ್ಟೇರಿ ಮೂರು ವರ್ಷಗಳಾಗಿವೆ. ಶ್ರೀಲೀಲಾ ನಾಯಕಿಯಾಗಿರುವ ಈ ಸಿನಿಮಾ ನಿಂತೇ ಹೋಯಿತು ಎಂಬ ಸುದ್ದಿ ಹರಿದಾಡಿತ್ತು. ಇದೀಗ ಹಠಾತ್ತನೆ ಸಿನಿಮಾದ ಬಿಡುಗಡೆ ದಿನಾಂಕ ಘೋಷಣೆ ಆಗಿದೆ.

ಜನಾರ್ಧನ ರೆಡ್ಡಿ ಪುತ್ರ ಕಿರೀಟಿಯ ಮೊದಲ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
Junior Kannada Movie
ಮಂಜುನಾಥ ಸಿ.
|

Updated on:May 15, 2025 | 3:11 PM

Share

ಮಾಜಿ ಸಚಿವ ಜನಾರ್ಧನ ರೆಡ್ಡಿ (Janardhan Reddy) ಅವರ ಪುತ್ರ ಕಿರೀಟಿ ಮೊದಲ ಸಿನಿಮಾ ‘ಜೂನಿಯರ್’ ಪ್ರಾರಂಭವಾಗಿ ವರ್ಷಗಳೇ ಕಳೆದಿವೆ. ಆ ಸಿನಿಮಾ ನಿಂತೇ ಹೋಗಿದೆ ಎಂಬ ಸುದ್ದಿಗಳೂ ಹರಿದಾಡಿದ್ದವು. 2022 ರಲ್ಲಿ ಕಿರೀಟಿ ಅವರ ಮೊದಲ ಸಿನಿಮಾದ ಮುಹೂರ್ತ ಅದ್ಧೂರಿಯಾಗಿ ನಡೆದಿತ್ತು. ಕನ್ನಡ ಹಾಗೂ ತೆಲುಗು ಭಾಷೆಗಳಲ್ಲಿ ಈ ಸಿನಿಮಾವನ್ನು ನಿರ್ಮಾಣ ಮತ್ತು ಬಿಡುಗಡೆ ಮಾಡುವುದಾಗಿ ಹೇಳಲಾಗಿತ್ತು. ಆರಂಭದಲ್ಲಿ ಚಿತ್ರೀಕರಣ ಜೋರಾಗಿಯೇ ನಡೆಯಿತು. ಆದರೆ ಬಳಿಕ ಸಿನಿಮಾದ ಸುದ್ದಿಯೇ ಇರಲಿಲ್ಲ. ಇದೀಗ ರೆಡ್ಡಿ ಪುತ್ರನ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ ಆಗಿದೆ.

ಜನಾರ್ಧನ ರೆಡ್ಡಿ ಅವರ ಪುತ್ರ ಕಿರೀಟಿಯ ಮೊದಲ ಸಿನಿಮಾ ‘ಜೂನಿಯರ್ ಜುಲೈ 18ಕ್ಕೆ ಬಿಡುಗಡೆ ಆಗಲಿದೆ. ಕನ್ನಡ, ತೆಲುಗು, ತಮಿಳು, ಮಲಯಾಳಂ ಹಾಗೂ ಹಿಂದಿ ಭಾಷೆಗಳಲ್ಲಿ ಈ ಕಾಲೇಜು ಪ್ರೇಮಕತೆ ತೆರೆಗೆ ಬರಲಿದೆ. ಕನ್ನಡದ ‘ಮಾಯಾಬಜಾರ್’ ತಮಿಳುನ ‘ನಾಂಗು ರೊಂಬ ಬ್ಯುಸಿ’ ಸಿನಿಮಾಗಳನ್ನು ನಿರ್ದೇಶಿಸಿರುವ ರಾಧಾ ಕೃಷ್ಣ ರೆಡ್ಡಿ ಅವರು ಈ ಸಿನಿಮಾ ನಿರ್ದೇಶನ ಮಾಡಿದ್ದಾರೆ. ‘ಈಗ’ ಸೇರಿದಂತೆ ಹಲವು ಬ್ಲಾಕ್ ಬಸ್ಟರ್ ಸಿನಿಮಾ ನಿರ್ಮಾಣ ಮಾಡಿರುವ ತೆಲುಗಿನ ಖ್ಯಾತ ನಿರ್ಮಾಣ ಸಂಸ್ಥೆ ವರಾಹಿ ‘ಜೂನಿಯರ್’ ಸಿನಿಮಾಕ್ಕೆ ಬಂಡವಾಳ ಹೂಡಿದೆ.

ಇದನ್ನೂ ಓದಿ:ಮೊದಲ ಹಿಂದಿ ಸಿನಿಮಾ ಚಿತ್ರೀಕರಣ ಮುಗಿಸಿದ ನಟಿ ಶ್ರೀಲೀಲಾ

‘ಜೂನಿಯರ್’ ಸಿನಿಮಾದ ಮೊದಲ ಹಾಡು ಇದೇ ತಿಂಗಳ 19ನೇ ತಾರೀಖು ಬಿಡುಗಡೆ ಆಗಲಿದೆ. ಸಿನಿಮಾಕ್ಕೆ ದೇವಿಶ್ರೀ ಪ್ರಸಾದ್ ಸಂಗೀತ ನೀಡಿದ್ದಾರೆ. ‘ಜೂನಿಯರ್’ ಸಿನಿಮಾನಲ್ಲಿ ಶ್ರೀಲೀಲಾ ನಾಯಕಿ. ಈ ಸಿನಿಮಾನಲ್ಲಿ ಜೆನಿಲಿಯಾ ಹಾಗೂ ನಟ ರವಿಚಂದ್ರನ್ ಸಹ ನಟಿಸಿದ್ದಾರೆ. ತೆಲುಗು ಹಾಗೂ ಕನ್ನಡ ಚಿತ್ರರಂಗದ ಇನ್ನೂ ಕೆಲವು ಸ್ಟಾರ್ ನಟ, ನಟಿಯರು ಈ ಸಿನಿಮಾನಲ್ಲಿದ್ದಾರೆ.

ಸಿನಿಮಾ ಪ್ರಾರಂಭವಾದಾಗ ನಿರ್ದೇಶಕ ರಾಜಮೌಳಿ ಮುಹೂರ್ತಕ್ಕೆ ಆಗಮಿಸಿ ಶುಭಾಶಯ ತಿಳಿಸಿದ್ದರು. ‘ಬಾಹುಬಲಿ’ ಖ್ಯಾತಿಯ ಸೆಂಥಿಲ್ ಈ ಸಿನಿಮಾಕ್ಕೆ ಕ್ಯಾಮೆರಾಮನ್ ಆಗಿದ್ದು, ಆರಂಭದಲ್ಲಿ ಬಿಡುಗಡೆ ಮಾಡಿದ್ದ ಸಿನಿಮಾದ ಟೀಸರ್ ಸಹ ಸಖತ್ ಸದ್ದು ಮಾಡಿತ್ತು. ಸಿನಿಮಾಕ್ಕೆ ಖ್ಯಾತ ಆಕ್ಷನ್ ಕೊರಿಯೋಗ್ರಾಫರ್ ಪೀಟರ್ ಹೇನ್​ ಆಕ್ಷನ್ ನೀಡಿದ್ದಾರೆ. ಇದೇ ತಿಂಗಳ 19 ರಂದು ಹಾಡು ಬಿಡುಗಡೆ ಮೂಲಕ ಸಿನಿಮಾದ ಪ್ರಚಾರ ಆರಂಭವಾಗುತ್ತಿದ್ದು, ಜುಲೈ 18ಕ್ಕೆ ಸಿನಿಮಾ ಬಿಡುಗಡೆ ಆಗಲಿದೆ. ಮೂರು ವರ್ಷಗಳ ಬಳಿಕ ಕಿರೀಟಿಯ ಸಿನಿಮಾ ತೆರೆಗೆ ಬರುತ್ತಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:07 pm, Thu, 15 May 25

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ