AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್ ಫಿನಾಲೆ ಸಮಯದಲ್ಲಿ ಜಾನ್ವಿ ಎಡವಟ್ಟು; ಇದೆಲ್ಲಾ ಬೇಕಿತ್ತಾ?

ಬಿಗ್ ಬಾಸ್ ಕನ್ನಡ 12 ಫಿನಾಲೆ ಸಂದರ್ಭದಲ್ಲಿ ಜಾನ್ವಿ ಅವರ ಸಾಮಾಜಿಕ ಮಾಧ್ಯಮದ ಪೋಸ್ಟ್‌ಗಳು ತೀವ್ರ ಚರ್ಚೆಗೆ ಗ್ರಾಸವಾಗಿವೆ. 'ಗಿಲ್ಲಿ'ಗೆ ಅತಿಯಾದ ಹೈಪ್ ನೀಡಲಾಗುತ್ತಿದೆ ಎಂದು ಬೇರೆಯವರು ಮಾಡಿರೋ ಪೋಸ್ಟ್​​ನ ಇವರು ಹಂಚಿಕೊಂಡಿದ್ದಾರೆ. ಜಾನ್ವಿಯ ಈ ವರ್ತನೆಯಿಂದ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದು, ಅವರ ಉದ್ದೇಶದ ಬಗ್ಗೆ ಪ್ರಶ್ನಿಸಿದ್ದಾರೆ.

ಬಿಗ್ ಬಾಸ್ ಫಿನಾಲೆ ಸಮಯದಲ್ಲಿ ಜಾನ್ವಿ ಎಡವಟ್ಟು; ಇದೆಲ್ಲಾ ಬೇಕಿತ್ತಾ?
ಗಿಲ್ಲಿ-ಜಾನ್ವಿ
ರಾಜೇಶ್ ದುಗ್ಗುಮನೆ
|

Updated on:Jan 18, 2026 | 5:21 PM

Share

‘ಬಿಗ್ ಬಾಸ್ ಕನ್ನಡ ಸೀಸನ್ 12’ರ (BBK 12) ಜಾನ್ವಿ ಅವರು ಎಲಿಮಿನೇಟ್ ಆಗಿ ಹಲವು ವಾರ ಕಳೆದಿದೆ. ಬಿಗ್ ಬಾಸ್​​ನಿಂದ ಹೊರ ಬಂದ ಬಳಿಕ ಅವರು ವಿವಿಧ ಫೋಟೋಶೂಟ್ ಮಾಡುತ್ತಾ ಗಮನ ಸೆಳೆಯುತ್ತಿದ್ದಾರೆ. ಫಿನಾಲೆ ಸಂದರ್ಭದಲ್ಲಿ ಅವರು ಎಡವಟ್ಟೊಂದನ್ನು ಮಾಡಿಕೊಂಡಿದ್ದಾರೆ. ಅವರು ಮಾಡಿರುವ ಪೋಸ್ಟ್ ಬಗ್ಗೆ ಚರ್ಚೆ ಶುರುವಾಗಿದೆ. ಜಾನ್ವಿ ಹೊಟ್ಟೆ ಉರಿದುಕೊಂಡು ಈ ರೀತಿ ಪೋಸ್ಟ್ ಹಾಕಿರಬಹುದು ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

ಬಿಗ್ ಬಾಸ್ ಅಲ್ಲಿ ಇದ್ದಷ್ಟು ದಿನ ಜಾನ್ವಿ ಚರ್ಚೆಯಲ್ಲಿ ಇದ್ದರು. ಕಲರ್ಸ್ ಕನ್ನಡದವರು ಸ್ಪಂದನಾ ಅವರನ್ನು ಉಳಿಸಿಕೊಳ್ಳುತ್ತಿದ್ದಾರೆ ಎಂದು ನೇರವಾಗಿ ಆರೋಪಿಸಿದ್ದರು. ಈ ಬಗ್ಗೆ ಚರ್ಚೆ ನಡೆದಿತ್ತು. ಸುದೀಪ್ ಕೂಡ ಇದನ್ನು ಪ್ರಶ್ನೆ ಮಾಡಿದ್ದರು. ಬಿಗ್ ಬಾಸ್ ಮನೆಯಿಂದ ಹೊರ ಬಂದ ಬಳಿಕವೂ ಜಾನ್ವಿ ಚರ್ಚೆಯಲ್ಲಿರುವ ಪ್ರಯತ್ನ ಮಾಡುತ್ತಿದ್ದಾರೆ.

ಇದನ್ನೂ ಓದಿ: ಟಾಪ್​ 6ನಿಂದ ಒಬ್ಬರು ಔಟ್; ವಿನ್ ನನ್ನ ಹಣೆಯಲ್ಲಿ ಬರೆದಿಲ್ಲ ಎಂದ ಗಿಲ್ಲಿ

ಬಿಗ್ ಬಾಸ್ ಫಿನಾಲೆ ನಡೆಯುತ್ತಿದೆ. ಗಿಲ್ಲಿ ನಟನಿಗೆ ಸಾಕಷ್ಟು ಹೈಪ್ ಸಿಗುತ್ತಿದೆ. ಈ ಹೈಪ್ ನೋಡಿದ ಅನೇಕರಿಗೆ ಈರ್ಷೆ ಬಂದಿದೆ ಎಂಬ ಅಭಿಪ್ರಾಯ ಅಭಿಮಾನಿಗಳದ್ದು. ‘ಗಿಲ್ಲಿಗೆ ಹೈಪ್ ನೀಡೋದು ಸರಿ ಎನಿಸುತ್ತಿಲ್ಲ’ ಎಂಬರ್ಥದ ಸ್ಟೇಟಸ್​​ನ ಅವರು ಹಾಕಿದ್ದರು. ನಂತರ, ‘ಅಶ್ವಿನಿ ದುಡ್ಡು ಕೊಟ್ಟು ವೋಟ್ ಖರೀದಿ ಮಾಡಿದ್ದಾರೆ ಎಂದು ಆರೋಪಿಸುವವರು ಚುನಾವಣೆ ಸಂದರ್ಭದಲ್ಲೂ ಈ ಬಗ್ಗೆ ಪ್ರಶ್ನೆ ಮಾಡಿ’ ಎಂಬ ಸ್ಟೇಟಸ್​​ನ ಹಂಚಿಕೊಂಡಿದ್ದಾರೆ.

View this post on Instagram

A post shared by Kalki (@rj.typical)

View this post on Instagram

A post shared by techibox (@techi.box)

ಯಾವುದೇ ಸ್ಪರ್ಧಿಗೆ ಹೈಪ್ ಕೊಡೋದು ತಪ್ಪೇ ಎಂಬುದು ಅನೇಕರ ಪ್ರಶ್ನೆ. ‘ಇಷ್ಟೆಲ್ಲಾ ಬುದ್ಧಿವಂತಿಕೆ ಮಾತಾಡೋರು ಮತ್ತೆ ಬಿಗ್ ಬಾಸ್ ಮನೆಗೆ ಯಾಕೆ ಹೋಗಿದ್ದು ಜಾನವಿ ಮೇಡಂ’ ಎಂದು ಜಾನ್ವಿಯನ್ನು ಕೆಲವರು ಪ್ರಶ್ನೆ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 5:21 pm, Sun, 18 January 26

Follow Us
1800 ಕಿ.ಮೀ ಸೈಕಲ್ ಜರ್ನಿ; ಅಭಿಮಾನಿಯ ಅಭಿಮಾನಕ್ಕೆ ಹಾರ್ದಿಕ್ ಫಿದಾ
1800 ಕಿ.ಮೀ ಸೈಕಲ್ ಜರ್ನಿ; ಅಭಿಮಾನಿಯ ಅಭಿಮಾನಕ್ಕೆ ಹಾರ್ದಿಕ್ ಫಿದಾ
ಕಲ್ಲು ಕ್ವಾರಿ ದುರಂತ: ಗಾಯಾಳುಗಳ ಆರೋಗ್ಯ ವಿಚಾರಿಸಿ ಡಿಕೆಶಿ ಹೇಳಿದ್ದೇನು?
ಕಲ್ಲು ಕ್ವಾರಿ ದುರಂತ: ಗಾಯಾಳುಗಳ ಆರೋಗ್ಯ ವಿಚಾರಿಸಿ ಡಿಕೆಶಿ ಹೇಳಿದ್ದೇನು?
ಮಳೆಯಿಂದ ಅಪಾಯದ ಮಟ್ಟ ತಲುಪಿದ ಅಲಕಾನಂದ ನದಿ; ರುದ್ರಪ್ರಯಾಗದಲ್ಲಿ ಹೈ ಅಲರ್ಟ್
ಮಳೆಯಿಂದ ಅಪಾಯದ ಮಟ್ಟ ತಲುಪಿದ ಅಲಕಾನಂದ ನದಿ; ರುದ್ರಪ್ರಯಾಗದಲ್ಲಿ ಹೈ ಅಲರ್ಟ್
ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ
ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್
ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್
SIR​ ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ
SIR​ ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ
’ನನ್ನ ತಂಗಿ’; ಭಾರತಕ್ಕೆ ಬಂದಿರುವ ಜಪಾನ್ ಪ್ರಧಾನಿ ತಕೈಚಿಗೆ ಮೋದಿ ಮೆಚ್ಚುಗೆ
’ನನ್ನ ತಂಗಿ’; ಭಾರತಕ್ಕೆ ಬಂದಿರುವ ಜಪಾನ್ ಪ್ರಧಾನಿ ತಕೈಚಿಗೆ ಮೋದಿ ಮೆಚ್ಚುಗೆ
ಗ್ಯಾರಂಟಿ ಪರಿಷ್ಕರಣೆ ಹೆಸರಲ್ಲಿ ಚುನಾವಣೆಗೆ ಮಾಹಿತಿ ಸಂಗ್ರಹ: ಕುಮಾರಸ್ವಾಮಿ
ಗ್ಯಾರಂಟಿ ಪರಿಷ್ಕರಣೆ ಹೆಸರಲ್ಲಿ ಚುನಾವಣೆಗೆ ಮಾಹಿತಿ ಸಂಗ್ರಹ: ಕುಮಾರಸ್ವಾಮಿ
28 ಕೋಟಿ ರೂ. ಪರಿಹಾರದ ಕ್ರೆಡಿಟ್ ವಾರ್
28 ಕೋಟಿ ರೂ. ಪರಿಹಾರದ ಕ್ರೆಡಿಟ್ ವಾರ್