AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jayamma Death: ನಟ ವಿಜಯ್ ರಾಘವೇಂದ್ರ, ಶ್ರೀಮುರಳಿ ತಾಯಿ ಜಯಮ್ಮ ನಿಧನ

Jayamma Passed Away: ಖ್ಯಾತ ನಟರಾದ ವಿಜಯ್ ರಾಘವೇಂದ್ರ ಮತ್ತು ಶ್ರೀಮುರಳಿ ಅವರ ತಾಯಿ, ಹಿರಿಯ ನಿರ್ಮಾಪಕ ಎಸ್.ಎ. ಚಿನ್ನೇಗೌಡರ ಪತ್ನಿ ಜಯಮ್ಮ ಇಂದು (ಜೂನ್ 16) ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಜಯಮ್ಮ ಅವರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರು. ಸ್ಯಾಂಡಲ್‌ವುಡ್ ಕುಟುಂಬದ ಬೆನ್ನೆಲುಬಾಗಿ ನಿಂತು, ತಮ್ಮ ಪತಿ ಹಾಗೂ ಮಕ್ಕಳ ಸಿನಿ ಪಯಣಕ್ಕೆ ಅಪಾರ ಬೆಂಬಲ ನೀಡಿದ ಶಕ್ತಿ ಅವರು. ಅವರ ಅಗಲಿಕೆಗೆ ಚಿತ್ರರಂಗದ ಗಣ್ಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

Jayamma Death: ನಟ ವಿಜಯ್ ರಾಘವೇಂದ್ರ, ಶ್ರೀಮುರಳಿ ತಾಯಿ ಜಯಮ್ಮ ನಿಧನ
ಶ್ರೀಮುರಳಿ, ವಿಜಯ್ ಹಾಗೂ ಜಯಮ್ಮ
ಮಾಲತೇಶ ಜಗ್ಗೀನ್
| Edited By: |

Updated on: Jun 16, 2026 | 9:24 AM

Share

ಕನ್ನಡ ಚಿತ್ರರಂಗದ ಖ್ಯಾತ ನಟರಾದ ವಿಜಯ್ ರಾಘವೇಂದ್ರ (Vijay Raghavendra) ಮತ್ತು ಶ್ರೀಮುರಳಿ ಅವರ ತಾಯಿ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಮಾಜಿ ಅಧ್ಯಕ್ಷ ಹಾಗೂ ಹಿರಿಯ ನಿರ್ಮಾಪಕ ಎಸ್.ಎ. ಚಿನ್ನೇಗೌಡ ಅವರ ಪತ್ನಿ ಜಯಮ್ಮ ಅವರು ಇಂದು (ಜೂನ್ 16) ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಜಯಮ್ಮ ಅವರು ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ ನಿಧನರಾಗಿದ್ದಾರೆ. ಇವರ ನಿಧನಕ್ಕೆ ಸ್ಯಾಂಡಲ್‌ವುಡ್ ಗಣ್ಯರು ಹಾಗೂ ಅಭಿಮಾನಿಗಳು ತೀವ್ರ ಕಂಬನಿ ಮಿಡಿದಿದ್ದಾರೆ.

ಜಯಮ್ಮ ಅವರು ಕೇವಲ ಒಂದು ಸ್ಟಾರ್ ಕುಟುಂಬದ ಗೃಹಿಣಿಯಾಗಿರಲಿಲ್ಲ. ಬದಲಿಗೆ ತಮ್ಮ ಪತಿ ಹಾಗೂ ಇಬ್ಬರು ಮಕ್ಕಳ ಚಿತ್ರರಂಗದ ಸುದೀರ್ಘ ಪಯಣಕ್ಕೆ ದೊಡ್ಡ ಬೆನ್ನೆಲುಬಾಗಿ ನಿಂತವರು. ಪತಿ ಚಿನ್ನೇಗೌಡರು ಸ್ಯಾಂಡಲ್‌ವುಡ್‌ನ ಯಶಸ್ವಿ ನಿರ್ಮಾಪಕರಾಗಿ ಗುರುತಿಸಿಕೊಳ್ಳಲು ಹಾಗೂ ಇಬ್ಬರು ಗಂಡುಮಕ್ಕಳು ಚಿತ್ರರಂಗದಲ್ಲಿ ಸ್ಟಾರ್ ನಟರಾಗಿ ಬೆಳೆಯಲು ಜಯಮ್ಮ ಅವರ ಪ್ರೋತ್ಸಾಹ, ಮಾರ್ಗದರ್ಶನ ಮತ್ತು ನೈತಿಕ ಬೆಂಬಲ ಅಪಾರವಾಗಿತ್ತು. ಸದಾ ತೆರೆಯ ಮರೆಯಲ್ಲೇ ಇದ್ದು ಇಡೀ ಕುಟುಂಬವನ್ನು ಮುನ್ನಡೆಸಿದ ಶಕ್ತಿ ಅವರಾಗಿದ್ದರು. ಬಾಲನಟನಾಗಿ ಚಿತ್ರರಂಗ ಪ್ರವೇಶಿಸಿ ‘ಚಿನ್ನಾರಿ ಮುತ್ತ’ ಚಿತ್ರದ ನಟನೆಗಾಗಿ ರಾಷ್ಟ್ರ ಪ್ರಶಸ್ತಿ ಪಡೆದ ಹೆಮ್ಮೆ ವಿಜಯ್ ರಾಘವೇಂದ್ರ ಅವರದ್ದು. ನಂತರ ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿ ಸ್ಯಾಂಡಲ್‌ವುಡ್‌ನ ಪ್ರಮುಖ ನಟರಾಗಿ, ರಿಯಾಲಿಟಿ ಶೋಗಳ ನೆಚ್ಚಿನ ಜಡ್ಜ್ ಆಗಿ ಗುರುತಿಸಿಕೊಂಡಿದ್ದಾರೆ. ಈಗಲೂ ಅವರಿಗೆ ಇರುವ ಬೇಡಿಕೆ ಕಡಿಮೆ ಆಗಿಲ್ಲ.

‘ಚಂದ್ರ ಚಕೋರಿ’ ಚಿತ್ರದ ಮೂಲಕ ಚಾಕೊಲೇಟ್ ಹೀರೊ ಆಗಿ ಎಂಟ್ರಿ ಕೊಟ್ಟ ಶ್ರೀಮುರಳಿ, ಆ ಬಳಿಕ ‘ಉಗ್ರಂ’ ಚಿತ್ರದ ಮೂಲಕ ಕನ್ನಡ ಚಿತ್ರರಂಗದಲ್ಲಿ ಹೊಸ ಅಲೆ ಸೃಷ್ಟಿಸಿದರು. ಆ್ಯಕ್ಷನ್ ಪ್ಯಾಕ್ಡ್ ಸಿನಿಮಾಗಳ ಮೂಲಕ ‘ರೋರಿಂಗ್ ಸ್ಟಾರ್’ ಆಗಿ ಚಿತ್ರರಂಗದಲ್ಲಿ ಭದ್ರ ನೆಲೆ ಕಂಡುಕೊಂಡಿದ್ದಾರೆ. ಇವರಿಬ್ಬರ ಸಿನಿ ಜರ್ನಿಗೆ ಜಯಮ್ಮ ಅವರ ಬೆಂಬಲ ಇತ್ತು.

ಇದನ್ನೂ ಓದಿ: ವಿಜಯ್ ರಾಘವೇಂದ್ರ ಟಾರ್ಚರ್​​ಗೆ ಸುಸ್ತಾದ ಅನುಶ್ರೀ; ಕೊನೆಗೂ ಮೂಡಿತು ನಗು

ಚಿತ್ರರಂಗದ ಖ್ಯಾತ ನಟ ರಾಜ್‌ಕುಮಾರ್ ಕುಟುಂಬದ ಸಂಬಂಧಿಕರಾಗಿರುವ ಚಿನ್ನೇಗೌಡರ ಕುಟುಂಬದ ಬೆನ್ನೆಲಬು ಇಲ್ಲದಂತಾಗಿರುವುದು ಎಲ್ಲರಿಗೂ ನೋವನ್ನು ಉಂಟುಮಾಡಿದೆ. ಜಯಮ್ಮ ಅವರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಅವರ ಕುಟುಂಬಕ್ಕೆ ಈ ದುಃಖವನ್ನು ಭರಿಸುವ ಶಕ್ತಿ ಸಿಗಲಿ ಎಂದು ಎಲ್ಲರೂ ಪ್ರಾರ್ಥಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮಾಲತೇಶ ಜಗ್ಗೀನ್
ಮಾಲತೇಶ ಜಗ್ಗೀನ್

ಮಾಲತೇಶ ಜಗ್ಗೀನ್. Tv9 ಕನ್ನಡ ವಾಹಿನಿ ಫಿಲಂ ಬ್ಯೂರೋ ಮುಖ್ಯಸ್ಥನಾಗಿ ಕೆಲಸ ಮಾಡ್ತಿದ್ದಾರೆ. ಮಾಲತೇಶ ವಿಜಯನಗರ ಜಿಲ್ಲೆ ಹೂವಿನ ಹಡಗಲಿ ತಾಲ್ಲೂಕು ಹೊಳಲು ಗ್ರಾಮದವರು. ಕಳೆದ 15 ವರ್ಷಗಳಲ್ಲಿ ಮಾಧ್ಯಮ ಲೋಕದ ವಿವಿಧ ವಿಭಾಗಗಳಲ್ಲಿ ವರದಿಗಾರಿಕೆ ಮಾಡಿದ ಅನುಭವ ಇದೆ. ಸಿನಿಮಾ ವಿಭಾಗದ ಜೊತೆ ರಾಜಕೀಯ, ಮೆಟ್ರೋ, ಕ್ರೈಂ ವಿಭಾಗದಲ್ಲೂ ಕೆಲವು ಸನ್ನಿವೇಶಗಳಲ್ಲಿ ವರದಿಗಾರಿಕೆ ಮಾಡಿದ್ದಾರೆ. ಹಾವೇರಿಯ ಕೆಎಫ್ ಚಾನಲ್ , ನಂತರ ಬೆಂಗಳೂರಿನ ಸಮಯ ನ್ಯೂಸ್, ಜನಶ್ರಿ ನ್ಯೂಸ್, ಪಬ್ಲಿಕ್ ಟಿವಿ ಸೇರಿದಂತೆ ವಿವಿಧ ವಾಹಿನಿಗಳಲ್ಲಿ ಕೆಲಸ ಮಾಡಿದ ಅನುಭವ ಇದೆ. Tv9kannada ನ್ಯೂಸ್ ಚಾನಲ್ ನಲ್ಲಿ ಕಳೆದ 10 ವರ್ಷಗಳಿಂದ ಇದ್ದಾರೆ. ಕಲೆ, ಸಾಹಿತ್ಯ, ಸಿನಿಮಾ, ಕ್ರಿಡೆ ಆಸಕ್ತಿ ವಿಷಯಗಳು.

Read More
ಸೋಲುವ ಪಂದ್ಯವನ್ನು ಟೈ ಮಾಡಿ, ಆಮೇಲೆ ಸೋತ ಟೀಮ್ ಇಂಡಿಯಾ
ಸೋಲುವ ಪಂದ್ಯವನ್ನು ಟೈ ಮಾಡಿ, ಆಮೇಲೆ ಸೋತ ಟೀಮ್ ಇಂಡಿಯಾ
ಈ ರಾಶಿಯವರಿಗಿಂದು ಹಣದ ವಿಷಯದಲ್ಲಿ ಆತುರದ ನಿರ್ಧಾರ ಬೇಡ
ಈ ರಾಶಿಯವರಿಗಿಂದು ಹಣದ ವಿಷಯದಲ್ಲಿ ಆತುರದ ನಿರ್ಧಾರ ಬೇಡ
ಗರುಡ ಪುರಾಣದ ಪ್ರಕಾರ ಊಟ ಎಲ್ಲಿ ಮಾಡಬೇಕು, ಎಲ್ಲಿ ಮಾಡಬಾರದು? ಫಲಗಳೇನು?
ಗರುಡ ಪುರಾಣದ ಪ್ರಕಾರ ಊಟ ಎಲ್ಲಿ ಮಾಡಬೇಕು, ಎಲ್ಲಿ ಮಾಡಬಾರದು? ಫಲಗಳೇನು?
2028ರ ಎಲೆಕ್ಷನ್ ಗೆಲ್ಲಲು ಜೋಶಿಗೆ ಸಾರಥ್ಯ?ಇದಕ್ಕೆ ಅವರು ಹೇಳಿದ್ದೇನು?
2028ರ ಎಲೆಕ್ಷನ್ ಗೆಲ್ಲಲು ಜೋಶಿಗೆ ಸಾರಥ್ಯ?ಇದಕ್ಕೆ ಅವರು ಹೇಳಿದ್ದೇನು?
ದೀದಿ ಕೋಟೆಯನ್ನು ಬಿಜೆಪಿ ಛಿದ್ರಗೊಳಿಸಿದ್ದು ಹೇಗೆ? ಪ್ರಲ್ಹಾದ್ ಜೋಶಿ ಮಾಹಿತಿ
ದೀದಿ ಕೋಟೆಯನ್ನು ಬಿಜೆಪಿ ಛಿದ್ರಗೊಳಿಸಿದ್ದು ಹೇಗೆ? ಪ್ರಲ್ಹಾದ್ ಜೋಶಿ ಮಾಹಿತಿ
ಮಮತಾ ಬ್ಯಾನರ್ಜಿ ಮನೆ ಹೊರಗೆ ಟಿಎಂಸಿ ಶಾಸಕ ಕುನಾಲ್ ಘೋಷ್ ಮೇಲೆ ಮೊಟ್ಟೆ ದಾಳಿ
ಮಮತಾ ಬ್ಯಾನರ್ಜಿ ಮನೆ ಹೊರಗೆ ಟಿಎಂಸಿ ಶಾಸಕ ಕುನಾಲ್ ಘೋಷ್ ಮೇಲೆ ಮೊಟ್ಟೆ ದಾಳಿ
ಮಾಜಿ ಸೈನಿಕನ ಸಾವಿಗೆ ಟ್ವಿಸ್ಟ್​:FSL ವರದಿಯನ್ನೇ ತಿರುಚಿದ ಗ್ಯಾಂಗ್!
ಮಾಜಿ ಸೈನಿಕನ ಸಾವಿಗೆ ಟ್ವಿಸ್ಟ್​:FSL ವರದಿಯನ್ನೇ ತಿರುಚಿದ ಗ್ಯಾಂಗ್!
ಮೋದಿ ಅಧಿಕಾರ ಸಾಕು ಅಂದಿದ್ರು; ಅಚ್ಚರಿಯ ಸಂಗತಿ ಬಿಚ್ಚಿಟ್ಟ ಪ್ರಲ್ಹಾದ್ ಜೋಶಿ
ಮೋದಿ ಅಧಿಕಾರ ಸಾಕು ಅಂದಿದ್ರು; ಅಚ್ಚರಿಯ ಸಂಗತಿ ಬಿಚ್ಚಿಟ್ಟ ಪ್ರಲ್ಹಾದ್ ಜೋಶಿ
ಕಾಕ್ರೋಜ್‌ ಪಾರ್ಟಿ ಸಂಸ್ಥಾಪಕನಿಗೆ ಕಪಾಳಮೋಕ್ಷ: ವಿಡಿಯೋ ವೈರಲ್‌
ಕಾಕ್ರೋಜ್‌ ಪಾರ್ಟಿ ಸಂಸ್ಥಾಪಕನಿಗೆ ಕಪಾಳಮೋಕ್ಷ: ವಿಡಿಯೋ ವೈರಲ್‌
RSS ವಿವರಣೆ ಕೇಳಿದ ಪ್ರಿಯಾಂಕ್ ಖರ್ಗೆಗೆ ತೇಜಸ್ವಿ ಸೂರ್ಯ ಖಡಕ್ ಉತ್ತರ
RSS ವಿವರಣೆ ಕೇಳಿದ ಪ್ರಿಯಾಂಕ್ ಖರ್ಗೆಗೆ ತೇಜಸ್ವಿ ಸೂರ್ಯ ಖಡಕ್ ಉತ್ತರ