AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಿಲಕ್ ಶೇಖರ್ ಅಭಿನಯದಲ್ಲಿ ‘ವರ್ಣತರಂಗ’: ಮತ್ತೆ ಪೊಲೀಸ್ ಪಾತ್ರ ಮಾಡಿದ ನಟ

ನಟ ತಿಲಕ್ ಶೇಖರ್ ಅವರು ಈಗಾಗಲೇ ಹಲವು ಸಿನಿಮಾಗಳಲ್ಲಿ ಪೊಲೀಸ್ ಪಾತ್ರ ಮಾಡಿದ್ದಾರೆ. ಈಗ ಅವರು ಮತ್ತೆ ‘ವರ್ಣತರಂಗ’ ಸಿನಿಮಾದಲ್ಲಿ ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಳ್ಳಲಿದ್ದಾರೆ. ಇತ್ತೀಚೆಗೆ ಈ ಸಿನಿಮಾದ ಸುದ್ದಿಗೋಷ್ಠಿ ನಡೆಯಿತು. ಮೂರು ಹಾಡುಗಳನ್ನು ಬಿಡುಗಡೆ ಮಾಡಲಾಯಿತು. ಚಿತ್ರತಂಡದ ಬಗ್ಗೆ ಇಲ್ಲಿದೆ ವಿವರ..

ತಿಲಕ್ ಶೇಖರ್ ಅಭಿನಯದಲ್ಲಿ ‘ವರ್ಣತರಂಗ’: ಮತ್ತೆ ಪೊಲೀಸ್ ಪಾತ್ರ ಮಾಡಿದ ನಟ
Jeevitha, Tilak Shekar
ಮದನ್​ ಕುಮಾರ್​
|

Updated on: Sep 26, 2025 | 10:31 PM

Share

ತೀರ್ಥೆಶ್ ಕೊರಮೇರು ಅವರು ನಿರ್ದೇಶನ ಮಾಡಿರುವ ‘ವರ್ಣತರಂಗ’ (Varana Tharanga) ಸಿನಿಮಾದ ಮೂರು ಹಾಡುಗಳನ್ನು ಬಿಡುಗಡೆ ಮಾಡಲಾಯಿತು. ಬೆಂಗಳೂರಿನ ಚಾಮುಂಡೇಶ್ವರಿ ಸ್ಟುಡಿಯೋದಲ್ಲಿ ಹಾಡುಗಳ ಬಿಡುಗಡೆ ಕಾರ್ಯಕ್ರಮ ನಡೆಯಿತು. ‘ಶ್ರೀ ಪಾಷಣಮೂರ್ತಿ ಸಿನಿ ಕ್ರಿಯೇಶನ್ಸ್’ ಮೂಲಕ ಈ ಸಿನಿಮಾ ನಿರ್ಮಾಣ ಆಗಿದೆ. ಬೆಳ್ತಂಗಡಿ ಉದ್ಯಮಿ ಬಿ. ಶಿವಕುಮಾರ್ ಅವರು ‘ವರ್ಣತರಂಗ’ ಸಿನಿಮಾಗೆ ಬಂಡವಾಳ ಹೂಡಿದ್ದಾರೆ. ಇದು ಅವರು ನಿರ್ಮಿಸಿರುವ 3ನೇ ಸಿನಿಮಾ. ಸೆಲ್ವರಾಜ್ ಅವರು ಈ ಚಿತ್ರಕ್ಕೆ ಸಹ-ನಿರ್ಮಾಪಕರಾಗಿದ್ದಾರೆ. ನಿರ್ದೇಶಕ ತೀರ್ಥೆಶ್ ಕೊರಮೇರು ಅವರೇ ಕಥೆ ಬರೆದ್ದಾರೆ. ಈ ಸಿನಿಮಾದ ಒಂದು ಗೀತೆಗೆ ಚಂದನ್ ಶೆಟ್ಟಿ (Chandan Shetty) ಧ್ವನಿ ನೀಡಿದ್ದಾರೆ.

‘ವರ್ಣತರಂಗ’ ಸಿನಿಮಾದಲ್ಲಿ ನಟ ತಿಲಕ್ ಅವರು ಎಸಿಪಿ ಪಾತ್ರ ಮಾಡಿದ್ದಾರೆ. ‘ನಾನು ಈಗಾಗಲೇ ಎಸಿಪಿಯಾಗಿ ಅನೇಕ ಸಿನಿಮಾಗಳಲ್ಲಿ ನಟಿಸಿದ್ದೇನೆ. ಈಗ ಈ ಸಿನಿಮಾದಲ್ಲೂ ಅದೇ ಪಾತ್ರವಿದ್ದರೂ ಕೂಡ ಕೇಸ್ ಬೇರೆಯದೇ ಆಗಿರುತ್ತದೆ. ಹಾಗಾಗಿ ನೋಡುಗರಿಗೆ ಬೋರ್ ಎನಿಸುವುದಿಲ್ಲ’ ಎಂದು ತಿಲಕ್ ಅವರು ಹೇಳಿದರು. ಜೀವಿತಾ ಅವರು ಈ ಸಿನಿಮಾಗೆ ನಾಯಕಿ ಆಗಿದ್ದಾರೆ.

ನಟಿ ಮೇಘನಾ ಅವರ ‘ವರ್ಣತರಂಗ’ ಸಿನಿಮಾದಲ್ಲಿ ಪತ್ರಕರ್ತೆಯ ಪಾತ್ರವನ್ನು ಮಾಡಿದ್ದಾರೆ. ಹ್ಯಾಕರ್ ಪಾತ್ರದಲ್ಲಿ ವರ್ಧನ್ ಕಾಣಿಸಿಕೊಂಡಿದ್ದಾರೆ. ಹೇಮಂತ್, ರಮೇಶ್ ಪಂಡಿತ್, ಟೆನ್ನಿಸ್‌ ಕೃಷ್ಣ, ಬಲರಾಜವಾಡಿ, ಜಯರಾಮ್, ಭಗತ್, ಬಿರಾದಾರ್ ಮುಂತಾದವರು ಕೂಡ ಈ ಸಿನಿಮಾದ ಪಾತ್ರವರ್ಗದಲ್ಲಿ ಇದ್ದಾರೆ. ಶೀಘ್ರದಲ್ಲೇ ಈ ಸಿನಿಮಾಗೆ ಸೆನ್ಸಾರ್ ಪ್ರಕ್ರಿಯೆ ಮುಗಿಯಲಿದೆ. ಬಳಿಕ ರಿಲೀಸ್ ಬಗ್ಗೆ ಚಿತ್ರತಂಡ ಮಾಹಿತಿ ಹಂಚಿಕೊಳ್ಳಲಿದೆ.

Varana Tharanga Movie Team

Varana Tharanga Movie Team

ಆಕಾಶ್‌ ರೆಡ್ಡಿ ಹಾಗೂ ಯಶವಂತ್‌ ಭೂಪತಿ ಅವರು ಈ ಸಿನಿಮಾಗೆ ಸಂಗೀತ ನೀಡಿದ್ದಾರೆ. ಮನುಗೌಡ ಅವರು ಛಾಯಾಗ್ರಹಣ ಮಾಡಿದ್ದಾರೆ. ವೆಂಕಿ ಯುಡಿವಿ ಅವರು ಸಂಕಲನದ ಜವಾಬ್ದಾರಿ ನಿಭಾಯಿಸಿದ್ದಾರೆ, ವಿ.ಎನ್. ಸ್ವಾಮಿ, ಆಕಾಶ್‌ ರೆಡ್ಡಿ, ಮಿಥುನ್‌ ಸುವರ್ಣ ಅವರು ಸಾಹಿತ್ಯ ಬರೆದಿದ್ದಾರೆ. ಕಾರ್ಯಕಾರಿ ನಿರ್ಮಾಪಕರಾಗಿ ಕೆ. ಬಾಲಸುಬ್ರಮಣ್ಯನ್ ಕೆಲಸ ಮಾಡಿದ್ದಾರೆ. ಥ್ರಿಲ್ಲರ್‌ ಮಂಜು, ಕುಂಗುಫೂ ಚಂದ್ರು ಹಾಗೂ ನರಸಿಂಹ ಅವರ ಸಾಹಸ ಈ ಚಿತ್ರಕ್ಕಿದೆ. ನಾಗಿ ಮತ್ತು ಆನಂದ್ ಕೊರಿಯೋಗ್ರಫಿ ಮಾಡಿದ್ದಾರೆ.

ಇದನ್ನೂ ಓದಿ: ‘ಅವತಾರ್: ಫೈರ್ ಆಂಡ್ ಆಶ್’ ಎರಡನೇ ಟ್ರೈಲರ್ ಬಿಡುಗಡೆ

ಸುದ್ದಿಗೋಷ್ಠಿಯಲ್ಲಿ ಸಿನಿಮಾದ ಕಥೆ ಬಗ್ಗೆ ನಿರ್ದೇಶಕರು ಮಾತನಾಡಿದರು. ‘ನಾನು ಮೂಲತಃ ವಿಎಫ್‌ಎಕ್ಸ್ ಟೆಕ್ನಿಷಿಯನ್. ಕಿರುಚಿತ್ರಗಳನ್ನು ಮಾಡಿದ ಅನುಭವ ಇದೆ. ವರ್ಣತರಂಗ ಅಂದರೆ ಬಣ್ಣಗಳ ಅಲೆಗಳು ಎಂದರ್ಥ. ಒಬ್ಬ ವ್ಯಕ್ತಿ ಕಲರ್​ಫುಲ್ ಆಗಿ ನಿಜ ಜೀವನದಲ್ಲಿ ಹೇಗಿರುತ್ತಾನೆ? ಆತ ನಕರಾತ್ಮಕ ಚಿಂತನೆ ಮಾಡಿ ಯಾವ ರೀತಿಯಲ್ಲಿ ಸೇಡು ತೀರಿಸಿಕೊಳ್ಳುತ್ತಾನೆ ಎಂಬುದು ಕಥೆ. ಸಿನಿಮಾದಲ್ಲಿ ಸಾಕಷ್ಟು ಕುತೂಹಲಕಾರಿ ಅಂಶಗಳು ಇವೆ. ಬೆಂಗಳೂರು, ಮಂಗಳೂರು ಮುಂತಾದಡೆ ಚಿತ್ರೀಕರಣ ಮಾಡಿದ್ದೇವೆ. ಶೇಕಡ 25 ಭಾಗ ವಿಎಫ್‌ಎಕ್ಸ್ ಇರುತ್ತದೆ’ ಎಂದು ಅವರು ಹೇಳಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ