ಪೊಲೀಸರ ಎದುರು ವಿಚಾರಣೆ ಎದುರಿಸಲಿದ್ದಾರೆ ನೋಟಿಸ್ ಪಡೆದ ಸೆಲೆಬ್ರಿಟಿಗಳು; ಇಲ್ಲಿದೆ ವಿವರ

ನೋಟಿಸ್ ಪಡೆದ ಎಲ್ಲರೂ ಇಂದು (ಡಿಸೆಂಬರ್ 12) ಮಧ್ಯಾಹ್ನ 2.30ಕ್ಕೆ ಸುಬ್ರಹ್ಮಣ್ಯ ನಗರ ಪೊಲೀಸ್ ಠಾಣೆಗೆ ವಿಚಾರಣೆಗೆ ತೆರಳಲಿದ್ದಾರೆ. ಈ ಬಗ್ಗೆ ನಿರ್ಮಾಪಕ ರಾಕ್​ಲೈನ್ ವೆಂಕಟೇಶ್ ಅವರು ಮಾಹಿತಿ ಹಂಚಿಕೊಂಡಿದ್ದಾರೆ.

ಪೊಲೀಸರ ಎದುರು ವಿಚಾರಣೆ ಎದುರಿಸಲಿದ್ದಾರೆ ನೋಟಿಸ್ ಪಡೆದ ಸೆಲೆಬ್ರಿಟಿಗಳು; ಇಲ್ಲಿದೆ ವಿವರ
ಅಭಿಷೇಕ್​-ದರ್ಶನ್
Follow us
ರಾಜೇಶ್ ದುಗ್ಗುಮನೆ
|

Updated on:Jan 12, 2024 | 9:46 AM

ಇತ್ತೀಚೆಗೆ ‘ಕಾಟೇರ’ ಸಿನಿಮಾ (Kaatera Movie) ಸಕ್ಸಸ್ ಮೀಟ್ ಬಳಿಕ ಇಡೀ ತಂಡ ಪಾರ್ಟಿ ಮಾಡಿತ್ತು. ಇದರ ಜೊತೆ ಅನೇಕ ಸೆಲೆಬ್ರಿಟಿಗಳು ಸೇರಿಕೊಂಡಿದ್ದರು. ಬೆಂಗಳೂರಿನ ರಾಜಾಜಿನಗರದಲ್ಲಿರುವ ಜೆಟ್​ ಲ್ಯಾಗ್ ಪಬ್​​ನಲ್ಲಿ ಮುಂಜಾನೆವರೆಗೆ ಪಾರ್ಟಿ ನಡೆದಿತ್ತು. ಈ ಆರೋಪದ ಮೇಲೆ ಬೆಂಗಳೂರಿನ ಸುಬ್ರಹ್ಮಣ್ಯನಗರ ಪೊಲೀಸರು ದರ್ಶನ್​, ರಾಕ್​ಲೈನ್ ವೆಂಕಟೇಶ್ ಸೇರಿ ಕೆಲವು ಸೆಲೆಬ್ರಿಟಿಗಳಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದರು. ಈ ಬಗ್ಗೆ ಅಪ್​ಡೇಟ್ ಸಿಕ್ಕಿದೆ.

ನೋಟಿಸ್ ಪಡೆದ ಎಲ್ಲರೂ ಇಂದು (ಡಿಸೆಂಬರ್ 12) ಮಧ್ಯಾಹ್ನ 2.30ಕ್ಕೆ ಸುಬ್ರಹ್ಮಣ್ಯ ನಗರ ಪೊಲೀಸ್ ಠಾಣೆಗೆ ವಿಚಾರಣೆಗೆ ತೆರಳಲಿದ್ದಾರೆ. ಈ ಬಗ್ಗೆ ನಿರ್ಮಾಪಕ ರಾಕ್​ಲೈನ್ ವೆಂಕಟೇಶ್ ಅವರು ಮಾಹಿತಿ ಹಂಚಿಕೊಂಡಿದ್ದಾರೆ. ಸೆಲೆಬ್ರಿಟಿಗಳು ಬರುತ್ತಿರುವುದರಿಂದ ಠಾಣೆಯ ಎದುರು ಅಭಿಮಾನಿಗಳು ನೆರೆಯುವ ಸಾಧ್ಯತೆ ಇದೆ. ಹೀಗಾಗಿ, ಅಭಿಮಾನಿಗಳನ್ನು ನಿಯಂತ್ರಿಸಲು ಪೊಲೀಸರು ಸಿದ್ಧತೆ ಮಾಡಿಕೊಂಡಿದ್ದಾರೆ.

ಪ್ರಕರಣ ಏನು?

ಕಳೆದ ವರ್ಷಾಂತ್ಯಕ್ಕೆ ‘ಕಾಟೇರ’ ಸಿನಿಮಾ ಬಿಡುಗಡೆ ಆಗಿ ಯಶಸ್ಸು ಕಂಡಿದೆ. ಈ ಚಿತ್ರದ ಸಕ್ಸಸ್ ಸೆಲೆಬ್ರೇಷನ್ ಬಳಿಕ ದರ್ಶನ್, ಧನಂಜಯ್, ಅಭಿಷೇಕ್ ಅಂಬರೀಷ್ ಸೇರಿ ಅನೇಕರು ಬೆಂಗಳೂರಿನ ಒರಾಯನ್‌ ಮಾಲ್ ಬಳಿ ಇರುವ ಜೆಟ್ ಲ್ಯಾಗ್ ಪಬ್​​ನಲ್ಲಿ ಮುಂಜಾನೆವರೆಗೆ ಪಾರ್ಟಿ ಮಾಡಿದ್ದರು. ನಿಯಮದ ಪ್ರಕಾರ ಮಧ್ಯರಾತ್ರಿ 1 ಗಂಟೆವರೆಗೆ ಮಾತ್ರ ಪಬ್ ಓಪನ್ ಇಡಬಹುದು. ಆದರೆ, ನಿಯಮವನ್ನು ಇಲ್ಲಿ ಮೀರಲಾಗಿತ್ತು.

ಇದನ್ನೂ ಓದಿ: ‘ಕ್ಲಾಂತ’ ಸಿನಿಮಾ ಕಾರ್ಯಕ್ರಮದಲ್ಲಿ ‘ಕಾಟೇರ’ನ ಗುಣಗಾನ ಮಾಡಿದ ಅಜಯ್ ರಾವ್

ಪಾರ್ಟಿಯಲ್ಲಿ ಯಾರೆಲ್ಲ ಭಾಗಿ?

‘ಕಾಟೇರ’ ತಂಡದ ದರ್ಶನ್, ನಿರ್ಮಾಪಕ ರಾಕ್ ಲೈನ್ ವೆಂಕಟೇಶ್, ನಿರ್ದೇಶಕ ತರುಣ್ ಸುಧೀರ್, ಸಂಗೀತ ನಿರ್ದೇಶಕ ಹರಿಕೃಷ್ಣ ಭಾಗಿ ಆಗಿದ್ದರು. ಉಳಿದಂತೆ ದರ್ಶನ್ ಆಪ್ತರಾದ ಅಭಿಷೇಕ್ ಅಂಬರೀಷ್,​ ಡಾಲಿ ಧನಂಜಯ್, ನಟ ಚಿಕ್ಕಣ್ಣ, ನಿನಾಸಂ ಸತೀಶ್ ಕೂಡ ಪಾರ್ಟಿಯಲ್ಲಿ ಇದ್ದರು. ಇವರೆಲ್ಲರಿಗೂ ನೋಟಿಸ್ ನೀಡಲಾಗಿದ್ದು ಅವರು ವಿಚಾರಣೆಗೆ ಹಾಜರಾಗೋ ಸಾಧ್ಯತೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 9:29 am, Fri, 12 January 24

Daily Devotional: ನಮಃ ಮಂತ್ರಾಕ್ಷರದ ಅರ್ಥ ಮತ್ತು ಮಹತ್ವ ತಿಳಿಯಿರಿ
Daily Devotional: ನಮಃ ಮಂತ್ರಾಕ್ಷರದ ಅರ್ಥ ಮತ್ತು ಮಹತ್ವ ತಿಳಿಯಿರಿ
Daily horoscope: ವೃಷಭ ರಾಶಿಯವರಿಗೆ ಇಂದು ಧನಯೋಗ
Daily horoscope: ವೃಷಭ ರಾಶಿಯವರಿಗೆ ಇಂದು ಧನಯೋಗ
ಕನ್ನಡ ಹೋರಾಟಗಾರರ ಮೇಲಿನ ಕೇಸ್ ವಾಪಸ್: ಸಿಎಂ ಘೋಷಣೆ
ಕನ್ನಡ ಹೋರಾಟಗಾರರ ಮೇಲಿನ ಕೇಸ್ ವಾಪಸ್: ಸಿಎಂ ಘೋಷಣೆ
ಮಾಧ್ಯಮಗೋಷ್ಠಿಯಲ್ಲಿ ಲೈಮ್​ಲೈಟನ್ನು ತನ್ನ ಮೇಲೆ ಎಳೆದುಕೊಂಡಿದ್ದು ಹನುಮಂತು
ಮಾಧ್ಯಮಗೋಷ್ಠಿಯಲ್ಲಿ ಲೈಮ್​ಲೈಟನ್ನು ತನ್ನ ಮೇಲೆ ಎಳೆದುಕೊಂಡಿದ್ದು ಹನುಮಂತು
‘ನನಗೂ ಫ್ಯಾಮಿಲಿ ಇದೆ’: ಮಾಜಿ ಗೆಳತಿ ಕಿರಿಕ್​ ಬಗ್ಗೆ ರಜತ್ ಸ್ಪಷ್ಟನೆ
‘ನನಗೂ ಫ್ಯಾಮಿಲಿ ಇದೆ’: ಮಾಜಿ ಗೆಳತಿ ಕಿರಿಕ್​ ಬಗ್ಗೆ ರಜತ್ ಸ್ಪಷ್ಟನೆ
ಬಿಬಿಎಲ್ ಫೈನಲ್‌ನಲ್ಲಿ ದಾಖಲೆಯ ಶತಕ ಸಿಡಿಸಿದ ಮಿಚೆಲ್ ಓವನ್
ಬಿಬಿಎಲ್ ಫೈನಲ್‌ನಲ್ಲಿ ದಾಖಲೆಯ ಶತಕ ಸಿಡಿಸಿದ ಮಿಚೆಲ್ ಓವನ್
ಮಾಧ್ಯಮದವರು ಪ್ರಶ್ನೆ ಕೇಳಿದಾಗ ಹನುಮಂತನಿಂದ ಅದೇ ಮುಗ್ಧತೆಯ ಉತ್ತರ!
ಮಾಧ್ಯಮದವರು ಪ್ರಶ್ನೆ ಕೇಳಿದಾಗ ಹನುಮಂತನಿಂದ ಅದೇ ಮುಗ್ಧತೆಯ ಉತ್ತರ!
ಫೈನಾನ್ಸ್ ಸಂಸ್ಥೆ ಪ್ರತಿನಿಧಿಗಳೊಂದಿಗೆ ಸಭೆ ನಡೆಸಲು ಜಿಲ್ಲಾಡಳಿತಕ್ಕೆ ಸೂಚನೆ
ಫೈನಾನ್ಸ್ ಸಂಸ್ಥೆ ಪ್ರತಿನಿಧಿಗಳೊಂದಿಗೆ ಸಭೆ ನಡೆಸಲು ಜಿಲ್ಲಾಡಳಿತಕ್ಕೆ ಸೂಚನೆ
ವಿಜಯೇಂದ್ರರನ್ನೇ ರಾಜ್ಯಾಧ್ಯಕ್ಷನಾಗಿ ಮುಂದುವರಿಸಿದರೆ ಯತ್ನಾಳ್ ನಡೆ ಏನು?
ವಿಜಯೇಂದ್ರರನ್ನೇ ರಾಜ್ಯಾಧ್ಯಕ್ಷನಾಗಿ ಮುಂದುವರಿಸಿದರೆ ಯತ್ನಾಳ್ ನಡೆ ಏನು?
ಬಿಗ್ ಬಾಸ್ ಟ್ರೋಫಿ ಗೆದ್ದ ಬಳಿಕ ಹನುಮಂತ ಮೊದಲ ಪ್ರೆಸ್ ಮೀಟ್; ಇಲ್ಲಿದೆ ಲೈವ್
ಬಿಗ್ ಬಾಸ್ ಟ್ರೋಫಿ ಗೆದ್ದ ಬಳಿಕ ಹನುಮಂತ ಮೊದಲ ಪ್ರೆಸ್ ಮೀಟ್; ಇಲ್ಲಿದೆ ಲೈವ್