AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ಹೀರೋ ಆಗಿ ನಟಿಸಲಿರುವ ಜೋಗಿ ಪ್ರೇಮ್​; ಈ ಬಾರಿ ನಿರ್ದೇಶನ ಮಾಡೋದು ಯಾರು?

Jogi Prem: ಈ ಸಿನಿಮಾ ಪ್ಯಾನ್ ಇಂಡಿಯಾ ಮಟ್ಟದಲ್ಲಿ ನಿರ್ಮಾಣ ಆಗಲಿದೆ. ಅ.22ರಂದು ಪ್ರೇಮ್ ಹುಟ್ಟುಹಬ್ಬದ ಪ್ರಯುಕ್ತ ಚಿತ್ರದ ಫಸ್ಟ್​ ಲುಕ್ ಬಿಡುಗಡೆ ಮಾಡಲು ಚಿತ್ರತಂಡ ತಯಾರಿ ಮಾಡಿಕೊಂಡಿದೆ.

ಮತ್ತೆ ಹೀರೋ ಆಗಿ ನಟಿಸಲಿರುವ ಜೋಗಿ ಪ್ರೇಮ್​; ಈ ಬಾರಿ ನಿರ್ದೇಶನ ಮಾಡೋದು ಯಾರು?
ಎಂ ಶಶಿಧರ್, ಜೋಗಿ ಪ್ರೇಮ್
TV9 Web
| Edited By: |

Updated on:Oct 19, 2022 | 12:19 PM

Share

ಕನ್ನಡ ಚಿತ್ರರಂಗದಲ್ಲಿ ನಿರ್ದೇಶಕ ಜೋಗಿ ಪ್ರೇಮ್ (Jogi Prem)​ ಅವರು ತಮ್ಮದೇ ಛಾಪು ಮೂಡಿಸಿದ್ದಾರೆ. ಅವರು ನಿರ್ದೇಶನ ಮಾಡಿದ ಹಲವು ಸಿನಿಮಾಗಳು ಜನಮನ ಗೆದ್ದಿವೆ. ಈ ಮೊದಲು ನಟನೆಯಲ್ಲೂ ಅವರು ಅದೃಷ್ಟ ಪರೀಕ್ಷೆ ಮಾಡಿಕೊಂಡಿದ್ದುಂಟು. ಸದ್ಯ ಅವರು ನಟ ಧ್ರುವ ಸರ್ಜಾ ಅಭಿನಯದ ಹೊಸ ಸಿನಿಮಾಗೆ ನಿರ್ದೇಶನ ಮಾಡುತ್ತಿದ್ದಾರೆ. ಅದರ ನಡುವೆಯೇ ಹೊಸ ನ್ಯೂಸ್​ ಕೇಳಿಬಂದಿದೆ. ಹೀರೋ ಆಗಿ ಅಭಿಮಾನಿಗಳನ್ನು ರಂಜಿಸಲು ಜೋಗಿ ಪ್ರೇಮ್​ ಮತ್ತೆ ಸಜ್ಜಾಗಿದೆ. ಆ ಮೂಲಕ ಬಹುದಿನಗಳ ಬಳಿಕ ಅವರು ಮತ್ತೆ ಬಣ್ಣ ಹಚ್ಚುತ್ತಿದ್ದಾರೆ. ಈ ಬಾರಿ ಹೊಸ ನಿರ್ದೇಶಕ ಎಂ. ಶಶಿಧರ್​ (M Shashidhar) ಅವರು ಜೋಗಿ ಪ್ರೇಮ್​ಗೆ ಆ್ಯಕ್ಷನ್​-ಕಟ್​ ಹೇಳಲಿದ್ದಾರೆ. ಈ ಸಿನಿಮಾ ತುಂಬ ಡಿಫರೆಂಟ್​ ಆಗಿರಲಿದೆ ಎಂದು ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ.

ನಿರ್ದೇಶಕ ಎಂ ಶಶಿಧರ್ ಈಗಿನ್ನೂ 28ರ ಹರೆಯದವರು. ಮೂಲತಃ ಮೈಸೂರಿನವರಾದ ಅವರು ಫಿಲ್ಮ್​ ಮೇಕಿಂಗ್​ನಲ್ಲಿ ಉನ್ನತ ಶಿಕ್ಷಣ ಪಡೆದಿದ್ದಾರೆ. ವಿಎಫ್​ಎಕ್ಸ್​ ಬಗ್ಗೆ ಹೆಚ್ಚು ತಿಳಿದುಕೊಂಡು ಅವರು ನಿರ್ದೇಶನಕ್ಕೆ ಇಳಿದಿದ್ದಾರೆ. ಶಿವರಾಜ್​ಕುಮಾರ್ ಅಭಿನಯದ, ಪ್ರೇಮ್ ನಿರ್ದೇಶನದ ‘ಜೋಗಿ’ ಚಿತ್ರಕ್ಕೆ ಬಂಡವಾಳ ಹೂಡಿದ್ದ ‘A2 ಫಿಲ್ಮ್ಸ್​’ ಮೂಲಕವೇ ಈ ಹೊಸ ಚಿತ್ರ ನಿರ್ಮಾಣ ಆಗಲಿದೆ. ಅದರ ಜೊತೆ ‘ಪ್ರೇಮ್ ಡ್ರೀಮ್ಸ್’ ಸಂಸ್ಥೆ ಜೊತೆಯಾಗಿ ಬಂಡವಾಳ ಹೂಡುತ್ತಿದೆ.

ವಿಶೇಷ ಎಂದರೆ, ಈ ಸಿನಿಮಾ ಪ್ಯಾನ್ ಇಂಡಿಯಾ ಮಟ್ಟದಲ್ಲಿ ನಿರ್ಮಾಣ ಆಗಲಿದೆ. ಸದ್ಯಕ್ಕೆ ಇನ್ನೂ ಶೀರ್ಷಿಕೆ ಬಹಿರಂಗ ಆಗಿಲ್ಲ. ಪ್ಯಾನ್​ ಇಂಡಿಯಾ ಸಿನಿಮಾ ಆದ್ದರಿಂದ ಇದರಲ್ಲಿ ಬಹುಭಾಷಾ ನಟ-ನಟಿಯರು ಬಣ್ಣ ಹಚ್ಚಲಿದ್ದಾರೆ. ಅದಕ್ಕೆ ತಕ್ಕಂತೆ ಚಿತ್ರದ ಬಜೆಟ್​ ಕೂಡ ಅದ್ದೂರಿಯಾಗಿ ಇರಲಿದೆ. ಹೆಚ್ಚಿನ ಮಾಹಿತಿ ತಿಳಿದುಕೊಳ್ಳಲು ಪ್ರೇಮ್​ ಅಭಿಮಾನಿಗಳು ಕಾದಿದ್ದಾರೆ.

ಈ ಸಿನಿಮಾ ಮೂಲಕ ಪ್ರೇಮ್​ ಅವರು ಹೊಸ ಸಾಹಸ ಮಾಡಲಿದ್ದಾರೆ. ದಕ್ಷಿಣ ಭಾರತದಲ್ಲಿ ಇದೇ ಮೊದಲ ಜೋಂಬಿ ಚಿತ್ರವಾಗಿ ಈ ಸಿನಿಮಾ ಮೂಡಿಬರಲಿದೆ. ಸೈಕಾಲಾಜಿಕಲ್ ಥ್ರಿಲ್ಲರ್ ಕಥೆಯನ್ನು ಈ ಸಿನಿಮಾ ಹೊಂದಿರಲಿದೆ. ಪ್ರೇಮ್​ ಜೊತೆ ಯಾರೆಲ್ಲ ನಟಿಸುತ್ತಾರೆ ಎಂಬುದು ಸದ್ಯದಲ್ಲೇ ಗೊತ್ತಾಗಲಿದೆ.​ ಸಂಪೂರ್ಣ ಹೊಸ ಗೆಟಪ್ ಮತ್ತು ಡಿ‌ಫರೆಂಟ್ ಲುಕ್​ನಲ್ಲಿ ಪ್ರೇಮ್ ಅವರನ್ನು ತೋರಿಸಲು ನಿರ್ದೇಶಕ ಎಂ. ಶಶಿಧರ್ ಪ್ಲ್ಯಾನ್​ ಮಾಡಿಕೊಂಡಿದ್ದಾರೆ. ಅಕ್ಟೋಬರ್​ 22ಕ್ಕೆ ಪ್ರೇಮ್ ಹುಟ್ಟುಹಬ್ಬ. ಆ ಪ್ರಯುಕ್ತ ಚಿತ್ರದ ಫಸ್ಟ್​ ಲುಕ್ ಬಿಡುಗಡೆ ಮಾಡಲು ಚಿತ್ರತಂಡ ತಯಾರಿ ಮಾಡಿಕೊಂಡಿದೆ. ನಿರ್ದೇಶನದಲ್ಲಿ ಬ್ಯುಸಿ ಆಗಿರುವ ಪ್ರೇಮ್​ ಅವರು ಮತ್ತೆ ಹೀರೋ ಆಗಲು ಒಪ್ಪಿಕೊಂಡಿರುವುದು ಅಭಿಮಾನಿಗಳಿಗೆ ಅಚ್ಚರಿ ಮೂಡಿಸಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 12:19 pm, Wed, 19 October 22

ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್: ಸದ್ಯದಲ್ಲೇ ನಿಮ್ ಅಕೌಂಟ್​​ ಲಕ್ಷ್ಮೀ!
ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್: ಸದ್ಯದಲ್ಲೇ ನಿಮ್ ಅಕೌಂಟ್​​ ಲಕ್ಷ್ಮೀ!
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ