AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೂ.ಎನ್​​ಟಿಆರ್​​ಗೆ ವಿಶ್ ಮಾಡಿದ ಹೊಂಬಾಳೆ ಫಿಲ್ಮ್ಸ್; ಇದರ ಹಿಂದಿದೆ ದೊಡ್ಡ ಲೆಕ್ಕಾಚಾರ?

ಹೊಂಬಾಳೆ ಫಿಲ್ಮ್ಸ್ ಜೂ.ಎನ್​​ಟಿಆರ್​​ಗೆ ಜನ್ಮದಿನದ ಶುಭಾಶಯ ಕೋರಿರುವುದು ದೊಡ್ಡ ಲೆಕ್ಕಾಚಾರಕ್ಕೆ ಎಡೆಮಾಡಿಕೊಟ್ಟಿದೆ. ಭವಿಷ್ಯದಲ್ಲಿ ಜೂ.ಎನ್​​ಟಿಆರ್ ಜೊತೆ ಸಿನಿಮಾ ನಿರ್ಮಾಣದ ಸಾಧ್ಯತೆ ಅಥವಾ ಅವರ 'ಡ್ರ್ಯಾಗನ್' ಚಿತ್ರದ ವಿತರಣೆ ಹಕ್ಕುಗಳನ್ನು ಪಡೆಯುವ ಉದ್ದೇಶವಿರಬಹುದು. ಈಗಾಗಲೇ ಪ್ರಭಾಸ್ ಚಿತ್ರಕ್ಕೆ ಹೂಡಿಕೆ ಮಾಡಿರುವ ಹೊಂಬಾಳೆ, ಮತ್ತೊಬ್ಬ ದೊಡ್ಡ ಸ್ಟಾರ್‌ನೊಂದಿಗೆ ಕೈಜೋಡಿಸಲು ಸಿದ್ಧವಾಗಿದೆ.

ಜೂ.ಎನ್​​ಟಿಆರ್​​ಗೆ ವಿಶ್ ಮಾಡಿದ ಹೊಂಬಾಳೆ ಫಿಲ್ಮ್ಸ್; ಇದರ ಹಿಂದಿದೆ ದೊಡ್ಡ ಲೆಕ್ಕಾಚಾರ?
ಹೊಂಬಾಳೆ ಫಿಲ್ಮ್ಸ್
ರಾಜೇಶ್ ದುಗ್ಗುಮನೆ
|

Updated on: May 20, 2026 | 2:56 PM

Share

ಯಾವುದಾದರೂ ಹೀರೋ ಜೊತೆ ಈಗಾಗಲೇ ಕೆಲಸ ಮಾಡಿದ್ದರೆ ಅಥವಾ ಮುಂದೆ ಕೆಲಸ ಮಾಡುವ ಒಪ್ಪಂದ ಆಗಿದ್ದರೆ ಮಾತ್ರ ನಿರ್ಮಾಣ ಸಂಸ್ಥೆಗಳು ಆ ಹೀರೋಗಳಿಗೆ ಬರ್ತ್​​ಡೇ ವಿಶ್ ಮಾಡುತ್ತಾರೆ. ಜೂ.ಎನ್​​ಟಿಆರ್​ ಜೊತೆ ಸಿನಿಮಾ ಮಾಡೋದಾಗಿ ಮೈತ್ರಿ ಮೂವೀ ಮೇಕರ್ಸ್ ಈ ಮೊದಲೇ ಘೋಷಣೆ ಮಾಡಿತ್ತು. ಅಂದಿನಿಂದಲೂ ಜೂ.ಎನ್​​ಟಿಆರ್ ಜನ್ಮದಿನಕ್ಕೆ ಈ ಸಂಸ್ಥೆ ಸೋಶಿಯಲ್ ಮೀಡಿಯಾದಲ್ಲಿ ವಿಶ್ ಮಾಡುತ್ತಾ ಬರುತ್ತಿದೆ. ಈಗ ಹೊಂಬಾಳೆ ಫಿಲ್ಮ್ಸ್ ಕಡೆಯಿಂದ ಜೂ.ಎನ್​ಟಿಆರ್​​ಗೆ ಜನ್ಮದಿನದ ವಿಶ್ ಬಂದಿದ್ದು ಸಾಕಷ್ಟು ಕುತೂಹಲ ಮೂಡಿದೆ.

ಜೂನಿಯರ್ ಎನ್​ಟಿಆರ್ ನಟನೆಯ ‘ಡ್ರ್ಯಾಗನ್’ ಸಿನಿಮಾದ ಗ್ಲಿಂಪ್ಸ್ ರಿಲೀಸ್ ಆಗಿದೆ. ಇದನ್ನು ಹೊಂಬಾಳೆ ಸಂಭ್ರಮಿಸಿದೆ. ಜೂನಿಯರ್ ಎನ್​​​​ಟಿಆರ್​​ಗೆ ವಿಶ್ ಮಾಡುವಾಗ ‘ಡ್ರ್ಯಾಗನ್’ ಸಿನಿಮಾ ಬಗ್ಗೆಯೂ ಮೆಚ್ಚುಗೆ ಸೂಚಿಸಿದೆ. ಇದರ ಹಿಂದೆ ದೊಡ್ಡದೊಂದು ಲೆಕ್ಕಾಚಾರ ಅಡಗಿದೆ ಎಂಬ ಮಾತುಗಳು ಕೇಳಿಬರುತ್ತಿವೆ.

ಹೊಂಬಾಳೆ ಫಿಲ್ಮ್ಸ್ ಈಗಾಗಲೇ ಪ್ರಭಾಸ್ ಅವರ ‘ಸಲಾರ್’ ಚಿತ್ರಕ್ಕೆ ಬಂಡವಾಳ ಹೂಡಿದೆ. ಹಿಂದಿ, ತಮಿಳಿನಲ್ಲೂ ಈ ಸಂಸ್ಥೆ ಸಿನಿಮಾಗಳನ್ನು ನಿರ್ಮಾಣ ಮಾಡುತ್ತಿದೆ. ಶೀಘ್ರದಲ್ಲೇ ಜೂ.ಎನ್​​ಟಿಆರ್ ಜೊತೆ ಹೊಂಬಾಳೆ ಸಿನಿಮಾ ಮಾಡೋ ಸಾಧ್ಯತೆ ಇದೆ ಎನ್ನಲಾಗಿದೆ. ತೆರೆಮರೆಯಲ್ಲಿ ಮಾತುಕತೆ ನಡೆಯುತ್ತಿದೆ ಎಂದು ವರದಿ ಆಗಿದೆ. ಈ ಚಿತ್ರವನ್ನು ನಿರ್ದೇಶನ ಮಾಡುವವರು ಯಾರು ಎಂಬ ಕುತೂಹಲ ಮೂಡಿದೆ. ಈ ಬಗ್ಗೆ ಅಧಿಕೃತ ಘೋಷಣೆ ಆಗಲಿ ಎಂಬುದು ಅನೇಕರ ಆಸೆ.

ಇದನ್ನೂ ಓದಿ: ಎರಡು ವರ್ಷಕ್ಕೊಂದು ಅನಿಮೇಟೆಡ್ ಸಿನಿಮಾ; 10 ವರ್ಷದ ಪ್ಲ್ಯಾನ್ ರೆಡಿ ಮಾಡಿದ ಹೊಂಬಾಳೆ

ಹೊಂಬಾಳೆ ಫಿಲ್ಮ್ಸ್ ಇತ್ತೀಚೆಗೆ ರಾಮ್ ಚರಣ್ ನಟನೆಯ ‘ಪೆದ್ದಿ’ ಚಿತ್ರ ವಿದೇಶಿ ಹಾಗೂ ಕರ್ನಾಟಕದ ಹಂಚಿಕೆ ಹಕ್ಕನ್ನು ಪಡೆದಿದೆ. ‘ಡ್ರ್ಯಾಗನ್’ ಚಿತ್ರದ ಥಿಯೇಟ್ರಿಕಲ್ ರಿಲೀಸ್ ಮತ್ತು ವಿತರಣೆಯ ಜವಾಬ್ದಾರಿಯನ್ನು ಹೊಂಬಾಳೆ ವಹಿಸಿಕೊಳ್ಳುವ ಸಾಧ್ಯತೆಗಳೂ ದಟ್ಟವಾಗಿವೆ. ಈ ಕಾರಣಕ್ಕೆ ಅದು ತಮ್ಮದೇ ಸಿನಿಮಾ ಎಂಬ ರೀತಿಯಲ್ಲಿ ಸಂಭ್ರಮಿಸಿದೆ ಎಂದು ವಿಶ್ಲೇಷಿಸಲಾಗುತ್ತಾ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಬಾಗಲಕೋಟೆಯಲ್ಲಿ ಏಕಾಏಕಿ ಕಾರು ಸ್ಫೋಟ: ಬಾಂಬ್ ಶಂಕೆ, ಖಾಕಿ ತನಿಖೆ
ಬಾಗಲಕೋಟೆಯಲ್ಲಿ ಏಕಾಏಕಿ ಕಾರು ಸ್ಫೋಟ: ಬಾಂಬ್ ಶಂಕೆ, ಖಾಕಿ ತನಿಖೆ
ಪರೀಕ್ಷಾ ವ್ಯವಸ್ಥೆ ಸುಧಾರಣೆಗೆ ದಿಟ್ಟ ನಿರ್ಧಾರ ಕೈಗೊಂಡ ಮೋದಿ, ಏನದು?
ಪರೀಕ್ಷಾ ವ್ಯವಸ್ಥೆ ಸುಧಾರಣೆಗೆ ದಿಟ್ಟ ನಿರ್ಧಾರ ಕೈಗೊಂಡ ಮೋದಿ, ಏನದು?
ಇವಾನ್ಸ್ ಹಿಡಿದ ಅತ್ಯದ್ಭುತ ಕ್ಯಾಚ್​​ಗೆ ಶತಕ ವಂಚಿತರಾದ ವೈಭವ್
ಇವಾನ್ಸ್ ಹಿಡಿದ ಅತ್ಯದ್ಭುತ ಕ್ಯಾಚ್​​ಗೆ ಶತಕ ವಂಚಿತರಾದ ವೈಭವ್
ಯುವಕರೊಂದಿಗೆ ಮೋದಿ ಸಂವಾದ ಹೇಗಿತ್ತು? ವಿದ್ಯಾರ್ಥಿಗಳು ಹೇಳಿದ್ದೇನು?
ಯುವಕರೊಂದಿಗೆ ಮೋದಿ ಸಂವಾದ ಹೇಗಿತ್ತು? ವಿದ್ಯಾರ್ಥಿಗಳು ಹೇಳಿದ್ದೇನು?
102 ಮೀ. ಉದ್ದದ ಸಿಕ್ಸರ್ ಬಾರಿಸಿದ ವೈಭವ್; ವಿಡಿಯೋ
102 ಮೀ. ಉದ್ದದ ಸಿಕ್ಸರ್ ಬಾರಿಸಿದ ವೈಭವ್; ವಿಡಿಯೋ
ವಿಕಸಿತ್ ವೈಬ್ರೆಂಟ್‌ ವಿಲೇಜ್‌:ಯುವಕರೊಂದಿಗೆ ಮೋದಿ ಸಂವಾದ ನೇರ ಪ್ರಸಾರ
ವಿಕಸಿತ್ ವೈಬ್ರೆಂಟ್‌ ವಿಲೇಜ್‌:ಯುವಕರೊಂದಿಗೆ ಮೋದಿ ಸಂವಾದ ನೇರ ಪ್ರಸಾರ
ಬಾಗಲಕೋಟೆಯ ಹಿಪ್ಪರಗಿ ಬಳಿ ಕಾರು ಸ್ಫೋಟದ ಬಗ್ಗೆ ಎಸ್​ಪಿ ಹೇಳಿದ್ದೇನು?
ಬಾಗಲಕೋಟೆಯ ಹಿಪ್ಪರಗಿ ಬಳಿ ಕಾರು ಸ್ಫೋಟದ ಬಗ್ಗೆ ಎಸ್​ಪಿ ಹೇಳಿದ್ದೇನು?
ರಾಜ್ ಬಿ. ಶೆಟ್ಟಿ ಹೋದಲ್ಲೆಲ್ಲ ‘ಕರಾವಳಿ’ ಸಿನಿಮಾಗೆ ಭರ್ಜರಿ ಪ್ರತಿಕ್ರಿಯೆ
ರಾಜ್ ಬಿ. ಶೆಟ್ಟಿ ಹೋದಲ್ಲೆಲ್ಲ ‘ಕರಾವಳಿ’ ಸಿನಿಮಾಗೆ ಭರ್ಜರಿ ಪ್ರತಿಕ್ರಿಯೆ
ಕೇಂದ್ರ ಶಿಕ್ಷಣ ಸಚಿವರಾಗಿ ಪ್ರಲ್ಹಾದ್ ಜೋಶಿ ಅಧಿಕಾರ ಸ್ವೀಕಾರ
ಕೇಂದ್ರ ಶಿಕ್ಷಣ ಸಚಿವರಾಗಿ ಪ್ರಲ್ಹಾದ್ ಜೋಶಿ ಅಧಿಕಾರ ಸ್ವೀಕಾರ
ಕಾರ್ಗಿಲ್ ವಿಜಯ್ ದಿವಸ: ಹುತಾತ್ಮ ವೀರ ಸೈನಿಕರಿಗೆ ಡಿಕೆ ಪುಷ್ಪನಮನ!
ಕಾರ್ಗಿಲ್ ವಿಜಯ್ ದಿವಸ: ಹುತಾತ್ಮ ವೀರ ಸೈನಿಕರಿಗೆ ಡಿಕೆ ಪುಷ್ಪನಮನ!